Tuesday, September 17, 2024
spot_img
More

    Latest Posts

    ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ..!

    ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮರಳು ತೆಗೆಯಲು ಉಪಯೋಗಿಸುತ್ತಿದ್ದ ಲದೋಣಿ ಹಾಗೂ ಲಾರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯ ಬಗೆಗಿನ ದೂರುಗಳ ಹಿನ್ನಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.ನೇತ್ರಾವತಿ ಸ್ನಾನಘಟ್ಟದ ಸಮೀಪ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ದಾಳಿ ನಡೆಸಲಾಗಿದ್ದು ಸ್ಥಳದಿಂದ ಮರಳು ತುಂಬಿದ ಒಂದು ಲಾರಿ, ಹಾಗೂ ಮರಳು ತುಂಬಲು ತಂದು ನಿಲ್ಲಿಸಿದ್ದ ಮತ್ತೊಂದು ಲಾರಿ ಹಾಗೂ ಮರಳು ತೆಗೆಯಲು ಉಪಯೋಗಿಸುತ್ತಿದ್ದ ಒಂದು ದೋಣಿಯನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಒಟ್ಟು ವಸ್ತುಗಳ ಮೌಲ್ಯ ಸುಮಾರು ಎಂಟು ಲಕ್ಷ ಎಂದು ಅಂದಾಜಿಸಲಾಗಿದೆ.

    ವಶಪಡಿಸಿಕೊಂಡಿರುವ ವಸ್ತುಗಳನ್ನು ಧರ್ಮಸ್ಥಳ ಠಾಣೆಗೆ ಹಸ್ತಾಂತರಿಸಲಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಲೋಕಾಯುಕ್ತ ತಂಡ ತಾಲೂಕಿನ ಇತರೆಡೆಗಳಿಗೂ ದಾಳಿ ನಡೆಸಿದರೂ ಮಾಹಿತಿ ಪಡೆದು ಮರಳು ದೋಚುತ್ತಿದ್ದವರು ತಮ್ಮ ಸಾಮಗ್ರಿಗಳೊಂದಿಗೆ ತಪ್ಪಿಸಿಕೊಳ್ಳುವಲ್ಲಿ ಯಶಸ್ಚಿಯಾಗಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss