Author: Tulunada Surya

ಮಂಗಳೂರು, ಆ. 12: ಯಾವುದೇ ಭಾಷೆ, ಸಂಪ್ರದಾಯ, ಆಚರಣೆ ಹಾಗೂ ವಿಚಾರಗಳನ್ನು ಕೇವಲ ಮಾತನಾಡುವುದರಿಂದ ಅವು ಉಳಿಯುವುದಿಲ್ಲ. ಅವುಗಳನ್ನು ನಿತ್ಯದ ಬದುಕಿನಲ್ಲಿ ಬಳಸಿಕೊಂಡು ಆಚರಿಸಿದಾಗ ಮಾತ್ರ ಮುಂದಿನ ಪೀಳಿಗೆ ಹಾಗೂ ಜನಾಂಗಕ್ಕೆ ವರ್ಗಾವಣೆಯಾಗಿ ಉಳಿದು ಬೆಳೆಯಲು ಸಾಧ್ಯ. ಇಲ್ಲವಾದರೆ ಒಂದು ತಲೆಮಾರಿನೊಂದಿಗೆ ಅವು ನಶಿಸಿಹೋಗುವ ಸಾಧ್ಯತೆ ಇದೆ ಎಂದು ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ಅಭಿಪ್ರಾಯಪಟ್ಟರು. ಕದ್ರಿಯ ಡಿಂಕಿ ಡೈನ್ ಆವರಣದಲ್ಲಿ ಡಿಂಕಿ ಡೈನ್‌ನ ಸ್ವರ್ಣ ಸುಂದರ್, ತುಳುವ ಬೊಳ್ಳಿ ಪ್ರತಿಷ್ಠಾನದ ದಯಾನಂದ ಕತ್ತಲ್‌ಸಾರ್ ಹಾಗೂ ಸಮಾನ ಮನಸ್ಕ ಮಿತ್ರರ ಸಹಕಾರದಲ್ಲಿ ಆಯೋಜಿಸಿದ್ದ ಆಟಿ ಅಮಾವಾಸ್ಯೆ ಪ್ರಯುಕ್ತ ‘ಆಟಿ ಕಷಾಯ ಮತ್ತು ಗಂಜಿ’ ಸಾಮೂಹಿಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪರಿಸರ, ಪ್ರಕೃತಿ, ಕಲೆ, ಸಾಹಿತ್ಯ ಹಾಗೂ ಸಾಮಾಜಿಕ-ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಸ್ವರ್ಣ ಸುಂದರ್ ಹಾಗೂ ದಯಾನಂದ ಕತ್ತಲ್‌ಸಾರ್ ಸೇರಿದಂತೆ ಸಮಾನ ಮನಸ್ಕರು ಕಳೆದ 12 ವರ್ಷಗಳಿಂದ ಆಟಿ ಅಮಾವಾಸ್ಯೆಯ ಸಂದರ್ಭದಲ್ಲಿ ಹಿರಿಯರ ಸಂಪ್ರದಾಯದಂತೆ…

Read More

ಮಂಗಳೂರು, ಆ. 12: ತುಳುನಾಡಿನ ವಿಶಿಷ್ಟ ಆಚರಣೆ ಹಾಗೂ ಪಾರಂಪರಿಕ ಆರೋಗ್ಯ ಪರಂಪರೆಯ ಪ್ರತೀಕವಾಗಿರುವ ಆಟಿ ಅಮಾವಾಸ್ಯೆ ಪ್ರಯುಕ್ತ ಪಾಲೆ ಕೆತ್ತೆ ಕಷಾಯ ವಿತರಣೆ ಕಾರ್ಯಕ್ರಮವನ್ನು ಡಿಂಕಿ ಡೈನ್ ಮತ್ತು ತುಳುವ ಬೊಳ್ಳಿ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಬುಧವಾರ ಡಿಂಕಿ ಡೈನ್ ಆವರಣದಲ್ಲಿ ಆಯೋಜಿಸಲಾಯಿತು. ತುಳುನಾಡಿನ ಪದ್ದತಿ ಹಾಗೂ ಸಂಪ್ರದಾಯದಂತೆ ಆಟಿ ಅಮಾವಾಸ್ಯೆಯಂದು ಮದ್ದು ಗಂಜಿ ಹಾಗೂ ಪಾಲೆ ಕೆತ್ತೆ ಕಷಾಯ ಸೇವಿಸುವ ಆಚರಣೆಗೆ ವಿಶೇಷ ಮಹತ್ವವಿದೆ. ಈ ಪಾರಂಪರಿಕ ಆಚರಣೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಹಾಗೂ ಉಳಿಸಿ ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪಟ್ಲ ಫೌಂಡೇಶನ್ ಸ್ಥಾಪಕ ಸತೀಶ್ ಪಟ್ಲ ಹಾಗೂ ನಾಟಕ ಮತ್ತು ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರು ಆಟಿ ಕಷಾಯದ ಪಾರಂಪರಿಕ ಮಹತ್ವ, ತುಳುನಾಡಿನ ಜನಜೀವನದಲ್ಲಿ ಅದರ ಸ್ಥಾನ ಹಾಗೂ ಆರೋಗ್ಯದ ದೃಷ್ಟಿಯಿಂದ ಹಿರಿಯರು ಪಾಲಿಸಿಕೊಂಡು ಬಂದಿರುವ ಆಚರಣೆಗಳ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಜೋಗಿ ಸಮಾಜದ ಮುಖಂಡ ಕಿರಣ್ ಜೋಗಿ, ತುಳುನಾಡ ರಕ್ಷಣಾ…

Read More

ಹೆಬ್ರಿ, ಆ.11: ಹೆಬ್ರಿ ಭಾಗದಲ್ಲಿ ಸಾರ್ವಜನಿಕರು, ವಾಹನ ಸವಾರರು ಹಾಗೂ ಮನೆಗಳಿಗೆ ಅಪಾಯಕಾರಿಯಾಗಿರುವ ಒಣ ಹಾಗೂ ಹಸಿ ಮರಗಳನ್ನು ತಕ್ಷಣ ತೆರವುಗೊಳಿಸುವಂತೆ ಆಗ್ರಹಿಸಿ, ಇತ್ತೀಚೆಗೆ ಮರ ಬಿದ್ದು ಮೃತಪಟ್ಟ ಸದಾನಂದ ಪ್ರಭು ಅವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಕುಚ್ಚೂರು ಅವರು ಅರಣ್ಯ ಇಲಾಖೆ ಹಾಗೂ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದ್ದಾರೆ. ಹೆಬ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲಿ ಅಪಾಯಕಾರಿಯಾಗಿ ಬೆಳೆದು ನಿಂತಿರುವ ಹಲವು ಮರಗಳು ಯಾವುದೇ ಸಂದರ್ಭದಲ್ಲಿ ಗಾಳಿ-ಮಳೆಗೆ ಉರುಳಿ ಬೀಳುವ ಆತಂಕವಿದೆ. ಇತ್ತೀಚೆಗೆ ಸಂಭವಿಸಿದ ಮರ ಬಿದ್ದು ಸದಾನಂದ ಪ್ರಭು ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಗಳು ಇಂತಹ ಅಪಾಯಕಾರಿ ಮರಗಳನ್ನು ಗುರುತಿಸಿ, ಮುನ್ನೆಚ್ಚರಿಕಾ ಕ್ರಮವಾಗಿ ತೆರವುಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಜೆಸಿಬಿ ಕಾಮಗಾರಿಯಿಂದ ಮರಗಳ ಬೇರು ಸಡಿಲ ರಸ್ತೆ ಬದಿಯಲ್ಲಿ ನೀರಿನ ಪೈಪ್, ಕೇಬಲ್ ಸೇರಿದಂತೆ ವಿವಿಧ ಕಾಮಗಾರಿಗಳಿಗಾಗಿ ನಿರಂತರವಾಗಿ ಜೆಸಿಬಿ ಮೂಲಕ ಆಳವಾಗಿ ಹೊಂಡ ತೆಗೆಯುತ್ತಿರುವುದರಿಂದ ಹಲವು ಮರಗಳ…

Read More

ಮಂಗಳೂರು, ಆ.11: ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ವೇಳೆ ಕಬ್ಬಿಣದ ರಾಡ್ ಹೈಟೆನ್ಷನ್ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿ ಸಂಭವಿಸಿದೆ. ಮೃತರನ್ನು ಕೃಷ್ಣಾಪುರ ಚಕ್ರವರ್ತಿ ಕ್ರೀಡಾಂಗಣ ಸಮೀಪದ ನಿವಾಸಿ ಹಾಗೂ ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ಗುತ್ತಿಗೆದಾರ ಭಾಸ್ಕರ ಎಂದು ಗುರುತಿಸಲಾಗಿದೆ. ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ತಗುಡು ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿಯ ಭಾಗವಾಗಿ ಭಾಸ್ಕರ ಅವರು ಕಬ್ಬಿಣದ ರಾಡ್ ಬಳಸಿ ಅಳತೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕಬ್ಬಿಣದ ರಾಡ್ ಅನ್ನು ಕಂಕುಳಲ್ಲಿಟ್ಟುಕೊಂಡು ತಿರುಗುತ್ತಿದ್ದ ಸಂದರ್ಭದಲ್ಲಿ, ಕಟ್ಟಡದ ಪಕ್ಕದಲ್ಲೇ ಹಾದುಹೋಗುತ್ತಿದ್ದ ಹೈಟೆನ್ಷನ್ ವಿದ್ಯುತ್ ತಂತಿಗೆ ರಾಡ್ ಆಕಸ್ಮಿಕವಾಗಿ ಸ್ಪರ್ಶಿಸಿದೆ ಎನ್ನಲಾಗಿದೆ. ತಂತಿಗೆ ರಾಡ್ ತಾಗುತ್ತಿದ್ದಂತೆಯೇ ಭಾರೀ ಪ್ರಮಾಣದ ವಿದ್ಯುತ್ ಪ್ರವಹಿಸಿದ್ದು, ತೀವ್ರ ವಿದ್ಯುತ್ ಆಘಾತಕ್ಕೊಳಗಾದ ಭಾಸ್ಕರ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು…

Read More

ವಿಟ್ಲ, ಆ. 11: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ಮಂಗಳವಾರ ನಡೆದಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಕುಂಟುಕುಡೇಲು ಇಳಿಜಾರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನಲಾಗಿದೆ. ಇದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಗೆ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ನಡೆದ ಸಂದರ್ಭದಲ್ಲಿ ಬಸ್‌ನಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರು. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರತೆಗೆದು ಅಪಾಯದಿಂದ ಪಾರು ಮಾಡಿದ್ದಾರೆ. ಅದೃಷ್ಟವಶಾತ್ ಯಾವುದೇ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿಲ್ಲ ಹಾಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದ್ದು, ವಿದ್ಯುತ್ ಕಂಬವೂ ಹಾನಿಗೊಳಗಾಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್…

Read More

ಉಡುಪಿ : ತುಳುನಾಡಿನ ಸಾಂಪ್ರದಾಯಿಕ ಆಚರಣೆಗೆ ಗೌರವ – ಆರೋಗ್ಯಕರ ಬದುಕಿನ ಸಂದೇಶ ತುಳುನಾಡ ರಕ್ಷಣಾ ವೇದಿಕೆ (ರಿ.) ವತಿಯಿಂದ ಉಡುಪಿ ಜಿಲ್ಲಾ ಘಟಕದ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಆಟಿ ಅಮಾವಾಸ್ಯೆ ಪ್ರಯುಕ್ತ ಪಾಲೆ ಕೆತ್ತೆ ಕಷಾಯ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಸಂಪ್ರದಾಯ ಹಾಗೂ ಜನಪದ ಆಚರಣೆಗಳಲ್ಲಿ ಆಟಿ ಅಮಾವಾಸ್ಯೆಗೆ ವಿಶೇಷ ಮಹತ್ವವಿದೆ. ಆಟಿ ತಿಂಗಳ ಅಮಾವಾಸ್ಯೆಯಂದು ಪಾಲೆ ಮರದ ಕಡ್ಡಿಯಿಂದ ತಯಾರಿಸುವ ಕಷಾಯ ಸೇವಿಸುವುದು ತುಳುನಾಡಿನ ಹಲವು ಪ್ರದೇಶಗಳಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಾಂಪ್ರದಾಯಿಕ ಆಚರಣೆಯಾಗಿದೆ. ನಮ್ಮ ಹಿರಿಯರು ಪಾಲಿಸಿಕೊಂಡು ಬಂದಿರುವ ಇಂತಹ ಸ್ಥಳೀಯ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಹಾಗೂ ಸಂರಕ್ಷಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 📅 ಕಾರ್ಯಕ್ರಮದ ವಿವರ ದಿನಾಂಕ: 12-08-2026, ಬುಧವಾರಸಮಯ: ಬೆಳಿಗ್ಗೆ 5.00 ಗಂಟೆಗೆಸ್ಥಳ: 📍 ಕ್ಲಾಕ್ ಟವರ್, ಉಡುಪಿ ಕಾರ್ಯಕ್ರಮದಲ್ಲಿ ಪಾಲೆ ಕೆತ್ತೆ ಕಷಾಯ ವಿತರಣೆ ನಡೆಯಲಿದ್ದು, ತುಳುನಾಡಿನ ಸಾಂಪ್ರದಾಯಿಕ ಆಟಿ ಅಮಾವಾಸ್ಯೆಯ ಆಚರಣೆಯಲ್ಲಿ…

Read More

ಮಂಗಳೂರು, ಆ.11: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಸ್ಮರಣೆಯೊಂದಿಗೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಗೌರವಿಸುವ ಉದ್ದೇಶದಿಂದ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರಾಷ್ಟ್ರೀಯ ಸ್ಮಾರಕ ಸಮಿತಿ (ರಿ.), ಮಂಗಳೂರು.ಮತ್ತು ತುಳುನಾಡ ರಕ್ಷಣಾ ವೇದಿಕೆ (ರಿ.), ಮಂಗಳೂರು ಇವರ ಸಹಯೋಗದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಗುವುದು. ಆಗಸ್ಟ್ 15ರಂದು ಬಾವುಟ ಗುಡಿಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ರಾಷ್ಟ್ರೀಯ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಪ್ರತಿಮೆಯ ಆವರಣವನ್ನು ತ್ರಿವರ್ಣ ಧ್ವಜಗಳು ಹಾಗೂ ದೇಶಭಕ್ತಿ ಸಾರುವ ಅಲಂಕಾರಗಳಿಂದ ಸಜ್ಜುಗೊಳಿಸಲಾಗುವುದು. ಕೆದಂಬಾಡಿ ರಾಮಯ್ಯ ಗೌಡರು ಸೇರಿದಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಯುವಜನತೆ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ದೇಶಾಭಿಮಾನಿಗಳು, ಸಾರ್ವಜನಿಕರು,…

Read More

ಉಡುಪಿ, ಆ. 10: ಉಡುಪಿಯಲ್ಲಿ ಸಹಕಾರಿ ಸೊಸೈಟಿಯೊಂದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು, ಘಟನೆಯಿಂದ ಕುಟುಂಬಸ್ಥರು, ಸಹೋದ್ಯೋಗಿಗಳು ಹಾಗೂ ಪರಿಚಿತರಲ್ಲಿ ಆಘಾತ ಉಂಟಾಗಿದೆ. ಕಲ್ಪನಾ ಟಾಕೀಸ್ ಸಮೀಪದ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಸಚಿನ್ ಶೆಟ್ಟಿ (44) ಅವರು ಅಂಬಲಪಾಡಿ ಸಮೀಪ ತಾವು ವಾಸವಿದ್ದ ಫ್ಲಾಟಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಚಿನ್ ಶೆಟ್ಟಿ ಅವರು ಕಳೆದ ನಾಲ್ಕು ವರ್ಷಗಳಿಂದ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸೋಮವಾರ ಬೆಳಗ್ಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದ್ದು, ವೈಯಕ್ತಿಕ, ವೃತ್ತಿ ಸಂಬಂಧಿತ ಅಥವಾ ಇತರ ಯಾವುದೇ ಕಾರಣಗಳ ಬಗ್ಗೆ ಈವರೆಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಉಡುಪಿಯ ಸಹಕಾರಿ ವಿಭಾಗದಲ್ಲಿ ಸಚಿನ್…

Read More

ಮಂಗಳೂರು : ಮಂಗಳೂರು ಮೂಲದ ಕಾನೂನು ತಜ್ಞೆ ಡಾ. ಪ್ರೀತಿ ಲೋಲಾಕ್ಷ ನಾಗವೇಣಿ ಅವರ Untouchability in 21st Century India (21ನೇ ಶತಮಾನದ ಭಾರತದಲ್ಲಿ ಅಸ್ಪೃಶ್ಯತೆ) ಕೃತಿಯನ್ನು ಜಾಗತಿಕ ಖ್ಯಾತಿಯ ಪ್ರಕಾಶನ ಸಂಸ್ಥೆ ‘ರೌಟ್ಲೆಜ್’ ಪ್ರಕಟಿಸಿ ಇಂದು ಬಿಡುಗಡೆ ಮಾಡಿದೆ. ಆಧುನಿಕ ಭಾರತದಲ್ಲಿ ಅಸ್ಪೃಶ್ಯತೆ ಇನ್ನೂ ಮುಂದುವರಿದಿರುವ ವಾಸ್ತವಿಕತೆಯನ್ನು ಕಾನೂನು ಹಾಗೂ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದೃಷ್ಟಿಕೋನದಿಂದ ವಿಶ್ಲೇಷಿಸಿರುವ ಅಪರೂಪದ ಸಂಶೋಧನಾ ಕೃತಿ ಇದಾಗಿದೆ. ಈ ಕೃತಿಯಲ್ಲಿ ಅಸ್ಪೃಶ್ಯತೆಯ ಎರಡು ಪ್ರಮುಖ ಸಮಕಾಲೀನ ರೂಪಗಳಾದ ಮ್ಯಾನುಯಲ್ ಸ್ಕ್ಯಾವೆಂಜಿಂಗ್ (ಕೈಯಾರೆ ಮಲ ವಿಲೇವಾರಿ) ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯ ಕುರಿತಾಗಿ ಆಳವಾದ ಅಧ್ಯಯನ ನಡೆಸಲಾಗಿದೆ. ಅಸ್ಪೃಶ್ಯತೆ ಭಾರತದ ಇತಿಹಾಸದ ಭಾಗವಾಗಿಬಿಟ್ಟಿದೆ ಎಂಬ ಸಾಮಾನ್ಯ ನಂಬಿಕೆಯನ್ನು ಪ್ರಶ್ನಿಸಿರುವ ಲೇಖಕಿ, ಸಂವಿಧಾನಾತ್ಮಕ ಖಾತರಿಗಳು ಹಾಗೂ ಕಾನೂನುಗಳಿದ್ದರೂ ಸಹ ಅಸ್ಪೃಶ್ಯತೆ ಇಂದು ಬಹಿರಂಗವಾಗಿಯೂ, ಸೂಕ್ಷ್ಮ ಹಾಗೂ ಪರೋಕ್ಷ ರೂಪಗಳಲ್ಲಿಯೂ ಮುಂದುವರಿದಿದೆ ಎಂದು ಪ್ರತಿಪಾದಿಸಿದ್ದಾರೆ. ಸಮಗ್ರ ಕಾನೂನು ಅಧ್ಯಯನ, ಸಾಮಾಜಿಕ-ಕಾನೂನು ಸಂಶೋಧನೆ ಹಾಗೂ…

Read More

ಉಡುಪಿ, ಆ. 10: ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶಿಸಿದೆ. ಉತ್ತರಾಖಂಡ ಮೂಲದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರ ಮೂಲದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಅವರನ್ನು ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ಅವರ ನೇತೃತ್ವದ ಪೊಲೀಸ್ ತಂಡ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿತು. ಪ್ರಕರಣದ ಹೆಚ್ಚಿನ ತನಿಖೆ ನಡೆಸಬೇಕಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶ ಪುರುಷೋತ್ತಮ ಅವರು ಇಬ್ಬರು ಆರೋಪಿಗಳನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು. ಪೊಲೀಸ್ ಕಸ್ಟಡಿಗೆ ಪಡೆದಿರುವ ಆರೋಪಿಗಳಿಂದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ಪೊಲೀಸರು ಮುಂದಾಗಿದ್ದಾರೆ. ವಿಶೇಷವಾಗಿ ಹತ್ಯೆಯ ಹಿಂದಿರುವ ನಿಖರ ಕಾರಣ, ಸಂಚಿನ…

Read More