- ಹಿರಿಯ ನಟ ನಾನಾ ಪಾಟೇಕರ್ ನಿಧನ ಹೃದಯ ಸ್ತಂಭನದಿಂದ 75ನೇ ವಯಸ್ಸಿನಲ್ಲಿ ಅಂತ್ಯ – ಭಾರತೀಯ ಚಿತ್ರರಂಗಕ್ಕೆ ಅಪಾರ ನಷ್ಟ
- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
Author: Tulunada Surya
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ರವರ ಜಾಗಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಸುದೀರ್ ರೆಡ್ಡಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ
ಉಡುಪಿ : ಉಡುಪಿ ಎಸ್.ಪಿ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಂ ಶಂಕರ್ ಅವರನ್ನು ಸರ್ಕಾರ ನೇಮಿಸಿದೆ.
ಪಿರ್ಯಾದಿದಾರರು ತನ್ನ ಪರಿಚಯದವರ ಹೆಸರಿನಲ್ಲಿ ಇರುವ ಉಳ್ಳಾಲ ತಾಲೂಕು ಇರಾ ಗ್ರಾಮದ ಸರ್ವೆ ನಂಬ್ರ 279/5 ರಲ್ಲಿ 1.39 ಎಕರೆ ವಿಸ್ತೀರ್ಣದ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆಯನ್ನು ಕಟ್ಟುವ ಉದ್ದೇಶದಿಂದ ಕಟ್ಟಡಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿ ನೀಡಲು ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆ ದಿನಾಂಕ 28/10/2024 ರಂದು ಅರ್ಜಿಯನ್ನು ಸಲ್ಲಿಸಿರುತ್ತಾರೆ. ತಹಶೀಲ್ದಾರ್ ಉಳ್ಳಾಲ ತಾಲೂಕುರವರು ಸಮತಟ್ಟು ಮಾಡುವ ಸಲುವಾಗಿ ಜಮೀನಿನಲ್ಲಿ ಲಭ್ಯವಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ/ದೃಢಿಕರಣ ಪತ್ರ ನೀಡಬಹುದಾಗಿದೆ ಎಂಬುದಾಗಿ ದಿನಾಂಕ 21/03/2025ರಂದು ವರದಿ ಸಲ್ಲಿಸಿದ್ದರೂ ಕೂಡ ಗಣಿ ಇಲಾಖೆಯಿಂದ ಅನುಮತಿ ನೀಡಿರುವುದಿಲ್ಲ. ಈ ಬಗ್ಗೆ ಅರ್ಜಿಯ ಬಗ್ಗೆ ವಿಚಾರಿಸಲು ಪಿರ್ಯಾದಿದಾರರು ಮಂಗಳೂರು ಗಣಿ ಇಲಾಖೆ ಕಛೇರಿಗೆ ತೆರಳಿದ್ದು, ಅಲ್ಲಿನ ಉಪನಿರ್ದೇಶಕರಾದ ಕೃಷ್ಣವೇಣಿ ರವರು ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಯಿಸಿ ಫೈಲಿಗೆ 50,000/- ತಗೊಳ್ಳಿ, ನಂತರ ಸೈನ್ ಮಾಡುವ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಮಂಗಳೂರು…
ರಾಯಚೂರು : ಜಿಲ್ಲೆಯ ಮಸ್ಕಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಬಾಣಂತಿಯ ಕುಟುಂಬಸ್ಥರು ಆಸ್ಪತ್ರೆಯ ಮುಂದೆ ಧರಣಿ ನಡೆಸಿ, ಕಲ್ಲು ತೂರಾಟ ಮಾಡಿದ್ದು, ಆ್ಯಂಬುಲೆನ್ಸ್‌ನ ಗಾಜು ಪುಡಿಪುಡಿಯಾಗಿದೆ. ಮಸ್ಕಿ ಪಟ್ಟಣದ ಸಿದ್ದಮ್ಮ ಎನ್ನುವ ಬಾಣಂತಿಯನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸೋಮವಾರ ಬಾಣಂತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಗೊತ್ತಾಗುತ್ತಿದ್ದಂತೆ ಆಸ್ಪತ್ರೆಯ ಮುಂದೆ ಸಂಬಂಧಿಕರು ಜಮಾವಣೆಗೊಂಡು ಧರಣಿ ನಡೆಸಿ, ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಆರೋಗ್ಯ ಮತ್ತು ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಡಾ.ಶಿವಕುಮಾರ, ಲಿಂಗಸುಗೂರು ತಾಲೂಕು ವೈದ್ಯಾಧಿಕಾರಿ ಅಮರೇಶ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿ ಧರಣಿಯಿಂದ ಉಂಟಾಗಿದ್ದ ಬಿಗುವಿನ ವಾತಾವರಣ ನಿಯಂತ್ರಿಸಲು ಪೊಲೀಸ್ ಸಿಬ್ಬಂದಿಗಳು ಹರಸಾಹಸಪಟ್ಟರು. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ಲಭ್ಯ ವಾಗಬೇಕಾಗಿದೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.”
ಬಂಟ್ವಾಳ: ‘ಭಾರತದಲ್ಲಿ ಹಿಂದೂವಾಗಿ ಹುಟ್ಟುವುದು ಪುಣ್ಯವಾಗಿದ್ದು, ಧರ್ಮ ಪ್ರಸಾರಕ್ಕೆ ಯಕ್ಷಗಾನ ಅತ್ಯಮೂಲ್ಯ ಕೊಡುಗೆ ನೀಡಿದೆ. ಯಕ್ಷಗಾನಕ್ಕೆ ಪುಳಿಂಚ ರಾಮಯ್ಯ ಶೆಟ್ಟರ ಸೇವೆ ಸ್ಮರಣೀಯವಾಗಿದ್ದು, ಆ ಪರಂಪರೆಯನ್ನು ಪುತ್ರ ಶ್ರೀಧರ ಶೆಟ್ಟಿ ಪುಳಿಂಚ ಮತ್ತವರ ಪತ್ನಿ ಮುಂದುವರಿಸುತ್ತಿರುವುದು ಶ್ಲಾಘನೀಯವಾಗಿದೆ’ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಸಂಚಾಲಕ ಕಲ್ಲಡ್ಕ ಪ್ರಭಾಕರ ಭಟ್ ಅವರು ಹೇಳಿದರು.ಅವರು ಕಲ್ಲಡ್ಕ ಸಮೀಪ ಬಾಳ್ತಿಲ ಗ್ರಾಮದ ಚೆಂಡೆಯಲ್ಲಿ ಶ್ರೀ ಕಲ್ಲುರ್ಟಿ ದೈವಸ್ಥಾನ ಹಾಗೂ ಪುಳಿಂಚ ಸೇವಾ ಪ್ರತಿಷ್ಠಾನ ಜಂಟಿ ಆಶ್ರಯದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ಬೆಜ್ಜದಗುತ್ತು ದಿ.ಪುಳಿಂಚ ರಾಮಯ್ಯ ಶೆಟ್ಟಿ ಅವರ ಸ್ಮರಣಾರ್ಥ ಬೊಳ್ನಾಡುಗುತ್ತು ದಿ.ಸರೋಜಿನಿ ರಾಮಯ್ಯ ಶೆಟ್ಟಿ ಪುಳಿಂಚ ವೇದಿಕೆಯಲ್ಲಿ ಮೇ24,ಶನಿವಾರ ನಡೆದ ಪಂಚಮ ತ್ರೈವಾರ್ಷಿಕ ‘ಪುಳಿಂಚ ಪ್ರಶಸ್ತಿ ಪ್ರದಾನ’ , ಮಂಗಳೂರು ಪುಳಿಂಚ ಚಿಟ್ಸ್(ಒಪಿಸಿ) ಪ್ರೈ.ಲಿಮಿಟೆಡ್ ನ ದಶಮ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದರು.’ಹಿಂದೂ ಧರ್ಮದ ನಾಶಕ್ಕೆ ನಿರಂತರವಾಗಿ ಪ್ರಯತ್ನ ನಡೆಯುತ್ತಿದ್ದು, ಪಹಲ್ಗಾಮ್ ಘಟನೆಯು ಅದಕ್ಕೊಂದು ಜ್ವಲಂತ ಉದಾಹರಣೆಯಾಗಿದೆ. ದೇಶಕ್ಕೆ ಒಳಗಿನ ಶತ್ರುಗಳು ಅಪಾಯಕಾರಿಯಾಗಿದ್ದು, ಈ…
ಉಡುಪಿ: ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2025 ರ ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ. ಹವಾಮಾನದ ವೈರ‍್ಯತೆಯ ಮುನ್ಸೂಚನೆ ನೀಡಿದಲ್ಲಿ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಪಾಲಿಸಬೇಕು ಎನ್ನಲಾಗಿದೆ. ಮೀನುಗಾರಿಕೆ ನಿಷೇಧ ಹಿನ್ನೆಲೆ, ಕಡ್ಡಾಯವಾಗಿ ಎಲ್ಲಾ ಬೋಟುಗಳು ಮೇ 31 ರ ಒಳಗಾಗಿ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು…
ಮಂಗಳೂರು: ಖಾಸಗಿ ಸಂಘ, ಸಂಸ್ಥೆಗಳು ಆಯೋಜಿಸುವ ತುಳು ಭಾಷೆ, ಸಾಹಿತ್ಯ , ಸಂಸ್ಕ್ರತಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮಂಗಳೂರಿನ ತುಳು ಭವನದಲ್ಲಿ ವಿಶೇಷವಾಗಿ ಶೇಕಡಾ ಐವತ್ತರಷ್ಟು ರಿಯಾಯಿತಿಯಲ್ಲಿ ಸಭಾಂಗಣವನ್ನು ನೀಡಲಾಗುತ್ತಿದೆ. ಇದೇ ವೇಳೆ ಯಕ್ಷಗಾನ , ನಾಟಕ ಆಯೋಜಿಸುವವರಿಗೆ ಇನ್ನೂ ಹೆಚ್ಚಿನ ರಿಯಾಯಿತಿಯಲ್ಲಿ ಸಭಾಂಗಣವನ್ನು ಒದಗಿಸಲಾಗುತ್ತದೆ, ಯಾವುದೇ ರಿಯಾಯಿತಿಯನ್ನು ರದ್ದು ಮಾಡಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಘ ಸಂಸ್ಥೆಗಳು ಅಕಾಡೆಮಿಯೊಂದಿಗೆ ಸಹಭಾಗಿತ್ವದಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಉಚಿತವಾಗಿ ಸಭಾಂಗಣ ಒದಗಿಸಲಾಗುತ್ತದೆ. ಸಾಹಿತ್ಯ , ಸಾಂಸ್ಕ್ರತಿಕ ಹೊರತುಪಡಿಸಿದ ಖಾಸಗಿ ಕಾರ್ಯಕ್ರಮಗಳಿಗೆ ಮಾತ್ರ ಪೂರ್ತಿ ಬಾಡಿಗೆ ಪಡೆಯಲಾಗುತ್ತಿದೆ.ಯಾವುದೇ ಸಂಘ , ಸಂಸ್ಥೆಗಳು ನಡೆಸುವ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸರ್ಟಿಫಿಕೇಟ್ ನೀಡುವುದು ಅಕಾಡೆಮಿ ಕಾರ್ಯವ್ಯಾಪ್ತಿಗೆ ಸಂಬಂಧಿಸಿದ ವಿಚಾರವಾಗಿರುವುದಿಲ್ಲ ಅಥವಾ ಅಕಾಡೆಮಿಯು ಪರೀಕ್ಷೆ ಪ್ರಾಧಿಕಾರವಾಗಿರುವುದಿಲ್ಲ. ಅಕಾಡೆಮಿಯ ವತಿಯಿಂದ ನೇರವಾಗಿ ಅಥವಾ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಸುವ ತರಬೇತಿ ಶಿಬಿರ , ಕಮ್ಮಟ, ಸೆಮಿನಾರ್ ಗಳಲ್ಲಿ ಭಾಗವಹಿಸುವವರಿಗೆ ಸರ್ಟಿಫೀಕೇಟ್ ಆಯಾ…
ಮಂಗಳೂರು ; ಮದುವೆ ವಿಚಾರದಲ್ಲಿ ನಡೆದ ಕಲಹದಿಂದ ಯುವಕನೋರ್ವನು ತಂದೆ ಮಕ್ಕಳಿಗೆ ಚೂರಿಯಿಂದ ಇರಿದ ಪರಿಣಾಮ ತಂದೆ ಮೃತಪಟ್ಟು, ಮಕ್ಕಳಿಬ್ಬರು ಗಾಯಗೊಂಡ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಳಚಿಲ್ ಎಂಬಲ್ಲಿ ನಡೆದಿದೆ.ವಾಮಂಜೂರಿನ ನಿವಾಸಿ ಸುಲೇಮಾನ್ (50) ಮೃತ ವ್ಯಕ್ತಿ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಅವರ ಮಕ್ಕಳಾದ ರಿಯಾಬ್ ಮತ್ತು ಸಿಯಾಬ್ ಗಾಯಗೊಂಡಿದ್ದಾರೆ. ಮುಸ್ತಫಾ(30) ಬಂಧಿತ ಆರೋಪಿ.ಮೇ 22ರಂದು ರಾತ್ರಿ 9:30 ಸುಮಾರಿಗೆ ಘಟನೆ ನಡೆದಿದೆ. ಮದುವೆ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದ ಮೃತ ಸುಲೇಮಾನ್ 8 ತಿಂಗಳ ಹಿಂದೆ ತನ್ನ ಸಂಬಂಧಿಯಾದ ಆರೋಪಿ ಮುಸ್ತಫಾ(30)ನಿಗೆ ಯುವತಿಯೊಬ್ಬಳೊಂದಿಗೆ ವಿವಾಹ ಸಂಧಾನ ಮಾಡಿ ಮದುವೆಗೆ ಮಾಡಿದ್ದರು. ಬಳಿಕ ಅವರಿಬ್ಬರ ವೈವಾಹಿಕ ಜೀವನದ ಭಿನ್ನಾಭಿಪ್ರಾಯದಿಂದ, 2 ತಿಂಗಳ ಹಿಂದೆ ಮುಸ್ತಫಾನ ಮನೆಯನ್ನು ತೊರೆದು ತವರು ಮನೆ ಸೇರಿದ್ದಳು. ಇದು ಮುಸ್ತಫಾ ಮತ್ತು ಸುಲೇಮಾನ್ ನಡುವೆ ಗಲಾಟೆಗೆ ಕಾರಣವಾಗಿತ್ತು.ನಿನ್ನೆ ಸುಲೇಮಾನ್ ತಮ್ಮ ಮಕ್ಕಳಾದ ರಿಯಾಬ್ ಮತ್ತು ಸಿಯಾಬ್ ಅವರೊಂದಿಗೆ ವಳಚಿಲ್‌ನಲ್ಲಿರುವ ಮುಸ್ತಫಾ ನಿವಾಸಕ್ಕೆ ಭೇಟಿ ನೀಡಿದ್ದರು.…
ಕೊಪ್ಪಳ(ಕುಕನೂರು): ಕೋಳಿ ಫಾರಂ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ ಘಟನೆ ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಬುಧವಾರ ನಡೆದಿದೆ.ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಕೋಳಿ ಫಾರಂ ರನ್ಯಾ ರಾವ್ ತಂದೆ ರಾಮಚಂದ್ರರಾವ್ ಸಂಬಂಧಿಯ ಹೆಸರಲ್ಲಿದ್ದು, ಹಾಗಾಗಿ ರನ್ಯಾ ರಾವ್ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಹಲವು ಬಾರಿ ರನ್ಯಾ ರಾವ್ ತಂದೆ ರಾಮಚಂದ್ರರಾವ್ ಬಂದು ಹೋಗಿದ್ದರು.ಬುಧವಾರ ಬೆಳಿಗ್ಗೆಯಿಂದ ಕೋಳಿ ಫಾರಂ ಗೇಟ್ ಬಂದ್ ಮಾಡಿ, ಇಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಡಿ ಅಧಿಕಾರಿಗಳು ದೆಹಲಿಯಿಂದ ಬಂದು, ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಇದ್ದು, ಭದ್ರತೆಗಾಗಿ ಬಿ.ಎಸ್.ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಬಂದಿದ್ದಾರೆ. ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಸ್ಥಳೀಯ ಪೊಲೀಸರನ್ನೂ ಬದಿಗಿಟ್ಟು ಕಾರ್ಯಾಚರಣೆ ಮಾಡಿರುವುದು ಗಮನಾರ್ಹ. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ಲಭ್ಯ ವಾಗಬೇಕಾಗಿದೆ.
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
