Author: Tulunada Surya

ಬ್ರಹ್ಮಾವರ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಇಂದು ಸೆಲ್‌ನ ಬಾತ್ ರೂಮಿನೊಳಗೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಕೇರಳ ರಾಜ್ಯ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್, ನವೆಂಬರ್ 9 ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪಿಸಲಾಗಿದೆ. ಆ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬಿಜು ಮೋಹನ್‌ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದರು ಎಂದು ತಿಳಿದುಬಂದಿದೆ. ಮದ್ಯ ಸೇವಿಸಿದ್ದರೆನ್ನಲಾದ ಬಿಜು ಮೋಹನ್ ರನ್ನು ಸೆಲ್‌ನಲ್ಲಿ ಇರಿಸಲಾಗಿದ್ದು, ಇಂದು ನಸುಕಿನ ವೇಳೆ 3:30ರ ಸುಮಾರಿಗೆ…

Read More

ಮಂಗಳೂರು : ಮಂಗಳೂರು : ಲೇಡಿಗೋಷನ್ ಆಸ್ಪತ್ರೆಯ ಮಹಡಿಯಿಂದ ಹಾರಿ ಬಾಣಂತಿ ಆತ್ಮಹತ್ಯೆ ಮಂಗಳೂರು ನಗರದ ಲೇಡಿಗೋಷನ್ ಆಸ್ಪತ್ರೆಯ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ (28) ಮೃತ ಮಹಿಳೆಯಾಗಿದ್ದಾಳೆ.

Read More

ಮಂಗಳೂರು: ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವರು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2 ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆಂದು ತಿಳಿದು ಉಪಾಯದಿಂದ ಮನವೊಲಿಸಿ ಮಗು ಸಹಿತ ಅವರನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮೇಲೇರಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಅವರಿಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ

Read More

ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಳೆದ ಎರಡು ಮೂರು ವರ್ಷಗಳಿಂದ ಏಕೆ ನಿವೇಶನಕ್ಕೆ ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದರೂ ಇದುವರಿಗೂ ಜನರಿಗೆ ಏಕೆ ನಿವೇಶನ ವಿನ್ಯಾಸ ಅನುಮತಿ ಸಿಗದಿದ್ದದ್ದು ಜನರಿಗೆ ತುಂಬಾ ಸಂಕಷ್ಟಕ್ಕೆ ಈಡು ಮಾಡಿದೆ. ಸ್ವಂತ ಮನೆ ನಿರ್ಮಾಣ ಮಾಡುವುದು ಅಸಾಧ್ಯವಾಗಿದ್ದು ಜನರು ಬಾಡಿಗೆ ಮನೆಯಲ್ಲಿ ಆಶ್ರಯಿಸುವಾಂತಾಗಿದೆ. ಈ ಸಮಸ್ಯೆಯನ್ನು ತ್ವರಿತ ಗತಿಯಲ್ಲಿ ಪರಿಹರಿಸಲು ಆದ್ಯತೆ ನೀಡಬೇಕಾಗಿದೆ.ಕೃಷಿ ವಲಯದಲ್ಲಿ 10 ಸೆನ್ಸ್ ವರೆಗೆ ಏಕ ನಿವೇಶನ ಬರವಣಿಗೆ ನೀಡುವ ಪ್ರಕ್ರಿಯೆಯನ್ನು ನಗರ ಅಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಳಿಸಿದಾರೆ. ಇದರಿಂದ ಜನಸಾಮಾನ್ಯರಿಗೆ ಮನೆ ಕಟ್ಟಲು ಸಾಧ್ಯವಾಗದೆ ಪರದಾಡುವಂತಾಗಿದೆ ಈ ಮೊದಲಿನಂತೆ ಇದ್ದ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋದಲ್ಲಿ ಸಮಸ್ಯೆಗೆ ಪರಿಹಾರ ದೊರಕಿದಂತಾಗುತ್ತದೆ. ಅಲ್ಲದೇ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಬೇಡಿಕೆಗನುಸಾರವಾಗಿ ಸ್ಪಂದಿಸಲು ಸಾಕಷ್ಟು ಪೂರ್ಣ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿವರ್ಗದ ಕೊರತೆ ಇದ್ದು ಜನರ ಸಮಸ್ಯೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲು ಅಗತ್ಯ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿ ವರ್ಗಗಳನ್ನು ನಿಯೋಜಿಸ ಬೇಕು ಸೇರಿದಂತೆ ಹಲವು…

Read More

ಮಂಗಳೂರು :(Tulunada surya) ನನ್ನ ರಾಜಕೀಯ ಗುರುಗಳಾದ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಹಾದಿಯಲ್ಲಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಜಕಾರಣ ಮಾಡುವುದಾಗಿ ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು. ತುಳುನಾಡಿನ ಸಮಗ್ರ ಅಭಿವೃದ್ಧಿ ಜತೆಗೆ ಸೌಹಾರ್ದ ಪರಂಪರೆಯನ್ನು ಮರಳಿ ಕಟ್ಟುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಗತವೈಭವ ಮರುಕಳಿಸುವಂತೆ ಮಾಡುವುದು ನನ್ನ ಉದ್ದೇಶ ಎಂದು ಒಂದು ರೀತಿಯಲ್ಲಿ ಪ್ರತಿಜ್ಞೆ ಮಾದರಿಯಲ್ಲಿ ಅವರು ನುಡಿದರು.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಧಿಕೃತ ಘೋಷಣೆಯಾದ ಬಳಿಕ ಬೆಂಗಳೂರಿನಿಂದ ಶುಕ್ರವಾರಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪದ್ಮರಾಜ್ಅವರನ್ನು ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ಹಾರ ಹಾಕಿ ಸಂಭ್ರಮಿಸಿದರು. ಚೆಂಡೆ ವಾದ್ಯಗಳ ಜೊತೆ ಭರ್ಜರಿಯಾಗಿ ಬರಮಾಡಿಕೊಂಡರು.ಬಳಿಕ ಅವರು ಆಧುನಿಕ ಮಂಗಳೂರು ಶಿಲ್ಪಿ ಉಳ್ಳಾಲ ಶ್ರೀನಿವಾಸ್ ಮಲ್ಯರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಮನ ಸಲ್ಲಿಸಿದರು. ಕದ್ರಿಯ ವೀರ ಯೋಧರ ಸ್ಮಾರಕ್ಕೆ ತೆರಳಿ ದೇಶಕ್ಕಾಗಿ ಮಡಿದ ಹುತಾತ್ಮ…

Read More

ಬೆಂಗಳೂರು : ಶಾಲಾ ಮಕ್ಕಳ ಜೀವನದಲ್ಲಿ ಆಟವಾಡುವ ಸರಕಾರದ ವಿರುದ್ಧ ಪೋಷಕರು ಆಕ್ರೋಶವ್ಯಕ್ತಪಡಿಸಿದ್ದು, ಈ ಮಧ್ಯೆ ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದರು. ಇದೀಗ ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಬೋರ್ಡ್ ಪರೀಕ್ಷೆ ವಿಚಾರವಾಗಿ ಸರ್ಕಾರದ ಸುತ್ತೋಲೆ ರದ್ದು ಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಇದನ್ನು ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ವಿಭಾಗೀಯ ಪೀಠ ಏಕಸದಸ್ಯ ಪೀಠ ಆದೇಶ ರದ್ದು ಮಾಡಿ ಪರೀಕ್ಷೆ ನಡೆಸಲು ಗ್ರೀನ್‌ ಸಿಗ್ನಲ್ ನೀಡಿತ್ತು.ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಭಾಗೀಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಅಲ್ಲದೆ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.…

Read More

ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ ದಿನಾಂಕ*21-03-2024 ರಂದು ಗುರುವಾರ ಬೆಳಗ್ಗೆ 10.30 ಗಂಟೆಗೆ ಸರಿಯಾಗಿ ಉಡುಪಿ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಸಂತೆಕಟ್ಟೆಯಲ್ಲಿ ಸಾರ್ವಜನಿಕರು ಅನುಭವಿಸುವ ಸಮಸ್ಯೆಗಳ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಮತ್ತು ರಾಷ್ಟ್ರೀಯ ಹೆದ್ದಾರಿ ಮಂಗಳೂರು ವಿಭಾಗ ಯೋಜನೆ ನಿರ್ದೇಶಕರನ್ನುಭೇಟಿ ಮಾಡಿ ಮನವಿ ನೀಡಿರುತ್ತಾರೆ.ರಾಷ್ಟ್ರೀಯ ಹೆದ್ದಾರಿ 66 ಕಲ್ಯಾಣಪುರ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್ ಪಾಸಿಂಗ್ ರಸ್ತೆ ಕಾಮಗಾರಿ ಆಗುತ್ತಿದ್ದು ಸದ್ರಿ, ರಾಷ್ಟ್ರೀಯ ಹೆದ್ದಾರಿಯಾ ಬಲಬದಿಯ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು ಸದರಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಬಹಳ ತೊಂದರೆ ಉಂಟಾಗುತ್ತಿದ್ದು ದಿನನಿತ್ಯ ಪರದಾಡುವ ಪರಿಸ್ಥಿತಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ನಿರ್ಲಕ್ಷದಿಂದ ಉಂಟಾಗಿರುತ್ತಾರೆ. ಸದರಿ ಅಸಂರ್ಪಕ ರಸ್ತೆಯಿಂದಾಗಿ ಈವರೆಗೆ ಹಲವಾರು ಅಪಘಾತಗಳು ಉಂಟಾಗಿ ಹಲವಾರು ಕುಟುಂಬದ ಮಕ್ಕಳು ಹಾಗೂ ದುಡಿಯುತ್ತಿರುವ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ತಮ್ಮ ಪ್ರಾಣವನ್ನು ಕಳೆದುಕೊಂಡು ಎಷ್ಟೋ ಕುಟುಂಬಗಳು ಬೀದಿಗೆ ಬಂದಿರುತ್ತದೆ.…

Read More

21/03/024.ಮಧ್ಯಾಹ್ನ 3.30ಕ್ಕೆ ಜಮೀಯತುಲ್ ಫಲಾಹ್ ಕಛೇರಿಯಲ್ಲಿ (ಕಂಕನಾಡಿ) ಮೊಯ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ 21/03/024.ಮಧ್ಯಾಹ್ನ 3.30ಕ್ಕೆ ಜಮೀಯತುಲ್ ಫಲಾಹ್ ಕಛೇರಿಯಲ್ಲಿ (ಕಂಕನಾಡಿ) ಮೊಯ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ ಮಾಜಿ ಶಾಸಕ ಮೊಯ್ದಿನ್ ಬಾವಾರವರು ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸ ಬೇಕೆಂಬ ಒತ್ತಾಯವು ದಕ್ಷಿಣ ಕನ್ನಡದಾದ್ಯಂತ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಮೊಯ್ದಿನ್ ಬಾವಾ ರವರ ರಾಜಕೀಯ ಶ್ರೇಯಸ್ಸನ್ನು ಬಯಸುವ ಅವರ ಆಪ್ತರು, ಅಭಿಮಾನಿಗಳು ಮತ್ತು ಹಿತೈಷಿಗಳು, ಪ್ರಸಕ್ತ ರಾಜಕೀಯ ಸ್ಥಿತಿಗತಿ ಗಳ ಬಗ್ಗೆ ಚಿಂತನಾ -ಮಂಥನಾ ನಡೆಸಿ ಸೂಕ್ತ ನಿರ್ಧಾರವನ್ನು ತೆಗೆದು ಕೊಳ್ಳುವ ತೀರ್ಮಾನಕ್ಕೆ ಬಂದಿದ್ದು. ಈ ಸಮಾಲೋಚನಾ ಸಭೆಯು ದಿನಾಂಕ 21.03.2024ರಂದು ಮಧ್ಯಾಹ್ನ 3.30ಕ್ಕೆ ಕಂಕನಾಡಿಯಲ್ಲಿರುವ ಜಮೀಯತುಲ್ ಫಲಾಹ್ ಕಛೇರಿಯಲ್ಲಿ ನಡೆಯಲಿದೆ ಎಂದು ಮೊಯ್ದಿನ್ ಬಾವಾರ ಆಪ್ತರಿಂದ ತಿಳಿದುಬಂದಿದೆ

Read More

ಉತ್ತಮ ಸಮಾಜಸೇವಕರು, ಸರ್ವ ದರ್ಮದ ಒಡನಾಡಿ, ಬಹು ಭಾಷಾ ಕವಿ, ಕನ್ನಡ/ ತುಳು ಪರ ಹೋರಾಟಗಾರ, ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಸದಸ್ಯರು ಹಾಗೂ ಮುಖಂಡರು, ಕೋಟೆಕಾರು ಪಟ್ಟಣ ಪಂಚಾಯತ್ ಮಾಜಿ ಕೌನ್ಸಿಲರ್, ಕರ್ನಾಟಕ ಭಾವೈಕ್ಯ ಪರಿಷತ್ ಇದರ ನಿರ್ದೇಶಕರಾಗಿರುವ ಹಮೀದ್ ಹಸನ್ ಮಾಡೂರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿರುತ್ತಾರೆ. ಇವರಿಗೆ ತುಳುನಾಡ ಸೂರ್ಯನ್ಯೂಸ್ ಅಭಿನಂದನೆ ಸಲ್ಲಿಸುತ್ತದೆ.

Read More

ತುಳುನಾಡ ಸೂರ್ಯ ನ್ಯೂಸ್ : ರಸ್ತೆ ದಾಟುತ್ತಿದ್ದ ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆಯೊಂದು ತಲಪಾಡಿಯಲ್ಲಿ ನಡೆದಿದೆ ರಾಜೇಶ್ ಶೆಟ್ಟಿ (49) ಮೃತಪಟ್ಟ ವ್ಯಕ್ತಿ. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ ತಂಗುದಾಣದ ಬಳಿ ಬೇಕರಿ ಇದೆ. ಎದುರು ಭಾಗದಲ್ಲೇ ಹೆದ್ದಾರಿ ಸಮೀಪ ಮನೆ ಕೂಡಾ ಇದೆ. ಭಾನುವಾರ ತಲಪಾಡಿ ದೇವಿಪುರದಲ್ಲಿ ರಥೋತ್ಸವ ಇದ್ದ ಕಾರಣ ರಾಜೇಶ್ ಅವರು ತಮ್ಮ ಮನೆಗೆ ಬಂದಿದ್ದ ನೆಂಟರನ್ನು ಉಪಚರಿಸಿದ್ದು, ಮಧ್ಯಾಹ್ನದ ಸಮಯದಲ್ಲಿ ಬೇಕರಿಗೆ ತೆರಳುತ್ತಿದ್ದರು. ರಾಜೇಶ್ ಶೆಟ್ಟಿ ಯವರು ಉತ್ತಮ ವ್ಯಕ್ತಿತ್ವ ಹೊಂದಿದವರಿಗೆ ಎಲ್ಲರೊಡನೆ ಉತ್ತಮ ಒಡನಾಟ ಹೊಂದಿದ್ದರು. ಈ ಸಮಯದಲ್ಲಿ ಅವರು ಹೆದ್ದಾರಿ ದಾಟಲು ನಿಂತಿದ್ದು, ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಾಜೇಶ್ ಅವರು ರಸ್ತೆಗೆಸೆಯಲ್ಪಟ್ಟಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ…

Read More