- ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿನೂತನ ರೀತಿಯಲ್ಲಿ ವ್ಯಾಪಾರ ಪರವಾನಿಗೆ ಅದಾಲತ್
- ಉಡುಪಿ ಜಿಲ್ಲಾ ಸಹಕಾರ ಯೂನಿಯನ್ : ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ
- ತುಳು ಭಾಷೆಯ ಸ್ಥಾನಮಾನಕ್ಕೆ ಶ್ರಮಿಸಿದ ಪತ್ರಕರ್ತ ಶಶಿ ಬಂಡಿಮಾರ್ ರವರಿಗೆ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಸಂತಾಪ ಸೂಚಕ ಸಭೆ
- ಫೆ.7 : ತುಳು ಭವನದಲ್ಲಿ ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಸ್ಥಾಪಕ ತುಳುವ ನೇಸರ ಶಶಿ ಆರ್ ಬಂಡಿಮಾರ್ ರವರ ಶ್ರದ್ದಾಂಜಲಿ ಸಭೆ
- ಕುಂದಾಪುರ: ತುಳುನಾಡ ರಕ್ಷಣಾ ವೇದಿಕೆಯಿಂದ ರಾಷ್ಟ್ರಪತಿ ಸೇವಾ ಪದಕ ಪಡೆದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಶಿವಾನಂದ ನಾಯರಿರವರಿಗೆ ಸನ್ಮಾನ
- ಮಂಗಳೂರು : ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ : ಸ್ಥಳ ಮಹಜರು ವೇಳೆ ತಪ್ಪಿಸಲೆತ್ನಿಸಿದ ಮತ್ತೋರ್ವ ಆರೋಪಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು..!
- ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಪ್ರಧಾನ ಸಂಪಾದಕ ಎಸ್ ಆರ್. ಬಂಡಿಮಾರ್ ಅಸ್ತಂಗತ. ಜ. 31 ಮದ್ಯಾಹ್ನ ನಂತರ ಅಂತಿಮ ಸಂಸ್ಕಾರ
- ಅದ್ದೂರಿಯಾಗಿ ನಡೆದ 76 ನೇ ಗಣರಾಜ್ಯೋತ್ಸವ ಸಮಾರಂಭ
Author: Tulunada Surya
ಕರಾವಳಿಯ ಹಲವೆಡೆ ಬೆಳಗ್ಗಿನಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳೂರು ನಗರ ಸೇರಿದಂತೆ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಇನ್ನು ಮುಂದಿನ 3-4 ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ.ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಯಿದ್ದು ದಕ್ಷಿಣ ಕನ್ನಡ, ಉಡುಪಿ ಸೇರಿ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಕೆಲವೆಡೆ ಮಳೆಯಾಗುತ್ತಿದೆ. ಅಲ್ಲದೆ, ಅರಬ್ಬಿ ಸಮುದ್ರದಲ್ಲಿ ಗಂಟೆ ಕರಾವಳಿಯಲ್ಲಿ 40-55ಕಿಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಬೆಳ್ತಂಗಡಿ : ಅಡಿಕೆ ವ್ಯಾಪಾರದ ಅಂಗಡಿಗೆ ಸ್ಕೂಟರಿನಲ್ಲಿ ಬಂದ ಅಪರಿಚಿತರು ಕ್ಯಾಶ್ ಡ್ರಾವರಿನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಎಗರಿಸಿದ ಘಟನೆ ಮಡಂತ್ಯಾರು ಗ್ರಾಮದ ನಾವುಂಡ ಎಂಬಲ್ಲಿ ನಡೆದಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ ಹೋಗುವ ರಸ್ತೆಯಲ್ಲಿ ಅಡಕೆ ವ್ಯಾಪಾರ ಅಂಗಡಿಯನ್ನು ನಡೆಸುತ್ತಿದ್ದು ಜ.1 ರಂದು ಬೆಳಿಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್ ಎಂಬವರಲ್ಲಿ ಕ್ಯಾಷ್ ಡ್ರಾವರ್ ನ ಕೀ ಯನ್ನು ನೀಡಿ, ಅನ್ಯ ಕೆಲಸದ ನಿಮಿತ್ತ ಹೊರಗೆ ಹೋಗಿರುತ್ತಾರೆ. ಮಧ್ಯಾಹ್ನ ಸಮಯ ಅಂಗಡಿಯಲ್ಲಿದ್ದ ಇಸ್ಮಾಯಿಲ್ ಕರೆ ಮಾಡಿ,ಇಬ್ಬರು ಅಪರಿಚಿತರು ಸ್ಕೂಟರಿನಲ್ಲಿ ಅಂಗಡಿಗೆ ಬಂದಿದ್ದುತನ್ನ ಗಮನ ಬೇರೆಡೆಗೆ ಸೆಳೆದು ಕ್ಯಾಷ್ ಡ್ರಾಯರ್ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾರೆ. ಮಾಲೀಕರು ಅಂಗಡಿಗೆ ಬಂದು ಕ್ಯಾಶ್ ಡ್ರಾವರ್ ನ್ನು ಪರಿಶೀಲಿಸಿದಾಗ ಡ್ರಾವರ್ ನಲ್ಲಿದ್ದ ಒಟ್ಟು 2,31,000 ರೂ.ಹಣ ಕಳವಾಗಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 01/2024 ಕಲಂ: 380…
ಬೆಂಗಳೂರು : ಇನ್ಮುಂದೆ ಜಿಲ್ಲಾ ಪಂಚಾಯತ್ ‘CEO’ ಗಳು ವಾರಕ್ಕೊಮ್ಮೆ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡುವುದು ಕಡ್ಡಾಯವಾಗಿದೆ ಎಂದು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು. ಸಿಇಒಗಳ ಜೊತೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದರು. ಸರ್ಕಾರದ ಆದೇಶ, ಸೂಚನೆ ಪಾಲಿಸದೇ ತಮ್ಮದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನೋಟಿಸ್ ನೀಡಬೇಕು ಎಂದು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು. ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ಪರಿಶೀಲಿಸಿದ ಸಚಿವರು ಕೆಲವು ಜಿಲ್ಲೆಗಳಲ್ಲಿ ಪ್ರಗತಿ ಕುಂಠಿತವಾಗಿರುವುದನ್ನು ಗಮನಿಸಿ ತಕ್ಷಣವೆ ಕಾಮಗಾರಿಗಳನ್ನು ಚುರುಕುಗೊಳಿಸಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಸೂಚನೆ ನೀಡಿದರು.
ತುಳುಕೂಟ ಉಡುಪಿ ವತಿಯಿಂದ 22 ನೇ ವರ್ಷದ ಕೆಮ್ಟೂರು ದೊಡ್ಡಣ್ಣ ಶೆಟ್ಟರ ನೆನಪಿನ ತುಳು ನಾಟಕ ಕಾರ್ಯಕ್ರಮ ಜನವರಿ 7 ರಿಂದ 13ರ ವರೆಗೆ ಪ್ರತಿದಿನ ಸಂಜೆ 6.30 ಕ್ಕೆ ಮುದ್ದಣ ಮಂಟಪ, ಎಂ.ಜಿ.ಎಂ ಕಾಲೇಜು ಉಡುಪಿಯಲ್ಲಿ ನಡೆಯಲಿದೆ. ಜನವರಿ 7 ರಂದು ಸಂಜೆ 5 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ನೆರವೇರಿಸಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉದ್ಯಮಿ ಪ್ರಸಾದ್ ರಾಜ್ ಕಾಂಚನ್,ರಜತ ಮಹೋತ್ಸವ ಸಮಿತಿ ತುಳುಕೂಟ ಪುಣೆ ಇದರ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಪುತ್ತೂರು,ಉಡುಪಿ ಕನ್ನಡ ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಇವರು ಪಾಲ್ಗೊಳ್ಳಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳುಕೂಟ ಉಡುಪಿ ಇದರ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ ವಹಿಸಲಿದ್ದಾರೆ.
ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಆಗಿ ಐಪಿಎಸ್ ಅಧಿಕಾರಿ ಅಮಿತ್ ಸಿಂಗ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಅಮಿತ್ ಸಿಂಗ್ ಅವರನ್ನು ಬರಮಾಡಿಕೊಂಡರು. ಅಮಿತ್ ಸಿಂಗ್ ಅವರು ಮಂಗಳೂರು ಮತ್ತು ಪುತ್ತೂರಿನಲ್ಲಿ ಎಎಸ್ಪಿಯಾಗಿ, ಹಾಸನ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ನಾಲ್ಕು ವರ್ಷ ಕಾರ್ಯನಿರ್ವಹಿಸಿದ್ದರು. ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಾದಕ ಪದಾರ್ಥ ಮಾರಾಟ ದಂಧೆ, ಕೋಮು ದ್ವೇಷ ಹರಡುವಿಕೆ ನಿಗ್ರಹಕ್ಕೆ ಆದ್ಯತೆ ನೀಡುತ್ತೇನೆ. ಸೈಬರ್ ಅಪರಾಧ ಚಟುವಟಿಕೆ ನಿಯಂತ್ರಣಕ್ಕೂ ಹೆಚ್ಚಿನ ನಿಗಾ ವಹಿಸಲಾಗುವುದು’ ಎಂದರು. ಹಿಂದಿನ ಡಿಐಜಿ ಚಂದ್ರಗುಪ್ತ ಅವರು ಬೆಂಗಳೂರು ಅಪರಾಧ ವಿಭಾಗದ ಐಜಿಪಿಯಾಗಿ ಬಡ್ತಿ ಪಡೆದಿದ್ದಾರೆ.
ಪುತ್ತೂರು ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆರ್ಲಪದವು ನಿವಾಸಿ, ಮೇಸ್ತ್ರಿ ಕೆಲಸ ಮಾಡುತ್ತಿರುವ ಶಿವಪ್ಪ ನಾಯ್ಕ ಎಂಬವರ ಪುತ್ರ ವಿಜಯ ಕುಮಾರ್ ಎಸ್(25ವ) ಜೀವಾಂತ್ಎಂಯ ಮಾಡಿಕೊಂಡ ಯುವಕನಾಗಿದ್ಬದಾನೆ. ವಿಜಯ್ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಕಾರಣ ತಿಳಿದು ಬಂದಿಲ್ಲ. ತಂದೆಯ ಜೊತೆ ತಾನು ಮೇಸ್ತ್ರಿಯಾಗಿ ಕೆಲಸಕ್ಕೆ ತೆರಳುತ್ತಿದ್ದ ವಿಜಯ್ ಗುತ್ತಿಗೆದಾರರಾಗಿಯೂ ಕೆಲಸ ಮಾಡುತ್ತಿದ್ದರು. ಅವಿವಾಹಿತರಾಗಿದ್ದ ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ , ಸಹೋದರ, ಮತ್ತು ಸಹೋದರಿಯನ್ನು ಅಗಲಿದ್ದಾರೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ನಡೆದಿದೆ. ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ ಯಾರು ಇರಲಿಲ್ಲ. ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ಒಮ್ಮೆಗೆ ಬಲಕ್ಕೆ ತಿರುಗಿದ ಆಂಬುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿ ಮೇಲೆ ಹತ್ತಿ ನಿಂತುಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹೆದ್ದಾರಿ ಬದಿ ಗುಡ್ಡ ಜರಿದು ಬೀಳದಂತೆ ಕಟ್ಟಲಾದ ತಡೆಗೋಡೆಗೆ ಗುದ್ದಿ ಬಳಿಕ ಚರಂಡಿ ಮೇಲೆ ಹತ್ತಿ ನಿಂತುಕೊಂಡಿದೆ. ಘಟನೆಯಿಂದ ಕಾರು ಸಂಪೂರ್ಣ ಜಖಂಗೊಂಡಿದೆ.ಆದರೆ ಅದೃಷ್ಟವಶಾತ್ ಕಾರಿನೊಳಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.ಚಾಲಕ ಸಹಿತ ಮೂವರು ಮಹಿಳೆಯರಿದ್ದು, ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಮಂಗಳೂರು: ಆಯುರ್ವೇದ (B.A.M.S) ವೈದ್ಯರುಗಳ ಬಹುದಿನಗಳ ಬೇಡಿಕೆಯಾದ ಮೂಲ ಪದ್ದತಿಯೊಂದಿಗೆ ಅವಶ್ಯಕ ಪ್ರಾಥಮಿಕ ಹಂತದ ಅಲೋಪತಿ ಔಷಧಗಳನ್ನು ನೀಡಲು ಅನುಮತಿ ಒತ್ತಾಯಿಸಿ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ವತಿಯಿಂದ ಸ್ಥಾಪಕ ಅದ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪು ರವರ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನಸೌಧ ಎದುರು ಕ್ಲಾಕ್ ಟವರ್ ಬಳಿ ದಿನಾಂಕ 03-01-2024 ಬುಧವಾರ ಬೆಳ್ಳಿಗೆ 11.00 ರಿಂದ ಪ್ರತಿಭಟನೆ ಸಭೆ ನಡೆಯಲಿದೆ. ಬಳಿಕ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಮತ್ತು ಇತರರಿಗೆ ಮನವಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಘಟನೆಯ ಪ್ರಮುಖ ಪದಾಧಿಕಾರಿಗಳು ಆಗಮಿಸಲಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇರೆ ಬೇರೆ ಆಯುರ್ವೇದ ವೈದ್ಯರ ಸಂಘ ಹಾಗೂ ಇತರ ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ಪ್ರತಿಭಟನೆ ಹಾಗೂ ಹಕ್ಕೊತ್ತಾಯ ಸಭೆಗಳು ನಡೆಯಲಿವೆ.ಬರುವ ಮೇ ತಿಂಗಳಲ್ಲಿ ವೈದ್ಯರ ಹಲವಾರು ಬೇಡಿಕೆಗಳನ್ನು ಸರಕಾರದ ಗಮನಸೆಳೆಯುವ ದೃಷ್ಟಿಯಿಂದ ಬೃಹತ್ ವೈದ್ಯರ ರಾಜ್ಯಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದು. ಆ ಸಮಾವೇಶ ದಲ್ಲಿ ಸಾವಿರಾರು ವೈದ್ಯರು ಭಾಗವಹಿಸಲಿರುವರು. ಆ…
ನವದೆಹಲಿ: ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ ತುಸು ಇಳಿಕೆಯಾಗಿದೆ. ಈ ಮೂಲಕ ಸರಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿವೆ. ನವದೆಹಲಿಯಲ್ಲಿ, ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಂತಹ ವಿವಿಧ ಸಂಸ್ಥೆಗಳಲ್ಲಿ ಬಳಸುವ ವಾಣಿಜ್ಯ ಸಿಲಿಂಡರ್ನ ಬೆಲೆ ಇಂದಿನಿಂದ 1,755.50 ರೂ.ನಿಂದ 1,757 ರೂಪಾಯಿಗೆ ಇಳಿದಿದೆ. ಇನ್ನು ಮುಂಬೈನಲ್ಲಿ 1,710 ರೂ.ನಿಂದ 1,708.50 ರೂ.ಗೆ ಇಳಿಕೆಯಾಗಿದೆ. ಚೆನ್ನೈನಲ್ಲಿ 5 ರೂ.ಗಳಷ್ಟು ಇಳಿಕೆಯಾಗಿದ್ದು, ಪ್ರಸ್ತುತ ಬೆಲೆ 1,929 ರೂಪಾಯಿಯಿಂದ 1,924 ರೂ.ಗೆ ಇಳಿದಿದೆ. ಇನ್ನು ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 50 ಪೈಸೆ ಏರಿಕೆ ಕಂಡು 1,868.50 ರಿಂದ 1,869 ರೂಪಾಯಿ ಆಗಿದೆ.