- ಹಿರಿಯ ನಟ ನಾನಾ ಪಾಟೇಕರ್ ನಿಧನ ಹೃದಯ ಸ್ತಂಭನದಿಂದ 75ನೇ ವಯಸ್ಸಿನಲ್ಲಿ ಅಂತ್ಯ – ಭಾರತೀಯ ಚಿತ್ರರಂಗಕ್ಕೆ ಅಪಾರ ನಷ್ಟ
- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
Author: Tulunada Surya
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನ ಬೈಸರನ್ ಕಣಿವೆ ಪ್ರದೇಶದಲ್ಲಿ ನಡೆದ ಶಂಕಿತ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಜಮ್ಮು ಕಾಶ್ಮೀರದಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಸೇರಿ 27 ಪ್ರವಾಸಿಗರು ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. 12 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ‘ಮಿನಿ-ಸ್ವಿಟ್ಟರ್ಲೆಂಡ್’ ಎಂದು ಕರೆಯಲ್ಪಡುವ ಅನಂತನಾಗ್ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣದಲ್ಲಿ, ಪ್ರವಾಸಿ ಋತುವಿನ ಗರಿಷ್ಠ ಸಮಯದಲ್ಲಿ ಈ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರ ಮೂಲದ ಭಯೋತ್ಪಾದಕ ಗುಂಪು ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರು ಹರಿದು ಬರುತ್ತಿರುವ ಮತ್ತು ಅಮರನಾಥ ಯಾತ್ರೆ ಜುಲೈನಲ್ಲಿ ಪ್ರಾರಂಭವಾಗಲಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ರೆಸಿಸ್ಟೆನ್ಸ್ ಫ್ರಂಟ್ ಎಂಬುದು ಲಷ್ಕರ್-ಎ-ತೈಬಾ ಒಂದು ಶಾಖೆಯಾಗಿದ್ದು, ಆಗಸ್ಟ್ 2019 ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಹೊರಹೊಮ್ಮಿದ ಸಂಘಟನೆ. 370 ನೇ ವಿಧಿಯ ರದ್ದಿತಿಯಾದ ಆರು ತಿಂಗಳೊಳಗೆ, ಲಷ್ಕರ್-ಎ-ತೈಬಾ ಸೇರಿದಂತೆ ವಿವಿಧ ಬಣಗಳ ಉಗ್ರಗಾಮಿಗಳನ್ನು ಸಂಯೋಜಿಸುವ…
ಕಾರ್ಕಳ: ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಗಾಗಿ ಹಿರಿಯಡ್ಕದ ಸೌಮ್ಯ ಕ್ಲಿನಿಕ್ ನ ಡಾ. ಶೋಭಿತಾ ಅವರು ಈ ವರ್ಷ ‘ಕರ್ನಾಟಕ ಮಹಿಳಾ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಕರ್ನಾಟಕ ಪ್ರೆಸ್ ಕ್ಲಬ್ ನೀಡಲಿದ್ದು, ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ಈ ಮಾನ್ಯತೆ ನೀಡಲಾಗುತ್ತಿದೆ. ಏಪ್ರಿಲ್ 24ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಟಿ ಶೃತಿ ಭಾಗವಹಿಸಲಿದ್ದಾರೆ. ಪ್ರಶಸ್ತಿಗೆ ಆಯ್ಕೆ ಯಾದ ಶೋಭಿತ ರವರಿಗೆ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ರವೀಂದ್ರ ಮತ್ತು ಜಿಲ್ಲಾ ಘಟಕ ಅಧ್ಯಕ್ಷ ಡಾ ಸಂದೀಪ್ ಸನಿಲ್ ಶುಭ ಹಾರೈಸಿದ್ದಾರೆ.
ಮಂಗಳೂರು ; ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ಬಂದು ಕೇರಳದ ಉಪ್ಪಳದಲ್ಲಿ ವಾಸವಾಗಿದ್ದ ಯುವತಿಯನ್ನು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಏಪ್ರಿಲ್ 16 ರ ರಾತ್ರಿ ಈ ಹೇಯ ಕೃತ್ಯ ನಡೆದಿದ್ದು, ಅಟೋ ಚಾಲಕ ಸೇರಿ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಿಥುನ್ ಕುಂಪಲ,ಮನೀಷ್ ,ಪ್ರಭುರಾಜ್ ಎಂದು ತಿಳಿದುಬಂದಿದೆ. ಉಪ್ಪಳದಲ್ಲಿ ವಾಸವಾಗಿದ್ದ ಯುವತಿ ಸ್ನೇಹಿತನ ಜೊತೆಯಲ್ಲಿ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದು, ಇಲ್ಲಿ ಇಬ್ಬರಿಗೂ ಜಗಳವಾಗಿ ಬೇರೆ ಬೇರೆಯಾಗಿದ್ದಾರೆ. ಈ ವೇಳೆ ಜಗಳದಲ್ಲಿ ಯುವತಿಯ ಮೊಬೈಲ್ ಪುಡಿಯಾಗಿದ್ದು ದಾರಿ ತೋಚದೆ ಕಂಗಾಲಾಗಿದ್ದಾಳೆ. ಇದೇ ಸಮಯದಲ್ಲಿ ಬಗಂಬಿಲದ ಅಟೋ ಚಾಲಕನೊಬ್ಬ ಆಕೆಗೆ ಸಹಾಯ ಮಾಡಲು ಮುಂದಾಗಿದ್ದು, ಆಕೆಯ ಮೊಬೈಲ್ ರಿಪೇರಿ ಮಾಡಲು ಸಹಾಯ ಮಾಡಿದ್ದಾನೆ. ಬಳಿಕ ಆಕೆಗೆ ತಿನ್ನಲು ಆಹಾರ ತೆಗೆದುಕೊಟ್ಟಿದ್ದಾನೆ. ಇದರಿಂದ ಆತನ ಮೇಲೆ ವಿಶ್ವಾಸದಿಂದ ತನ್ನನ್ನು ರೈಲ್ವೇ ಸ್ಟೇಷನ್ ತನಕ ಬಿಡುವಂತೆ ಕೋರಿಕೊಂಡಿದ್ದಾಳೆ. ಇದಾದ ಬಳಿಕ ಅಟೋ ಏರಿದ ಯುವತಿ ಪ್ರಜ್ಞೆ ಕಳೆದುಕೊಂಡಿದ್ದು ಎಚ್ಚರವಾದಗ ಅಟೋ ಚಾಲಕ…
ದಿನಾಂಕ: 24-04-2025 ರಂದು ಬೆಳಿಗ್ಗೆ 11-00 ಗಂಟೆಯಿಂದ ಪುತ್ತೂರು ತಾಲೂಕು ಕಛೇರಿ, ಪುತ್ತೂರು ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ . ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ದಿನಾಂಕ 24.04.2025 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ. ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ. ಅರ್ಜಿದಾರರು ನಮೂನೆ | & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ…
ಅಗತ್ಯ ಕಂಡರೆ ಕ್ರಿಮಿನಲ್ ಮೊಕದ್ದಮೆ: ಪರಿಶಿಷ್ಟರ ಮಹಾಒಕ್ಕೂಟ ಎಚ್ಚರಿಕೆ ಮಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಬುಡಕಟ್ಟುಗಳ ಜನರ ಸಾಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳಲು ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ವ್ಯವಸ್ಥಿತ ಸಂಚು ನಡೆಸಿದೆ. ಕರ್ನಾಟಕ ರಾಜ್ಯದಲ್ಲಿ 180 ಪರಿಶಿಷ್ಟ ಜಾತಿಗಳು ಮತ್ತು 105 ಪರಿಶಿಷ್ಟ ಬುಡಕಟ್ಟುಗಳು ಇವೆ ಎಂಬುದನ್ನು ಕಾಂತರಾಜ್ ಆಯೋಗ ನಡೆಸಿದ ಜಾತಿ ಸಮೀಕ್ಷೆಯಲ್ಲಿ ಪತ್ತೆಯಾಗಿದೆ ಎಂಬ ಪತ್ರಿಕಾ ವರದಿ (ಪ್ರಜಾವಾಣಿ, ಮಂಗಳೂರು ದಿ. 15.04.2025, ಮುಖಪುಟದ ಪ್ರಧಾನ ವರದಿ) ಈ ಷಡ್ಯಂತ್ರವನ್ನು ಬಯಲುಮಾಡಿದೆ. ಹೆಚ್. ಕಾಂತರಾಜ್ ಅವರು ಅಧ್ಯಕ್ಷರಾಗಿದ್ದಾಗ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಮೀಕ್ಷೆಯ ದತ್ತಾಂಶಗಳನ್ನು ಅಧ್ಯಯನ ಮಾಡಿ ಕೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗವು ರಾಜ್ಯ ಸರಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಈ ಮಾಹಿತಿಯಿದೆ ಮತ್ತು ದತ್ತಾಂಶಗಳ ಅಧ್ಯಯನ ವರದಿಯು ಪ್ರಜಾವಾಣಿಗೆ ಲಭ್ಯವಾಗಿದೆ ಎಂದು ಪತ್ರಿಕಾ ವರದಿಯಲ್ಲಿ ಸ್ಪಷ್ಟ ಪಡಿಸಲಾಗಿದೆ. ನಮ್ಮ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಯಾವುದೇ ಜಾತಿಯನ್ನು ಪರಿಶಿಷ್ಟ ಜಾತಿ ಎಂದು…
ಶ್ರೀ ಕಿರಣಚಂದ್ರ ರೈ.ಬಿ. ಇವರು ಡಾ. ಆನಂದ ಗೌಡ ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ `ಸ್ವಾತಂತ್ರ್ಯೋತ್ತರ ಭಾರತದಲ್ಲಿ ಗಾಂಧಿ ತತ್ವಗಳ ಅನುಷ್ಠಾನದ ವಿಶ್ಲೇಷಣೆ : ವಿಶೇಷವಾಗಿ ಪುತ್ತೂರಿಗೆ ಸಂಬಂಧಿಸಿದಂತೆ ಒಂದು ಅಧ್ಯಯನ ಎಂಬ ಮಹಾ ಪ್ರಬಂಧಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು ಡಾಕ್ಟರೇಟ್ ಪದವಿ ನೀಡಿದೆ. ಇವರು ಕರ್ನೂರು ಬಂಟುಕಲ್ಲು ವೆಂಕಪ್ಪ ರೈ ಹಾಗೂ ಮಮ್ಮಕ್ಕೆ ರೈ ಅವರ ಪುತ್ರ. ಇವರು ಪ್ರಸ್ತುತ ಬೆಟ್ಟಂಪಾಡಿ ಹಾಗೂ ವಿದ್ಯಾರಶ್ಮಿ ಪದವಿ ಕಾಲೇಜ್‌ನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ತುಳು ಭಾಷೆಯ ಅಳಿವು, ಉಳಿವು ನಮ್ಮ ಮುಂದೆ ಒಂದು ಪ್ರಶ್ನೆಯಾಗಿ ನಿಂತಿರುವಾಗ, ತುಳುಪರ ಇರುವ ಸಂಘಟಕರನ್ನು ಒಂದೇ ವೇದಿಕೆಯಲ್ಲಿ ಕುಳ್ಳಿರಿಸಿ ಬೆಳಿಗ್ಗೆಯಿಂದ ಸಂಜೆಯವರೆಗೆ ತುಳುವಿನ ವಿಚಾರ ಘೋಷ್ಠಿಗಳನ್ನು ನಡೆಸುವುದು ತಮಾಷೆಯ ಮಾತಲ್ಲ. ತುಳು ಎಂದರೆ ಮೂಗು ಮುರಿಯುವವರ ಮಧ್ಯೆ, ಕೇವಲ ತುಳುವಿಗಾಗಿಯೇ ಒಂದು ದಿನ ಎಂಬಂತೆ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್(ರಿ.) ಎಂಬ ಸಂಸ್ಥೆ ಬಿಸಿ ರಕ್ತದ ಯುವಕರನ್ನು ಒಗ್ಗೂಡಿಸಿ ಎಪ್ರೀಲ್ 13ರಂದು ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆಸಿದ ಈ ಕಾರ್ಯಕ್ರಮದ ಕೆಲವು ತುಣುಕುಗಳು ಹೀಗಿವೆ. ತುಳು ಲಿಪಿ ಎಲ್ಲರ ಸೊತ್ತು, ತುಳು ಲಿಪಿಗೆ ಮತ್ತೆ ಮತ್ತೆ ಬದಲಾವಣೆ ಸಲ್ಲದು ತುಳು ಲಿಪಿಯ ಕುರಿತು ನಡೆದ ವಿಚಾರ ಘೋಷ್ಠಿಯಲ್ಲಿ, ತುಳು ಲಿಪಿಯ ಬೆಳವಣಿಗೆ, ಲಿಪಿ ಮೂಲೆಗುಂಪಾಗಲು ಕಾರಣ. ಕನ್ನಡ ಲಿಪಿಯನ್ನು ತುಳುವಿಗೆ ಬಳಸುವುದರಿಂದಾಗುವ ತೊಡಕುಗಳು ಹಾಗೂ ಸಾಂಪ್ರದಾಯಿಕ ತುಳು ಲಿಪಿಯ ಅಗತ್ಯತೆಯ ಬಗ್ಗೆ ವಿಸ್ತಾರವಾಗಿ ತಜ್ಞರಾದ್ ನಿಶಾಂತ್ ರತ್ನಾಕರ್, ದೀಪಕ್ ಪಡುಕೋಣೆ, ಪ್ರಹ್ಲಾದ್ ಪಿ.ತಂತ್ರಿ ವಿಸ್ತಾರವಾಗಿ ಉದಾಹರಣೆಗಳೊಂದಿಗೆ ತಿಳಿಸಿದರು. ತುಳುಲಿಪಿಯ ಕೂಟಾಕ್ಷರಗಳ…
ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆ ಅಂಗವಾಗಿ ತುಳುನಾಡ್ ರಕ್ಷಣಾ ವೇದಿಕೆ ಮಂಗಳೂರು ಯುವ ಘಟಕ ವತಿಯಿಂದ ರಕ್ತದಾನ ಸಪ್ತಾಹ ಆಯೋಜಸಲಾಗಿದ್ದು ಮಂಗಳೂರು ರೆಡ್ ಕ್ರಾಸ್ ನಲ್ಲಿ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರು ರಕ್ತದಾನ ಮಾಡುವುದರ ಮೂಲಕ ಚಾಲನೆ ನೀಡಿದರು. ಗಂಗಾಧರ್ ಶೆಟ್ಟಿ ಜಪ್ಪು ರವರು ಸ್ವಾಗತಿಸಿ ಪ್ರಶಾಂತ್ ಭಟ್ ಕಡಬ ಧನ್ಯವಾದ ಅರ್ಪಣೆಗೈದರು. ಯುವ ಘಟಕ ಅಧ್ಯಕ್ಷ ಹರೀಶ್ ಶೆಟ್ಟಿ ಶಕ್ತಿನಗರ ಮತ್ತಿತರರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ಕಛೇರಿಯಲ್ಲಿ ಡಾ . ಬಿ. ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಉಡುಪಿ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜಾ ಕೊಳಲಗಿರಿರವರು ಡಾ . ಬಿ. ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಗೌರವಾಧ್ಯಕ್ಷ ಕೃಷ್ಣಕುಮಾರ್ ಡಾ. ಬಿ. ಆರ್. ಅಂಬೇಡ್ಕರ್ ರವರ ಜೀವನ ಚರಿತ್ರೆ ಬಗ್ಗೆ ಮತ್ತು ಅವರ ಕೊಡುಗೆಗಳ ಬಗ್ಗೆ ಮಾತನಾಡಿದರು. ಅಜರುದ್ದೀನ್…
ತುಳುನಾಡ ರಕ್ಷಣಾ ವೇದಿಕೆಉಡುಪಿ ಜಿಲ್ಲಾ ಘಟಕ ವತಿಯಿಂದ ಡಾ ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ದಿನಾಂಕ 14-04-2025ನೇ ಸೋಮವಾರ ಬೆಳಿಗ್ಗೆ 10.00* ಗಂಟೆಗೆ ಸರಿಯಾಗಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ಅಧ್ಯಕ್ಷತೆಯಲ್ಲಿ ಆಚರಿಸಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಘಟಕಗಳ ಅಧ್ಯಕ್ಷರುಗಳು ವೇದಿಕೆಯಲ್ಲಿ ಉಪಸ್ಥಿತರಿರುವರು, ಗೌರವಾಧ್ಯಕ್ಷರು, ಉಪಾಧ್ಯಕ್ಷರುಗಳು, ಜಿಲ್ಲಾ ವೈದ್ಯಕೀಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಜಿಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಯುವ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷರು ಮತ್ತು ಸದಸ್ಯರುಗಳು, ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಪು ತಾಲೂಕು ಘಟಕದ ಅಧ್ಯಕ್ಷರು, ಮಹಿಳಾ ಅಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಸರ್ವ ಸದಸ್ಯರುಗಳು,ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮತ್ತು…
ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮಗ್ರ ಆರೋಗ್ಯವ್ಯವಸ್ಥೆ ನೀಡಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.ಅವರು ಶುಕ್ರವಾರ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ಡಯಾಲಿಸಿಸ್ ಕೇಂದ್ರ, ಆಯುಷ್ ಆಸ್ಪತ್ರೆಯ ಕಟ್ಟಡ ಮೊದಲ ಮಹಡಿ ಶಂಕುಸ್ಥಾಪನೆ, ಶವಾಗಾರ ಕಟ್ಟಡ, ಬಿಪಿಸಿಎಲ್ ನೆರವಿನ ಪುನಶ್ಚೇತನ ಕೇಂದ್ರ ಕಟ್ಟಡ ಉದ್ಘಾಟಿಸಿ ಮಾತನಾಡಿದರು.ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಬೇಕೆಂದು ಸಾಕಷ್ಟು ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ಯೆನಪೋಯ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಡಯಾಲಿಸಿಸ್ ಕೇಂದ್ರ ನಿವ೯ಹಿಸಲಾಗುವುದು ಎಂದು ಅವರು ಹೇಳಿದರು.ಪ್ರಾಥಮಿಕ ಆರೋಗ್ಯ ಕೇಂದ್ರವಾಗಿದ್ದ ಉಳ್ಳಾಲ ಆಸ್ಪತ್ರೆಯನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದಜೆ೯ಗೇರಿಸಲಾಗಿದೆ. ಇಲ್ಲಿ ದೊರಕುತ್ತಿರುವ ಉತ್ತಮ ವೈದ್ಯಕೀಯ ಚಿಕಿತ್ಸೆಯಿಂದ ಹಿಂದೆ ಪ್ರತೀ ದಿನ 30ರಷ್ಟಿದ್ದ ಹೊರರೋಗಿಗಳ ಸಂಖ್ಯೆ ಸುಮಾರು 400 ಕ್ಕೇರಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಸುಸಜ್ಜಿತವಾದ ಉಳ್ಳಾಲ ಆರೋಗ್ಯ ಕೇಂದ್ರ ರಾಜ್ಯಕ್ಕೆ ಮಾದರಿಯಾಗಿದೆ. ಇಲ್ಲಿಗೆ ವೈದ್ಯರು ಹಾಗೂ ಆಧುನಿಕ ವೈದ್ಯಕೀಯ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
