ಸಹಕಾರ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು, ಥೈಲ್ಯಾಂಡ್ನ ಬ್ಯಾಂಕಾಕ್ನಲ್ಲಿ ಆಯೋಜಿಸಲಾದ ಮಣಿಪಾಲ್ ಸಿಗ್ನಾ ಹೆಲ್ತ್ ಇನ್ಶೂರೆನ್ಸ್ ಕಂಪನಿಯ “ಲಕ್ಷ್ಯ–2026” ಪ್ರತಿಷ್ಠಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.
ಈ ಸಮ್ಮೇಳನದಲ್ಲಿ ಮಣಿಪಾಲ್ ಸಿಗ್ನಾ ಹೆಲ್ತ್ ಇನ್ಶೂರೆನ್ಸ್ ಕಂಪನಿಯ ರಿಟೇಲ್ ಬಿಸಿನೆಸ್ನಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಹಾಗೂ ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿ ಸಾಧನೆಗೈದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರಿಗೆ ಮಣಿಪಾಲ್ ಸಿಗ್ನಾ ಹೆಲ್ತ್ ಇನ್ಶೂರೆನ್ಸ್ ಕಂಪನಿ (ಲಿ.) ಇಂಡಿಯಾದ ಮುಖ್ಯಸ್ಥರಾದ ಶ್ರೀ ಶಶಾಂಕ್ ಚಾಪೇಕರ್ ಹಾಗೂ ಏಜೆನ್ಸಿ ವಿಸ್ತರಣಾ ಮುಖ್ಯಸ್ಥರಾದ ಶ್ರೀ ಪ್ರಸಾದ್ ಶೆಟ್ಟಿ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಈ ಸಮಾರಂಭದಲ್ಲಿ ದಕ್ಷಿಣ ವಲಯ ಮುಖ್ಯಸ್ಥರಾದ ಶ್ರೀ ದವೇರ್ಶ್ ಮೊಹಮ್ಮದ್, ಸೌತ್ ಇಂಡಿಯಾ ಏಜೆನ್ಸಿ ಮುಖ್ಯಸ್ಥರಾದ ಶ್ರೀ ವಿಶಾಲ್ ಸುರಣ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಗೆ ಆರೋಗ್ಯಪೂರ್ಣ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಆರೋಗ್ಯ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದೆ. ಸಂಘದ ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿದ್ದು, ಇದುವರೆಗೆ ಒಟ್ಟು 110 ಉಚಿತ ಆರೋಗ್ಯ ಶಿಬಿರಗಳನ್ನು ನಡೆಸಲಾಗಿದೆ.
ಈ ಶಿಬಿರಗಳಲ್ಲಿ ಬಡವರಿಗೆ ಉಚಿತ ಔಷಧಿ ವಿತರಣೆ, ಆರೋಗ್ಯ ತಪಾಸಣೆ, ದಂತ ತಪಾಸಣೆ ಮತ್ತು ಚಿಕಿತ್ಸೆ, ಉಚಿತ ಆರೋಗ್ಯ ಕಾರ್ಡ್ ವಿತರಣೆ, 950ಕ್ಕೂ ಅಧಿಕ ಕಣ್ಣಿನ ಶಸ್ತ್ರಚಿಕಿತ್ಸೆ ಹಾಗೂ 21,000ಕ್ಕೂ ಹೆಚ್ಚು ಉಚಿತ ಕನ್ನಡಕ ವಿತರಣೆ ಕಾರ್ಯಗಳನ್ನು ಸಂಘದ ವತಿಯಿಂದ ಮಾಡಲಾಗಿದೆ.
ಇದಲ್ಲದೆ, ವಿಮಾ ಕ್ಷೇತ್ರದ 10ಕ್ಕೂ ಅಧಿಕ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಆರೋಗ್ಯ, ವಾಹನ ಹಾಗೂ ಜೀವ ವಿಮಾ ಸೇವೆಗಳನ್ನು ಸಂಘದ ಸದಸ್ಯರಿಗೆ ಸ್ಪರ್ಧಾತ್ಮಕ ದರದಲ್ಲಿ ಒದಗಿಸುತ್ತಿದ್ದು, ಹೆಚ್ಚಿನ ಗ್ರಾಹಕರು ಇದರ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ.
ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಸಂಘವು ಸತತ 10 ವರ್ಷಗಳಿಂದ ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಹೆಮ್ಮೆಯ ಸಂಸ್ಥೆಯಾಗಿದೆ.

