ವಿಟ್ಲ;ಪೆರುವಾಯಿಯಲ್ಲಿ ತಂದೆಯೋರ್ವ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣ ಇದೀಗ ಸಾಬೀತಾಗಿದ್ದು, ಆರೋಪಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಮತ್ತು ದಂಡ ವಿಧಿಸಿ ಆದೇಶಿಸಿದೆ.
2020ನೇ ಮಾರ್ಚ್ ತಿಂಗಳಿನಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ, ಪೆರುವಾಯಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ಅತ್ಯಾಚಾರವೆಸಗಿದ್ದ ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡಿದ್ದು, ಪ್ರಕರಣದಲ್ಲಿ ನ್ಯಾಯಾಧೀಶರಾದ ಕೆ. ಎಮ್. ರಾಧಕೃಷ್ಣರವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಹಾಗೂ 25.000/- ದಂಡ ವಿಧಿಸಿ ತೀರ್ಪು ನೀಡಿದೆ.