Monday, July 15, 2024
spot_img
More

  Latest Posts

  ಮಂಗಳೂರು: ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಅಮೃತ ಸೋಮೇಶ್ವರ ಇನ್ನಿಲ್ಲ

  ಉಳ್ಳಾಲ: ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಶೋಧಕ, ಯಕ್ಷಗಾನ ಪ್ರಸಂಗಕರ್ತ ಅಮೃತ ಸೋಮೇಶ್ವರ (89) ಇಂದು ಬೆಳಗ್ಗೆ 9.15ಕ್ಕೆ ನಿಧನರಾಗಿದ್ದಾರೆ.

  ಸೋಮೇಶ್ವರ ನಿವಾಸಿಯಾಗಿದ್ದ ಅಮೃತ ಸೋಮೇಶ್ವರ ಅವರು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಕನ್ನಡ ಪ್ರಾಧ್ಯಾಪಕರಾಗಿ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕನ್ನಡ ಮತ್ತು ತುಳು ಎರಡೂ ಭಾಷೆಗಳಲ್ಲಿ ವೈವಿಧ್ಯಮಯ ಹಾಗೂ ವಿಸ್ತೃತವಾದ ಸಾಹಿತ್ಯ ಕೃಷಿಯನ್ನು ನಡೆಸಿದ್ದಾರೆ. ಯಕ್ಷಗಾನದ ಬಗ್ಗೆ ವ್ಯಾಪಕ ಸಂಶೋಧನೆ, ಅಧ್ಯಯನ, ಆವಿಷ್ಕಾರ, ಕೃತಿರಚನೆ ಅವರ ಇನ್ನೊಂದು ಪ್ರಮುಖ ಕಾರ್ಯಕ್ಷೇತ್ರವಾಗಿತ್ತು.

  ಅಮೃತ ಸೋಮೇಶ್ವರ ಇವರ ಪಾರ್ಥೀವ ಶರೀರ ಸಂಜೆ 5 ರ ನಂತರ ಸೋಮೇಶ್ವರ ಶಿವಶಕ್ತಿನಗರದ ‘ ಒಲುಮೆ’ ತಮ್ಮ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುವುದು. ನಾಳೆ ಮಧ್ಯಾಹ್ನ 11 ರ ವೇಳೆಗೆ ಅಂತಿಮ ಸಂಸ್ಕಾರ ಮಾಡೂರು ಸ್ಮಶಾನದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

  ಅಮೃತ ಸೋಮೇಶ್ವರ ಇವರು ತುಳುನಾಡ ರಕ್ಷಣಾ ವೇದಿಕೆಯ ಮಾರ್ಗದರ್ಶಕರಾಗಿದ್ದು ಹಲವಾರು ಬಾರಿ ಸಂಘಟನೆಯ ಪ್ರತಿಭಟನೆಯ ಸಂದರ್ಭದಲ್ಲಿ ಕೈ ಜೋಡಿಸಿರುತ್ತಾರೆ. ಇವರ ಅಗಲುವಿಕೆಯು ಸಮಾಜಕ್ಕೆ ತುಂಬಾಲಾರದ ನಷ್ಟ ಎಂದು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರು ತೀವ್ರ ಸಂತಾಪ ವ್ಯಕ್ತಪಡಿಸಿರುತ್ತಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss