ಮಂಗಳೂರು: 10 ‘IPS ಅಧಿಕಾರಿ’ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್‌ನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್ ಅವರನ್ನು ವರ್ಗಾಯಿಸಲಾಗಿದೆ. ಆದರೆ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ಅಂಶುಕುಮಾರ್‌ರ ಸ್ಥಾನಕ್ಕೆ 2019ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಸಿದ್ದಾರ್ಥ್ ಗೋಯಲ್ ಅವರನ್ನು ನಿಯುಕ್ತಿಗೊಳಿಸಲಾಗಿದೆ. 2018ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಅಂಶು ಕುಮಾರ್ ಕಳೆದೊಂದು ವರ್ಷದಿಂದ ನಗರ ಡಿಸಿಪಿಯಾಗಿ ಡ್ರಗ್ಸ್, ಅಕ್ರಮ ಮರಳುಗಾರಿಕೆ ವಿರುದ್ಧ ಕಾರ್ಯಾಚರಣೆ, ಸಿಸಿ ಕ್ಯಾಮರಾ ಅಳವಡಿಕೆ, ತಂತ್ರಜ್ಞಾನಗಳ ಬಳಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
©2021 Tulunada Surya | Developed by CuriousLabs