Tuesday, July 16, 2024
spot_img
More

  Latest Posts

  ಮಂಗಳೂರು : ಡಿಸೆಂಬರ್ 14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ಉತ್ಸವ

  ಮಂಗಳೂರು : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಡಿ.14ರಿಂದ 17ರವರೆಗೆ ಮೂಡಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದೊಂದಿಗೆ ನಡೆಯುವ ವಿರಾಸತ್ ಅನ್ನು ದೇಶಕ್ಕಾಗಿ ದೇಹತ್ಯಾಗ ಮಾಡಿದ ವೀರಯೋದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ ಮಾಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮೊದಲ ದಿನವಾದ ಡಿ.14ರಂದು ಸಂಜೆ 5.30ಕ್ಕೆ ರಾಜ್ಯಪಾಲರಿಗೆ ಗೌರವ ರಕ್ಷೆ ನಡೆಯಲಿದೆ. ಬಳಿಕ 5.45ಕ್ಕೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ವಿರಾಸತ್ ಉದ್ಘಾಟಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 6:35ಕ್ಕೆ ಆಳ್ವಾಸ್ ವಿರಾಸತ್‌ನ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. 100ಕ್ಕಿಂತಲೂ ಅಧಿಕ ದೇಶೀಯ ಜಾನಪದ ಕಲಾ ತಂಡಗಳ 3 ಸಾವಿರಕ್ಕೂ ಮಿಕ್ಕಿದ ಕಲಾವಿದರಿಂದ ವೈವಿಧ್ಯಮಯ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಭಜನೆಗಳು, ಪುಷ್ಪಪಲ್ಲಕ್ಕಿಗಳು, ರಾತ್ರಿ 8:05ಕ್ಕೆ ವೇದಘೋಷಗಳು, ಮಂಗಳವಾದ್ಯಗಳೊಂದಿಗೆ ವಿಘ್ನನಿವಾರಕ ವಿನಾಯಕ, ಸರಸ್ವತಿ, ಶ್ರೀ ಲಕ್ಷ್ಮೀ ಹನುಮಂತ, ಶ್ರೀರಾಮ, ಶ್ರೀಕೃಷ್ಣಾದಿ ಆರೂಢ ದೇವರ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ ನಡೆಯಲಿದೆ ಎಂದರು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss