Wednesday, September 28, 2022

ಮಂಗಳೂರು: ದಸರಾದ ನಾಲ್ಕು ಹೆಚ್ಚುವರಿ ರಜೆ ದ.ಕ.ಜಿಲ್ಲೆಗೂ ವಿಸ್ತರಣೆ: ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಈ ಹಿಂದೆ ಮಂಗಳೂರು ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ಅನ್ವಯವಾಗುವಂತೆ ಸೆ.28 ರಿಂದ ಅಕ್ಟೋಬರ್ 1ರವರೆಗೆ ನೀಡಲಾಗಿರುವ ಹೆಚ್ಚುವರಿ 4...
More

    Latest Posts

    ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

    ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

    ಮಳಲಿ ಮಸೀದಿ ವಿವಾದ: ಅ.17ಕ್ಕೆ ತೀರ್ಪು ಕಾಯ್ದಿರಿಸಿದ ಮಂಗಳೂರು ಸಿವಿಲ್‌ ಕೋರ್ಟ್‌

    ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ...

    ಬೆಳ್ತಂಗಡಿ: ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ, ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಹಲ್ಲೆ

    ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಮುದ್ದಿಗೆ ಎಂಬಲ್ಲಿ ಮನೆಯ ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ ಫ್ಯೂಸ್ ತೆಗೆದಿದ್ದ ಕಾರಣಕ್ಕೆ ಮೆಸ್ಕಾಂ ಲೈನ್ ಮ್ಯಾನ್ ಮೇಲೆ ಧಮ೯ಸ್ಥಳ ಗ್ರಾಮದ ರಿಜೇಶ್ ಮತ್ತೀತರರು ಹಲ್ಲೆ ಮಾಡಿರುವ ಘಟನೆ ಸೆ.22 ರಂದು ರಾತ್ರಿ ವೇಳೆ ಕೊಕ್ಕಡದಲ್ಲಿ ನಡೆದಿದೆ.

    ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ದಿ. ಕಾಂತು ಪೂಜಾರಿ ಎಂಬುವವರ ಮನೆಯ ಕರೆಂಟ್ ಬಿಲ್ ಕಟ್ಟದ ಕಾರಣ ಲೈನ್ ಮ್ಯಾನ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಈ ಹಿನ್ನಲೆ ಗೂಡ್ಸ್ ಲಾರಿ ಚಾಲಕರಾಗಿರುವ ರಿಜೀಶ್ ಫೋನಿನಲ್ಲಿ ಪವರ್ ಮ್ಯಾನ್ ಉಮೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಮಧ್ಯೆ ಸೆಪ್ಟೆಂಬರ್ 22ರಂದು ದಿ. ಕಾಂತು ಪೂಜಾರಿಯವರ ಮನೆಯವರು ವಿದ್ಯುತ್ ಶುಲ್ಕ ಪಾವತಿಸಿ, ಮರು ಸಂಪರ್ಕವನ್ನು ನೀಡುವಂತೆ ಆದೇಶವನ್ನು ಮೆಸ್ಕಾಂ ಕಚೇರಿಗೆ ತಲುಪಿಸಿದ್ದಾರೆ. ಆ ಪ್ರಕಾರ ಪವರ್ ಮ್ಯಾನ್ ಉಮೇಶ್ ರವರು ದಿ.ಕಾಂತು ಪೂಜಾರಿ ಅವರ ಮನೆಗೆ ಮರು ಸಂಪರ್ಕವನ್ನು ನೀಡಿ ಬಂದಿದ್ದಾರೆ. ಗುರುವಾರ ಸಂಜೆ ಕರ್ತವ್ಯ ಮುಗಿಸಿ ರಾತ್ರಿ ಕೊಕ್ಕಡ ಜಂಕ್ಷನ್ ನಲ್ಲಿ ಉಮೇಶ್ ಹಾಗೂ ಅವರ ಸಹೋದ್ಯೋಗಿಗಳು ದಿನಸಿ ಸಾಮಗ್ರಿಗಳನ್ನು ಖರೀದಿಸುವ ವೇಳೆ ಲಾರಿ ಚಾಲಕರಾಗಿರುವ ರಿಜಿಶ್ ಉಮೇಶ್ ಯಾರೆಂದು ಪ್ರಶ್ನಿಸಿದ್ದಾರೆ. ಈ ಸಂದರ್ಭ ಸ್ಥಳದಲ್ಲಿಯೇ ಇದ್ದ ಉಮೇಶ್ ತಾನೇ ಎಂದು ಪರಿಚಯಿಸಿಕೊಂಡಿದ್ದಾರೆ. ಈ ಸಂದರ್ಭ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಉಮೇಶ್ ರನ್ನು ನಿಂದಿಸಿ ಹಲ್ಲೆಗೆ ರಿಜೀಶ್ ಮುಂದಾದರು. ಈ ಸಂದರ್ಭ ಸಹೋದ್ಯೋಗಿಯಾದ ಉಪ್ಪಾರಪಳಿಕೆಯ ಪವರ್ ಮ್ಯಾನ್ ದುಂಡಪ್ಪ ಮಧ್ಯಪ್ರವೇಶಿಸಿ ಮಾತುಕತೆ ನಡೆಸಿ ಸಮಾಧಾನಿಸಿದ್ದಾರೆ. ಪರಿಸ್ಥಿತಿ ಶಾಂತಗೊಳಿಸಿ, ತೆರಳುವಾಗ ಪಕ್ಕದಲ್ಲಿ ಇದ್ದ ಸೋಡಾ ಬಾಟಲಿಯಿಂದ ರಿಜೀಶ್ ದುಂಡಪ್ಪ ಅವರ ತಲೆಗೆ ಬಲವಾಗಿ ಹೊಡೆದಿದ್ದಾರೆ. ಈ ಸಂದರ್ಭದಲ್ಲಿ ಗಂಭೀರ ಗಾಯಗೊಂಡ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

    Latest Posts

    ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

    ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

    ಮಳಲಿ ಮಸೀದಿ ವಿವಾದ: ಅ.17ಕ್ಕೆ ತೀರ್ಪು ಕಾಯ್ದಿರಿಸಿದ ಮಂಗಳೂರು ಸಿವಿಲ್‌ ಕೋರ್ಟ್‌

    ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ...

    Don't Miss

    ಧಾರ್ಮಿಕ ಮುಂದಾಳು ಕಾಸರಗೋಡು ಕೆ.ಎನ್.ವೆಂಕಟ್ರಮಣ ಹೊಳ್ಳರಿಗೆ ಧರ್ಮಸ್ಥಳ ಕ್ಷೇತ್ರದಿಂದ “ಭಜನಾ ಸಾಧಕ ಪುರಸ್ಕಾರ” ಪ್ರದಾನ

    ಕಾಸರಗೋಡು:ಧಾರ್ಮಿಕ-ಸಾಂಸ್ಕೃತಿಕ ಮುಂದಾಳು ಕೆ.ಎನ್. ವೆಂಕಟ್ರಮಣ ಹೊಳ್ಳ ಕಾಸರಗೋಡು ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ “ಭಜನಾ ಸಾಧಕ ಪುರಸ್ಕಾರ”ವನ್ನು ಶುಕ್ರವಾರ ಪ್ರದಾನಿಸಲಾಗಿದೆ. ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ನ ನೇತೃತ್ವದಲ್ಲಿ ಅಮೃತ ವರ್ಷಿಣಿ...

    ಮಂಗಳೂರಿನಲ್ಲಿ ಸೆ.28 ರಿಂದ ದಸರಾ ರಜೆ-ಶನಿವಾರ ಪೂರ್ಣದಿನದ ತರಗತಿ

    ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ದಸರಾ ಸೆಪ್ಟೆಂಬರ್ 28ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ.

    ಕಾರ್ಕಳ: ಅಜೆಕಾರಿನಲ್ಲಿ 14ನೇ ಶತಮಾನದ ಶಿಲಾ ಶಾಸನ ಪತ್ತೆ

    ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಎಂಬಲ್ಲಿ 14ನೇ ಶತಮಾನದ ವೈಷ್ಣವ ಪಂಥದ ಶಿಲಾ ಶಾಸನ ಪತ್ತೆಯಾಗಿದೆ ಗಾಣದಬೆಟ್ಟು ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ...

    ವಿಟ್ಲ:ಪಿಕಪ್-ಬೈಕ್ ಢಿಕ್ಕಿ; ಯುವಕ ಮೃತ್ಯು

    ವಿಟ್ಲ: ಪಿಕಪ್ ವಾಹನ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ‌ ಬೈಕ್ ಸವಾರ ಮೃತಪಟ್ಟ ಘಟನೆ ವಿಟ್ಲದ ಕೇಪು ಮೈರ ಎಂಬಲ್ಲಿ ನಡೆದಿದೆ. ಸಂದೇಶ್(33)ಮೃತ ದುರ್ದೈವಿ.ಈತ...

    ಉಡುಪಿ: ಮನೆಗೆ ಆಕಸ್ಮಿಕ ಬೆಂಕಿ: ಅಪಾರ ನಷ್ಟ

    ಉಡುಪಿ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಸ್ವತ್ತುಗಳು ಸುಟ್ಟು ಕರಕಲಾದ ಘಟನೆ ಉಡುಪಿಯ ಕುಕ್ಕೀಕಟ್ಟೆ ಮಂಚಿ ಮೂಲಸ್ಥಾನ ಸಮೀಪ ನಡೆದಿದೆ. ಕುಕ್ಕಿಕಟ್ಟೆ ಮಂಚಿ ಮೂಲಸ್ಥಾನ...