Monday, May 23, 2022

ಮಂಗಳೂರು:ಕಬಡ್ಡಿಯಲ್ಲಿ ಏಕಲವ್ಯ ಪ್ರಶಸ್ತಿ ಪಡೆದ ಉದಯ ಚೌಟ ಇನ್ನಿಲ್ಲ

ಬಂಟ್ವಾಳ: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ, ಬ್ಯಾಂಕ್ ಉದ್ಯೋಗಿ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅವರು ಮೇ 21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ...
More

    Latest Posts

    ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

    ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

    ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

    ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

    ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

    ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

    ಉಡುಪಿ: ಆಸ್ತಿಗಾಗಿ ಗಂಡನ ಕೊಲೆಗೆ ಯತ್ನಿಸಿದ ಹೆಂಡತಿ : ಕುಕೃತ್ಯಕ್ಕೆ ಮಗ, ಗೆಳೆಯನ ಸಾಥ್!

    ಉಡುಪಿ: ಆಸ್ತಿಗಾಗಿ ಮಹಿಳೆಯೊಬ್ಬಳು ಮಗ ಹಾಗೂ ಗೆಳೆಯನೊಂದಿಗೆ ಸೇರಿಕೊಂಡು ಪತಿಯ ಹತ್ಯೆ ನಡೆಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮುದ್ರಾಡಿ ಗ್ರಾಮದ ಸುಬ್ಬಣ್ಣ ಕಟ್ಟೆ ಎಂಬಲ್ಲಿ ನಡೆದಿದೆ. ಜಯಾನಂದ...

    ಅಜೆಕಾರು ಕಲಾಭಿಮಾನಿ ಬಳಗ ಅಜೆಕಾರು ಶಾಖೆ ಶುಭಾರಂಭ – ಕಲಾವಿದರ ಸನ್ಮಾನ ತುಳುನಾಡ ಸಂಸ್ಕೃತಿಗೆ ಮೆರುಗು: ಭಾಸ್ಕರ ರೈ ಕುಕ್ಕುವಳ್ಳಿ

    ಮಂಗಳೂರು: ‘ಹೊರನಾಡಿನಲ್ಲಿ ಯಕ್ಷಗಾನ ಕಲೆಯ ವಿವಿಧ ಆಯಾಮಗಳಲ್ಲಿ ಮೌಲಿಕ ಕೆಲಸ ಮಾಡಿದ ಅಜೆಕಾರು ಕಲಾಭಿಮಾನಿ ಬಳಗ ಮುಂಬೈ ಮಹಾನಗರದಲ್ಲಿ ಮನೆಮಾತಾಗಿದೆ. ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ನೇತೃತ್ವದಲ್ಲಿ ಯಕ್ಷಗಾನ ಪ್ರದರ್ಶನ, ಸರಣಿ ತಾಳಮದ್ದಳೆ ಕೂಟಗಳಲ್ಲದೆ ಕಲಾವಿದರ ಸನ್ಮಾನ, ಗ್ರಂಥ ಪ್ರಕಟಣೆ, ಬಡ ಕಲಾವಿದರಿಗೆ ನೆರವು, ಯಕ್ಷರಕ್ಷಾ ಪ್ರಶಸ್ತಿ ಪ್ರದಾನ ಇತ್ಯಾದಿ ಮಾನವೀಯ ಕಾರ್ಯಗಳಿಂದ ಅದು ತುಳುನಾಡಿನ ಸಂಸ್ಕೃತಿಯನ್ನು ಮೆರೆಸಿದೆ. ಇದೀಗ ಎರಡು ದಶಕಗಳ ಬಳಿಕ ಹುಟ್ಟೂರಿನಲ್ಲಿ ಬಳಗದ ಸ್ಥಳೀಯ ಶಾಖೆ ವಿಧ್ಯುಕ್ತವಾಗಿ ಆರಂಭವಾಗುತ್ತಿರುವುದು ಶ್ಲಾಘನೀಯ’ ಎಂದು ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಯಕ್ಷಗಾನ ವಿದ್ವಾಂಸ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ.
    ಅಜೆಕಾರು ಜ್ಯೋತಿ ಪ್ರೌಢಶಾಲಾ ಮೈದಾನದಲ್ಲಿ ಮುಂಬೈ ಅಜೆಕಾರು ಕಲಾಭಿಮಾನಿ ಬಳಗ ವತಿಯಿಂದ ಜರಗಿದ ಅಜೆಕಾರು ಶಾಖೆಯ ವಿಧ್ಯುಕ್ತ ಉದ್ಘಾಟನೆ ಮತ್ತು ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ದೀಪ ಬೆಳಗಿ ಬಳಗವನ್ನು ಉದ್ಘಾಟಿಸಿದರು.

    ಕಲಾವಿದರ ಸನ್ಮಾನ – ಬಯಲಾಟ:
    ಸಮಾರಂಭದಲ್ಲಿ ಪಾವಂಜೆ ಮೇಳದ ಕಲಾವಿದರಾದ ಮೋಹನ ಬೆಳ್ಳಿಪ್ಪಾಡಿ ಮತ್ತು ಪ್ರಶಾಂತ ಶೆಟ್ಟಿ ವಗೆನಾಡು ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಸ್ಟೋನ್ ಕ್ರಷರ್ ಮತ್ತು ಕ್ವಾರಿ ಮಾಲಕರ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ, ಖ್ಯಾತ ಭಾಗವತ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಮತ್ತು ಕಾರ್ಕಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ರತ್ನಾಕರ ಅಮೀನ್ ಅತಿಥಿಗಳಾಗಿ ಶುಭ ಹಾರೈಸಿದರು.


    ಯಕ್ಷ ನೃತ್ಯ ಶಿಬಿರ:
    ಸಭೆಯ ಅಧ್ಯಕ್ಷತೆ ವಹಿಸಿದ ಅಜೆಕಾರು ಕಲಾಭಿಮಾನಿ ಬಳಗ ಅಜೆಕಾರು ಶಾಖೆಯ ಅಧ್ಯಕ್ಷ ವಿಜಯ ಶೆಟ್ಟಿ ಶುಭವಿ ಮಾತನಾಡಿ ‘ಬಳಗದ ವತಿಯಿಂದ ಮೇ 1ರಿಂದ 5ರ ವರೆಗೆ ಅಜೆಕಾರು ಶ್ರೀರಾಮ ಮಂದಿರದಲ್ಲಿ ಪ್ರಥಮ ಹಂತದ ಮಹಿಳೆಯರಿಗಾಗಿ ಉಚಿತ ಯಕ್ಷಗಾನ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು ಆಸಕ್ತರು ಭಾಗವಹಿಸಬಹುದು’ ಎಂದು ತಿಳಿಸಿದರು
    ಅಜೆಕಾರು ಕಲಾಭಿಮಾನಿ ಬಳಗ ಮುಂಬೈ ಇದರ ಸಂಸ್ಥಾಪನಾ ಅಧ್ಯಕ್ಷ, ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಹರೀಶ್ ನಾಯಕ ಅಜೆಕಾರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಬಳಿಕ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಕ್ಷೇತ್ರ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ಜರಗಿತು.

    Latest Posts

    ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

    ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

    ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

    ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

    ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

    ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

    ಉಡುಪಿ: ಆಸ್ತಿಗಾಗಿ ಗಂಡನ ಕೊಲೆಗೆ ಯತ್ನಿಸಿದ ಹೆಂಡತಿ : ಕುಕೃತ್ಯಕ್ಕೆ ಮಗ, ಗೆಳೆಯನ ಸಾಥ್!

    ಉಡುಪಿ: ಆಸ್ತಿಗಾಗಿ ಮಹಿಳೆಯೊಬ್ಬಳು ಮಗ ಹಾಗೂ ಗೆಳೆಯನೊಂದಿಗೆ ಸೇರಿಕೊಂಡು ಪತಿಯ ಹತ್ಯೆ ನಡೆಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮುದ್ರಾಡಿ ಗ್ರಾಮದ ಸುಬ್ಬಣ್ಣ ಕಟ್ಟೆ ಎಂಬಲ್ಲಿ ನಡೆದಿದೆ. ಜಯಾನಂದ...

    Don't Miss

    ಮಂಗಳೂರು: ಬಿ. ಕೆ. ಹರಿಪ್ರಸಾದ್ ಮತ್ತು ಯು. ಟಿ. ಖಾದರ್‌ರಿಗೆ ಅಭಿನಂದನಾ ಸಮಾರಂಭ

    ಮಂಗಳೂರು: ಮಂಗಳೂರಿನ ಪುರಭವನದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿ. ಕೆ. ಹರಿಪ್ರಸಾದ್ ಮತ್ತು ಕರ್ನಾಟಕ ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕರಾಗಿ ಆಯ್ಕೆಯಾಗಿರುವ ಮಾಜೀ ಮಂತ್ರಿ...

    ಮಲ್ಪೆ: ಚಲಿಸುತ್ತಿದ್ದ ಸ್ಕೂಟರ್ ನಲ್ಲೇ ಹೃದಯಾಘಾತ – ಸಾವು

    ಮಲ್ಪೆ: ಮೀನುಗಾರಿಕೆ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಮೇ.18ರಂದು ನಡೆದಿದೆ.

    ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಳ – ಜಡ್ಕಲ್, ಮುದೂರಲ್ಲಿ ಶಾಲೆಗೆ 10 ದಿನ ರಜೆ

    ಉಡುಪಿ: 136 ಡೆಂಗ್ಯೂ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದ್ದು, ಬೈಂದೂರು ತಾಲೂಕು ವ್ಯಾಪ್ತಿಯ ಜಡ್ಕಲ್ ಮುದೂರು ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ 10 ದಿನ ರಜೆ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ. ಜಡ್ಕಲ್...

    ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸುವುದು ಕ್ರೌರ್ಯ: ಛತ್ತೀಸ್‌ಗಢ ಹೈಕೋರ್ಟ್

    ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸಿದರೆ ಸುಳ್ಳು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದರೆ ಅದು ಮಾನಸಿಕ ಕ್ರೌರ್ಯಕ್ಕೆ ಸಮ ಎಂದು ಮಹತ್ವದ ತೀರ್ಪೊಂದರಲ್ಲಿ ಛತ್ತೀಸ್‌ಗಢ ಹೈಕೋರ್ಟ್ ತಿಳಿಸಿದೆ 

    11 ಕೋಟಿ ರೂ. ಸಂಪತ್ತು ದಾನ: 11 ವರ್ಷದ ಪುತ್ರ, ಪತ್ನಿ ಜೊತೆ ಸನ್ಯಾಸತ್ವ ಸ್ವೀಕರಿಸಿದ ‘ಕುಬೇರ’!

    ಜೈಪುರ: ಬಾಲಾಘಾಟ್‌ನ ಬುಲಿಯನ್ ವ್ಯಾಪಾರಿ ರಾಕೇಶ್ ಸುರಾನಾ, ಸುಮಾರು 11 ಕೋಟಿ ಮೌಲ್ಯದ ಆಸ್ತಿಯನ್ನು ಬಿಟ್ಟು, ಅವರ ಪತ್ನಿ ಮತ್ತು ಮಗನೊಂದಿಗೆ ಮೇ 22 ರಂದು ಜೈಪುರದಲ್ಲಿ ವಿಧಿವತ್ತಾಗಿ ದೀಕ್ಷೆ ಪಡೆಯಲಿದ್ದಾರೆ....