ಬಂಟ್ವಾಳ: ಶ್ರೀ ಮಧ್ವಾಚಾರ್ಯರ ಚಿಂತನೆ, ದ್ವೈತ ಸಿದ್ದಾಂತ , ಮಾತು ಲೋಕಕ್ಕೆ ಮಾದರಿಯಾಗಿದ್ದು, ಅವರು ನಡೆದಾಡಿದ ಮಧ್ವದಲ್ಲಿ ಯಕ್ಷಗಾನಕ್ಕೆ ನಿರಂತರ ಪ್ರೋತ್ಸಾಹ ನೀಡುವ ಕಾರ್ಯ ಅಭಿನಂದನೀಯ. ಅವರ ಪರಂಪರೆಯ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಉದ್ಘಾಟಿಸಲ್ಪಟ್ಟ ಯಕ್ಷಗಾನ ಸಂಘದಿಂದ ಯಕ್ಷಗಾನದ ಉನ್ನತಿಯಾಗಲಿ ಎಂದು ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರ.ಅರ್ಚಕ ಟಿ.ಶ್ರೀಧರ ಭಟ್ ಪೇಜಾವರ ಅವರು ಹೇಳಿದರು.
ಅವರು ರವಿವಾರ ಬಂಟ್ವಾಳ ತಾ. ಕಾವಳಪಡೂರು ಗ್ರಾಮದ ಮಧ್ವದಲ್ಲಿ ನಡೆದ ಮಧ್ವ ಯಕ್ಷಕೂಟದ ತೃತೀಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,ಯಕ್ಷಗಾನದಿಂದ ದೇವರ ಮಹಿಮೆಯ ಅರಿವನ್ನುಂಟುಮಾಡುವ, ಪೌರಾಣಿಕ ಪ್ರಜ್ಞೆ ಮೂಡಿಸುವ ಕಾರ್ಯವಾಗುತ್ತದೆ. ಮಕ್ಕಳನ್ನು ನಮ್ಮ ದೇಶದ ಸಂಸ್ಕೃತಿಯನ್ನು ಬಿಂಬಿಸುವ ಯಕ್ಷಗಾನದಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದರು.
ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪಿ.ಜಿನರಾಜ ಆರಿಗ, ಪ್ರಗತಿಪರ ಕೃಷಿಕ ಉದಯ ಕುಮಾರ ಜೈನ್ ಕಟ್ಟೆಮನೆ, ಕಾರಿಂಜ ದೇವಸ್ಥಾನದ ಪ್ರ.ಅರ್ಚಕ ಮಿಥುನ್ ಭಟ್ ನಾವಡ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು ಅವರು ಶುಭ ಹಾರೈಸಿದರು. ಮಾಜಿ ಸಚಿವ ಬಿ.ರಮಾನಾಥ ರೈ, ಜಿ.ಪಂ. ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಗತಿಪರ ಕೃಷಿಕ ಸಂಜೀವ ಶೆಟ್ಟಿ ಪಂಜಿಕಲ್ಲು, ಬ್ಯಾಂಕ್ ಅಧಿಕಾರಿ ಜಗನ್ನಾಥ ಶೆಟ್ಟಿ, ಯಕ್ಷವಾಸ್ಯಮ್ ಕಾರಿಂಜ ಇದರ ಸಂಚಾಲಕಿ ಸಾಯಿ ಸುಮಾ ನಾವಡ ಕಾರಿಂಜ,ಪಾರೆಂಕಿ ಮಹಿಷಮರ್ದಿನಿ ಯಕ್ಷಗಾನ ಸಂಘದ ಭಾಗವತ ಕಿಶೋರ್ ಶೆಟ್ಟಿ ಮೂಡಾಯೂರು, ಯಕ್ಷಕೂಟ ಮಧ್ವ ಇದರ ಪ್ರ.ಕಾರ್ಯದರ್ಶಿ ಗಣನಾಥ ಶೆಟ್ಟಿ , ಸಂಘದ ಕಾರ್ಯಕಾರಿ ಸದಸ್ಯರಾದ ಶಿವಪ್ಪ ಗೌಡ ನಿನ್ನಿಕಲ್ಲು , ಭವಾನಿ ಶ್ರೀಧರ ಪೂಜಾರಿ,ಗೋಪಾಲಕೃಷ್ಣ ಬಂಗೇರ, ನಾರಾಯಣ ಶೆಟ್ಟಿ, ಭಾನುಮತಿ ಶೆಟ್ಟಿ,ಸುಜಾತಾ ಬಿ.ಶೆಟ್ಟಿ, ಪ್ರಮುಖರಾದ ತಿಮ್ಮಪ್ಪ ಶೆಟ್ಟಿ ಪಾತಿಲ, ಆನಂದ ಮಧ್ವ, ಸುರೇಂದ್ರ ಶೆಟ್ಟಿ, ಯುವರಾಜ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
ಯಕ್ಷ ಕೂಟ ಅಧ್ಯಕ್ಷ ಭಾಸ್ಕರ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಸಿದರು. ಉಪಾಧ್ಯಕ್ಷ ರತ್ನದೇವ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ರುಕ್ಮಿಣಿ ಸ್ವಯಂವರ ಯಕ್ಷಗಾನ ತಾಳಮದ್ದಳೆ ನಡೆಯಿತು.