Wednesday, September 28, 2022

ಮಂಗಳೂರು: ದಸರಾದ ನಾಲ್ಕು ಹೆಚ್ಚುವರಿ ರಜೆ ದ.ಕ.ಜಿಲ್ಲೆಗೂ ವಿಸ್ತರಣೆ: ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಈ ಹಿಂದೆ ಮಂಗಳೂರು ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ಅನ್ವಯವಾಗುವಂತೆ ಸೆ.28 ರಿಂದ ಅಕ್ಟೋಬರ್ 1ರವರೆಗೆ ನೀಡಲಾಗಿರುವ ಹೆಚ್ಚುವರಿ 4...
More

  Latest Posts

  ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

  ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

  ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

  ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

  ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

  ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

  ಮಳಲಿ ಮಸೀದಿ ವಿವಾದ: ಅ.17ಕ್ಕೆ ತೀರ್ಪು ಕಾಯ್ದಿರಿಸಿದ ಮಂಗಳೂರು ಸಿವಿಲ್‌ ಕೋರ್ಟ್‌

  ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ...

  ಉಡುಪಿ: ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ವಿಜ್ರಂಭಣೆಯಲ್ಲಿ ನಡೆದ “ಆಟಿಡೊಂಜಿ ದಿನ”

  ಉಡುಪಿ: ದಿನಾಂಕ 14-08-2022 ರಂದು ಉಡುಪಿ ಬಹ್ಮಗಿರಿಯ ಲಯನ್ಸ್ ಭವನದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ನೂರಾರು ತುಳು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಹಯೋಗದಿಂದ ಅತೀ ವಿಜ್ರಂಭಣೆಯಲ್ಲಿ ಆಟಿಡೊಂಜಿ ದಿನ ಎಂಬ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

  ಈ ಕಾರ್ಯಕ್ರಮದಲ್ಲಿ ಪ್ರತಿಕ್ಷಾ ರಿಧಮಿಕ್ ವಾಯಿಸ್ ಆಫ್ ಉಡುಪಿ ಹಾಗೂ ಉಡುಪಿ ಕರೊಕೆ ತಂಡದಿಂದ ತುಳು ಸಂಗೀತ ರಸಮಂಜರಿ ಆರಂಭಗೊಂಡು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮದ ಉಧ್ಘಾಟನೆಯನ್ನು ಹಿರಿಯ ಅರ್ಚಕರಾದ ಶ್ರೀ ಕೇಶವ ಶಾಂತಿ ಯವರು ಉಧ್ಘಾಟಿಸಿದರು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಶ್ರೀ ಯೋಗಿಶ್ ಶೆಟ್ಟಿ ಜಪ್ಪುರವರವರು ಅಧ್ಯಕ್ಷ ಭಾಷಣ ಮಾಡಿ ತುಳುನಾಡಿನ ಸಂಸ್ಕೃತಿ ಹಾಗೂ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪನೆ, ಉದ್ದೇಶ, ಸಾಮಾಜಿಕ ಹೋರಾಟ, ಸಾಮಾಜಿಕ ನೆರವು ಹಾಗೂ ಅಗತ್ಯತೆ ಬಗ್ಗೆ ಅಚ್ಚುಕಟ್ಟಾಗಿ ವಿವರಸಿದರು.

  ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿಯವರು ಸ್ವಾಗತ ಭಾಷಣ ಮಾಡಿದರು. ಸಂಘಟನಾ ಕಾರ್ಯದರ್ಶಿಯಾದ ಮೊಹಮ್ಮದ್ ಹಾರಿಸ್ ರವರು ನಿರೂಪಣೆ ಮಾಡಿದರು. ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಟಪಾಡಿ ಶ್ರೀ ಶಂಕರ್ ಪೂಜಾರಿಯರು ಅತಿಥಿ ಭಾಷಣದಲ್ಲಿ ಆಟಿ ತಿಂಗಳ ವಿಶೇಷತೆಯ ಬಗ್ಗೆ ವಿವರಿಸಿದರು.

  ಸಾಮಾಜಿಕ ಕಾರ್ಯಕರ್ತರು ಬಡವರ ಬಂದು ಹಾಗೂ ಉದ್ಯಮಿಯಾದ ಶ್ರೀ ಕೃಷ್ಣಮೂರ್ತಿ ಆಚಾರ್ಯ ರವರು ಈ ಕಾರ್ಯಕ್ರಮ ಕಂಡು ಹಾಡಿ ಹೊಗಳಿ ತುಳುನಾಡ ಸಂಸ್ಕೃತಿ ಉಳಿಯಬೇಕಾದಲ್ಲಿ ಈ ಸಂಘಟನೆ ಅಗತ್ಯ ಹಾಗೂ ನಿಮ್ಮೊಂದಿಗೆ ಸದಾ ಇರುವ ಭರವಸೆ ನೀಡಿದರು. ಮುಖ್ಯ ಅತಿಥಿಯಾದ ಉಡುಪಿ ನಗರ ಠಾಣಾ ಇನ್ಸ್ ಪೆಕ್ಟರ್ ಶ್ರೀ ಪ್ರಮೋದ್ ಕುಮಾರ್ ರವರು ಕಾನೂನಿನ ಬಗ್ಗೆ ಹಾಗೂ ತುಳುನಾಡಿನ ಬಗ್ಗೆ, ತುಳುನಾಡ ರಕ್ಷಣಾ ವೇದಿಕೆಯ ಅಗತ್ಯತೆಯ ಬಗ್ಗೆ ಸವಿವರದೊಂದಿಗೆ ವಿಸ್ತರಿಸಿ ಮುಂದಿನ ದಿನಗಳಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಉತ್ತಮ ಕೆಲಸಗಳಿಗೆ ಸಹಕಾರ ನೀಡುವ ಬರವಸೆ ನೀಡಿದರು.

  ಜನತಾದಳ ಜಾತ್ಯಾತೀತ ಉಡುಪಿ ಜಿಲ್ಲಾ ಕಾರ್ಯಧ್ಯಕ್ಷರಾದ ವಾಸುದೇವ್ ರಾವ್ ರವರು ಸ್ಥಾಪಕಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರ ಬಗ್ಗೆ ಹಾಡಿ ಹೊಗಳಿ ತುಳುನಾಡ ಸಂಸ್ಕೃತಿ ಬಗ್ಗೆ ಅಚ್ಚುಕಟ್ಟಾಗಿ ವಿವರಿಸಿದರು. ತುಳು ನಾಡಿನ ಅಭಿಮಾನದೊಂದಿಗೆ ನಮ್ಮ ಕರೆಗೆ ಓಗೊಟ್ಟು ಬಂದ ಹಿರಿಯ ವಕೀಲರಾದ ಶ್ರೀ ಹಮ್ಜತ್ ಹೆಜಮಾಡಿಯವರು ತುಳುನಾಡು ಮತ್ತು ತುಳು ಭಾಷೆಯ ಬಗ್ಗೆ ಸಂಪೂರ್ಣವಾಗಿ ವಿಸ್ತರಿಸಿ ರಾಷ್ಟ್ರಾದ್ಯಂತ ತುಳುನಾಡ ಸಂಸ್ಕೃತಿ ಬೆಳಗಲಿಯೆಂದು ಶುಭ ಹಾರೈಸಿದರು. ಉಡುಪಿ ಜಿಲ್ಲಾ ಮತ್ತು ದ.ಕ ಮೀನು ಮಾರಾಟ ಫೆಡರೇಶನ್ ನ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ರವರು ತುಳುನಾಡು ಮತ್ತು ತುಳುವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಗರ ಸಭಾ ಸದಸ್ಯರು ಹಾಗೂ ವಿರೋಧ ಪಕ್ಷ ನಾಯಕರಾದ ಶ್ರೀ ರಮೇಶ್ ಕಾಂಚನ್ ರವರು ಚಿಕ್ಕದಾಗಿ ಚೊಕ್ಕದಾಗಿ ತುಳುನಾಡ ಸಂಸ್ಕೃತಿ ಬಗ್ಗೆ ವಿವರಿಸಿದರು.

  ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಟಪಾಡಿ ಶಂಕರ್ ಪೂಜಾರಿ ತುಳುನಾಡ ರಕ್ಷಣಾ ವೇದಿಕೆಗೆ ಸೇರ್ಪಡೆಗೊಂಡರು.

  ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜರುದ್ಧೀನ್ ಸುಬ್ರಹ್ಮಣ್ಯ ನಗರ, ಅತಿಥಿಗಳಾದ ದೈವಾರಾದಕರಾದ ವಿನೋದ್ ಶೆಟ್ಟಿ, ಮಹಿಳಾ ಘಟಕ ಗೌರವ ಸಲಹಾಗಾರರಾದ ಶೋಭ ಪಾಂಗಳ, ಗೌರವ ಸಲಹಾಗಾರರಾದ ಸುಧಾಕರ್ ಅಮೀನ್, ಜಿಲ್ಲಾ ಉಪಾಧ್ಯಕ್ಷರಾದ ಜಯರಾಮ್ ಪೂಜಾರಿ, ಜಿಲ್ಲಾ ಉಪಾಧ್ಯಕ್ಷರಾದ ಕೃಷ್ಣ ಕುಮಾರ್, ಮಹಿಳಾ ಘಟಕ ಜಿಲ್ಲಾಧ್ಯಕ್ಷರಾದ ಸುಕನ್ಯ ಪ್ರಭಾಕರ್, ಮಹಿಳಾ ಘಟಕ ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಿ, ಮಹಿಳಾ ಘಟಕ ಉಪಾಧ್ಯಕ್ಷರು ಹಾಗೂ ಕಾನೂನು ಸಲಹಾಗರರಾದ ನಾಗಲಕ್ಷ್ಮಿ, ಯುವ ಘಟಕ ಅಧ್ಯಕ್ಷರಾದ ಸುನಿಲ್ ಫೆರ್ನಾಂಡಿಸ್, ಐಟಿ ವಿಂಗ್ ಅಧ್ಯಕ್ಷರಾದ ರೋಷನ್ ಡಿಸೋಜ, ಕಾರ್ಮಿಕ ಘಟಕ ಅಧ್ಯಕ್ಷರಾದ ಜುನೈದ್, ಜಿಲ್ಲಾ ಉಪಾಧ್ಯಕ್ಷರಾದ ರಹೀಂ, ಜೊತೆ ಕಾರ್ಯದರ್ಶಿ ಶುಭಾಶ್ ಸುಧಾನ್, ಕಾರ್ನಿಕ ಘಟಕ ಪ್ರಧಾನ ಕಾರ್ಯದರ್ಶಿ ರಿತೇಶ್ ರಾವ್, ಖಜಾಂಚಿ ಡ್ಯಾನಿ, ಜಿಲ್ಲಾ ಕಾರ್ಯದರ್ಶಿ ಮಜೀದ್, ಮಹಳಾ ಘಟಕ ಜಿಲ್ಲಾ ಉಪಾಧ್ಯಕ್ಷರಾದ ಶಾಂಭವಿ, ಮಹಿಳಾ ಘಟಕ ಜಿಲ್ಲಾ ಉಪಾಧ್ಯಕ್ಷರಾದ ಸುಲತ, ಮಹಿಳಾ ಘಟಕ ಜೊತೆ ಕಾರ್ಯದರ್ಶಿ ಅನುಪಮ, ರೇಣುಕಾ, ಜಿಲ್ಲಾ ಕಾರ್ಯದರ್ಶಿಯಾದ ಸದಾನಂದ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

  ಈ ಕಾರ್ಯಕ್ರಮದ ಅಂತ್ಯದಲ್ಲಿ ಹಲವಾರು ತುಳು ಅಭಿಮಾನಿಗಳು ನಮ್ಮ ಸಂಘಟನೆಗೆ ಸೇರ್ಪಡೆಗೊಂಡರು.

  ಈ ಕಾರ್ಯಕ್ರಮವು ಸಂಪೂರ್ಣ ಯಶಸ್ವಿಯಾಗಿ ನಡೆಯಲು ಕಾರಣಕರ್ತರಾದ ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾ ಘಟಕ, ಮಹಿಳಾ ಘಟಕ , ಯುವ ಘಟಕ, ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳಿಗೂ ಕಾರ್ಯಕರಿಗೂ ಸರ್ವ ಸದಸ್ಯರಿಗೂ ಹಾಗೂ ನೆರೆದಂತಹ ತುಳು ಅಭಿಮಾನಿಗಳಿಗೆ ಕೃತಜ್ಙತೆಗಳು.

  Latest Posts

  ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

  ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

  ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

  ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

  ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

  ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

  ಮಳಲಿ ಮಸೀದಿ ವಿವಾದ: ಅ.17ಕ್ಕೆ ತೀರ್ಪು ಕಾಯ್ದಿರಿಸಿದ ಮಂಗಳೂರು ಸಿವಿಲ್‌ ಕೋರ್ಟ್‌

  ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ...

  Don't Miss

  ಧಾರ್ಮಿಕ ಮುಂದಾಳು ಕಾಸರಗೋಡು ಕೆ.ಎನ್.ವೆಂಕಟ್ರಮಣ ಹೊಳ್ಳರಿಗೆ ಧರ್ಮಸ್ಥಳ ಕ್ಷೇತ್ರದಿಂದ “ಭಜನಾ ಸಾಧಕ ಪುರಸ್ಕಾರ” ಪ್ರದಾನ

  ಕಾಸರಗೋಡು:ಧಾರ್ಮಿಕ-ಸಾಂಸ್ಕೃತಿಕ ಮುಂದಾಳು ಕೆ.ಎನ್. ವೆಂಕಟ್ರಮಣ ಹೊಳ್ಳ ಕಾಸರಗೋಡು ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ “ಭಜನಾ ಸಾಧಕ ಪುರಸ್ಕಾರ”ವನ್ನು ಶುಕ್ರವಾರ ಪ್ರದಾನಿಸಲಾಗಿದೆ. ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ನ ನೇತೃತ್ವದಲ್ಲಿ ಅಮೃತ ವರ್ಷಿಣಿ...

  ಮಂಗಳೂರಿನಲ್ಲಿ ಸೆ.28 ರಿಂದ ದಸರಾ ರಜೆ-ಶನಿವಾರ ಪೂರ್ಣದಿನದ ತರಗತಿ

  ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ದಸರಾ ಸೆಪ್ಟೆಂಬರ್ 28ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ.

  ಕಾರ್ಕಳ: ಅಜೆಕಾರಿನಲ್ಲಿ 14ನೇ ಶತಮಾನದ ಶಿಲಾ ಶಾಸನ ಪತ್ತೆ

  ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಎಂಬಲ್ಲಿ 14ನೇ ಶತಮಾನದ ವೈಷ್ಣವ ಪಂಥದ ಶಿಲಾ ಶಾಸನ ಪತ್ತೆಯಾಗಿದೆ ಗಾಣದಬೆಟ್ಟು ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ...

  ವಿಟ್ಲ:ಪಿಕಪ್-ಬೈಕ್ ಢಿಕ್ಕಿ; ಯುವಕ ಮೃತ್ಯು

  ವಿಟ್ಲ: ಪಿಕಪ್ ವಾಹನ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ‌ ಬೈಕ್ ಸವಾರ ಮೃತಪಟ್ಟ ಘಟನೆ ವಿಟ್ಲದ ಕೇಪು ಮೈರ ಎಂಬಲ್ಲಿ ನಡೆದಿದೆ. ಸಂದೇಶ್(33)ಮೃತ ದುರ್ದೈವಿ.ಈತ...

  ಉಡುಪಿ: ಮನೆಗೆ ಆಕಸ್ಮಿಕ ಬೆಂಕಿ: ಅಪಾರ ನಷ್ಟ

  ಉಡುಪಿ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಸ್ವತ್ತುಗಳು ಸುಟ್ಟು ಕರಕಲಾದ ಘಟನೆ ಉಡುಪಿಯ ಕುಕ್ಕೀಕಟ್ಟೆ ಮಂಚಿ ಮೂಲಸ್ಥಾನ ಸಮೀಪ ನಡೆದಿದೆ. ಕುಕ್ಕಿಕಟ್ಟೆ ಮಂಚಿ ಮೂಲಸ್ಥಾನ...