ಬಳ್ಳಾರಿ : ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಎಮ್ಮಿಗನೂರಿನ ಕನಕರಾಜು (19), ಮುರುಡಿ ಗ್ರಾಮದ ಶಂಕರ (18) ಹಾಗೂ ನಾಗೇನಹಳ್ಳಿ ಹೊನ್ನೂರ (22) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳು ಬಳ್ಳಾರಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಸ್ಟೆಲ್ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.
