Friday, April 26, 2024
spot_img
More

    Latest Posts

    ನಟ ದರ್ಶನ್ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ಆರೋಪಿ ಅರೆಸ್ಟ್

    ಮೈಸೂರು: ಸ್ಯಾಂಡಲ್ ವುಡ್ ನಟ ದರ್ಶನ್ ಮಾಲೀಕತ್ವದ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಟಿ. ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಕೆಲಸ‌ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಸೆ.13ರಂದು ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ. ಸೆಪ್ಟೆಂಬರ್ 13ರಂದು ನಡೆದಿರುವ ಘಟನೆ ಕುರಿತು ನಾಲ್ಕು ದಿನಗಳ ನಂತರ ಗೊತ್ತಾಗಿದೆ. ಬಾಲಕಿ ವಿಷಯವನ್ನು ಪೋಷಕರಿಗೆ ತಿಳಿಸುತ್ತಿದ್ದಂತೆಯೇ ಪೋಷಕರು ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

    ಈ ಸಂಬಂಧ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss