ಮಂಗಳೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಏಪ್ರಿಲ್ 14 ರ ಅಂಬೇಡ್ಕರ್ ದಿನಾಚರಣೆಯ ದಿನದಂದು ಡಾ. ಅಂಬೇಡ್ಕರ್ ಪ್ರತಿಮೆ ಸಹಿತ ಅಂಬೇಡ್ಕರ್ ವೃತ್ತ ನಿರ್ಮಾಣದ ಕಾಮಗಾರಿ ಆರಂಭಿಸಲು ಅಗತ್ಯ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಅವರ ನೇತೃತ್ವದಲ್ಲಿ ನಗರದ ನಾಗರಿಕ ಸಂಘಟನೆಗಳ ನೇತಾರರ ನಿಯೋಗವೊಂದು ಇಂದು ಜಿಲ್ಲಾಧಿಕಾರಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅವರನ್ನು ಭೇಟಿ ಮಾಡಿ ಆಗ್ರಹಿಸಿತು.
ನಿಯೋಗದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ ಎ ಎಂ ಹನೀಫ್, ಅಹಿಂದ ಚಳುವಳಿ ಅಧ್ಯಕ್ಷ ಭರತೇಶ್ ಮತ್ತು ಆರ್ ಟಿ ಐ ಕಾರ್ಯಕರ್ತ ಪ್ರಶಾಂತ್ ಭಟ್ ಕಡಬ ಉಪಸ್ಥಿತರಿದ್ದರು.



