ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆಡಳಿತ ಮಂಡಳಿಯ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಚಿತ್ತರಂಜನ್ ಬೋಳಾರ್ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಮಾನಾಥ ಸನಿಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಆಡಳಿತ ಮಂಡಳಿಯ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣಾ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚಿತ್ತರಂಜನ್ ಬೋಳಾರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಮಾನಾಥ ಸನಿಲ್ ಅವರ ಆಯ್ಕೆಗೆ ಸರ್ವಾನುಮತದ ಬೆಂಬಲ ವ್ಯಕ್ತವಾದ ಹಿನ್ನೆಲೆಯಲ್ಲಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾದರು.
ಸಂಘದ ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಸೀತಾರಾಮ್ ಎನ್., ಗೋಪಾಲ್ ಎಂ., ಆನಂದ ಕೆ., ಗಣೇಶ್, ವಸಂತ್ ಬಿ., ಶ್ರೀಕಾಂತ್ ಸುವರ್ಣ, ಎಂ.ಪಿ. ರವಿಶಂಕರ್, ರಾಜಮ್ಮ ಹಾಗೂ ಪ್ರಮೀಳಾ ಎಸ್. ಅಮೀನ್ ಅವರ ಉಪಸ್ಥಿತಿಯಲ್ಲಿ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಪುನರಾಯ್ಕೆಯಾದ ಚಿತ್ತರಂಜನ್ ಬೋಳಾರ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ರಮಾನಾಥ ಸನಿಲ್ ಅವರಿಗೆ ನಿರ್ದೇಶಕರು ಅಭಿನಂದನೆ ಸಲ್ಲಿಸಿದರು. ಸಂಘದ ಅಭಿವೃದ್ಧಿ, ಸದಸ್ಯರ ಹಿತಾಸಕ್ತಿ ಮತ್ತು ಸಹಕಾರಿ ಕ್ಷೇತ್ರದ ಪ್ರಗತಿಗಾಗಿ ನೂತನ ಆಡಳಿತ ಮಂಡಳಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು.

