ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘದ ಸದಸ್ಯರಾದ ಶ್ರೀ ವಿಜಯ್ ಕುಮಾರ್, ಶ್ರೀ ಪುರುಷೋತ್ತಮ ಕೆ., ಶ್ರೀ ಗೋಪಾಲ್ ಯು.ಕೆ. ಹಾಗೂ ಶ್ರೀಮತಿ ದೇವಕಿ ಆರ್. ಉಳ್ಳಾಲ್ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಘದ ಸದಸ್ಯರಾದ ಶ್ರೀ ವಿಜಯ್ ಕುಮಾರ್ ಅವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರವಾಗಿ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಸಿಬ್ಬಂದಿಗಳ ನಗುಮುಖದ ಸೇವೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘವು ಇತರ ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಿರುವುದು ಶ್ಲಾಘನೀಯ” ಎಂದರು.
ಸಂಘದ ಸದಸ್ಯರಾದ ಶ್ರೀ ಪುರುಷೋತ್ತಮ ಕೆ. ಅವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ” ಎಂದರು.
ಸಂಘದ ಸದಸ್ಯರಾದ ಶ್ರೀಮತಿ ದೇವಕಿ ಆರ್. ಉಳ್ಳಾಲ್ ಅವರು ಮಾತನಾಡಿ, “ರಾಷ್ಟ್ರೀಕೃತ ಬ್ಯಾಂಕ್ನ ಸೇವೆಗಿಂತ ಸಹಕಾರಿ ಸಂಘದ ಸೇವೆಯು ವೇಗವಾಗಿರುತ್ತದೆ ಹಾಗೂ ಸರಳತೆಯಿಂದ ಕೂಡಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಸದಸ್ಯರಾದ ಶ್ರೀ ಪುಷ್ಪರಾಜ್, ಶ್ರೀ ಯು. ಎತ್ತಪ್ಪ ಶೆಟ್ಟಿಗಾರ್ ಹಾಗೂ ಶ್ರೀ ಮಾಧವ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ, “ಸಹಕಾರಿ ಸಂಘದ ಸದಸ್ಯರ ಸಹಕಾರದಿಂದಲೇ ನಾವು ಇಷ್ಟು ಯಶಸ್ಸು ಸಾಧಿಸಲು ಸಾಧ್ಯವಾಯಿತು. ಸಂಘದಲ್ಲಿ 95% ಮಹಿಳಾ ಸಿಬ್ಬಂದಿಗಳೇ ಕಾರ್ಯನಿರ್ವಹಿಸುತ್ತಿದ್ದು, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತಿದೆ.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿದೆ. ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ಶೇ.10 ಹಾಗೂ 1000 ದಿನಗಳ ಠೇವಣಿಗಳಿಗೆ ಶೇ.10.50 ವಿಶೇಷ ಬಡ್ಡಿದರ ನೀಡಲಾಗುತ್ತಿದೆ.
ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಠ ರೂ.12,000/- ವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುವುದು. ಜೀವ ವಿಮೆ, ವಾಹನ ವಿಮೆ ಹಾಗೂ ಆರೋಗ್ಯ ವಿಮೆ ಸೇವಾ ಸೌಲಭ್ಯಗಳನ್ನು ಸ್ಪರ್ಧಾತ್ಮಕ ಪ್ರೀಮಿಯಂನಲ್ಲಿ ಒದಗಿಸಲಾಗುತ್ತಿದೆ.
ನಗರದ ಸ್ಟೇಟ್ ಬ್ಯಾಂಕ್ ಬಳಿಯ ಡಿ.ಸಿ. ಆಫೀಸ್ ಶಾಖೆಯಲ್ಲಿ ವ್ಯವಹಾರದ ದಿನಗಳಲ್ಲಿ ಸಂಜೆ 7 ಗಂಟೆಯವರೆಗೆ ಇ-ಸ್ಟಾಂಪ್ ಪೇಪರ್ ಸೇವೆ ಲಭ್ಯವಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಬೇಕು” ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ರಮಾನಾಥ ಸನಿಲ್, ಶ್ರೀ ಗೋಪಾಲ್ ಎಂ. ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಮತ್ತಿತರರು ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ ಕುಮಾರಿ ಪವಿತ್ರ ಜೆ. ಅವರು ಸ್ವಾಗತಿಸಿ, ಹಿರಿಯ ಶಾಖಾಧಿಕಾರಿ ಶ್ರೀ ಸಚಿನ್ ಅವರು ನಿರೂಪಿಸಿದರು.
Trending
- ಡೊಂಕ ಬಂದರಿನಲ್ಲಿ ಭೀಕರ ಅಗ್ನಿ ಅವಘಡ: ಪರ್ಷಿಯನ್ ಮೀನುಗಾರಿಕಾ ಬೋಟ್ ಸಂಪೂರ್ಣ ಭಸ್ಮ – ₹30 ಲಕ್ಷಕ್ಕೂ ಅಧಿಕ ನಷ್ಟ
- ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ – ರಾಹುಲ್, ಪ್ರಿಯಾಂಕಾ ಸೇರಿ ಹಲವು ನಾಯಕರು ವಶಕ್ಕೆ
- ಮೂಲ್ಕಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಭವ್ಯ ಸಭಾಭವನ ಡಿಸೆಂಬರ್ ಅಂತ್ಯದೊಳಗೆ ಲೋಕಾರ್ಪಣೆ: ಮುಂಬೈ ದಾನಿಗಳಿಂದ ಬಲಿಷ್ಠ ಭರವಸೆ
- ಬ್ರಹ್ಮಾವರದಲ್ಲಿ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ, ₹6.41 ಲಕ್ಷ ಮೌಲ್ಯದ ವಸ್ತುಗಳ ವಶ
- ಲಾವಣ್ಯ ಹತ್ಯೆ ಪ್ರಕರಣಕ್ಕೆ ಕಠಿಣ ಶಿಕ್ಷೆ ವಿಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಮನವಿ
- ಭಾರೀ ಮಳೆಗೆ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದು ಆತಂಕ – ಚಾಲಕ ಅದೃಷ್ಟವಶಾತ್ ಪಾರು
- ಮಾತೃಸ್ವರೂಪಿ ಶ್ರೀಮತಿ ಚೆನ್ನಮ್ಮ ದೇವೇಗೌಡರವರ ನಿಧನಕ್ಕೆ ಸುಳ್ಯ ತಾಲೂಕು ಜನತಾದಳ (ಜಾತ್ಯತೀತ) ಘಟಕ ತೀವ್ರ ಸಂತಾಪ
- ಪರಮಜ್ಯೋತಿ ಭಜನಾ ಮಂಡಳಿ ವತಿಯಿಂದ ಸಂಭ್ರಮದಿಂದ ಆಟಿ ದೊಂಜಿ ದಿನ ಆಚರಣೆ,ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ: ಯೋಗಿಶ್ ಶೆಟ್ಟಿ ಜಪ್ಪು

