ಮಂಗಳೂರು: ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಪದವಿನಂಗಡಿಯ ವಿಕಾಸ್ ಕಾಲೇಜು ಸಮೀಪ ನಡೆದಿದೆ.
ಸ್ಕೂಟರ್ ಸವಾರನ ನಿಯಂತ್ರಣ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಓರ್ವ ಯುವಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಮತ್ತೋರ್ವ ಆಸ್ಪತ್ರೆಗೆ ರವಾನಿಸುವ ಸಂದರ್ಭ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತ ನಡೆದಿರುವುದನ್ನು ಗಮನಿಸಿದ ಅದೇ ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್ ಚಾಲಕ ಹಾಗೂ ನಿರ್ವಾಹಕರು ಬಸ್ ನಿಲ್ಲಿಸಿ ಇಬ್ಬರನ್ನು ತಕ್ಷಣವೇ ಬಸ್ ನಲ್ಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೂ ಜೀವ ಉಳಿಸಲಾಗಿಲ್ಲ.