ಮುಲ್ಕಿ : ಮಂಗಳೂರು ಹೊರವಲಯದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಹಳೆಯಂಗಡಿ ಪಾವಂಜೆ ಬಳಿ ಈ ಸರಣಿ ಅಪಘಾತ ಸಂಭವಿಸಿದೆ.
ಬಸ್ಸು, ಆಟೋ ರಿಕ್ಷಾ,ಲಾರಿ ನಡುವೆ ಈ ಸರಣಿ ಅಪಘಾತ ಸಂಭವಿಸಿದ್ದು, ಆಟೋದಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಸರಸ್ವತಿ ಎಂದು ಗುರುತ್ತಿಸಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ರಿಕ್ಷಾ ಮಂಗಳೂರಿನಿಂದ ಮುಲ್ಕಿ ಬಪ್ಪನಾಡು ಕ್ಷೇತ್ರಕ್ಕೆ ತೆರಳುತ್ತಿದ್ದು,ಇಲ್ಲಿನ ಪಾವಂಜೆ ಸೇತುವೆಯ ಬಳಿ ನಿಂತಿದ್ದಾಗ ಹಿಂದಿನಿಂದ ಬಂದ ಮುಂಬೈಗೆ ತೆರಳುತ್ತಿದ್ದ ಖಾಸಾಗಿ ಬಸ್ ಡಿಕ್ಕಿ ಹೊಡೆದಿದೆ. ಬಳಿಕ ಬಸ್ಸಿನಿಂದ ಹಿಂಬದಿಯಿಂದ ಲಾರಿ ಬಸ್ಸಿಗೆ ಡಿಕ್ಕಿ ಹೊಡೆದು ಈ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಕುಳಿತಿದ್ದ ಚಾಲಕನ ಹೆಂಡತಿ ಸರಸ್ವತಿ ಎಂಬವರ ಸೊಂಟ ಮತ್ತು ಕಾಲಿಗೆ ಬಲವಾದ ಪೆಟ್ಟು ಬಿದ್ದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಾಮಾಜಿಕ ಕಾರ್ಯಕರ್ತರಾದ ಅದ್ದಿ ಬೊಳ್ಳೂರು ಹಾಗು ಮತ್ತಿತ್ತರರು ಸೇರಿ ಗಾಯಗೊಂಡ ಮಹಿಳೆಯನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ನಂತರ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಸುರತ್ಕಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
