Sunday, September 15, 2024
spot_img
More

    Latest Posts

    ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ

    ಉಡುಪಿ: ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಭೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

    ರಾಷ್ಟ್ರೀ ಹೆದ್ದಾರಿ 169A ತೀರ್ಥಹಳ್ಳಿ -ಮಲ್ಪೆ ರಸ್ತೆಯ ಆಗುಂಬೆ ಘಾಟ್ ನ 6,7 ಹಾಗೂ 11ನೇ ತಿರುವಿನಲ್ಲಿ ಮಳೆಯಿಂದಾಗಿ ತಡೆಗೋಡೆ ಕುಸಿದ ಹಿನ್ನಲೆ ಜುಲೈ 27 ರಿಂದ ಸೆಪ್ಟೆಂಬರ್ 15 ರವರೆಗೆ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು.

    ಈ ನಡುವೆ ಶಿವಮೊಗ್ಗ ವಿಭಾಗದ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಸದರಿ ರಸ್ತೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ ನೀಡಲು ಕೋರಿದ ಹಿನ್ನಲೆ ಉಡುಪಿ ಜಿಲ್ಲಾಧಿಕಾರಿ ಆಗುಂಭೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss