ಬೆಂಗಳೂರ : ಪ್ರೋತ್ಸಾಹ ಧನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ. 17 ರಂದು ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಧರಣಿಗೆ ಕರೆ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ, ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರೋತ್ಸಾಹ ಧನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಲ್ಲಾ ಕೆಲಸ ಸ್ಥಗಿತಗೊಳಿಸಿ ಮೇ. 17 ರಂದು ರಾಜ್ಯಾದ್ಯಂತ ಹೋರಾಟಕ್ಕೆ ಆಶಾ ಕಾರ್ಯಕರ್ತೆಯರು ಕರೆ ನೀಡಿದ್ದಾರೆ.

