ಬೆಂಗಳೂರು: ನಗರದಲ್ಲಿ ಪುಡಿರೌಡಿಗಳ ಹಾವಳಿ ಮತ್ತೆ ಹೆಚ್ಚಾಗಿದ್ದು, ಸಿಗರೇಟ್ ಹಣ ಕೇಳಿದಕ್ಕೆ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.90 ಲಕ್ಷ ರೂ. ಎಗರಿಸಿ, ಪ್ರಾಣಬೆದರಿಕೆ ಹಾಕಿರುವ ಪ್ರಕರಣ ಕುಂದಲಹಳ್ಳಿಗೇಟ್ ಸಮೀಪದ ಕಾಂಡಿಮೆಂಟ್ಸ್‌ವೊಂದರಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಡೆಲಿವರಿ ಬಾಯ್ ಕಾರ್ತಿಕ್(20), ಅಲ್ಯೂಮಿನಿಯಂ ವರ್ಕ್ ಮಾಡುವ ಸಲ್ಮಾನ್(20) ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್(23) ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವೈಟ್‌ಫೀಲ್ಡ್ ಡಿಸಿಪಿ ಗಿರೀಶ್ ತಿಳಿಸಿದ್ದಾರೆ.