- ಹಿರಿಯ ನಟ ನಾನಾ ಪಾಟೇಕರ್ ನಿಧನ ಹೃದಯ ಸ್ತಂಭನದಿಂದ 75ನೇ ವಯಸ್ಸಿನಲ್ಲಿ ಅಂತ್ಯ – ಭಾರತೀಯ ಚಿತ್ರರಂಗಕ್ಕೆ ಅಪಾರ ನಷ್ಟ
- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
Author: Tulunada Surya
ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಶಾಂತಿ ಸೌಹಾರ್ದ ನೆಲೆಸಲು ಪ್ರಯತ್ನಿಸುತ್ತಿರುವ ಗ್ರಹ ಮಂತ್ರಿಯವರಿಗೆ ಪ್ರಶಾಂತ್ ರೈ ಮರವಂಜ ಸನ್ಮಾನಿಸಿದರು. ಇತ್ತೀಚೆಗೆ ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರವಂಜ ನೇತೃತ್ವದಲ್ಲಿ ನಿಯೋಗ ಕರ್ನಾಟಕ ಸರ್ಕಾರದ ಗೃಹ ಸಚಿವ ಪರಮೇಶ್ವರರವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಶಾಂತಿ ಸೌಹಾರ್ದ ನೆಲೆಸಲು ಉತ್ತಮ ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುತ್ತಿರುವ ಗ್ರಹ ಮಂತ್ರಿಯವರಿಗೆ ಶಾಲು ಹೊದಿಸಿ ಗೌರವ ಸನ್ಮಾನಿಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಟ್ರಸ್ಟಿ ಶ್ರೀಮತಿ ಪ್ರವೀಣ ಪ್ರಶಾಂತ್ ರೈ ಮರುವಂಜ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು’ ಎಂದು ಮರು ನಾಮಕರಣ ಮಾಡುವ ಹೋರಾಟಕ್ಕೆ ಸಮಿತಿ ರಚಿಸಲಾಗಿದೆ. ಇದರಲ್ಲಿ ಪದಾಧಿಕಾರಿಗಳ ನೇಮಕ ಮಾಡಿಲ್ಲ, ಪಕ್ಷಾತೀತವಾಗಿ ಎಲ್ಲರನ್ನೂ ಒಳಗೊಂಡ ಸಮಿತಿಯಾಗಿದೆ ಎಂದು ದಯಾನಂದ ಕತ್ತಲ್ ಸಾರ್ ತಿಳಿಸಿದ್ದಾರೆ. ಸಾರ್ವತ್ರಿಕವಾಗಿ ತುಳುನಾಡು ಎಂದು ಈಗಿನ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡನ್ನು ಒಳಗೊಂಡ ಭೂಭಾಗಕ್ಕೆ ರಾಜಕೀಯ ಮತ್ತು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹೆಸರು ಇತ್ತು. ಸುಮಾರು 2,000 ವರ್ಷಗಳ ಹಿಂದೆ ತಮಿಳಿನ ಸಂಗಂ ಸಾಹಿತ್ಯವಾದ ‘ಅಗನಾನೂರು’ ಎಂಬ ಕಾವ್ಯಮಾಲೆಯ 13ನೇ ಪದ್ಯದಲ್ಲಿ ತುಳುನಾಡು ಎಂಬ ಉಲ್ಲೇಖವಿರುವುದು ನಮ್ಮ ಪ್ರದೇಶದ ಪುರಾತನ ದಾಖಲೆಯಾಗಿದೆ. ಮುಂದೆ ಆಳುಪರು, ಪಲ್ಲವರು, ಹೊಯ್ಸಳರು, ವಿಜಯನಗರ, ಕೆಳದಿ ರಾಜರು ತುಳು ವಿಷಯ, ತುಳು ದೇಶ, ತುಳು ರಾಜ್ಯ ಎಂದು ನಮ್ಮ ಆವಿಭಜಿತ ಜಿಲ್ಲೆಗಳನ್ನು ಗುರುತಿಸಿರುವುದು ಇತಿಹಾಸದ ಪುಟಗಳಲ್ಲಿ ಸ್ಥಿರವಾಗಿರುವ ದಾಖಲೆ. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಮಂಗಳೂರು ರಾಜ್ಯ, ಬಾರ್ಕೂರು ರಾಜ್ಯ ಎಂದು ಈಗಿರುವ ತುಳುನಾಡನ್ನು ವಿಭಾಗಿಸಿ ಆಡಳಿತಾತ್ಮಕವಾಗಿ ಪ್ರಸಕ್ತ ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು…
ಮಂಗಳೂರು : ಆಲ್ ಮರೀನಾ ಬಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಿದ್ದಿಕ್ ಪಾಂಡವರ ಕಲ್ಲು ಎಂಬಾತ ಮುಸ್ಲಿಂ ಯುವತಿಯರಿಗೆ ಮದುವೆ ಮಾಡಿಸುವ ನೆಪದಲ್ಲಿ ಕ್ರೌಡ್ ಫಂಡ್ ಸಂಗ್ರಹ ಮಾಡುವುದಲ್ಲದೆ ಇದರ ಜತೆ ಯುವತಿಯರ ಮೊಬೈಲ್ ನಂಬರ್ ಪಡೆದು ಆ ಬಳಿಕ ತನ್ನ ಆನೈತಿಕ ಸಂಬಂಧಕ್ಕೆ ಬಳಸಿಕೊಳ್ಳಲು ಅವರಿಗೆ ಕಿರುಕುಳ ನೀಡುತ್ತಿದ್ದ ಎಂದು ಇನ್ನೊಂದು ಸಂಸ್ಥೆಯವರು ನನಗೆ ತಿಳಿಸಿ ಸಹಾಯ ಯಾಚಿಸಿದಾಗ ಸತ್ಯಾಸತ್ಯತೆಯನ್ನು ತಿಳಿಯಲು ಸಿದ್ದೀಕ್ ನನ್ನು ಕರೆದು ವಿಚಾರಿಸಿದಾಗ ಆತ ತನ್ನ ತಪ್ಪನ್ನು ಮರೆಮಾಡಲು ಅತ್ಮಹತ್ಯೆಗೆ ಪ್ರಯತ್ನಿಸಿದ್ದು ವಿಫಲವಾದಾಗ ಅವರಿಗೆ ಮುಖ ತೋರಿಸಲು ನಾಚಿಕೆ ಪಟ್ಟು ನನ್ನ ವಿರುದ್ಧವೇ ಪೊಲೀಸ್ ಠಾಣೆಯಲ್ಲಿಸುಳ್ಳು ಕೇಸ್ ದಾಖಲಿಸಿರುವುದಾಗಿ ಡಿ ವಾಯ್ಸ್ ಬ್ಲಡ್ ಡೊನೊರ್ಸ್ ಮಂಗಳೂರು ಇದರ ಸ್ಥಾಪಕ ಅಬ್ದುಲ್ ರವೂಫ್ ಬಂದರ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ವಾಯ್ ಆಪ್ ಬ್ಲಡ್ ಡೋನರ್ನ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಅದರ ಮೂಲಕ ವಿವಿಧ ಪ್ರದೇಶಗಳಲ್ಲಿ ರಕ್ತದಾನ ಶಿಬಿರಗಳನ್ನು ನಡೆಸಿ ದಾಖಲೆಯ ಮಟ್ಟದಲ್ಲಿ ರಕ್ತದಾನ ಮಾಡಿಸಿ, ಸಮಾಜಕ್ಕೆ ಉಚಿತ ಆಂಬುಲೆನ್…
ಮಂಗಳೂರು : ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಅನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್ ಅವರು ಹೇಳಿದರು.ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುನಾಡಿನ ಸೌಹಾರ್ದ ಬದುಕಿನ ಬಗ್ಗೆ ರಂಗಚಲನ ತಂಡದ ಮೂಲಕ ನಿರ್ಮಾಣಗೊಂಡ “ಜಾಗ್ ರ್ತೆ” ತುಳು ನಾಟಕದ ಪ್ರಥಮ ಪ್ರದರ್ಶನವನ್ನು ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಘಾಟಿಸಿ ಮಾತನಾಡಿದರು.ನಾವು ಕತ್ತರಿಸುವ ಕತ್ತರಿ ಆಗಬಾರದು ಹೊಲಿದು ಒಟ್ಟುಗೂಡಿಸುವ ಸೂಜಿ ದಾರ ಆಗಬೇಕು, ನಮ್ಮ ಜಾತಿ ಧರ್ಮ ಮನೆಯಲ್ಲಿ ಮತ್ತು ಆರಾಧನಾಲಯಗಳಲ್ಲಿ ಮಾತ್ರ ಇರಬೇಕು, ಹೊರತಾಗಿ ಸಮಾಜದಲ್ಲಿ ನಾವೆಲ್ಲರೂ ಒಂದೇ ಎನ್ನುವ ಭಾವನೆ ಇರಬೇಕು. ಧರ್ಮ, ಜಾತಿ ಭಾಷೆ ಯಾವುದೇ ಇರಲಿ ಮನುಷ್ಯರು ಒಂದೇ, ಅದನ್ನು ಸಾರುವ ಪ್ರಯತ್ನ ತುಳು ಅಕಾಡೆಮಿ ಈ ನಾಟಕದ ಮೂಲಕ ಮಾಡುತ್ತಿದೆ ಎಂದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳುನಾಡಿನ ಸೌಹಾರ್ದ…
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡ ಘಟನೆ ಸಂಭವಿಸಿದೆ. ಸಾವನ್ನಪ್ಪಿದ ಯುವಕನನ್ನು ಕೊಡ್ಮಣ್ ನಿವಾಸಿ ಸುಧೀರ್ (30) ಹಾಗೂ ಚೂರಿ ಇರಿತಕ್ಕೊಳಗಾದ ಯುವತಿಯನ್ನು ಫರಂಗಿಪೇಟೆ ನಿವಾಸಿ ದಿವ್ಯಾ ಯಾನೆ ದೀಕ್ಷಿತಾ (26) ಎಂದು ತಿಳಿದು ಬಂದಿದೆ. ದಿವ್ಯಾ ಯಾನೆ ದೀಕ್ಷಿತಾ ಹಾಗೂ ಸುಧೀರ್ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಎಂದು ತಿಳಿಯಲಾಗಿದೆ. ಕಳೆದ ಕೆಲ ತಿಂಗಳುಗಳಿಂದ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿತ್ತು. ನಂತರ ಸುಧೀರ್ ಆಕೆ ಬಳಿ ಮಾತನಾಡಲು ಮುಂದಾದ, ದೀಕ್ಷಿತಾ ಮಾತನಾಡಲು ನಿರಾಕರಿಸಿದ್ದಳು ಎನ್ನಲಾಗಿದೆ. ಅದೇ ಕಾರಣಕ್ಕೆ ಜಗಳ ನಡೆದು ಆಕೆ ಮದುವೆ ಆಗಲ್ಲ ಹೇಳಿದ ಕಾರಣ ದೀಕ್ಷಿತಾಳಿಗೆ ಚೂರಿ ಇರಿದಿದ್ದಾನೆ.ಆಕೆ ತಪ್ಪಿಸಿಕೊಂಡು ಓಡಿ ಹೋಗಿ ಬಿದ್ದಿದ್ದಾಳೆ.ಅದನ್ನು ನೋಡಿ ಆಕೆ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಸುಧೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.…
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ, ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಬಾರಿಯ ಪ್ರಕೃತಿ ವಿಕೋಪದಿಂದಾಗಿ ನಗರದ ಹಲವೆಡೆ ರಸ್ತೆ, ಚರಂಡಿ, ರಾಜ ಕಾಲುವೆ, ತಡೆಗೋಡೆಗಳಿಗೆ ವಿಪರೀತ ಹಾನಿಯಾಗಿದೆ. ಕಾನೂನಾತ್ಮಕವಾಗಿ ತಡೆಗೋಡೆಗೆ ಪರಿಹಾರ ಒದಗಿಸಲು ಸಾಧ್ಯವಿಲ್ಲದಿದ್ದರೂ, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 25 ರಿಂದ 50 ಕೋಟಿವರೆಗೂ ಅನುದಾನವನ್ನು ತಂದು ನಗರದಲ್ಲಿ ಪರಿಹಾರ ಕಾರ್ಯ ನಡೆಸಲಾಗಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಳೆದ ಎರಡು ವರ್ಷಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ವಿಶೇಷ ಅನುದಾನವನ್ನೇ (ಎಸ್.ಎಫ್.ಸಿ) ನೀಡಿಲ್ಲ. ಅಲ್ಲದೇ ಈ ಹಿಂದಿನ ಮಳೆ ಹಾನಿಯ ಪರಿಹಾರ ಧನವೂ ಬಂದಿಲ್ಲ. ಅದರ ಜೊತೆಗೆ ಈ ಬಾರಿಯ ಪರಿಹಾರದ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಲಿದ್ದು ಅದೂ ಸಹ ಬಾಕಿಯಾದರೆ ಕ್ಷೇತ್ರದ ಜನತೆ ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.…
ಮದಭಿನವ ಸ್ವಾಮೀಜಿ,ಓಂ ನಮಃತಮ್ಮ ಪ್ರಾಚೀನ ಕ್ಷೇತ್ರಬಾಳೇಕುದ್ರು ಮಠದ ಶ್ರೀ ನರಸಿಂಹಾಶ್ರಮ ಸ್ವಾಮೀಜಿ ಅವರು ಸ್ವರ್ಗ ಸ್ಥ ರಾದ ಸುದ್ದಿ ತಿಳಿಯಿತು ಶ್ರೀ ಗಳವರು ಉತ್ತಮ ತಪಸ್ವೀ ಗಳು ನಮ್ಮ ಶ್ರೀ ಮಠ ದ ಆತ್ಮೀಯ ರಲ್ಲಿ ಓರ್ವ ಉತ್ತಮ ಸಾಧಕ ರು ಅವರ ಅಗಲಿದ ಆತ್ಮಕ್ಕೆ ಉತ್ತಮ ಸದ್ಗತಿ ಪ್ರಾಪ್ತಿ ಯಾಗಲಿಅವರ ಅಗಲುವಿಕೆ ಯಿಂದ ಆಗಿರುವ ದುಃಖ್ಖ ವನ್ನು ಸಹಿಸುವ ಶಕ್ತಿ ಭಕ್ತ ವ್ರoದಕ್ಕೆ ಸಿಗಲಿಇತೀ ಜಿನೇಂದ್ರ ಸ್ಮರಣೆ ಗಳೊಂದಿಗೆ,ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಚಾರ್ಯ ಪಟ್ಟಾಚಾರ್ಯ ವರ್ಯ ಮಹಾ ಸ್ವಾಮೀಜಿ ಶ್ರೀ ದಿಗಂಬರ ಜೈನ ಮಠ,ಮೂಡು ಬಿದಿರೆ, ಜಿಲ್ಲೆ ದ.ಕ,ಕರ್ನಾಟಕ
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ “ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ” ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಪೋರ್ಚುಗೀಸರು ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು, ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರುನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳುಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ. ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ.ಎಂದರು. ಉತ್ತರ ಪ್ರದೇಶ, ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ…
ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ ಉಂಟಾಗಿದ್ದು ಕಟ್ಟಡ ನಿರ್ಮಾಣ ಕಾಮಗಾರಿಗಳು ಸ್ಥಗಿತವಾಗಿದೆ. ಇದರಿಂದ ಕಾರ್ಮಿಕರು, ಗುತ್ತಿಗೆದಾರರು, ಸಾರ್ವಜನಿಕರಿಗೆ ತೀವ್ರ ಸಮಸ್ಯೆಯುಂಟಾಗಿ ಕೆಲಸವೇ ಇಲ್ಲದ ವಾತಾವರಣ ನಿರ್ಮಾಣವಾಗಿದ್ದಲ್ಲದೇ, ಅಭಿವೃದ್ಧಿ ಕಾರ್ಯಗಳಿಗೂ ತೀವ್ರ ಹಿನ್ನಡೆಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ಮರಳು ನೀತಿ ಮಾಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಆದರೆ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗುತ್ತಾ ಬಂದರೂ ಈ ಬಗ್ಗೆ ಸ್ಪಷ್ಟ ಕಾನೂನು ರೂಪಿಸಿಲ್ಲವಾದ್ದರಿಂದ ಈಗಲೂ ಸಹ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮರಳು ಸಿಗುತ್ತಿಲ್ಲ. ಈ ಬಗ್ಗೆ ಸರ್ಕಾರ ಒಂದಾದರೂ ಸಭೆ ನಡೆಸಿದೆಯಾ? ಕ್ಷೇತ್ರದ ಶಾಸಕನಾಗಿರುವ ನನಗಂತೂ ಈ ಬಗ್ಗೆ ಯಾವ ಮಾಹಿತಿಯೂ ಬಂದಿಲ್ಲ. ಕೇರಳದಲ್ಲಿ ಒಂದು ಟನ್ ಕೆಂಪು ಕಲ್ಲಿಗೆ 32 ರೂ. ರಾಯಲ್ಟಿ ಇದ್ದರೆ, ಕರ್ನಾಟಕದಲ್ಲಿ 282 ರೂ. ಇದೆ. ಹಾಗಾಗಿ ಕೇರಳದಿಂದ ಉಳ್ಳಾಲ ಕಡೆಗೆ…
ತುಮಕೂರು ; ಅಪ್ರಾಪ್ತ ಬಾಲಕನಿಗೆ ಬೈಕ್ ಚಲಾಯಿಸಲು ಕೊಟ್ಟ ತಂದೆಗೆ ಜೈಲು ಶಿಕ್ಷೆ ನೀಡಿ ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾನ ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದ ಘಟನೆ ನಡೆದಿದೆ. ಅಪ್ರಾಪ್ತ ಬಾಲಕನ ತಂದೆಗೆ ಒಂದು ದಿನ ಜೈಲು ಶಿಕ್ಷೆ ನೀಡಿ 30 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. 2024 ನವೆಂಬರ್ 06 ರಂದು ಬಾಲಕ ಬೈಕ್ ಚಲಾಯಿಸಿ ಅಪಘಾತ ಮಾಡಿದ್ದನು.ತುಮಕೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ವೇಳೆ ಗುಬ್ಬಿಯಲ್ಲಿ ಬೈಕ್ ಅಪಘಾತ ನಡೆದಿತ್ತು. ಗುಬ್ಬಿ ಸಿಐಟಿ ಕಾಲೇಜು ಬಳಿ ಮಣ್ಣಿನ ಗುಡ್ಡೆಗೆ ಡಿಕ್ಕಿಯಾಗಿ ಬಿದ್ದಿದ್ದು ಈ ಬಗ್ಗೆ ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಗುಬ್ಬಿ ಸಿವಿಲ್ ನ್ಯಾಯಾಲಯ ಬಾಲಕನಿಗೆ ಬೈಕ್ ಕೊಟ್ಟ ತಪ್ಪಿಗೆ ತಂದೆಗೆ ಶಿಕ್ಷೆ ನೀಡಿ ತೀರ್ಪು ನೀಡಿದೆ. ಮಗನಿಗೆ ಬೈಕ್ ಕೊಟ್ಟ ತಪ್ಪಿಗೆ ಕೋರ್ಟ್ ಒಂದು ದಿನ ಜೈಲು ಶಿಕ್ಷೆ ನೀಡಿದೆ. ಈ ಮೂಲಕ ಅಪ್ರಾಪ್ತರಿಗೆ ಬೈಕ್…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
