ಮಂಗಳೂರು: ಕರ್ನಾಟಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ನೈರುತ್ಯ ಪದವೀಧರರ ಶಿಕ್ಷಕರ ಕ್ಷೇತ್ರಗಳ ಪದವೀಧರರ ಅಥವಾ ಶಿಕ್ಷಕರ ಮತ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಹರು ನಮೂನೆ 18 ಮತ್ತು ನಮೂನೆ 19ರಲ್ಲಿ ನವೆಂಬರ್ 6 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.ಮಂಗಳೂರು ತಾಲೂಕು ಗ್ರಾಮಾಂತರಕ್ಕೆ ಸಂಬಂಧಿಸಿದ ಅರ್ಜಿಗಳನ್ನು ನೇರವಾಗಿ ತಾಲೂಕು ಕಚೇರಿಗೆ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಮುಖ್ಯ ಚುನಾವಣಾ ಅಧಿಕಾರಿಗಳ ವೆಬ್‍ಸೈಟ್ http://www.ceokarnataka.kar.nik.in/ ಸಂಪರ್ಕಿಸುವಂತೆ ಮಂಗಳೂರು ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
©2021 Tulunada Surya | Developed by CuriousLabs