- ಆಸ್ಪತ್ರೆಗೆ ತೆರಳುವ ಸಾರ್ವಜನಿಕರಿಗೆ ತೊಂದರೆ: ತುರ್ತು ಚಿಕಿತ್ಸಾ ವಾಹನಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಮನವಿ
- ಕ್ರಿಕೆಟ್ ಜೋಷ್… ತುಳು ನಾಡಿನ ಭಾವನೆ… “ಗಜಾನನ ಕ್ರಿಕೆಟರ್ಸ್” ಭರ್ಜರಿ ಎಂಟ್ರಿ!ಕರಾವಳಿಯ ಸಿನಿಪ್ರೇಮಿಗಳ ಬಹು ನಿರೀಕ್ಷಿತ ತುಳು ಚಲನಚಿತ್ರ
- ಮಂಗಳೂರು ರೈಲ್ವೆ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಯುವ ಜೆಡಿಎಸ್ ನಿಯೋಗದಿಂದ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಮನವಿ
- ಕರಾವಳಿ ಜನರ ನ್ಯಾಯದ ಹಕ್ಕಿಗೆ ಮಂಗಳೂರಿನಲ್ಲೇ ಹೈಕೋರ್ಟ್ ಸಂಚಾರಿ ಪೀಠ ಅಗತ್ಯ , ತ್ವರಿತ ನ್ಯಾಯದಾನಕ್ಕಾಗಿ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿ: ಶಾಸಕ ವೇದವ್ಯಾಸ ಕಾಮತ್
- ಬಾವಿ ನಿರ್ಮಾಣ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು ಮಲ್ಪೆ ಸಮೀಪ ಗರಡಿಮಜಲಿನಲ್ಲಿ ದಾರುಣ ಘಟನೆ – ಮತ್ತೋರ್ವ ಕಾರ್ಮಿಕ ರಕ್ಷಣೆ
- ಕನ್ನಗುಡ್ಡೆಯಲ್ಲಿ ರಾಜಕಾಲುವೆ ತಡೆಗೋಡೆ ಕಾಮಗಾರಿಗೆ ಭೂಮಿ ಪೂಜೆ ಮಳೆಗಾಲದ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಸುಮಾರು ₹10 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿ ಆರಂಭ
- ರಾಜಧಾನಿಯಲ್ಲಿ ಡ್ರಗ್ಸ್ ದಂಧೆ ಬಯಲು: ಮೂವರು ವಿದೇಶಿಗರು ಸೇರಿ ಎಂಟು ಮಂದಿ ಅರೆಸ್ಟ್
- ಕಾವೂರು ಬಂಟರ ಭವನ ಉದ್ಘಾಟನೆಗೆ ಸಿದ್ಧತೆ ಜನವರಿ 20, 2027ರಂದು ಭವ್ಯ ಕಾರ್ಯಕ್ರಮ — ಸಂಘಟಿತ ಕಾರ್ಯಕ್ಕೆ ಆನಂದ ಶೆಟ್ಟಿ ಅಡ್ಯಾರ್ ಕರೆ
Author: Tulunada Surya
ಕೊಡಗು ಮಡಿಕೇರಿ: ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ದೂರು ಅರ್ಜಿ ಸ್ವೀಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 6 ಅರ್ಜಿಗಳು ಸಲ್ಲಿಕೆಯಾಗಿದ್ದು, ವಿವಿಧ ಇಲಾಖೆಗಳ ಸಮಸ್ಯೆಗಳು ಬೆಳಕಿಗೆ ಬಂದವು.ಕಂದಾಯ, ಅರಣ್ಯ ಹಾಗೂ ಭೂ ದಾಖಲೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ನಾಗರಿಕರು ತಮ್ಮ ಅಹವಾಲುಗಳನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಪೊಲೀಸ್ ಉಪ ಅಧೀಕ್ಷಕರಾದ ದಿನಕರ ಶೆಟ್ಟಿ ಅವರು, ಸಲ್ಲಿಕೆಯಾದ ಎಲ್ಲಾ ಅರ್ಜಿಗಳನ್ನು ಗಂಭೀರವಾಗಿ ಪರಿಗಣಿಸಿ ಒಂದು ವಾರದೊಳಗೆ ಇತ್ಯರ್ಥಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರಿಗೆ ನೌಕರರು ಸಮರ್ಪಕವಾಗಿ ಸ್ಪಂದಿಸಬೇಕು. ಯಾವುದಾದರೂ ಕೆಲಸ ತಕ್ಷಣ ನೆರವೇರಿಸಲು ಸಾಧ್ಯವಾಗದಿದ್ದರೆ, ಅದರ ಕುರಿತು ಸ್ಪಷ್ಟವಾದ ಹಿಂಬರಹ (written reply) ನೀಡಬೇಕು ಎಂದು ಅವರು ನಿರ್ದೇಶಿಸಿದರು. ಸರ್ಕಾರಿ ಕೆಲಸವೆಂದರೆ ಅದು ಜನರ ಕೆಲಸ ಎಂಬ ಅರಿವಿನಿಂದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಕಡತಗಳನ್ನು ಅನಗತ್ಯವಾಗಿ ವಿಳಂಬಗೊಳಿಸಬಾರದು ಎಂದು ಎಚ್ಚರಿಸಿದರು. ಕೆಲವು ಮನವಿಗಳು…
ಕೋಟೆಕಾರ್ ನೆತ್ತಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತುಮಂಗಳೂರು ಸಮೀಪದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನೆತ್ತಿಲ ಕೋಟೆಕಾರ್ ನಲ್ಲಿ ಗುರುವಾರ (ತಾ. 9-04-2026) ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ಯಶಸ್ವಿಯಾಗಿ ನೆರವೇರಿದವು. ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ಗಣಹೋಮ, ನಾಗತಂಬಿಲ, ರಕ್ತೇಶ್ವರಿ ತಂಬಿಲ ಸೇರಿದಂತೆ ಪರಿವಾರ ದೈವಗಳ ವಿಶೇಷ ಪೂಜೆಗಳು ನಡೆದವು. ಬಳಿಕ ದೇವಾಲಯದಲ್ಲಿ ಕಲಶಾಭಿಷೇಕ ನೆರವೇರಿಸಿ, ಶ್ರೀ ದೇವಿಗೆ ವಿಶೇಷ ಮಹಾಪೂಜೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನವು ಭಕ್ತರಿಂದ ತುಂಬಿ ತುಳುಕಿದ್ದು, ನೂರಾರು ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು. ನಾಗತಂಬಿಲ ಅಂಗವಾಗಿ ಹೂವಿನ ಪೂಜೆ ಮತ್ತು ಅಲಂಕಾರ ಪೂಜೆ ವಿಶೇಷ ಆಕರ್ಷಣೆಯಾಗಿತ್ತು. ಪೂಜಾ ಕಾರ್ಯಕ್ರಮಗಳ ನಂತರ ಭಕ್ತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು. ಈ ಮಹತ್ವದ ಪುಣ್ಯ ಕಾರ್ಯದಲ್ಲಿ ಭಕ್ತರು ನೀಡಿದ ಸಹಕಾರವನ್ನು ದೇವಸ್ಥಾನ ಆಡಳಿತ ಮಂಡಳಿ ಕೃತಜ್ಞತೆಯಿಂದ ಸ್ಮರಿಸಿದೆ.ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಸಹಕರಿಸಿದ ಎಲ್ಲಾ ಭಕ್ತರು, ದಾನಿಗಳು ಹಾಗೂ ಸೇವಾ ಮನೋಭಾವದ ವ್ಯಕ್ತಿಗಳಿಗೆ ದೇವಸ್ಥಾನ…
ಕುಂದಾಪುರ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಹೊಸ ಇತಿಹಾಸ ನಿರ್ಮಿಸಿದ್ದಾರೆ. ವಿಜ್ಞಾನ ವಿಭಾಗದ ಕುಮಾರಿ ಮಾನ್ಯ ಅವರು 600ರಲ್ಲಿ 597 ಅಂಕಗಳನ್ನು ಗಳಿಸಿ, ಅನುಪ್ ಶೇಖರ್ ನಾಯ್ಕ ಅವರು 600ರಲ್ಲಿ 595 ಅಂಕಗಳನ್ನು ಪಡೆದು ರಾಜ್ಯದಲ್ಲಿಯೇ ಅತ್ಯುತ್ತಮ ರ‍್ಯಾಂಕ್‌ಗಳನ್ನು ಗಳಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಒಟ್ಟು 314 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 232 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 82 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ಗಮನಾರ್ಹವಾಗಿದೆ. ಈ ಸಾಧನೆಯ ಮೂಲಕ ಕಾಲೇಜು ರಾಜ್ಯ ಮಟ್ಟದಲ್ಲಿ ತನ್ನ ಶೈಕ್ಷಣಿಕ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಇದಲ್ಲದೆ, ಬಾಲಗೌಡ ಬಸವರಾಜ್ ಮಂಗೋಜಿ (592), ಆಯುಷ್ ಶೆಣೈ (592), ಕಿಶನ್ ಕುಮಾರ್ ಗಿರೀಶ್ ಹೆಗ್ಡೆ (592), ಸನ್ಸಿತಾ ಎಸ್.ಎನ್ (592), ಸಾನ್ವಿ ಶೆಟ್ಟಿ (591), ತನ್ವಿ ಶೆಟ್ಟಿ (590), ತ್ರಿಶಾ…
ಮಂಗಳೂರು : 2026ನೇ ಸಾಲಿನ ದ್ವಿತೀಯ ಪಿಯುಸಿ (PUC) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಖ್ಯಾತ ಶಿಕ್ಷಣ ಸಂಸ್ಥೆಯಾದ ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ದಿಶಾ ಅವರು ವಾಣಿಜ್ಯ ವಿಭಾಗದಲ್ಲಿ ಅಪೂರ್ವ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಮೂಲತಃ ಮೂಡುಬಿದಿರೆಯವರಾದ ದಿಶಾ ಅವರು ವಾಣಿಜ್ಯ ವಿಭಾಗದಲ್ಲಿ ಒಟ್ಟು 600 ಅಂಕಗಳಿಗೆ 600 ಅಂಕಗಳನ್ನು ಗಳಿಸುವ ಮೂಲಕ ಶೇ.100 ಫಲಿತಾಂಶ ಸಾಧಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರ ಈ ಸಾಧನೆ ವಿದ್ಯಾರ್ಥಿ ವಲಯದಲ್ಲಿ ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಸಂತಸ ಹಾಗೂ ಗೌರವಕ್ಕೆ ಕಾರಣವಾಗಿದೆ. ದಿಶಾ ಅವರ ಪರಿಶ್ರಮ, ನಿಯಮಿತ ಅಧ್ಯಯನ ಕ್ರಮ ಹಾಗೂ ದೃಢಸಂಕಲ್ಪ ಈ ಮಹತ್ತರ ಸಾಧನೆಯ ಹಿಂದೆ ಪ್ರಮುಖ ಕಾರಣಗಳಾಗಿವೆ ಎಂದು ತಿಳಿದುಬಂದಿದೆ. ಶಾಲಾ ದಿನಗಳಿಂದಲೇ ಪ್ರತಿಭಾವಂತೆಯಾಗಿದ್ದ ದಿಶಾ, ಪ್ರತಿಯೊಂದು ವಿಷಯದಲ್ಲೂ ಸಮಾನ ಒತ್ತು ನೀಡಿ ಅಭ್ಯಾಸ ಮಾಡುತ್ತಿದ್ದು, ಶಿಕ್ಷಕರ ಮಾರ್ಗದರ್ಶನವನ್ನು ಸಮರ್ಪಕವಾಗಿ ಬಳಸಿಕೊಂಡಿದ್ದಾರೆ. ವಿದ್ಯಾರ್ಥಿನಿಯ ಈ ಅದ್ವಿತೀಯ ಸಾಧನೆಗೆ ಆಳ್ವಾಸ್ ಪಿಯು ಕಾಲೇಜಿನ ಆಡಳಿತ…
ಉಡುಪಿ : ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಮಹತ್ವದ ಸಭೆ ಏಪ್ರಿಲ್ 12, 2026 (ಭಾನುವಾರ) ರಂದು ಸಂಜೆ 3.00 ಗಂಟೆಗೆ ಉಡುಪಿ ನಗರದ ಸಿಟಿ ಬಸ್ ನಿಲ್ದಾಣ ಬಳಿಯ ಕಾಪಿಯಾ ಹೋಟೆಲ್ ಸಮೀಪದ ಅಕ್ಷಯ ಟವರ್ಸ್‌ನಲ್ಲಿ ಇರುವ ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ. ಸಭೆಯನ್ನು ಜಿಲ್ಲಾ ಅಧ್ಯಕ್ಷರಾದ ಫ್ರಾಂಕಿ ಡಿಸೋಜ ಕೊಳಲಗಿರಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುತ್ತಿದ್ದು, ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಸಭೆಗೆ ಕಾರ್ಮಿಕ ಘಟಕ, ಯುವ ಘಟಕ, ಮಹಿಳಾ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು ಮತ್ತು ಸದಸ್ಯರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ. ಸಭೆಯಲ್ಲಿ ಸಂಘಟನೆಯ ಅಭಿವೃದ್ಧಿ, ಮುಂದಿನ ಕಾರ್ಯಕ್ರಮಗಳ ರೂಪುರೇಷೆ ಹಾಗೂ ಸಂಘಟನಾ ಬಲವರ್ಧನೆ ಕುರಿತು ಮಹತ್ವದ ಚರ್ಚೆಗಳು ನಡೆಯಲಿದ್ದು, ಎಲ್ಲಾ ಸದಸ್ಯರು ಸಮಯಕ್ಕೆ ಸರಿಯಾಗಿ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಪ್ರಧಾನ…
ಯಕ್ಷಗಾನ ಸಮ್ಮೇಳನದ ಯಶಸ್ಸಿಗೆ ಎಲ್ಲರ ಸಹಕಾರವಿರಲಿ: ಪ್ರವೀಣ್ ಬಿ. ಶೆಟ್ಟಿ ಮುಂಬಯಿ: ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ರಜತ ಪರ್ವದ ಅಂಗವಾಗಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಎರಡು ದಿನಗಳ ಮುಂಬಯಿ ಯಕ್ಷಗಾನ ಸಮ್ಮೇಳನ-2026 ಇದರ ಸಮಾಲೋಚನಾ ಸಭೆಯು ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಎ. 6ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಮ್ಮೇಳನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರನ್ನಾಗಿ ಪ್ರವೀಣ್ ಭೋಜ ಶೆಟ್ಟಿಯವರನ್ನು ಸರ್ವಾನುಮತದಿಂದ ನೇಮಕ ಮಾಡಲಾಯಿತು.ವಿಜ್ಞಾಪನಾ ಪತ್ರ ಬಿಡುಗಡೆ:ಸಭೆಯಲ್ಲಿ ಮುಂಬಯಿ ಯಕ್ಷಗಾನ ಸಮ್ಮೇಳನದ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದ ಪ್ರವೀಣ್ ಬಿ.ಶೆಟ್ಟಿ ಅವರು ‘ಒಂದು ಕಲಾ ಸಂಘಟನೆ ಮರಾಠಿ ಮಣ್ಣಿನಲ್ಲಿ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವುದೆಂದರೆ ಸಾಮಾನ್ಯ ವಿಷಯವಲ್ಲ ; ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿಯವರು ಕಳೆದ 25 ವರ್ಷಗಳಿಂದ ಊರಿನ ಕಲಾವಿದರನ್ನು ಆಹ್ವಾನಿಸಿ ಮಹಾನಗರದಲ್ಲಿ ಸರಣಿ ಯಕ್ಷಗಾನ ತಾಳಮದ್ದಳೆ ಕೂಟ ಮತ್ತು ಯಕ್ಷಗಾನ ಬಯಲಾಟ ಪ್ರದರ್ಶನಗಳನ್ನು…
ಮಂಗಳೂರು : ಗುರುಪುರ ಬಳಿಯ ಭಾಮಿ ಶಾಲೆಯ ಬಳಿ ಲಾರಿ ಹಾಗೂ ಬಸ್ಸಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯವಾದ ಘಟನೆ ವರದಿಯಾಗಿದೆ. ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಮಾಹಿತಿ ದೊರೆತಿದೆ.ಬಸ್ಸು ಮಂಗಳೂರಿನಿಂದ ಮೂಡಬಿದರೆಗೆ ಹೊರಟಿದ್ದು ಲಾರಿ ಗುರುಪುರದಿಂದ ಮಂಗಳೂರಿನ ಕಡೆಗೆ ಹೊರಟಿತ್ತೆಂದು ಮಾಹಿತಿ ದೊರೆತಿದೆ.ಘಟನೆಯಲ್ಲಿ ಬಸ್ಸು ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದೆ .ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ೭ ಮಂದಿ ಪ್ರಯಾಣಿಕರಿಗೂ ಗಾಯಗಳಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ ಹಾಗೂ ಲಾರಿಯ ಮುಂಭಾಗ ಕೂಡ ಸಂಪೂರ್ಣ ಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿಯ ಪ್ರಕಾರ, ಮಂಗಳೂರಿನಿಂದ ಮೂಡಬಿದರೆ ಕಡೆಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಮತ್ತು ಗುರುಪುರದಿಂದ ಮಂಗಳೂರಿನತ್ತ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಈ ಅಪಘಾತಕ್ಕೆ ಪ್ರಮುಖ ಕಾರಣವೆಂದು ಪ್ರಾಥಮಿಕ…
ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸೆ ಶಿಬಿರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಮಾದೂರು ಶಾಖೆಯ 14ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಶಿರಡಿ ಸಾಯಿ ಬಾಬಾ ಮಂದಿರ (ರಿ.) ಮಾಡೂರು, ಶ್ರೀ ಶಾಸ್ತಾರ ಬಳಗ (ರಿ.), ಶ್ರೀ ಶಾಸ್ತಾರ ಮಹಿಳಾ ಮಂಡಳಿ ಹಾಗೂ ಭಜಕ ವೃಂದ, ಮಡ್ಯಾರ್ ಹಾಗೂ ಎನ್.ಜಿ.ಒ ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಇವರ ಸಂಯುಕ್ತ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೊಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೊಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸೆ ಶಿಬಿರವು ಮಾಡೂರು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಸಮುದಾಯ…
ಚೆನ್ನೈ, ಏಪ್ರಿಲ್ 6: ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ತೂತುಕುಡಿ ಜಿಲ್ಲೆಯ ಲಾಕಪ್ ದೆತ್ತ್ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಆರು ವರ್ಷಗಳ ಹಿಂದೆ ವ್ಯಾಪಾರಿ ಪಿ. ಜಯರಾಜ್ ಮತ್ತು ಅವರ ಪುತ್ರ ಜೆ. ಬೆನಿಕ್ಸ್ ಅವರ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ ತಮಿಳುನಾಡಿನ ಮಧುರೈ ಜಿಲ್ಲಾ ನ್ಯಾಯಾಲಯವು ಸೋಮವಾರ ಒಂಬತ್ತು ಪೊಲೀಸರಿಗೆ ಮರಣದಂಡನೆ ವಿಧಿಸಿದೆ. ಈ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದವರು ಇನ್ಸ್‌ಪೆಕ್ಟರ್ ಶ್ರೀಧರ್, ಸಬ್-ಇನ್‌ಸ್ಪೆಕ್ಟರ್‌ಗಳಾದ ಬಾಲಕೃಷ್ಣನ್ ಮತ್ತು ರಘು ಗಣೇಶ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಮುರುಗನ್, ಸಮದುರೈ, ಮುತ್ತುರಾಜ, ಚೆಲ್ಲಾದುರೈ, ಥಾಮಸ್ ಫ್ರಾನ್ಸಿಸ್ ಮತ್ತು ವೇಲುಮುತ್ತು ಎಂದು ಗುರುತಿಸಲಾಗಿದೆ. ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಲಯವು ಇದನ್ನು “ಅಧಿಕಾರ ದುರುಪಯೋಗದ ಗಂಭೀರ ಪ್ರಕರಣ” ಎಂದು ಹೇಳಿ, ರಾಜ್ಯದಲ್ಲಿ ಅನೇಕ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನೂ ಸ್ಪಷ್ಟಪಡಿಸಿದೆ. “ಈ ತೀರ್ಪು ಸತ್ಯನಿಷ್ಠ ಪೊಲೀಸರಲ್ಲಿ ಭಯ ಹುಟ್ಟಿಸುವುದಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಘಟನೆಯ ವಿವರಗಳನ್ನು ಉಲ್ಲೇಖಿಸಿದ ನ್ಯಾಯಾಲಯ, “ತಂದೆ ಮತ್ತು ಮಗನನ್ನು ವಿವಸ್ತ್ರಗೊಳಿಸಿ…
ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಸಾಮಾನ್ಯವಾಗಿ ಪ್ರೌಢ ವಯಸ್ಸಿನವರಿಂದ ನಡೆಯುವುದು ಸಾಮಾನ್ಯ. ಆದರೆ ಮಂಗಳೂರು–ಬಂಟ್ವಾಳದ ಪ್ರತಿಭಾವಂತ ಬಾಲಕಿ ಸನ್ನಿಧಿ ಕಶೆಕೋಡಿ ಈ ಧಾರಣೆಯನ್ನು ಸಂಪೂರ್ಣವಾಗಿ ಬದಲಿಸಿದ್ದಾರೆ. ಕೇವಲ ಹನ್ನೊಂದು ವರ್ಷದ ಈ ಕಂದಮ್ಮ ತನ್ನ ವಿಶಿಷ್ಟ ಪ್ರಯತ್ನಗಳ ಮೂಲಕ ಚುನಾವಣಾ ಪ್ರಕ್ರಿಯೆಯ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಬಾಲವಯಸ್ಸಿನಲ್ಲೇ ಮಹತ್ತರ ಚಿಂತನೆ ಸನ್ನಿಧಿ ಕಶೆಕೋಡಿ ತನ್ನ ಬಾಲ್ಯದಲ್ಲೇ ಸಮಾಜದ ಜವಾಬ್ದಾರಿಯನ್ನು ಅರಿತುಕೊಂಡಿದ್ದಾಳೆ. ಮತದಾನವು ಪ್ರಜಾಪ್ರಭುತ್ವದ ಮೂಲಭೂತ ಹಕ್ಕು ಎಂಬ ಅರಿವು ಜನರಿಗೆ ಮೂಡಿಸುವ ಉದ್ದೇಶದಿಂದ ಅವಳು ಹಲವು ಪ್ರದೇಶಗಳಲ್ಲಿ ಸಂಚರಿಸುತ್ತಿದ್ದಾಳೆ. ಮಂಗಳೂರು, ಬಂಟ್ವಾಳ ಮಾತ್ರವಲ್ಲದೆ ಮಂಜೇಶ್ವರ, ಕಾಸರಗೋಡು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೆರಳಿ ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ವಿಶೇಷ. ಐದು ಭಾಷೆಗಳ ಪಾಂಡಿತ್ಯ – ಜಾಗೃತಿಗೆ ಶಕ್ತಿ ಇನ್ನೂ ಆರುನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ, ಐದು ಭಾಷೆಗಳನ್ನು ಕಲಿತಿರುವುದು ಅವಳಿಗೆ ದೊಡ್ಡ ಶಕ್ತಿ. ಭಾಷಾ ಸಾಮರ್ಥ್ಯವನ್ನು ಬಳಸಿ ವಿವಿಧ ಪ್ರದೇಶಗಳ ಜನರೊಂದಿಗೆ ಸುಲಭವಾಗಿ ಸಂವಹನ ನಡೆಸಿ,…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
