Friday, April 19, 2024
spot_img
More

    Latest Posts

    ಸ್ವಾತಂತ್ರ್ಯೋತ್ಸವದಲ್ಲಿ ಹೊಸ ಯೋಜನೆಗಳನ್ನ ಘೋಷಿಸಿದ ಸಿಎಂ ಬೊಮ್ಮಾಯಿ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. 75ನೇ ಸ್ವಾತಂತ್ರ್ಯೋತ್ಸವವನ್ನ ದೇಶಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಅದರಂತೆ ನಾಡಿನ ಮುಖ್ಯಮಂತ್ರಿ ಬೊಮ್ಮಾಯಿ ಅವರು ಧ್ವಜ ಹಾರಿಸಿದರು. ಈ ವೇಳೆ ಅವರು ಹಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

    ಹೊಸ ಯೋಜನೆಗಳು:

    • ಸ್ವಚ್ಛತೆ, ಪೌಷ್ಟಿಕತೆ ಕಾಪಾಡಲು, ರೈತರು, ಶ್ರಮಿಕರ ಅಭ್ಯುದಯಕ್ಕಾಗಿ ಹಾಗೂ ಕೆಚ್ಚೆದೆಯ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ಕೆಲವು ಕೊಡುಗೆಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ.
    • ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೇ. 100ರಷ್ಟು ಶೌಚಾಲಯಗಳ ನಿರ್ಮಾಣವನ್ನು 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಆ ಮೂಲಕ ಶಾಲೆ, ಕಾಲೇಜುಗಳಲ್ಲಿ ಸ್ವಚ್ಛ-ಆರೋಗ್ಯಕರ ವಾತಾವರಣ ನಿರ್ಮಿಸಲಾಗುವುದು.
    • ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ರೂ.ವರೆಗೆ ಸಾಲ-ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗುವುದು.
    • ರೈತರ ಮಕ್ಕಳಿಗೆ ಜಾರಿಗೊಳಿಸಿರುವ ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯವನ್ನು ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲಾಗುವುದು.
    • ಭೂ ರಹಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಆದ್ಯತೆಯಾಗಿರಿಸಿಕೊಂಡು, ಅಗತ್ಯವನ್ನಾಧರಿಸಿ ರಾಜ್ಯದಲ್ಲಿ ಹೊಸದಾಗಿ 4,050 ಅಂಗನವಾಡಿ ತೆರೆಯಲಾಗುವುದು. ಈ ಮೂಲಕ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಠಿಕ ಆಹಾರ ಕಲ್ಪಿಸಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಟಿಕ ಆಹಾರ ಹಾಗೂ ಶಾಲಾ ಪೂರ್ವ ಶಿಕ್ಷಣ ನೀಡಲು ಅವಕಾಶ ಕಲ್ಪಿಸಲಾಗುವುದು. 8100 ಮಹಿಳೆಯರಿಗೂ ಇದರಿಂದ ಉದ್ಯೋಗಾವಕಾಶ ದೊರೆಯಲಿದೆ.
    • ಸೈನಿಕರು ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕಾರ್ಯನಿರ್ವಹಿಸುತ್ತಾರೆ. ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟರೆ, ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು.
    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss