ವಿಟ್ಲ: ದಲಿತ ವಿವಾಹಿತೆಯೋರ್ವಳ ಮೇಲೆ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ವಿಟ್ಲದಲ್ಲಿ ನಡೆದಿದೆ. ಪುಣಚ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಸ್ಮಾನ್ (53) ಬಂಧಿತ ಆರೋಪಿ.
ಪಂಚಾಯತಿಗೆ ಆಗಮಿಸಿದ ಯುವತಿಯ ಕೈಹಿಡಿದೆಳೆದು ಈತ ಲೈಂಗಿಕ ದೌರ್ಜನ್ಯ ನೀಡಿದ್ದಾನೆ. ಈ ಬಗ್ಗೆ ನಿನ್ನೆ ಸಂತ್ರಸ್ಥ ಯುವತಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳವಾರ ದಲಿತ ದೌರ್ಜನ್ಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
