ಜಮ್ಮು-ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಗುಂಡೇಟಿನಿಂದ ಗಾಯಗೊಂಡಿರುವ ಸೇನಾ ದಾಳಿ ನಾಯಿ ‘ಜೂಮ್’ ಗುರುವಾರ ಮಧ್ಯಾಹ್ನ ಮೃತಪಟ್ಟಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ,
ಶ್ರೀನಗರದ ಅಡ್ವಾನ್ಸ್ಡ್ ಫೀಲ್ಡ್ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ನಾಯಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಜೂಮ್ ಡಾಗ್ ಮೃತಪಟ್ಟಿದೆ.
ಅನಂತನಾಗ್ ಜಿಲ್ಲೆಯಲ್ಲಿ ಕಳೆದ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಶ್ವಾನವು ತೀವ್ರವಾಗಿ ಗಾಯಗೊಂಡಿದೆ. ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಭಾನುವಾರ ತಡರಾತ್ರಿ ತಂಗ್ಪಾವಾ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು.
ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಜೂಮ್ ಗೆ ಹೆಚ್ಚಿನ ತರಬೇತಿ ನೀಡಲಾಗಿತ್ತು. ಮತ್ತು ಶ್ವಾನವು ದಕ್ಷಿಣ ಕಾಶ್ಮೀರದಲ್ಲಿನ ಅನೇಕ ಸಕ್ರಿಯ ಕಾರ್ಯಾಚರಣೆಗಳ ಭಾಗವಾಗಿತ್ತು ಎಂದು ಸೇನೆ ತಿಳಿಸಿದೆ.
