ಕೇಂದ್ರ ಸರ್ಕಾರ ಅಕ್ಕಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡಿದೆ ಎಂದು ಆರೋಪಿಸಿದ್ದ ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯ ಅನುಷ್ಠಾನದ ಕುರಿತಂತೆ ಇಂದು ಮಹತ್ವದ ಮಾಹಿತಿಯನ್ನು ನೀಡಿದೆ. ಇಂದು ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಕೆ ಹೆಚ್ ಮುನಿಯಪ್ಪ , ಪಡಿತರದಾರರಿಗೆ ಅಕ್ಕಿಯ ಬದಲು ಹಣ ನೀಡುತ್ತೇವೆ ಎಂದು ಹೇಳಿದ್ದಾರೆ. ಜುಲೈ 1ರಿಂದ 10 ಕೆಜಿ ಆಹಾರಧಾನ್ಯ ನೀಡುವುದಾಗಿ ಭರವಸೆ ನೀಡಿದ್ದೆವು. ಜನರಿಗೆ ನಾವು ನೀಡಿದ ಭರವಸೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಜನರಿಗೆ ಅಕ್ಕಿಯನ್ನು ನೀಡೋಕೆ ಅಕ್ಕಿಯ ಕೊರತೆಯಿದೆ . ಹೀಗಾಗಿ ಪ್ರತಿ ಕೆಜಿಗೆ 34 ರೂಪಾಯಿಯಂತೆ ಮನೆಯ ಪ್ರತಿಯೊಬ್ಬ ಸದಸ್ಯನಿಗೆ ರಾಜ್ಯ ಸರ್ಕಾರವು 170 ರೂಪಾಯಿಗಳನ್ನು ನೀಡಲಿದೆ. ಅನ್ನಭಾಗ್ಯ ಯೋಜನೆಯ ಬದಲಾಗಿ ಈ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. ಕಾರ್ಡ್ ಹೋಲ್ಡರ್ ಖಾತೆಗೆ ನೇರವಾಗಿ ಈ ಹಣ ಸಂದಾಯವಾಗಲಿದೆ ಎಂದು ವಿಧಾನಸೌಧದಲ್ಲಿ ಸಚಿವ ಮುನಿಯಪ್ಪ ಹೇಳಿಕೆ ನೀಡಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ. ಕಾರ್ಡ್ನ ಅನುಸಾರ ಯಾರು ಮನೆಯ ಯಜಮಾನ ಎನಿಸಿರುತ್ತಾರೋ ಅವರ ಖಾತೆಗೆ ಇತರೆ ಕುಟುಂಬಸ್ಥರಿಗೆ ನೀಡಬೇಕಾದ ಹಣ ಕೂಡ ಹೋಗಲಿದೆ. ಶೀಘ್ರದಲ್ಲಿಯೇ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಮುನಿಯಪ್ಪ ಹೇಳಿದ್ದಾರೆ.
©2021 Tulunada Surya | Developed by CuriousLabs