Author: Tulunada Surya

ಕೆ.ಸಿ.ರೋಡ್ : ಜನ ನುಗ್ಗಿ ಕೋಟೆಕಾರ್ ವ್ಯವಸಾಯ ಸಹಕಾರಿ ಸಂಘ ದಲ್ಲಿ ಹಗಲು ದರೋಡೆ, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಕೆ.ಸಿ ರೋಡ್ ಬ್ಯಾಂಕ್ ಕಳ್ಳತನ ನಡೆದಿದ್ದು 1 ಕೆ.ಜಿ ಚಿನ್ನಾಭರಣ ಲೂಟಿ ಹೊಡೆದದ್ದಾರೆಂದು ಮಾಹಿತಿ ದೊರೆತಿದೆ. ಗನ್ ಪಾಯಿಂಟ್ ನಲ್ಲಿ ದುಷ್ಕರ್ಮಿಗಳು ದರೋಡೆ ಮಾಡಿದ್ದು ಆರು ಜನ ದುಷ್ಕರ್ಮಿ ಫಿಯೆಟ್ ಕಾರಿನಲ್ಲಿ ಬಂದಿದ್ದಾರೆಂದು ತಿಳಿದಿದೆ. ದುಷ್ಕರ್ಮಿಗಳು ಸ್ಥಳದಿಂದ ಮಂಗಳೂರು ಕಡೆಗೆ ಪರಾರಿಯಾಗಿದ್ದು ಇದೀಗ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಹೆಚ್ಚಿನ ಮಾಹಿತಿ ಪೋಲಿಸರು ಕಲೆ ಹಾಕುತ್ತಿದ್ದಾರೆ.

Read More

ಬೀದರ್: ಬೀದರ್‌ನ ಶಿವಾಜಿ ಚೌಕ್​ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುರ್ಷರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ. ಎಟಿಎಂಗಳಿಗೆ ಹಣ ತುಂಬುವ ವಾಹನವೊಂದು ಅಲ್ಲಿಗೆ ಬಂದಿದೆ. ಹಾಡಹಗಲೇ, ನೋಡ ನೋಡುತ್ತಿದ್ದಂತೆಯೇ ಏಕಾಏಕಿ ದುರ್ಷರ್ಮಿಗಳು ವಾಹನದ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ. ವಾಹನದಲ್ಲಿದ್ದ ವ್ಯಕ್ತಿ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ. ಎಂದಿನಂತೆ ಇವತ್ತು ಕೂಡ ಎಟಿಎಂಗಳಿಗೆ ಹಣ ಹಾಕಲು ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುರ್ಷರ್ಮಿಗಳು ಐದು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಗಿರಿ ವೆಂಕಟೇಶ್‌ಗೆ ಗುಂಡು ತಗುಲಿದೆ. ಸ್ಥಳದಲ್ಲೇ ಗಿರಿ ಮೃತಪಟ್ಟಿದ್ದಾರೆ. ವಾಹನದಲ್ಲಿದ್ದವರಿಗೆ ಖಾರದ ಪುಡಿ ಎರಚಿದ ಇಬ್ಬರು ದುರ್ಷರ್ಮಿಗಳು, ನಂತರ ಗುಂಡಿನ ದಾಳಿ ನಡೆಸಿದ್ದಾರೆ.…

Read More

ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಕೋಸ್ಟಲ್‌ವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅವರ ಗೋಲ್ಡನ್ ಮೂವೀಸ್ ಸಂಸ್ಥೆ ತುಳು ಸಿನೆಮಾ ಇಂಡಸ್ಟ್ರಿಗೆ ಕಾಲಿಟ್ಟಿದೆ. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಈ ಪ್ರೊಡಕ್ಷನ್‌ನ ಮೊದಲ ತುಳು ಸಿನಿಮಾ ಪ್ರೊಡಕ್ಷನ್ ನಂ 1ಗೆ ಮುಹೂರ್ತ ನೆರವೇರಿಸಲಾಗಿದೆ. ಉದ್ಯಮಿ ಎಂ ಆರ್ ಜಿ ಗ್ರೂಪ್‌ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಅವರು ಮೊದಲ ಕ್ಲ್ಯಾಪ್‌ ಮಾಡಿದ್ದು, ಕುದ್ರೋಳಿ ಕ್ಷೇತ್ರದ ನವ ನಿರ್ಮಾಣದ ರೂವಾರಿ ಜನಾರ್ದನ ಪೂಜಾರಿ ಅವರ ಆಶೀರ್ವಾದೊಂದಿಗೆ ನಟ ಗಣೇಶ್ ಕ್ಯಾಮೆರಾ ರೋಲ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್, ಉದ್ಯಮಿ ರೋಹನ್ ಮೊಂತೆರೋ, ಲೀಲಾಕ್ಷ ಕರ್ಕೇರ , ತುಳು ಸಿನೆಮಾದ ಕಲಾವಿದರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಶುಭ ಹಾರೈಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ನಟ ಗಣೇಶ್ , ನಾಲ್ಕು ವರ್ಷದ ಹಿಂದೆ ಮಂಗಳೂರಿಗೆ ಬಂದಾಗ ತುಳು ಸಿನೆಮಾ ಮಾಡಬೇಕು ಅಂತ ಯೋಚನೆ…

Read More

ಕುಂದಾಪುರ: ಕುಂದಾಪುರ ಪೊಲೀಸ್ ಉಪವಿಭಾಗದ ನೂತನ ಡಿವೈಎಸ್ಪಿಆಗಿ ಎಚ್.ಡಿ.ಕುಲಕರ್ಣಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು 1998ನೇ ಬ್ಯಾಚ್ ಪೊಲೀಸ್ ಅಧಿಕಾರಿಯಾಗಿದ್ದು ಉಡುಪಿ ಜಿಲ್ಲೆ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಕಳೆದ 4 ವರ್ಷಗಳ ಹಿಂದೆ ಡಿವೈಎಸ್ಪಿಆಗಿ ಪದೋನ್ನತಿ ಹೊಂದಿ ಬೆಂಗಳೂರು ಗ್ರಾಮಾಂತರ ಸೈಬರ್ ಕ್ರೈಮ್ ವಿಭಾಗದಲ್ಲಿ ಡಿವೈಎಸ್ಪಿ ಆಗಿದ್ದರು. ನಂತರ ಬೆಂಗಳೂರು ಸಿಐಡಿಯಲ್ಲಿ ಡಿವೈಎಸ್ಪಿ ಆಗಿದ್ದ ಇವರನ್ನು ಇದೀಗ ಕುಂದಾಪುರ ಪೊಲೀಸ್ ಉಪವಿಭಾಗದ ಉಪಾಧೀಕ್ಷಕರಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಅವರ ವರ್ಗಾವಣೆ ಸ್ಥಾನಕ್ಕೆ ಎಚ್.ಡಿ.ಕುಲಕರ್ಣಿ ಅವರನ್ನು ನಿಯೋಜಿಸಲಾಗಿದೆ.

Read More

6 ಮಂದಿ ನಕ್ಸಲೀಯರು ಶಸಾಸ್ತ್ರಗಳನ್ನು ತ್ಯಜಿಸಿದ್ದು, ಸರ್ಕಾರದ ಶರಣಾಗತಿ ಪ್ಯಾಕೇಜ್ ಒಪ್ಪಿಕೊಂಡು ಶರಣಾಗಿದ್ದಾರೆ. ಕಾಡು ಬಿಟ್ಟು ರಾಜಧಾನಿ ” ಬೆಂಗಳೂರಿನಲ್ಲಿ ನಕ್ಸಲ್ ರ ಕರ್ನಾಟಕದ ‘ರಕ್ತ ಚರಿತ್ರೆ’ ಇತಿಹಾಸದಲ್ಲಿ ಬುಧವಾರ ಮಹತ್ವದ ದಿನವಾಗಿದೆ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯದ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ ಹಾಗೂ ತಮಿಳುನಾಡಿನ ಕೆ. ವಸಂತ್ ಅವರು ಹಸಿರು ಬಟ್ಟೆ ಕಳಚಿಟ್ಟು, ಕೆಂಪು ಬಾವುಟ ಕೆಳಗಿಟ್ಟು ಶರಣಾದರು. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿದ್ದು, ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗುವ ಕಾಲ ಸಮೀಪಿದಂತಾಗಿದೆ. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಪೊಲೀಸರು ಶರಣಾದ ನಕ್ಸಲರನ್ನು ತಮ್ಮ ವಶಕ್ಕೆ ಪಡೆಯಲಿದ್ದು, ಕೋರ್ಟ್‌ಗೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದಾರೆ. ಇದರೊಂದಿಗೆ ಹಲವು ದಶಕಗಳಿಂದ…

Read More

ಮಣಿಪಾಲ: ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ಜ.4ರಂದು ನಡೆದಿದೆ. ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಿವಾಸಿ ರಘುನಂದನ್(40) ಹಾಗೂ ದಾವರಣಗೆರೆ ಜಿಲ್ಲೆಯ ಹರಿಹರ ನಿವಾಸಿ ಅಮೀನಾ ಬೇಗಂ (55) ಎಂದು ಗುರುತಿಸಲಾಗಿದೆಮಣಿಪಾಲ ಸಮೀಪದ ಪೆರಂಪಳ್ಳಿಯ ಅಪಾರ್ಟ್ ಮೆಂಟ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಈ ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ನಿರ್ದೇಶನದಂತೆ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ. ನೇತೃತ್ವದಲ್ಲಿ ಎಸ್ಸೈ ಅನೀಲ್, ಎಎಸ್ಸೈ ವಿವೇಕ್ ಹಾಗೂ ಸಿಬ್ಬಂದಿಗಳಾದ ವಿದ್ಯಾ, ಇಮ್ರಾನ್, ಪ್ರಸನ್, ಮಂಜುನಾಥ ಅವರನ್ನೊಳಗೊಂಡ ತಂಡ ಅರ್ಪಾಟ್ ಮೆಂಟ್ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಆರೋಪಿ ವೇಶ್ಯಾವಾಟಿಕೆ ವ್ಯವಹಾರ ನಡೆಸಲು ಬಳಸಿಕೊಂಡಿದ್ದ ಬೆಂಗಳೂರು ಮೂಲದ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಹಾಸನ…

Read More

ಅಖಿಲ ಭಾರತ ತುಳು ಒಕ್ಕೂಟದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್‌ ಶೆಟ್ಟಿ ಜಪ್ಪು ರವರನ್ನು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ದಿನಾಂಕ 05-01-2025 * ರಂದು ರವಿವಾರ ಸಂಜೆ 3.30 ಗಂಟೆಗೆ ಸನ್ಮಾನ ಮಾಡಿ ಗೌರವಿಸುವ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಘಟಕ ಕುಂದಾಪುರ ತಾಲೂಕು ಘಟಕ ಮತ್ತು ವಿವಿಧ ಘಟಕಗಳ ಕಾರ್ಮಿಕ, ಮಹಿಳಾ, ಯುವ ಘಟಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು, ಸರ್ವ ಸದಸ್ಯರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರು

Read More

ಕುಂದಾಪುರ ತುಳುನಾಡು ರಕ್ಷಣಾ ವೇದಿಕೆ ಘಟಕದ ವತಿಯಿಂದ ಕುಂದಾಪುರ ಪುರಸಭೆಗೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಯುತ ಪ್ರಭಾಕರ್ ವಿ ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು . ವೇದಿಕೆಯಲ್ಲಿ ಕುಂದಾಪುರ ತುಳುನಾಡ ಘಟಕದ ಅಧ್ಯಕ್ಷರಾದ ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಹಾಗೂ ಡಾ. ರವೀಂದ್ರ ತಲ್ಲೂರ್ ಸಂಘಟನೆ ಕಾರ್ಯದರ್ಶಿ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ,ಡಾ. ಶಿವಾನಂದ ತಲ್ಲೂರು ಸಂಯೋಜಕರು ಅಂತರಾಷ್ಟ್ರೀಯ ಮಾನವ ಹಕ್ಕು ಆಯೋಗ, ಸಿಟಿ ಜೆಸಿ ಸ್ಥಾಪಕ ಅಧ್ಯಕ್ಷ ಹುಸೇನ ಹೈಕಡಿ , ಕುಂದಾಪುರ ಪುರಸಭೆ ಮಾಜಿ ಸದಸ್ಯ ರವಿರಾಜಖಾರ್ವಿ ಶ್ರೀ ಮಹಾಕಾಳಿ ದೇವಸ್ಥಾನ ಖಾರ್ವಿ ಕೇರಿ ಕುಂದಾಪುರ ಮಾಜಿ ಅಧ್ಯಕ್ಷ ಸುಭಾಷ್ ಪಾಟೀಲ್, ಬಾತಿನ್ ಗಂಗೊಳ್ಳಿ, ಕೇಶವ ಕಟ್ಟಿ, ನಿತ್ಯಾನಂದ ನಾಯ್ಕ್, ಮಾಧವ ಖಾರ್ವಿ, ಆನಂದ ಖಾರ್ವಿ ಹರ್ಷವರ್ಧನ್ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು

Read More

ಹೆಬ್ರಿ : ತಾಲೂಕು ಬೆಳ್ವೆ ಗೆ ಗ್ರಾಮದ ವನಜಲ ಪ್ರೆಸಿಡೆನ್ಸಿ ಕಟ್ಟಡದ ರೂಮ್ ನಂಬರ್ 103 ರಲ್ಲಿ ಅಕ್ರಮವಾಗಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದಿರುತ್ತಾರೆ ಬಂಧಿತ ಆರೋಪಿಗಳನ್ನು ಬೆಳ್ವೆ ಗ್ರಾಮದ ಹರೀಶ್ ಶೆಟ್ಟಿ (42 )ಪ್ರಕಾಶ್ ಕುಮಾರ್ (45) ಮಂದಾರ (32) ಸಿದ್ದಾರ್ಥ್ ಶೆಟ್ಟಿ (41) ನಾಗರಾಜ ಶೆಟ್ಟಿ (36), ಮುಕೇಶ್ ನಾಯರ್ (46), ಚಿರಾಗ್ (32), ಎಂದು ಗುರುತಿಸಲಾಗಿದೆ ಬಂಧಿತ ಆರೋಪಿಗಳಿಂದ ಜುಗಾರಿ ಆಟಕ್ಕೆ ಉಪಯೋಗಿಸಿದ್ದ 13700 ರೂ. ನಗದು, ಏಳು ಮೊಬೈಲ್ ಫೋನ್ ಏಳು ಮೊಬೈಲ್ ಫೋನ್ ಗಳು ,ಬಿಳಿ ಬಣ್ಣದ ಕ್ರೇಟಾ ಕಾರು , ಬಿಳಿ ಬಟ್ಟೆ ಮೇಲೆ ಬಿದ್ದಿದ್ದ 52 ಇಸ್ಪೀಟ್ ಎಲೆಗಳು ಹಾಗೂ ಬಿಳಿ ಬಣ್ಣದ ಬಟ್ಟೆಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಂಕರ್ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ ಕೈಗೊಳ್ಳುವಾಗ ಸೂಕ್ತ ಮುನ್ನೆಚ್ಚರಿಕೆ ಸುರಕ್ಷತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ ಇದೀಗ ಸಂತೆಕಟ್ಟೆ ಹಾಗೂ ಅಂಬಲಪಾಡಿಯಲ್ಲಿ ನಡೆಯುತ್ತಿದ್ದು ಕಾಮಗಾರಿ ವೇಗದಿಂದ ನಡೆಯುತ್ತಿರುವುದು ಸಮಾಧಾನದ ವಿಷಯವಾಗಿದೆ. ಆದರೆ ಅಂತಕದ ವಿಷಯ ರಸ್ತೆಯ ಎರಡು ಬದಿಗಳಲ್ಲಿ ಆಳವಾಗಿ ಗುಂಡಿಗಳನ್ನು ಕೊರೆಯುತ್ತಿದ್ದು ಬೃಹತ್ ಗುಂಡಿಗಳ ಪಕ್ಕದಲ್ಲಿ ನಿತ್ಯ ನೂರಾರು ವಾಹನಗಳು ಚಲಿಸುತ್ತಿದ್ದು ಇಲ್ಲಿ ಸಂಚರಿಸುವ ವಾಹನಗಳಿಗೆ ಸಂಬಂಧಿಸಿದ ಯಾವುದೇ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳುವಲ್ಲಿ ವಿಫಲವಾಗಿದ್ದು ಅಂಬಲಪಾಡಿಯಲ್ಲಿ ಕಾರು ಬಿದ್ದು ಅಪಘಾತವಾಗಿರುತ್ತದೆ. ಅದೇ ರೀತಿ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಮೀನು ಮಾರುವ ಬೈಕ್ ಮಾರುವ ಬೈಕ್ ಸವಾರ ಅಪಘಾತಕ್ಕೀಡಾಗಿರುತ್ತಾರೆ ಇದು ನಮಗೆಲ್ಲರಿಗೂ ಚಿಂತೆ ಮಾಡುವ ವಿಷಯವಾಗಿರುತ್ತದೆ. ಆದುದರಿಂದ ಇನ್ನಷ್ಟು ಅವಘಡಗಳು ಆಗುವ ಸಾಧ್ಯತೆ ಇದ್ದು ಕೂಡಲೇ ಸೂಕ್ತ ಮುನ್ನೆಚ್ಚರಿಕೆ ಸುರಕ್ಷ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿರುತ್ತಾರೆ. ತುಳುನಾಡ…

Read More