Friday, July 26, 2024
spot_img
More

    Latest Posts

    ಮಂಗಳೂರು: ಆಫ್ರಿಕನ್ ಹಂದಿ ಜ್ವರ ತಡೆಗಟ್ಟಲು ಅಗತ್ಯ ಕ್ರಮ: ಡಿಸಿ ರವಿಕುಮಾರ್ ಎಂ.ಆರ್

    ಮಂಗಳೂರು: ನಗರದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರದ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿರುತ್ತದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ದ‌.ಕ.ಜಿಲ್ಲಾ ನೂತನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.

    ಈ ಹಂದಿ ಸಾಕಾಣಿಕಾ ಕೇಂದ್ರದಿಂದ 1 ಕಿ.ಮೀ. ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು 10 ಕಿ.ಮೀ. ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ. ರೋಗ ಹೊಂದಿರುವ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ.

    ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಬೇಕು. ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಹಾಗೂ ಇತರರು ಸದ್ಯ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು. ಅಲ್ಲದೆ ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು. ತಮ್ಮ ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡಬೇಕು ಎಂದು ಡಿಸಿ ತಿಳಿಸಿದ್ದಾರೆ.

    ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆಯಿಲ್ಲ. ಹಂದಿ ಪಾಲಕರು ಸೂಕ್ತ ಮುಂಜಾಗೃತ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss