ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡುಬಿದ್ರೆ ಶಾಖೆಯ 4ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಪಡುಬಿದ್ರೆ ಶಾಖೆಯಲ್ಲಿ ನಡೆಯಿತು.
ಸಂಘದ ಸದಸ್ಯರಾದ ಶ್ರೀ ಶೀನ ಪೂಜಾರಿ ಅವರು ದೀಪ ಪ್ರಜ್ವಲನೆ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಗತ್ಯ ಸಂದರ್ಭಗಳಲ್ಲಿ ಗ್ರಾಹಕರ ಮನೆಬಾಗಿಲಿಗೆ ಸೇವೆ ನೀಡುತ್ತಿದೆ. ಇಂತಹ ಸೇವೆಗಳು ಶ್ಲಾಘನೀಯ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಸದಸ್ಯರಾದ ಶ್ರೀ ಸುನಿಲ್ ಕುಮಾರ್ ಮಾತನಾಡಿ, “ಆತ್ಮಶಕ್ತಿ ಸಂಘವು ಕೇವಲ ಬ್ಯಾಂಕಿಂಗ್ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗದೆ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಸಂಘವು ಇನ್ನಷ್ಟು ಉನ್ನತ ಸ್ಥಾನಕ್ಕೇರಲಿ” ಎಂದು ಶುಭ ಹಾರೈಸಿದರು.
ಗ್ರಾಹಕರಾದ ಶ್ರೀ ಶಶಿಕಾಂತ್ ಪಡುಬಿದ್ರೆ ಮಾತನಾಡಿ, “ಉತ್ತಮ ಮಾರ್ಗದರ್ಶನ ನೀಡುವ ಆಡಳಿತ ಮಂಡಳಿ ಹಾಗೂ ಉತ್ತಮ ಸೇವೆ ನೀಡುವ ಸಿಬ್ಬಂದಿಯಿಂದ ಸಂಘವು ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ” ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ, “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿಯನ್ನು ಸಾಧಿಸಿದೆ. ಸಂಘವು ಕೇವಲ ಬ್ಯಾಂಕಿಂಗ್ ಸೇವೆಗೆ ಸೀಮಿತವಾಗದೆ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಸದಸ್ಯರಿಗೆ ಸ್ಪರ್ಧಾತ್ಮಕ ದರದಲ್ಲಿ ವಿವಿಧ ವಿಮಾ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಮುಂಬರುವ ಮಹಾಸಭೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಇದರ ಸದ್ವಿನಿಯೋಗ ಮಾಡಿಕೊಳ್ಳುವಂತೆ” ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಪಡುಬಿದ್ರೆ ಶಾಖೆಯ 4ನೇ ವಾರ್ಷಿಕೋತ್ಸವದ ಪ್ರಯುಕ್ತ, 500 ದಿನಗಳ ಠೇವಣಿಗೆ ಶೇ. 10 ಹಾಗೂ 1000 ದಿನಗಳ ಠೇವಣಿಗೆ ಶೇ. 10.50 ವಿಶೇಷ ಬಡ್ಡಿದರ ಘೋಷಿಸಲಾಯಿತು. ಜೊತೆಗೆ, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಠ ₹12,000 ವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ಸೌಲಭ್ಯವನ್ನು ಸದಸ್ಯರಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಶ್ರೀ ನೇವಿರಾಜ್ ಪಿ., ನಿರ್ದೇಶಕರಾದ ಶ್ರೀ ಬಿ.ಪಿ. ದಿವಾಕರ್, ಶ್ರೀಮತಿ ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.
ಹಿರಿಯ ಶಾಖಾಧಿಕಾರಿ ಶ್ರೀಮತಿ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸಿಬ್ಬಂದಿ ಶ್ರೀಮತಿ ಲೋಷಿತಾ ವಂದಿಸಿದರು.



