ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್– 2023’ ಡಿಸೆಂಬರ್ 14ರಿಂದ 17ರ ವರೆಗೆ ಮೂಡಬಿದಿರೆಯಲ್ಲಿ ನಡೆಯಲಿದೆ.
ಆಳ್ವಾಸ್ ವಿರಾಸತ್‌ಗೆ 29ನೇ ವರ್ಷವಾಗಿದ್ದು, ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ, ಸಂಸ್ಕೃತಿಪ್ರಿಯರಿಗೆ ರಸದೌತಣ ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪ್ರತಿದಿನ ಸಂಜೆ 6 ಗಂಟೆಯಿಂದ ರಾತ್ರಿ 9.30ರ ವರೆಗೆ ಕಾರ್ಯಕ್ರಮ ನಡೆಯಲಿದೆ. ಸಭಾಂಗಣದಲ್ಲಿ ಸುಮಾರು 50 ಸಾವಿರ ಪ್ರೇಕ್ಷಕರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
©2021 Tulunada Surya | Developed by CuriousLabs