ಉಡುಪಿ : ಉಕ್ರೇನ್ ನಲ್ಲಿ ಶೆಲ್ ದಾಳಿಗೆ ಬಲಿಯಾದ ಹಾವೇರಿಯ ವಿದ್ಯಾರ್ಥಿ ನವೀನ್ ಕುಟುಂಬದ ದುಃಖದಲ್ಲಿ ಇಡೀ ದೇಶವೇ ಭಾಗಿಯಾಗಿದೆ. ಪ್ರಧಾನಿ ಮತ್ತು ಮುಖ್ಯಮಂತ್ರಿ ಅವರ ಕುಟುಂಬಕ್ಕೆ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ,ಕೇಂದ್ರ ಸರಕಾರ ನಾಲ್ವರು ಮಂತ್ರಿಗಳನ್ನು ನೆರೆಯ ದೇಶಕ್ಕೆ ಕಳಿಸಿದೆ.ಅಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಮತ್ತು ನಾಗರೀಕರನ್ನು ಶೀಘ್ರ ಕರೆತರಲು ಬೇಕಾದ ಕೆಲಸವನ್ನು ಸರಕಾರ ಮಾಡಲಿದೆ ಮತ್ತು ಅದರಲ್ಲಿ ಯಶಸ್ಸು ಸಾಧಿಸಲಿದ್ದೇವೆ ಎಂದು ಹೇಳಿದರು.