Author: Tulunada Surya

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಆಯ್ಕೆಯಾಗಿರುತ್ತಾರೆ, ಕಿರಣ್ ರವರುಎನ್ ಎಸ್ ಯು ಐ ತಾಲೂಕು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ,2 ಬಾರಿ ಚುನಾಯಿತ ಜಿಲ್ಲಾ ಯುವ ಕಾಂಗ್ರೆಸ್ ಪ್ರಾಧಾನ ಕಾರ್ಯದರ್ಶಿಯಾಗಿ ,ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ (ರಿ.) ಮಂಗಳೂರು ಅಧ್ಯಕ್ಷರಾಗಿ , ಯುವ ಒಕ್ಕಲಿಗ ಸಂಘ ಸೇವೆ . ಮಂಗಳೂರಿನ ಅಧ್ಯಕ್ಷರಾಗಿ ಸಲ್ಲಿಸಿದರು. ಇದೀಗ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಿರಣ್ ಬುಡ್ಲೆಗುತ್ತು ರವರನ್ನು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ನೇಮಕಮಾಡಿರುತ್ತಾರೆ.

Read More

ತುಳುನಾಡು ರಕ್ಷಣಾ ವೇದಿಕೆ ಸಂಘಟನೆಗೆ ಹಲವಾರು ಕನ್ನಡಪರ ಸಂಘಟನೆಗಳಿಂದ ಸೇರ್ಪಡೆ ದಿನಾಂಕ 17.3 20 24ರಂದು ಮಧ್ಯಾಹ್ನ 3:00 ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಗೆ ಕನ್ನಡ ಪರ ಸಂಘಟನೆ ಮುಖಂಡರುಗಳಾದ ಕುಶಲ್ ಅಮೀನ್ ಜಯ ಪೂಜಾರಿ ರೋಷನ್ ಬಂಗೇರ , ಸುಲತಾ , ಲಲಿತಾ, ರವೀಜಾ, ಉಮಾವತಿ, ಸವಿತಾ ಮತ್ತಿತರ ಹಲವಾರು ಪ್ರಮುಖರು ಸಾರ್ವಜನಿಕರ ಮೇಲೆ ಬಾಷೆ ಹೇರಿಕೆ ಮತ್ತು ಕನ್ನಡ ಬೋರ್ಡ್ ಅಳವಡಿಸಲು ವ್ಯಾಪಾರಸ್ಥರ ಮೇಲೆ ಬಲವಂತದ ಒತ್ತಡ ಹೇರುತ್ತಿರುವ ಕ್ರಮವನ್ನು ವಿರೋಧಿಸಿ ತುಳುನಾಡು ರಕ್ಷಣಾ ವೇದಿಕೆಗೆ ಸೇರ್ಪಡೆ ಗೊಂಡರು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರು ಸಂಘಟನೆಯ ಸಾಲು ಮತ್ತು ಹೂವನ್ನು ನೀಡಿ ಸಂಘಟನೆಗೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವೀಕ್ಷಕರಾದ ಫ್ರ್ಯಾಂಕಿ ಡಿ’ಸೋಜ , ಉಡುಪಿ ಜಿಲ್ಲಾ ಅಧ್ಯಕ್ಷರಾದ ಕೃಷ್ಣಕುಮಾರ್ , ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಜಯರಾಮ್ ಪೂಜಾರಿ, ಮಹಿಳಾ ಅಧ್ಯಕ್ಷರಾದ ಶೋಭಾ ಪಂಗಳಾ, ವೈದ್ಯರ ಘಟಕ ರಾಜ್ಯ…

Read More

ಧಾರವಾಡ:ಮನೆಯಲ್ಲಿ ಆಟವಾಡುತ್ತಾ ಆಕಸ್ಮಿಕವಾಗಿ ಒಂದು ರೂಪಾಯಿ ನಾಣ್ಯವನ್ನು ಬಾಯಿಗೆ ಹಾಕಿಕೊಂಡಿದ್ದರಿಂದ ಗಂಟಲಿನಲ್ಲಿ ಸಿಲುಕಿ 2 ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದ ಕೋಳಿಕೇರಿ ಬಡಾವಣೆಯಲ್ಲಿ ನಡೆದಿದೆ. ಮೃತ ಮಗುವನ್ನು ನಗರದ ಕೋಳಿಕೇರಿ ಬಡಾವಣೆಯ ಮಹ್ಮದ ಜುಬೇರ್ ಸಾಲಿ (2) ಎಂದು ತಿಳಿದು ಬಂದಿದೆ. ಮಗು. ಆಟವಾಡುತ್ತಿದ್ದಾಗ ಬಾಯಿಯಲ್ಲಿ ಒಂದು ರೂಪಾಯಿ ನಾಣ್ಯ ಹಾಕಿಕೊಂಡಿದೆ. ಅದು ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಮಗು ಒದ್ದಾಡುತ್ತಿದ್ದದ್ದನ್ನು ಕಂಡು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ತುಳುನಾಡ ಸೂರ್ಯ ಮಕ್ಕಳ ಹೆತ್ತವರಲ್ಲಿ ವಿನಂತಿಸುತ್ತಿದೆ.

Read More

ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಬಾರಿ ಲೋಕಸಭೆ ಅಭ್ಯರ್ಥಿ ಬದಲಾವಣೆ ಆಗಲೇಬೇಕೆಂದು ಪಕ್ಷದ ಕಾರ್ಯಕರ್ತರು ಅಭಿಯಾನ ಕೈಗೊಂಡಿದ್ದರು. ಕಾರ್ಯಕರ್ತರ ಮಾತಿಗೆ ಓಗೊಟ್ಟ ಬಿಜೆಪಿ ಹೈಕಮಾಂಡ್ ಯುವ ನಾಯಕ, 42 ವರ್ಷದ ಬೃಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಅಂದಹಾಗೆ, ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಆಯ್ದುಕೊಂಡಿರುವುದು ಮಹತ್ವದ ನಡೆಯಾಗಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ. ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಸಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ…

Read More

ದಿನಾಂಕ 08-03-2024 ರಂದು ಬೆಳ್ಳಿಗೆ 11 ಗಂಟೆಗೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಮಹಿಳಾ ಘಟಕ ವತಿಯಿಂದ ವೇದಿಕೆ ಹಮ್ಮಿಕೊಂಡಿದ್ದ “ವಿಶ್ವ ಮಹಿಳಾ ದಿನಾಚರಣೆ” ಉದ್ಘಾಟನೆಯನ್ನು ಮಹಿಳಾ ಜಿಲ್ಲಾದ್ಯಕ್ಷೆ ಶೋಭಾ ಪಾಂಗಳ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ. ಯೋಗಿಶ್ ಶೆಟ್ಟಿ ಜಪ್ಪು ರವರು ಮಾತನಾಡುತ್ತ “ಮಹಿಳೆಯರ ಹಕ್ಕುಗಳ ಅರಿವಿನ ದಿನವೇ ಮಹಿಳಾ ದಿನ. ಮಹಿಳೆಯರಾದ ನಾವೆಲ್ಲಾ ಈ ದಿನವನ್ನು ಸಂಭ್ರಮಿಸಬೇಕು. ಮಾತೆ ಸಾವಿತ್ರಿಬಾಯಿ ಫುಲೆ ರವರು ಕೊಟ್ಟ ಶಿಕ್ಷಣ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರವರು ಬರೆದ ಸಂವಿಧಾನದಿಂದಾಗಿ ನಾವುಗಳು ಕಲಿಯುತ್ತಿದ್ದೇವೆ ಮೀಸಲಾತಿಯನ್ನು ಅನುಭವಿಸುತ್ತಿದ್ದೇವೆ. ಒಂದು ಹೊತ್ತಿನ ಊಟ ಕಡಿಮೆ ಮಾಡೋಣ. ಆದರೆ ನಮ್ಮ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡೋಣ. ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರಿಂದ ನಮ್ಮ ನಮ್ಮ ಕುಟುಂಬಗಳಿಂದ ಹಿಡಿದು ದೇಶವೇ ಸುಧಾರಣೆ ಆಗುತ್ತದೆ. ಪ್ರತಿಯೊಂದು ಮಹಿಳೆಯಲ್ಲೂ ಒಂದೊಂದು ಪ್ರತಿಭೆ ಇರುತ್ತದೆ ಆ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ನಮ್ಮಲ್ಲಿ ಕೆಲವು ಭಾಗದಲ್ಲಿ ಹೆಣ್ಣು ಮಕ್ಕಳಲ್ಲಿ ಹೆಚ್ಚು ಪ್ರತಿಭೆಗಳಿದ್ದರೂ ಮತ್ತೆ ಅವಳು ಮುಸುರೆ…

Read More

ಉಡುಪಿ ಜಿಲ್ಲಾ ಘಟಕ ವತಿಯಿಂದ ಮಾರ್ಚ್ 8 ರಂದು ಮಹಿಳಾ ದಿನಾಚರಣೆ ಕಾರ್ಯಕ್ರಮ ದಿನಾಂಕ 08-03-2024 ರಂದು ಬೆಳ್ಳಿಗೆ 10.30 ಕ್ಕೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಮಹಿಳಾ ಘಟಕ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಉದ್ಘಾಟನೆ ಯನ್ನು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷ ರಾದ ಯೋಗಿಶ್ ಶೆಟ್ಟಿ ಜಪ್ಪುರವರು ನೆರವೇರಿಸಲಿದ್ದಾರೆ.ಹಲವಾರು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಮಹಿಳಾ ಸಬಲಿಕರಣ, ಸನ್ಮಾನ ಮತ್ತು ಇತರ ಕಾರ್ಯಕ್ರಮ ಜರಗಲಿದೆ. ಜಿಲ್ಲೆಯ ಎಲ್ಲಾ ಮಹಿಳಾ ಪಧಾದಿಕಾರಿಗಳು ಮತ್ತು ಪುರುಷ ಪಧಾದಿಕಾರಿಗಳು ಆಗಮಿಸಿ ಯಶಸ್ವಿ ಗೊಳಿಸಬೇಕಾಗಿ ವಿನಂತಿ. ಕಾರ್ಯಕ್ರಮ ಬಳಿಕ ಸಂಘಟನೆ ಮಹಿಳಾ ಪಧಾದಿಕಾರಿ ರೇಣುಕಾ ರವರ ಮನೆಯ ರೇಣುಕಾ ಯಲ್ಲಮ್ಮ ದೇವರ ಪೂಜಾ ಕಾರ್ಯಕ್ರಮ ದಲ್ಲಿ ಭಾಗವಹಿಸಲಿಕ್ಕಿದೆ. ಎಂದು ಉಡುಪಿ ಮಹಿಳಾ ಜಿಲ್ಲಾದ್ಯಕ್ಷೆ ಶೋಭಾ ಪಾಂಗಳ ರವರ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.

Read More

ಮಂಗಳೂರು: ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಪಿ.ಎಲ್. ಧರ್ಮಾ ಅವರು ನೇಮಕಗೊಂಡಿದ್ದಾರೆ. ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮೀನ್ ಅವರಿಂದ ಅಧಿಕಾರ ಸ್ವೀಕರಿಸಿದರು. ಪ್ರೊ. ಪಿ.ಎಸ್. ಯಡಿಪಡಿತ್ತಾಯ ಅವರ ಕುಲಪತಿ ಅವಧಿ ಮುಗಿದ ಬಳಿಕ ಹುದ್ದೆ ಖಾಲಿಯಾಗಿಯೇ ಉಳಿದಿತ್ತು. ಇದೀಗ ಪಿ.ಎಲ್. ಧರ್ಮಾ ಅವರು ಕುಲಪತಿಯಾಗಿ ನೇಮಕಗೊಂಡಿದ್ದಾರೆ. ಮೂಲತಃ ಮಡಿಕೇರಿಯವರಾದ ಪ್ರೊ. ಪಿ.ಎಲ್. ಧರ್ಮಾ ಅವರು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಪರೀಕ್ಷಾಂಗ ಕುಲಸಚಿವರಾಗಿಯೂ ಕರ್ತವ್ಯ ನಿರ್ವಹಿಸಿದ ಅನುಭವಿ . ಅವರ ಅಧಿಕಾರ ಅವಧಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಗರಿಮೆ ಉತ್ತುಂಗಕ್ಕೆರಲಿ ಎಂದು ತುಳುನಾಡ ರಕ್ಷಣಾ ವೇದಿಕೆ ಶುಭ ಹಾರೈಸುತ್ತದೆ.

Read More

🔹 ಕೈಕಂಬ ಪೇಟೆ ಉಳಿವಿಗಾಗಿ ಪಕ್ಷಾತೀತವಾಗಿ ಹೊರಾಡೋಣ: ಅನ್ವರ್ ಸಾದಾತ್ ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169 ರ ಬಿಕರ್ನಕಟ್ಟೆ-ಸಾಣೂರು ವರೆಗೆ ಚತುಷ್ಪಥ ಕಾಮಗಾರಿಯು ಗುರುಪುರ ಕೈಕಂಬ ಜಂಕ್ಷನ್ ನಲ್ಲಿ ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿದ್ದು ಹಲವಾರು ಸಮಸ್ಯೆಗಳಿಗೆ ಕಾರಣವಾಗುವ ಅಂಡರ್ ಪಾಸ್ ಮಾದರಿಯಾ ಕಾಮಗಾರಿಯನ್ನು ಸ್ಥಗಿತಗೊಳಿಸಿ ಚತುಷ್ಪಥ ಫ್ಲೈ ಓವರ್ ನಿರ್ಮಿಸಲು ಆಗ್ರಹಿಸಿ ಹಕ್ಕೊತ್ತಾಯ ಸಭೆ ಗುರುಪುರ ಕೈಕಂಬ ಜಂಕ್ಷನ್ ನಲ್ಲಿ ನಡೆಯಿತು ಹಕ್ಕೊತ್ತಾಯ ಸಭೆಯನ್ನು ಉದ್ದೇಶಿಸಿ SDPI ದ.ಕ.ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಮಾತನಾಡಿದರು ಗುರುಪುರ ಗ್ರಾಮ ಪಂಚಾಯತ್ ಸದಸ್ಯ ಎ.ಕೆ.ರಿಯಾಝ್ ಅಧ್ಯಕ್ಷತೆ ವಹಿಸಿದ್ದರು ಪ್ರತಿಭಟನಾ ಸಭೆಯಲ್ಲಿ ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಫಾರ ನಾಸೀರ್ SDPI ಗುರುಪುರ ಕೈಕಂಬ ಬ್ಲಾಕ್ ಸಮಿತಿಯ ಅಧ್ಯಕ್ಷ ಅಶ್ರಫ್ ಕೈಕಂಬ, SDPI ಗುರುಪುರ ಗ್ರಾಮ ಸಮಿತಿಯ ಅಧ್ಯಕ್ಷ ಎ.ಕೆ.ಮುಸ್ತಾಪ ಅಡ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಅಶ್ರಫ್ ಅಡ್ಡೂರು, ಝಕರಿಯಾ ಶಾಹೀಕ್, ಮನ್ಸೂರ್ ಟಿಬೆಟ್,ದಿಲ್ಶಾದ್, ಬುಶ್ರಾ, ಮರಿಯಮ್ಮ,ಅಝ್ಮೀನಾ,ರೆಹನಾ…

Read More

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯವು ಹಲವು ತಿಂಗಳುಗಳಿಂದ ತೀವ್ರ ಆರ್ಥಿಕ ಅಡಚಣೆ ಎದುರಿಸುತ್ತಿದೆ ಎಂದು ವರದಿಯಾಗಿವೆ ಹಾಗಾಗಿ ವಿವಿಯ ಆರ್ಥಿಕ ಶ್ವೇತಪತ್ರ ಬಿಡುಗಡೆಗೊಳಿಸಬೇಕು ಎಂದು ಮಂಗಳೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಎಸ್.ಆರ್. ಹರೀಶ್ ಆಚಾರ್ಯ ಮನವಿ ಮಾಡಿದ್ದಾರೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಭವಿಷ್ಯನಿಧಿ ಖಾತೆಗಳಿಗೆ ಬಾಕಿಯಿರುವ ಮೊಬಲಗನ್ನೂ ಹೊಂದಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ವಿಶ್ವವಿದ್ಯಾನಿಲಯ ಇದೆ. ಸಾರ್ವಜನಿಕ ವಲಯದಲ್ಲಿ ವಿಶ್ವವಿದ್ಯಾನಿಲಯದ ಹಣಕಾಸು ನಿರ್ವಹಣೆ ಹಾಗೂ ಆರ್ಥಿಕ ಶಿಥಿಲತೆಯ ಬಗ್ಗೆ ಗಂಭೀರವಾದ ಪ್ರಶ್ನೆಗಳು ಮೂಡಿದೆ. ಈ ಸಂದೇಹಗಳು ನಿವಾರಣೆಯಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯವು ತನ್ನ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರವನ್ನು ಹೊರಡಿಸಬೇಕೆಂದು ಮಂಗಳೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ಮಂಗಳೂರು ವಿಶ್ವವಿದ್ಯಾನಿಲಯವನ್ನು ಒತ್ತಾಯಿಸಿದ್ದಾರೆ. ಹಾಗೆಯೇ ಹಳಿ ತಪ್ಪಿರುವ ವಿಶ್ವವಿದ್ಯಾನಿಲಯದ ಅರ್ಥಿಕ ವ್ಯವಸ್ಥೆಯನ್ನು ಸರಿ ದಾರಿಗೆ ತರುವ ದೃಷ್ಟಿಯಿಂದ ರಾಜ್ಯ ಸರಕಾರವು ಮಧ್ಯ ಪ್ರವೇಶಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ ಮಂಗಳೂರು ವಿಶ್ವವಿದ್ಯಾನಿಲಯಾದಿಂದ ನೇಮಕಾತಿಗೊಂಡು ಕೊಡಗು ವಿಶ್ವ…

Read More

ತುಳುನಾಡ ರಕ್ಷಣಾ ವೇದಿಕೆಉಡುಪಿ ಜಿಲ್ಲಾ ‌ಕಚೇರಿಯಲ್ಲಿ 3-03-2024 ರವಿವಾರ ಸಂಜೆ 3 ಗಂಟೆಗೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ಕಾರ್ಯಕಾರಿ ಸಭೆಯು ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕೇಂದ್ರೀಯ ಮಂಡಳಿ ಅದ್ಯಕ್ಷ – ಸ್ಥಾಪಕರಾದ ಯೋಗಿಶ್ ಶೆಟ್ಟಿ ಜಪ್ಪು ಅವರು ವಹಿಸಿದ್ದರು. ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣ ಕುಮಾರ್ ಸ್ವಾಗತಿಸಿದರು. ಉಡುಪಿ ಜಿಲ್ಲಾ ವೀಕ್ಷಕ ಫ್ರಾಂಕಿ ಡಿಸೋಜ ಕೊಳಲಗಿರಿ ಪ್ರಾಸ್ತವಿಕ ಭಾಷಣಗೈದರು. ಸಭೆಯಲ್ಲಿ ಕಾಪು ತಾಲೂಕು ಘಟಕ ನೂತನ ಅದ್ಯಕ್ಷರಾಗಿ ಹರೀಶ್ ಶೆಟ್ಟಿ ಹಿರಿಯಡ್ಕ ರವರು ಅಯ್ಕೆ ಮಾಡಲಾಯಿತು.ಸಭೆಯಲ್ಲಿಗೌರವ ಸಲಹೆಗಾರರಾದ ಸುಧಾಕರ ಅಮೀನ್ಉಪಾಧ್ಯಕ್ಷರು ಉಮೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಅಜರುದ್ದೀನ್ ಸುಬ್ರಹ್ಮಣ್ಯ ನಗರ, ಜೊತೆ ಕಾರ್ಯದರ್ಶಿಯಾದ ಸುಭಾಷ್ ಸುದನ್,ಸಾಮಾಜಿಕ ಜಾಲತಾಣ ಸಂಚಾಲಕ ರಾಗಿ ರೋಶನ್,ಅಟೋ ಘಟಕ ಅದ್ಯಕ್ಷಅನಿಲ್ ಪೂಜಾರಿ,ಬ್ರಹ್ಮವಾರ ಘಟಕ ಅದ್ಯಕ್ಷ ಸತೀಶ್ ಪೂಜಾರಿ ಕೀಳಂಜೆ,ಪ್ರೀತಮ್,ಮಜೀದ್ , ಹರಿ ಪ್ರಸಾದ್ , ಮಹಿಳಾ ಘಟಕ ಅದ್ಯಕ್ಷೆ ಶೋಭ ಪಾಂಗಳಾ,ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಕಾಪು ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯ ಶೆಟ್ಟಿ,…

Read More