Author: Tulunada Surya

ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2025 ಸೀಸನ್-4 ಮುಕ್ತಾಯಗೊಂಡಿದ್ದು,10 ತಂಡಗಳ ನಡುವಿನ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡವು ಪ್ರತಿಷ್ಠಿತ ಪಿಲಿಪರ್ಬ- 2025 ರ ಕಿರೀಟ ಮುಡಿಗೇರಿಸಿಕೊಂಡಿತು. ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ತೃತೀಯ ಸ್ಥಾನವನ್ನು ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ತಂಡ ಅಲಂಕರಿಸಿದವು. ಪಿಲಿಪರ್ಬದ ವಿಶೇಷ ಬಹುಮಾನಗಳಾದ “ಕಪ್ಪು ಪಿಲಿ” ಪ್ರಶಸ್ತಿಯನ್ನು ಟ್ಯಾಲೆಂಟ್ಸ್ ಟೈಗರ್ಸ್ ತುಳುನಾಡ್ ತಂಡ ಪಡೆದುಕೊಂಡರೆ, “ಮರಿ ಹುಲಿ” ಹಾಗೂ ಬಹುನಿರೀಕ್ಷಿತ ಪ್ರಶಸ್ತಿಯಾದ “ಪರ್ಬದ ಪಿಲಿ”ಯನ್ನು ಪ್ರಥಮ ಸ್ಥಾನ ವಿಜೇತ ತಂಡ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ಪಡೆದುಕೊಂಡಿತು. ಶಿಸ್ತಿನ ತಂಡವಾಗಿ ಟೀಮ್ ಪರಶುರಾಮ್ ಹೊರ ಹೊಮ್ಮಿದರೆ, ಬಣ್ಣಗಾರಿಕೆ ಹಾಗೂ ತಾಸೆ ಹಿಮ್ಮೇಳ ವಿಭಾಗದಲ್ಲಿ ಪುರಲ್ದಪ್ಪೆನ ಮೋಕೆದ ಜೋಕುಲು ಪೊಳಲಿ ಟೈಗರ್ಸ್, ಹಾಗೂ…

Read More

ಮಂಗಳೂರು: ತುಳು ಭಾಷೆ, ಸಂಸ್ಕೃತಿ, ಸಂಪ್ರದಾಯ ಅಭಿವೃದ್ಧಿ ನೆಲೆಯಲ್ಲಿ ದೇಶದಾದ್ಯಂತ ತುಳುವರು ಸಂಘ ಸಂಸ್ಥೆಗಳು ನಿರಂತರ ಕಾರ್ಯಕ್ರಮ ಸಮಾರಂಭವನ್ನು ಹಮ್ಮಿಕೊಂಡು ಕೆಲಸ ನಿರ್ವಹಿಸುತ್ತಿರುವುದು ಸಂತಸದ ವಿಷಯ. ಇದಕ್ಕೆ ಪೂರಕವಾಗಿ ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ತುಳು ಭಾಷೆ ಅಭಿವೃದ್ಧಿಗೆ ಅಡ್ಡಿಪಡಿಸದೆ ಪ್ರೋತ್ಸಾಹಿಸಬೇಕಾಗಿದೆ. ಇತ್ತೀಚಿಗೆ ಮಂಗಳೂರಿನ ತುಳು ಅಧ್ಯಯನ ಕೇಂದ್ರವನ್ನು ಕೋಣಾಜೆಯ ಮಂಗಳಗAಗೋತ್ರಿಗೆ ಸ್ಥಳಾಂತರಿಸುವ ಬಗ್ಗೆ ಮಾಹಿತಿ ಇದೆ. ಈ ನಿರ್ಧಾರವನ್ನು ಹಿಂತೆಗೆಯಲು ಒಕ್ಕೂಟ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ದೇಶವಿದೇಶದ ತುಳುವರು ಮನವಿ ಸಲ್ಲಿಸಲು ಮಹಾಸಭೆಯಲ್ಲಿ ಒಕ್ಕೊರೊಳಿನ ನಿರ್ಧಾರ ಮಂಡಿಸಲಾಗಿದೆ ಎಂದು ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ತಿಳಿಸಿದ್ದಾರೆ. ಅವರು ಇತ್ತೀಚೆಗೆ ಕಾವೂರು ಮುಗ್ರೋಡಿ ಎನ್‌ಕ್ಲೇವ್‌ನ ಒಕ್ಕೂಟದ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಮಹಾಸಭೆಯಲ್ಲಿ ಭಾಗವಹಿಸಿದ ಎಲ್ಲಾ ದೇಶವಿದೇಶದ ಪ್ರತಿನಿಧಿಗಳು ತುಳುವಿಗೆ ಸ್ಥಾನಮಾನ ಸಂಸ್ಕೃತಿ, ಸಂಪ್ರದಾಯ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಾಗೂ 25-26ನೇ ಸಾಲಿನಲ್ಲಿ ಹಮ್ಮಿಕೊಳ್ಳಬಹುದಾದ ತುಳು ಸಂಬAಧಿ ಕಾರ್ಯಕ್ರಮಗಳ ರೂಪುರೇಖೆ ತಯಾರಿಸಿ ನಿರ್ಣಯ…

Read More

ಬಂಟ್ವಾಳ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ರಾಜಾಂಗಣದಲ್ಲಿ ದಿನಾಂಕ 27 ಸೆಪ್ಟೆಂಬರ್ 2025ರಂದು ಯಕ್ಷಕಲಾ ಪೊಳಲಿ ಇದರ 30ನೇ ವರ್ಷದ ಪ್ರಯುಕ್ತ ತ್ರಿಂಶತಿ ಸಂಭ್ರಮದ ‘ಪೊಳಲಿ ಯಕ್ಷೋತ್ಸವ’ವು ಪ್ರಶಸ್ತಿ ಪ್ರದಾನ, ಗೌರವಾರ್ಪಣೆ, ಸಮ್ಮಾನ, ಸಂಸ್ಮರಣೆ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ಸಂಪನ್ನಗೊಂಡಿತು. ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದಜಿ ಆಶೀರ್ವಚನ ನೀಡಿದರು.ಪೊಳಲಿ ಯಕ್ಷೋತ್ಸವ ಪ್ರಶಸ್ತಿ:ಸಮಾರಂಭದಲ್ಲಿ ಯಕ್ಷಕಲಾ ಪೋಷಕ, ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಇವರಿಗೆ ‘ಪೊಳಲಿ ಯಕ್ಷೋತ್ಸವ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಅಲ್ಲದೆ ಯಕ್ಷಗಾನ ರಂಗದ ವಿಶಿಷ್ಟ ಸಾಧನೆಗಾಗಿ ಹಿರಿಯ ಕಲಾವಿದರಾದ ಭಾಸ್ಕರ ರೈ ಕುಕ್ಕುವಳ್ಳಿ, ಮಾಂಬಾಡಿ ಸುಬ್ರಹ್ಮಣ್ಯ ಭಟ್, ಅಡೂರು ಲಕ್ಷ್ಮೀನಾರಾಯಣ ರಾವ್, ಕೊಳ್ತಿಗೆ ನಾರಾಯಣ ಗೌಡ, ಉಬರಡ್ಕ ಉಮೇಶ್ ಶೆಟ್ಟಿ, ಜಬ್ಬಾರ್ ಸಮೋ ಸಂಪಾಜೆ, ಶಿವರಾಮ ಪಣಂಬೂರು, ಗಿರೀಶ್ ಹೆಗ್ಡೆ ಪುತ್ತೂರು, ಜಗದಾಭಿರಾಮ ಸ್ವಾಮಿ ಪಡುಬಿದ್ರೆ, ನಾ. ಕಾರಂತ ಪೆರಾಜೆ, ನಗ್ರಿ ಮಹಾಬಲ ರೈ, ಮಹಾಬಲೇಶ್ವರ ಭಟ್ ಭಾಗಮಂಡಲ ಹಾಗೂ ಲೇಖಕ…

Read More

ಬೆಂಗಳೂರು: ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯು ತನ್ನ ಆರಂಭದ ದಿನಗಳಲ್ಲಿ ಕೇವಲ ಮೂವರು ಸಿಬ್ಬಂದಿಗಳಿಂದ ಆರಂಭಗೊಂಡು, ಇಂದಿನ ದಿನದಲ್ಲಿ 22 ಮಂದಿ ಸಿಬ್ಬಂದಿಗಳನ್ನು ಹೊಂದಿದ ಸಂಸ್ಥೆಯಾಗಿ ಬೆಳೆಯಲು ಶ್ರಮಿಸಿದೆ. ಈ ಬೆಳವಣಿಗೆಯ ಹಿಂದೆ ಸಿಬ್ಬಂದಿಗಳ ತ್ಯಾಗ ಮತ್ತು ದುಡಿಮೆ ಪ್ರಮುಖವಾಗಿದೆ ಎಂದು ಸೊಸೈಟಿ ಅಧ್ಯಕ್ಷ ಎಚ್. ವಸಂತ ಬರ್ನಾಡ್ ಹೇಳಿದರು. ಸಮಾರಂಭದಲ್ಲಿ ಅವರು, “ಸಂಸ್ಥೆಯ ಮುಂದಿನ ಬೆಳವಣಿಗೆಯು ಸಿಬ್ಬಂದಿಗಳ ಶ್ರಮಕ್ಕೆ ಆಧಾರಿತವಾಗಿದ್ದು, ಅವರ ಆರೋಗ್ಯವನ್ನು ಕಾಪಾಡುವುದು ಆಡಳಿತ ಮಂಡಳಿಯ ಪ್ರಮುಖ ಜವಾಬ್ದಾರಿಯಾಗಿದೆ” ಎಂದು ಸ್ಪಷ್ಟಪಡಿಸಿದರು. ಈ ಹಿನ್ನೆಲೆಯಲ್ಲಿಯೇ ಸೊಸೈಟಿಯ ಎಲ್ಲ ಸಿಬ್ಬಂದಿಗಳಿಗೆ ತಲಾ ₹3 ಲಕ್ಷದ ಮೌಲ್ಯದ ಆರೋಗ್ಯ ವಿಮಾ ಪಾಲಿಸಿಗಳನ್ನು ವಿತರಿಸಲಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಗೌತಮ್ ಜೈನ್ ಮತ್ತು ಗಣೇಶ್ ಪ್ರಸಾದ್ ದೇವಾಡಿಗ ಉಪಸ್ಥಿತರಿದ್ದರು.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಅವರು ಸಮಾರಂಭವನ್ನು ಸ್ವಾಗತಿಸಿ ಮಾತನಾಡಿದರು. ಲೆಕ್ಕಿಗರಾದ ಲೋಲಾಕ್ಷಿ ವಂದನೆಯನ್ನು ಸಲ್ಲಿಸಿದರು.ಪ್ರಧಾನ ಕಚೇರಿಯ ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Read More

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2025 ಸೀಸನ್ 4 ರ ಉದ್ಘಾಟನಾ ಸಮಾರಂಭವು ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇಂದು ಸ್ಪರ್ಧಾಕೂಟದ ಸ್ಪರ್ಶ ಲಭಿಸಿದೆ. ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 10 ಹುಲಿವೇಷ ತಂಡಗಳಿಗೂ ಗಣ್ಯರು ಶುಭ ಹಾರೈಸಿ ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಿದ ಎಲ್ಲರಿಗೂ ಹಾರ್ದಿಕ ಸ್ವಾಗತವನ್ನು ಕೋರಿದರು. ಸ್ಪರ್ಧಾಕೂಟವು ಇಂದು ರಾತ್ರಿಯವರೆಗೂ ಅದ್ದೂರಿಯಾಗಿ ಸಾಗಲಿದ್ದು ಅಂತಿಮವಾಗಿ ವಿಜೇತ ತಂಡದ ಘೋಷಣೆಯಾಗಲಿದೆ. ಈ ನಡುವೆ ವೀಕ್ಷಕರಿಗಾಗಿ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆಯನ್ನೂ ಮಾಡಲಾಗಿರುವುದು ವಿಶೇಷ. ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,…

Read More

ಮಂಗಳೂರು ನಗರದ ಹೃದಯಭಾಗದಲ್ಲಿ ನಡೆದ ಚಿನ್ನದ ದರೋಡೆ ಪ್ರಕರಣವನ್ನು ಪೊಲೀಸರು ಬಗೆಹರಿಸಿದ್ದು, ಈ ಸಂಬಂಧ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬರು ಅಂಗಡಿಯಲ್ಲಿಯೇ ಉದ್ಯೋಗಿಯಾಗಿದ್ದು, ದರೋಡೆಗೆ ಒಳನೋಟ ನೀಡಿದ ಎನ್ನಲಾಗಿದೆ. ಘಟನೆ ವಿವರ: ಸೆಪ್ಟೆಂಬರ್ 26ರಂದು ರಾತ್ರಿ ಸುಮಾರು 8:45ರ ವೇಳೆಗೆ, ಚಾಯ್ಸ್ ಗೋಲ್ಡ್ ಆಭರಣ ಅಂಗಡಿಯ ಉದ್ಯೋಗಿ ಮುಸ್ತಫಾ ತಮ್ಮ ಸ್ಕೂಟರ್‌ನ ಸೀಟಿನಡಿಯಲ್ಲಿ ಚಿನ್ನದ ಗಟ್ಟಿ ಇಟ್ಟು ಸಾಗಿಸುತ್ತಿದ್ದಾಗ, ಕಾರ್‌ಸ್ಟ್ರೀಟ್‌ನ ಶ್ರೀ ವೆಂಕಟರಮಣ ದೇವಸ್ಥಾನದ ಬಳಿ ದರೋಡೆಕೋರರ ಗುಂಪು ದಾಳಿ ನಡೆಸಿತ್ತು. ಆರು ಮಂದಿ ಒಳಗೊಂಡಿದ್ದ ಈ ತಂಡ, ಮೊದಲಿಗೆ ಸ್ಕೂಟರ್‌ನಲ್ಲಿ ಬಂದು ಮುಸ್ತಫಾ ಅವರನ್ನು ತಡೆದು ನಿಲ್ಲಿಸಿ, ನಂತರ ಬಿಳಿ ಕಾರಿನಲ್ಲಿ ಬಂದು ಅವರನ್ನು ಅಪಹರಿಸಿ, ಹಲ್ಲೆ ಮಾಡಿ ಚಿನ್ನದ ಗಟ್ಟಿಯನ್ನು ಲೂಟಿ ಮಾಡಿತ್ತು. ಬಳಿಕ ಅವರನ್ನು ಎಕ್ಕೂರಿನಲ್ಲಿ ಇಳಿಸಿ ಪರಾರಿಯಾಗಿದ್ದರು. ಬಂಧಿತರು:• ಫರೀಷ್ (18, ಉಳ್ಳಾಲ)• ಸಫ್ವಾನ್ (23)• ಅರಾಫತ್ ಅಲಿ (18)• ಫರಾಜ್ (19)• ಅಪ್ರಾಪ್ತ ವಯಸ್ಕ (ಅಂಗಡಿಯಲ್ಲಿ ಉದ್ಯೋಗಿ) ಪರಿಶೋಧನೆಯಿಂದ ಬೆಳಕಿಗೆ ಬಂದ…

Read More

ಮಂಗಳೂರು: ಜಾನಪದ ಕಲೆಯ ಹೆಜ್ಜೆ ಗುರುತು ಮೂಡಿಸಿದ ‘ಪಿಲಿ ನಲಿಕೆ’ ಇದರ 10ನೇ ವರ್ಷದ ವಿಜೃಂಭಣೆಯ ಸ್ಪರ್ಧೆ ಅಕ್ಟೋಬರ್ 1ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ ಎಂದು ಪಿಲಿನಲಿಕೆ ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಸ್ಪರ್ಧೆಗೆ ಚಿತ್ರರಂಗ ಹಾಗೂ ಕ್ರೀಡಾ ಕ್ಷೇತ್ರದ ಗಣ್ಯ ಸೆಲೆಬ್ರಿಟಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಬಾಲಿವುಡ್‌ನ ಸುನೀಲ್ ಶೆಟ್ಟಿ, ಸ್ಯಾಂಡಲ್‌ವುಡ್‌ ನಟರು ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ರಾಜ್ ಬಿ. ಶೆಟ್ಟಿ, ಕ್ರಿಕೆಟಿಗರು ಅಜಿಂಕ್ಯ ರಹಾನೆ, ಜಿತೇಶ್ ಶರ್ಮಾ, ಬಾಕ್ಸಿಂಗ್ ಚಾಂಪಿಯನ್ ವಿಜೇಂದ್ರ ಸಿಂಗ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಮೊದಲಾದವರು ಕಾರ್ಯಕ್ರಮ ವೀಕ್ಷಿಸಲಿದ್ದಾರೆ. ವಿಶೇಷತೆಗಳು:• ಸ್ಪರ್ಧೆ ಆರಂಭ: ಬೆಳಗ್ಗೆ 10 ಗಂಟೆ• ಅಂತ್ಯ: ರಾತ್ರಿ 10 ಗಂಟೆ• ಪ್ರತೀ ತಂಡಕ್ಕೆ ಕಾಲಾವಕಾಶ: 20 ನಿಮಿಷ• ಪ್ರೇಕ್ಷಕರಿಗಾಗಿ ಆಸನ ವ್ಯವಸ್ಥೆ: 25,000ಕ್ಕೂ ಅಧಿಕ ಮಂದಿ ಭಾಗವಹಿಸುವ ತಂಡಗಳು:…

Read More

ನವದೆಹಲಿ, ಸೆಪ್ಟೆಂಬರ್ 28:ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ನಿಗೂಢವಾಗಿ ತಲೆಮರೆಸಿಕೊಂಡಿದ್ದ ದೆಹಲಿ ಮೂಲದ ಪಾರ್ಥ ಸಾರಥಿ ಆಲಿಯಾಸ್ ಬಾಬಾ ಚೈತನ್ಯಾನಂದ ಸರಸ್ವತಿ (62) ಎಂಬುವರನ್ನು ದೆಹಲಿ ಪೊಲೀಸರು ಇಂದು ಬೆಳಿಗ್ಗೆ ಜಾವ 3:30 ಕ್ಕೆ ಆಗ್ರಾದಲ್ಲಿ ಬಂಧಿಸಿದ್ದಾರೆ. ಸ್ವಾಮಿ ಚೈತನ್ಯಾನಂದ ಸರಸ್ವತಿ, ದೆಹಲಿಯ ವಸಂತ್ ಕುಂಜ್‌ನಲ್ಲಿ ಇರುವ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ನಿರ್ದೇಶಕರಾಗಿದ್ದು, ಪ್ರಭಾವಶಾಲಿ ಸ್ಥಾನದಲ್ಲಿದ್ದರು. ಕಳೆದ 50 ದಿನಗಳಿಂದ ಪತ್ತೆ ಮರೆತಿದ್ದ ಬಾಬಾ, ವಿವಿಧ ಹೆಸರಿನಲ್ಲಿ ಹೋಟೆಲ್‌ಗಳಲ್ಲಿ ತಂಗುತ್ತ. ಈ ಅವಧಿಯಲ್ಲಿ ಅವರು ಸುಮಾರು 13 ಹೋಟೆಲ್‌ಗಳನ್ನು ಬದಲಾಯಿಸಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಪೋಲೀಸರ ಕಾರ್ಯಾಚರಣೆ ಡೆಹಲಿಯಿಂದ ಆಗ್ರಾವರೆಗೆ ವ್ಯಾಪಿಸಿರುವ ತನಿಖಾ ತಂಡ, ಖಚಿತ ಮಾಹಿತಿ ಆಧರಿಸಿ ಬಾಬಾ ಅವರನ್ನು ಬಂಧಿಸಿದೆ. ಬಂಧನಕ್ಕೂ ಮೊದಲು ಅವರೊಂದಿಗೆ ಸಂಬಂಧ ಹೊಂದಿರುವ ₹8 ಕೋಟಿ ಮೌಲ್ಯದ ಆಸ್ತಿ ಹಾಗೂ ಹಣವನ್ನು, 18 ಬ್ಯಾಂಕ್ ಖಾತೆಗಳು ಮತ್ತು 28 ಸ್ಥಿರ ಠೇವಣಿಗಳ ಮೂಲಕ ಪತ್ತೆ ಹಚ್ಚಿ, ಕ್ರಮಕೈಗೊಳ್ಳಲಾಗಿದೆ. ಗಂಭೀರ ಆರೋಪಗಳ…

Read More

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೆಪ್ಪುವಿನ ಭಾರತ್ ಮೈದಾನದಲ್ಲಿ ನೂತನವಾಗಿ ಸುಮಾರು 7 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಸ್ಥಳೀಯ ಪಾಲಿಕೆ ಸದಸ್ಯ ಪ್ರೇಮಾನಂದ ಶೆಟ್ಟಿಯವರ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಈ ಕಾಮಗಾರಿಯ ಶಿಲನ್ಯಾಸ ನೆರವೇರಿಸಲಾಗಿತ್ತು. ಇದೀಗ ಕಟ್ಟಡವು ಲೋಕಾರ್ಪಣೆಗೊಳ್ಳುತ್ತಿದ್ದು ಈ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸಿದ ಪ್ರೇಮಾನಂದ ಶೆಟ್ಟಿಯವರಿಗೆ ವಿಶೇಷ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಮಕ್ಕಳ ಬಾಲ್ಯದ ಶಿಕ್ಷಣಕ್ಕಾಗಿ ಕ್ಷೇತ್ರದಲ್ಲಿ ಅಗತ್ಯವಿರುವೆಡೆ ಬೇಡಿಕೆಗನುಸಾರವಾಗಿ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ವಿಶೇಷ ಕ್ರಮ ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಬಿಜೆಪಿ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಭಾನುಮತಿ, ದೀಪಕ್ ಪೈ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ರೇಷ್ಮಾ, ಅಂಗನವಾಡಿ ಕಾರ್ಯಕರ್ತೆ ರೇಖಾ, ಅಂಬಾ ಮಹೇಶ್ವರಿ ಟ್ರಸ್ಟ್ ನ ಅಧ್ಯಕ್ಷರಾದ ಸೀತಾರಾಮ್, ಪ್ರಕಾಶ್,…

Read More

ಚೆನ್ನೈ, ಸೆಪ್ಟೆಂಬರ್ 28:ತಮಿಳುನಾಡಿನಲ್ಲಿ ಪ್ರಸಿದ್ಧ ನಟ ಮತ್ತು ವಿಕ್ಟರಿ ಪಕ್ಷದ ನಾಯಕ ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ ಕನಿಷ್ಠ 38 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರಾಜ್ಯದ ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ಶನಿವಾರ ತಡರಾತ್ರಿ ಮಾಹಿತಿ ನೀಡಿದ್ದಾರೆ. ಘಟನೆಯು ಕರೂರ್ ಜಿಲ್ಲೆಯಲ್ಲಿ ನಡೆದಿದೆ. ವಿಜಯ್ ಅವರ ಬಸ್‌ನತ್ತ ಹತ್ತಲು ಭಕ್ತರು ಮತ್ತು ಬೆಂಬಲಿಗರು ಮುಗಿಬಿದ್ದ ಸಂದರ್ಭ, ಗಿಜಿಗುಜಿಯಲ್ಲಿ ಹಲವರು ಬಿದ್ದು ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. “ಅನೇಕರು ಆಸ್ಪತ್ರೆಗೆ ಕರೆದೊಯ್ಯುವ ಮೊದಲುವೇ ಸಾವನ್ನಪ್ಪಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ,” ಎಂದು ಸಚಿವರು ತಿಳಿಸಿದ್ದಾರೆ.ಮೃತರಲ್ಲಿ ಎಂಟು ಮಕ್ಕಳು ಸೇರಿದ್ದಾರೆ ಎಂಬುದೂ ಈ ದುರಂತದ ಭೀಕರತೆಯನ್ನು ಇನ್ನಷ್ಟು ತೀವ್ರಗೊಳಿಸಿದೆ. ರಾಜ್ಯಾದ್ಯಂತ ಶೋಕದ ಛಾಯೆ ಮಡುವಿದ್ದು, ಸರ್ಕಾರದಿಂದ ಪರಿಹಾರ ಕಾರ್ಯಾಚರಣೆ ತ್ವರಿತಗತಿಯಲ್ಲಿ ಮುಂದುವರೆದಿದೆ. ವಿಜಯ್ ಅವರು ಈ ಘಟನೆಗೆ ತೀವ್ರ ಶೋಕ ವ್ಯಕ್ತಪಡಿಸಿದ್ದು,…

Read More