ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ ನಡೆದಿದೆ. ಚಾಮರಾಜಪೇಟೆಯ ರಾಯನ್ ಸರ್ಕಲ್ನಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಾಯವಾಗಿದೆ.
ಸಿಲಿಂಡರ್ ಸ್ಫೋಟದಲ್ಲಿ ಮೂವರ ದೇಹಗಳು ಛಿದ್ರ ಛಿದ್ರವಾಗಿದೆ. ಇಬ್ಬರು ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿವೆ.