What's Hot
- ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒತ್ತು
- ಮಂಗಳೂರು : ಕ್ರಿಸ್ ಮಸ್ ಹಬ್ಬ ಸಮಾಜದಲ್ಲಿ ಸತ್ಯ,ನ್ಯಾಯ ಹಾಗೂ ಸಹ ಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶ ಒದಗಿಸುತ್ತದೆ ; ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ.
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
Author: Tulunada Surya
ಉಡುಪಿ ಬ್ರಹ್ಮಾವರ : ಸೆಪ್ಟೆಂಬರ್ 12 – ಮದುವೆಗೆ ನಿರಾಕರಿಸಿದ ಯುವತಿಗೆ ತನ್ನ ಪ್ರೇಮವನ್ನು ಒತ್ತಾಯಿಸುತ್ತಿದ್ದ ಯುವಕನೊಬ್ಬ ಚಾಕುವಿನಿಂದ ದಾಳಿ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಹಲ್ಲೆಗೆ ಒಳಗಾದ ರಕ್ಷಿತಾ (24) ಎಂಬ ಯುವತಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ದಿನನಿತ್ಯದಂತೆ ಬಸ್ ನಿಲ್ದಾಣದತ್ತ ಹೋಗುತ್ತಿದ್ದ ರಕ್ಷಿತಾ ಅವರ ಹಿಂಬಾಲಿಸಿ ಬಂದ ಆರೋಪಿ ಯುವಕ, ಸ್ಥಳದಲ್ಲೇ ಚಾಕು ಬಳಸಿ ಕುತ್ತಿಗೆಗೆ ಇರಿದಿದ್ದಾನೆ. ತಕ್ಷಣವೇ ರಕ್ತಸ್ರಾವದಿಂದ ಬಿದ್ದುಹೋದ ರಕ್ಷಿತಾ ಅವರನ್ನು ಸ್ಥಳೀಯರು ತಕ್ಷಣವೇ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕ ಯುವತಿಯನ್ನು ಮದುವೆಯಾಗಬೇಕೆಂದು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದ ಯುವತಿ ಹಾಗೂ ಕುಟುಂಬ ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಇಬ್ಬರ ಮಧ್ಯೆ ನಿರಂತರ ಜಗಳ ನಡೆಯುತ್ತಿತ್ತು ಎಂದು ವರದಿಯಾಗಿದೆ. ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ಶೋಧ ಕಾರ್ಯ ಮುಂದುವರೆದಿದೆ. ಹೆಚ್ಚಿನ ಮಾಹಿತಿ ಶೀಘ್ರದಲ್ಲಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾ…
ಮಂಗಳೂರು, ಸೆಪ್ಟೆಂಬರ್ 10: ಮಕ್ಕಳಲ್ಲಿ ಧಾರ್ಮಿಕ ಸಂಸ್ಕಾರ, ಶ್ರೀ ಕೃಷ್ಣನ ಪಾಠ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ, ಕಲ್ಕೂರ ಪ್ರತಿಷ್ಠಾನ ಕಳೆದ 43 ವರ್ಷಗಳಿಂದ ನಿರಂತರವಾಗಿ ಆಯೋಜಿಸುತ್ತಿರುವ ರಾಷ್ಟ್ರಮಟ್ಟದ ‘ಶ್ರೀ ಕೃಷ್ಣ ವೇಷ ಸ್ಪರ್ಧೆ’ ಈ ಬಾರಿ ಸೆಪ್ಟೆಂಬರ್ 14, ಭಾನುವಾರ, ಕೃಷ್ಣಜನ್ಮಾಷ್ಠಮಿಯಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್ ಕುಮಾರ ಕಲ್ಕೂರ ತಿಳಿಸಿದ್ದಾರೆ. ಮಂಗಳೂರಿನ ಬಳ್ಳಾಳ್ ಬಾಗ್‌ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮಕ್ಕಳ ಉತ್ಸವವು ಬೆಳಿಗ್ಗೆ 9.00 ಗಂಟೆಗೆ ‘ಶ್ರೀ ಕೃಷ್ಣ ವರ್ಣ ವೈಭವ’ದೊಂದಿಗೆ ಆರಂಭವಾಗಿ, ಮಧ್ಯಾಹ್ನ 12.00ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ನಂತರ 1.00 ಗಂಟೆಗೆ ನಂದಗೋಕುಲ ವೇದಿಕೆಯಲ್ಲಿ ಶ್ರೀಕೃಷ್ಣ ಜನ್ಮೋತ್ಸವ ಸಮಾರಂಭದ ಉದ್ಘಾಟನೆಯೊಂದಿಗೆ ವೇದಿಕೆ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ ಎಂದು ತಿಳಿಸಿದರು. 43 ವಿಭಾಗಗಳಲ್ಲಿ ಸ್ಪರ್ಧೆಗಳು – 9 ವೇದಿಕೆಗಳಲ್ಲಿ ಏಕಕಾಲದಲ್ಲಿ ಈ ವಿಶ್ವವಿಖ್ಯಾತ ಸ್ಪರ್ಧೆಗಳು 43 ವಿಭಿನ್ನ ವಿಭಾಗಗಳಲ್ಲಿ, 9 ವೇದಿಕೆಗಳಲ್ಲಿ ಏಕಕಾಲದಲ್ಲಿ ನಡೆಯಲಿದ್ದು, ಶ್ರೀ ಮಹಾಗಣಪತಿ…
ಮಂಗಳೂರು, ಸೆಪ್ಟೆಂಬರ್ 10: ವಿದ್ಯಾರ್ಥಿಗಳಲ್ಲಿ ತೀವ್ರ ಮನಃಸ್ಥಿತಿ ಒತ್ತಡ, ದಿಕ್ಕುತೊಡಕು ಮತ್ತು ಭವಿಷ್ಯ ಭೀತಿಯನ್ನು ಕಡಿಮೆ ಮಾಡುವುದು ಹಾಗೂ ಅವರಲ್ಲಿನ ಸಾಮರ್ಥ್ಯವನ್ನು ಬೆಳೆಸುವುದು ಉದ್ದೇಶದಿಂದ ಮಂಗಳೂರಿನಲ್ಲಿ ಪ್ರತಿಯೊಂದು ಪದವಿ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ವೃತ್ತಿಪರ ಕೌನ್ಸಿಲರ್‌ಗಳನ್ನು ನಿಯೋಜಿಸಿ ಕೌನ್ಸಿಲಿಂಗ್ ಸೇವೆ ನೀಡುವ ಯೋಜನೆ ರೂಪಿಸಲಾಗಿದೆ. ಇದೇ ಅಕ್ಟೋಬರ್ ತಿಂಗಳಲ್ಲಿ ಯೋಜನೆ ಪ್ರಾರಂಭವಾಗಲಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ. “ವಿದ್ಯಾರ್ಥಿಗಳು ಜೀವನದ ನಿರ್ಣಾಯಕ ಹಂತದಲ್ಲಿದ್ದಾರೆ. ಈ ಸಂದರ್ಭದಲ್ಲಿ ಮಾರ್ಗದರ್ಶನ ಮತ್ತು ಸಕಾರಾತ್ಮಕ ಮನೋವೈಜ್ಞಾನಿಕ ಬೆಂಬಲ ಅತ್ಯವಶ್ಯಕ. ಪ್ರತಿ ಕಾಲೇಜಿನಲ್ಲಿ ವೃತ್ತಿಪರರ ಮೂಲಕ ಕೌನ್ಸಿಲಿಂಗ್ ನೀಡುವ ಮೂಲಕ ಅವರ ಭವಿಷ್ಯವನ್ನು ಸ್ಪಷ್ಟಗೊಳಿಸುವ ಪ್ರಯತ್ನ ನಡೆಯಲಿದೆ,” ಎಂದು ಅವರು ಹೇಳಿದರು. ಪೋಷಕರಿಗೂ ತರಬೇತಿ – ಯೋಜನೆಗಳ ಮಾಹಿತಿ ನೀಡಲು ಉದ್ದೇಶ ಕೇವಲ ವಿದ್ಯಾರ್ಥಿಗಳಷ್ಟೇ ಅಲ್ಲದೆ, ಅವರ ಪೋಷಕರಿಗೂ ಸ್ವಾವಲಂಬನೆ, ಸ್ವ ಉದ್ಯೋಗ ಮತ್ತು ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಾಗಾರಗಳನ್ನು ಪ್ರತಿಯೊಂದು ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗುವುದು. ಈ…
ಮಂಗಳೂರು, ಸೆ. 9: ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿಯ ಹಾಗೂ ಧಾರ್ಮಿಕ ಆಚರಣೆಗಳ ವಿರುದ್ಧ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿ ಮಂಗಳೂರಿನ ಕದ್ರಿಯ ಗೋರಕ್ಷನಾಥ ಮಂದಿರ ಪಾರ್ಕ್‌ನಲ್ಲಿ ಸೋಮವಾರ ಬೃಹತ್ ಜನಾಗ್ರಹ ಸಭೆ ಜರುಗಿತು. ವಿಶ್ವ ಹಿಂದೂ ಪರಿಷತ್ ಹಾಗೂ ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ವಿವಿಧ ಕ್ಷೇತ್ರಗಳ ನೂರಾರು ಕಲಾವಿದರು ಹಾಗೂ ಸಾರ್ವಜನಿಕರು ಭಾಗವಹಿಸಿದರು. ಸಾಂಸ್ಕೃತಿಕ ಕ್ಷೇತ್ರದ ಹಕ್ಕಿಗಾಗಿ ಕಲಾವಿದರಿಂದ ಒಗ್ಗಟ್ಟು ಯಕ್ಷಗಾನ, ನಾಟಕ, ದೈವ ಆರಾಧನೆ, ಸಂಗೀತ, ತುಳು ಸಿನಿರಂಗದ ಕಲಾವಿದರು, ಸಾರ್ವಜನಿಕ ಉತ್ಸವ ಸಮಿತಿಗಳ ಪ್ರತಿನಿಧಿಗಳು ಹಾಗೂ ಸಂಗೀತ-ಸೌಂಡ್ ಕ್ಷೇತ್ರದ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಾನೂನು ನೆಪದಲ್ಲಿ ಅಡ್ಡಿ ಒಡ್ಡುತ್ತಿರುವ ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿದರು. “ಧಾರ್ಮಿಕತೆಯ ವಿರುದ್ಧದ ದಬ್ಬಾಳಿಕೆ” – ಹರಿನಾರಾಯಣ ಅಸ್ರಣ್ಣ ಕಟೀಲು ಹರಿನಾರಾಯಣ ಅಸ್ರಣ್ಣ ಮಾತನಾಡುತ್ತಾ, “ರಾತ್ರಿ 10.30 ನಂತರ ಧಾರ್ಮಿಕ ಕಾರ್ಯಕ್ರಮ ನಡೆಸದಂತೆ ನಿರ್ಬಂಧಿಸುವುದು…
ಉಪ್ಪಿನಂಗಡಿ: ‘ಸಮಾಜದ ಬೇರೆ ಬೇರೆ ರಂಗಗಳಲ್ಲಿ ತಮ್ಮಿಂದಾದ ಕೊಡುಗೆ ನೀಡಿ ಗತಿಸಿ ಹೋದ ಹಿರಿಯರನ್ನು ಎಂದಿಗೂ ಮರೆಯಲಾಗದು. ಕನಿಷ್ಠಪಕ್ಷ ಅವರ ಕುಟುಂಬದವರಿಗಾದರೂ ಅದು ನೆನಪಿರಬೇಕು. ಅದರಲ್ಲೂ ಯಕ್ಷಗಾನದಂತಹ ಶ್ರೇಷ್ಠ ಕಲೆಗಾಗಿ ಶ್ರಮಿಸಿದ ಸಾಧಕರಿಗೆ ಇಡೀ ಸಮಾಜವೇ ಒಂದು ಕುಟುಂಬ. ಅಂಥವರ ನೆನಪಿಂದ ಉಳಿದವರ ಬದುಕು ಸ್ಮರಣೀಯವಾಗುತ್ತದೆ; ಅದುವೇ ಮುಂದಿನವರಿಗೆ ಮಾದರಿಯಾಗಬಲ್ಲುದು’ ಎಂದು ಕರ್ನಾಟಕ ಜಾನಪದ,ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ.ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾ ಮಂಟಪದಲ್ಲಿ ಜರಗಿದ ‘ಶ್ರೀ ಮಹಾಭಾರತ ಸರಣಿ ಸುವರ್ಣ ಶತಕ ತಾಳಮದ್ದಳೆ’ ಕಾರ್ಯಕ್ರಮದ ವೇದಿಕೆಯಲ್ಲಿ ಸೆಪ್ಟೆಂಬರ್ 7ರಂದು ಹರಿಹರ ಪಲ್ಲತಡ್ಕ ದಿ.ನೀಲಾವತಿ ಮತ್ತು ಪದ್ಮನಾಭ ಕೊಂಬೋಟು ದಂಪತಿಯ ಸಂಸ್ಮರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಹಿರಿಯ ಅರ್ಥಧಾರಿ ಗೋಪಾಲ ಶೆಟ್ಟಿ ಕಳೆಂಜ ಅವರಿಗೆ ಪ್ರಥಮ ವರ್ಷದ ‘ನೀಲಪದ್ಮ ಯಕ್ಷಪ್ರಶಸ್ತಿ’…
ಒಂದುವರೆ ವರ್ಷದಲ್ಲಿ ಸಂಪೂರ್ಣ ಖುರ್ ಆನನ್ನು ಕೈ ಬರಹದ ಮೂಲಕ ರಚಿಸಿ ಸಾಧನೆಗೈದ ಈ ಬಾಲಕಿ ಹಾಸನದ ಅಬ್ದುಲ್ ಹಮೀದ್ ಯಾಸ್ಮೀನ್ ದಂಪತಿಗಳ ಸುಪುತ್ರಿ.ಕ್ಯಾಲಿಗ್ರಫಿ ಮೂಲಕ ಕುರಾನಿನ ಆಯತ್ ಗಳನ್ನು ಬರೆಯುತ್ತಿದ್ದ ಈ ಬಾಲಕಿಗೆ ಸಂಪೂರ್ಣ ಕುರಾನನ್ನು ಕೈ ಬರಹದ ಮೂಲಕ ಬರೆಯಬೇಕೆಂಬ ಹಂಬಲವುಂಟಾಯಿತು.ತನ್ನ ಹೆತ್ತವರೂ ಇದಕ್ಕೆ ಪ್ರೋತ್ಸಾಹ, ಸಹಕಾರ ನೀಡಿದಾಗ ಈ ಪುಣ್ಯ ಕಾರ್ಯವನ್ನು ಆರಂಭಿಸಿದ್ದಳು.6000 ಕ್ಕೂ ಮಿಕ್ಕಿದ ಶ್ಲೋಕಗಳನ್ನು ( ಆಯತ್ ಗಳನ್ನು ) ಅರಬಿ ಲಿಪಿಯಲ್ಲಿ ಬರೆಯುವುದೆಂದರೆ ಅದು ಸಾಮಾನ್ಯ ಸಾಧನೆಯಲ್ಲ. ಪವಿತ್ರ ಖುರ್‌ಆನ್ ಆದ್ದರಿಂದ ಒಂದು ಅಕ್ಷರ, ಚುಕ್ಕೆ, ಸಂಕೇತ ಕೂಡಾ ತಪ್ಪದಂತೆ ಬಹಳ ನಿಗಾ ವಹಿಸಿ ಬರೆಯಬೇಕಾಗುತ್ತದೆ. ಇಂತಹ ಅಮೋಘ ಸಾಧನೆಯನ್ನು ಮಾಡಿರುವ ಈ ಕಿಶೋರಿಯ ಪ್ರಯತ್ನ ನಿಜಕ್ಕೂ ಅದ್ಭುತ.ಒಂದುವರೆ ವರ್ಷಗಳ ಕಾಲ ತನ್ನ ತೀರ್ವ ಪರಿಶ್ರಮದಿಂದ ಬರೆಯುತ್ತಾ ಬರುತ್ತಿದ್ದ ಈ ಹುಡುಗಿಗೆರಬೀಉಲ್ ಅವ್ವಲ್ ತಿಂಗಳ ಹನ್ನೆರಡನೇ ದಿನದ ಮೊದಲು ಇದನ್ನು ಸಂಪೂರ್ಣವಾಗಿ ಬರೆದು ಮುಗಿಸಬೇಕೆಂದು ಛಲ ಹುಟ್ಟಿಕೊಂಡಿತ್ತು. ಆದ್ದರಿಂದ ಹಲವು ರಾತ್ರಿ ನಿದ್ದೆಗೆಟ್ಟು…
ಮಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ತುಳು ಚಿತ್ರ ‘ಪಿದಾಯಿ’ ಸೆಪ್ಟೆಂಬರ್ 12ರಂದು ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ನಟಿ ರೂಪಾ ವರ್ಕಾಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ‘ನಮ್ಮ ಕನಸು’ ಬ್ಯಾನರ್‌ನಲ್ಲಿ ಕೆ. ಸುರೇಶ್ ನಿರ್ಮಿಸಿರುವ ಈ ಚಿತ್ರಕ್ಕೆ ಕಥೆ ರಚಿಸಿರುವುದು ರಮೇಶ್ ಶೆಟ್ಟಿಗಾರ್. ಚಿತ್ರವು ಕೊಲ್ಕತ್ತಾ, ಸಿಮ್ಲಾ, ಜಾರ್ಖಂಡ್ ಹಾಗೂ ಕ್ಯಾಲಿಫೋರ್ನಿಯಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಅಧಿಕೃತ ಆಯ್ಕೆಗೊಂಡಿದೆ. ಜೊತೆಗೆ, 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಪಿದಾಯಿ’ ಚಿತ್ರವು ಭಾರತೀಯ ಹಾಗೂ ಕನ್ನಡ ವಿಭಾಗಗಳಲ್ಲಿ ಸ್ಪರ್ಧೆಗಿಳಿದು, ಎರಡನೇ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗಳಿಸಿದೆ. ಇದು ತುಳು ಚಿತ್ರರಂಗಕ್ಕೆ ಬಹುಮಾನೀಯ ಸಾಧನೆ. ಅಭಿನಯ ತಾರಾಗಣ: ಚಿತ್ರದ ಪ್ರಮುಖ ಪಾತ್ರದಲ್ಲಿ ಕನ್ನಡದ ಖ್ಯಾತ ನಟ ಶರತ್ ಲೋಹಿತಾಶ್ವರ್ ಅವರು ಅಭಿನಯಿಸಿದ್ದು, ಅವರೊಂದಿಗೆ ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೋಳ್ಳಾರ್, ರೂಪಶ್ರೀ ವರ್ಕಾಡಿ, ಇಳಾ ವಿಟ್ಲ, ದೇವಿ ನಾಯರ್, ಪ್ರೀತೇಶ್ ಕುಮಾರ್, ಅನಿಲ್ ರಾಜ್ ಉಪ್ಪಳ, ರವಿ ವರ್ಕಾಡಿ, ಡಿ.ಬಿ.ಸಿ…
ಮಂಗಳೂರು: ಅಖಿಲ ಭಾರತ ತುಳು ಒಕ್ಕೂಟದ ಮಹಾಸಭೆಯು ಸಪ್ಟೆಂಬರ್ 21 ಆದಿತ್ಯವಾರ ಕಾವೂರು ಗಾಂಧಿನಗರದಲ್ಲಿರುವ ಮುಗ್ರೋಡಿ ಎನ್‌ಕ್ಲೇವ್‌ನ ಒಕ್ಕೂಟದ ಕಛೇರಿ ಸಭಾಂಗಣದಲ್ಲಿ ಬೆಳಿಗ್ಗೆ 10.30ರಿಂದ ಅಧ್ಯಕ್ಷ ಎ.ಸಿ. ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು ಎಂದು ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಯಿತು.ಅಖಿಲ ಭಾರತ ತುಳು ಒಕ್ಕೂಟ ದೇಶ ವಿದೇಶಗಳಲ್ಲಿ 48 ತುಳು ಸೇವಾ ಸಂಘ ಸಂಸ್ಥೆಗಳು ಇದರ ಸದಸ್ಯರಾಗಿ ತಮ್ಮ ತಮ್ಮ ಕ್ಷೇತ್ರದಲ್ಲಿ ನಿರಂತರ ತುಳು ಸಂಬಂಧಿ ಚಟುವಟಿಕೆಗಳನ್ನು ನಡೆಸುತ್ತಾ ತುಳು ಭಾಷೆ, ಸಂಸ್ಕೃತಿ, ಸಂಪ್ರದಾಯ, ಅಭಿವೃದ್ಧಿಯನ್ನು ಬೆಳೆಸುವಲ್ಲಿ ತಮ್ಮನ್ನು ತೊಡಗಿಸಿ ಯಶಸ್ವಿಗೊಳಿಸಿದ್ದಾರೆ.ಮಹಾಸಭೆಯಲ್ಲಿ ಮುಖ್ಯವಾಗಿ ತುಳು ಭಾಷೆಗೆ ಮಾನ್ಯತೆ, ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಖಿಲ ಭಾರತ ತುಳು ಒಕ್ಕೂಟ ಜಂಟಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಳು ಭಾಷೆ ಶಾಲಾ ಕಾಲೇಜಿನ ಸಂಖ್ಯೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ಚರ್ಚಿಸಿ, ಸೂಕ್ತ ರೂಪುರೇಷೆ ಹಾಗೂ ನಿರ್ಧಾರವನ್ನು ತೆಗೆದುಕೊಳ್ಳಲಿದೆ.ಅಖಿಲ ಭಾರತ ತುಳು ಒಕ್ಕೂಟ ಹಾಗೂ ಇದರ ಸದಸ್ಯ ಕೂಟಗಳು 25-26 ಸಾಲಿನಲ್ಲಿ ಹಮ್ಮಿಕೊಳ್ಳಲಿರುವ…
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಮ್ಮ ಕ್ಷೇತ್ರದವರೇ ಆಗಿರುವ ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪೈಸ್ ರವರನ್ನು ಅಭಿನಂದಿಸಲಾಯಿತು. ಇವರು ನಗರದ ಬಿಕರ್ನಕಟ್ಟೆಯ ನಾಲ್ಯಪದವು ಶಾಲೆಯಲ್ಲಿ ಹಲವು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ, ಪ್ರಸ್ತುತ ಈಗ ಬಂಟ್ವಾಳ ತಾಲೂಕಿನ ದೇವಸ್ಯ ಪಡೂರು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಈ ಬಾರಿ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯು ದೊರಕಿರುತ್ತದೆ. ಈ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಂಡಲದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ, ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ರಾವ್, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಮಹಿಳಾ ಮೋರ್ಚಾ ದ ಪ್ರಭಾರಿ ಶ್ರೀಮತಿ ಸಂಧ್ಯಾ ವೆಂಕಟೇಶ್, ಆ ಭಾಗದ ನಿಕಟಪೂರ್ವ ಮನಪಾ ಸದಸ್ಯರಾದ ಕಿಶೋರ್ ಕೊಟ್ಟಾರಿ, ಪೂರ್ವ…
ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಶಾಸಕ ವೇದವ್ಯಾಸ ಕಾಮತ್ ರವರು ಪುಷ್ಪ ನಮನಗಳನ್ನು ಸಲ್ಲಿಸಿದರು. ನಂತರ ಮಾತನಾಡಿದ ಅವರು, ಪೂಜ್ಯರು ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಹಿಂದುಳಿದವರ ಸಹಿತ ಸರ್ವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ಸಂತ. ಕೇರಳದಲ್ಲಿ ಹುಟ್ಟಿದ ಅವರು ಅಲ್ಲಿನ ಅವ್ಯವಸ್ಥೆಯ ವಿರುದ್ಧ ಹಿಂದೂ ಸಮಾಜವನ್ನು ಎಚ್ಚರಿಸುವ ಕಾರ್ಯ ಮಾಡಿದ್ದರು. ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಪೂಜ್ಯರ ಗೌರವಾರ್ಥ ಮಂಗಳೂರಿನ ಹೃದಯ ಭಾಗದಲ್ಲಿ ನಾರಾಯಣಗುರು ವೃತ್ತವನ್ನು ನಿರ್ಮಿಸಲಾಗಿತ್ತಲ್ಲದೇ ಕುದ್ರೋಳಿಗೆ ಸಾಗುವ ರಸ್ತೆಗೆ ಗೋಕರ್ಣನಾಥ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ನಂತರ ಉರ್ವದಲ್ಲಿ ಗುರುಗಳ ಸುಂದರವಾದ ಮಂದಿರ ಕಟ್ಟಲಾಗಿತ್ತು. ಅಲ್ಲದೇ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನೂ ಸಹ ಅಸ್ತಿತ್ವಕ್ಕೆ ತರಲಾಗಿತ್ತು ಎಂದರು. ಆದರೆ ಕಳೆದ ಎರಡೂವರೆ ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ನಾರಾಯಣ ಗುರು ಅಭಿವೃದ್ಧಿ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
