Friday, April 19, 2024
spot_img
More

    Latest Posts

    ಕಾಪು: ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಆ್ಯಂಬುಲೆನ್ಸ್ ಡಿಕ್ಕಿ; ವ್ಯಕ್ತಿ ಸಾವು

    ಕಾಪು: ರಸ್ತೆ ಬದಿ ನಿಂತಿದ್ದ ಪಾದಚಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಕಾಪುವಿನ ಕೋತಲ್ ಕಟ್ಟೆಯ ರಾ.ಹೆ. 66ರಲ್ಲಿ ಇಂದು ನಡೆದಿದೆ.

    ಉಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ ಗೋವಿಂದ ಪೂಜಾರಿ (65) ಮೃತ ಪಟ್ಟವರು. ಗೋವಿಂದ ಪೂಜಾರಿ ಅವರು ರಸ್ತೆ ದಾಟಲು ನಿಂತಿದ್ದಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss