ಉಡುಪಿ, ಆ. 8: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಗಸ್ಟ್ 16ರಂದು ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಆಯೋಜಿಸಲಾಗಿರುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಮಂತ್ರಣ ಪತ್ರಿಕೆ ವಿತರಿಸಲಾಯಿತು.
ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಪರಂಪರೆ, ಆಚಾರ-ವಿಚಾರ ಹಾಗೂ ಆಟಿ ತಿಂಗಳ ಸಂಭ್ರಮವನ್ನು ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುವ ಕಾರ್ಯವನ್ನು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ತಂಡ ಕೈಗೊಂಡಿತು.
ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ, ಜಿಲ್ಲಾ ಉಪಾಧ್ಯಕ್ಷರಾದ ಉಮೇಶ್ ಶೆಟ್ಟಿ ಹಾವಂಜಿ ಹಾಗೂ ಮನೋಜ್ ಕೆ.ಜಿ. ರೋಡ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಂಕರ್ ಉಡುಪಿ, ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ಕೃಷ್ಣ ಮಾರ್ಪಳ್ಳಿ ಅವರ ನೇತೃತ್ವದ ತಂಡವು ಗಣ್ಯರನ್ನು ಭೇಟಿ ಮಾಡಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸಿತು.




ಈ ಸಂದರ್ಭದಲ್ಲಿ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ,, ನ್ಯಾಯವಾದಿ ಶಾಂತರಾಮ್ ಶೆಟ್ಟಿ, ಉಡುಪಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ರೋನಲ್ಡ್. ಡಾ. ರವೀಂದ್ರ, ಡಾ. ಕೌಶಿಕ್ . ಸತೀಶ್ ಕಾರ್ವಿ, ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರಿಗೆ ‘ಆಟಿಡೊಂಜಿ ದಿನ’ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನ ನೀಡಲಾಯಿತು.


ತುಳುನಾಡಿನ ಸಾಂಸ್ಕೃತಿಕ ವೈವಿಧ್ಯತೆ ಹಾಗೂ ಪರಂಪರೆಯನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ತುಳುನಾಡಿನ ಸಂಸ್ಕೃತಿ ಮತ್ತು ಸಂಪ್ರದಾಯದ ಸಂಭ್ರಮವನ್ನು ಹಂಚಿಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.

