Author: Tulunada Surya

ಮಂಗಳೂರು : ಮಂಗಳೂರು ನಗರದ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಸುನೀಲ್ ಎಂಬಾತನನ್ನು ಬರ್ಕೆ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಸೆಪ್ಟೆಂಬರ್ 1ರಂದು ಸಂಜೆ 4 ಗಂಟೆ ಸಮಯದಲ್ಲಿ ಬಾತ್ಮಿದಾರರಿಂದ ಬಂದ ಖಚಿತ ಮಾಹಿತಿಯ ಮೇರೆಗೆ ಬರ್ಕೆ ಠಾಣೆಯ ಉಪನಿರೀಕ್ಷಕ ವಿನಾಯಕ ರವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಮಂಗಳೂರಿನ ಸುಲ್ತಾನ್ ಬತ್ತೇರಿಯಲ್ಲಿ KA-19 HJ1184 ಸಂಖ್ಯೆಯ ಬಿಳಿ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ಸುನೀಲ್ ಎಂಬಾತನು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಬಂಧಿಸಲಾಯಿತು. ಬಂಧಿತನಿಂದ ಒಟ್ಟು 1 ಕಿಲೋ 394 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಇದು ವಾಣಿಜ್ಯ ಪ್ರಮಾಣದ ಮಾದಕ ವಸ್ತುವಾಗಿ ಗುರುತಿಸಲಾಗಿದೆ. ಆರೋಪಿಯು ಯಾವುದೇ ಪರವಾನಿಗೆ ಇಲ್ಲದೇ, NDPS (Narcotic Drugs and Psychotropic Substances Act) ಕಾಯ್ದೆ ಉಲ್ಲಂಘಿಸಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ವಶದಲ್ಲಿರುವ ಸೊತ್ತುಗಳ ವಿವರ: 25 ಗ್ರಾಂ ತೂಕದ ಗಾಂಜಾ ಪ್ಯಾಕೆಟ್ –…

Read More

ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ, ಪ್ರಜ್ವಲ್ ಶೆಟ್ಟಿ ನಿರ್ಮಾಣ ಮತ್ತು ಕೀರ್ತನ್ ಭಂಡಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು 2026ರ ಜನವರಿಯಲ್ಲಿ ಕರ್ನಾಟಕದಾದ್ಯಂತ ಹಾಗೂ ವಿದೇಶಗಳಲ್ಲಿಯೂ ತೆರೆಕಾಣಲಿದೆ. ತುಳು ಚಲನಚಿತ್ರರಂಗದಲ್ಲಿ ಬೃಹತ್ ಬಜೆಟ್‌ನಲ್ಲಿ ನಿರ್ಮಿತವಾಗುತ್ತಿರುವ ಈ ಚಿತ್ರವು ಕ್ರಿಕೆಟ್ ಆಟ ಮತ್ತು ಆಟಗಾರರ ಬದುಕಿನ ಹಿನ್ನಲೆಯನ್ನು ಆಧಾರವಾಗಿ ಹೊಂದಿದೆ. ಹಾಸ್ಯ, ಪ್ರೇಮಭಾವನೆ ಹಾಗೂ ಪ್ರಭಾವಶಾಲಿ ಸಮಾಜಮುಖಿ ಸಂದೇಶವನ್ನು ಒಳಗೊಂಡಿರುವ ಈ ಕಥೆ ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ. ಪ್ರಥಮ ನಿರ್ದೇಶನ – ಕೀರ್ತನ್ ಭಂಡಾರಿ ಚಿತ್ರದ ಕಥೆ ಹಾಗೂ ಚಿತ್ರಕಥೆಯನ್ನು ಬರೆದು ನಿರ್ದೇಶನದ ಹೊಣೆ ಹೊತ್ತಿರುವ ಕೀರ್ತನ್ ಭಂಡಾರಿಗೆ ಇದು ಪ್ರಥಮ ನಿರ್ದೇಶನ. ಮಂಗಳೂರು ಹಾಗೂ ಸುತ್ತಮುತ್ತಲಿನ ಸ್ಥಳಗಳಲ್ಲಿ ಬಹುಪಾಲು ಚಿತ್ರೀಕರಣ ನಡೆದಿದ್ದು, ನೈಸರ್ಗಿಕ ಸೌಂದರ್ಯವನ್ನು ಚಿತ್ರದಲ್ಲಿ ಮೂಡಿಸಲಾಗಿದೆ. ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ, ಈ ಚಿತ್ರದಲ್ಲಿ ಪ್ರಮುಖ ಪಾತ್ರವನ್ನೂ ನಿರ್ವಹಿಸುತ್ತಿದ್ದಾರೆ. ಪ್ರಮುಖ ತಾರಾಗಣ ಚಿತ್ರದಲ್ಲಿ ವಿನಿತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್,…

Read More

ತುಳು ಭಾಷೆ – ಸಂಸ್ಕೃತಿಯ ನೈಜ ಹೋರಾಟಗಾರ ನಿಸರ್ಗ: ಭಾಸ್ಕರ ರೈ ಕುಕ್ಕುವಳ್ಳಿ ಮಂಗಳೂರು: ‘ತುಳುನಾಡು, ನುಡಿ ಮತ್ತು ಸಂಪ್ರದಾಯಗಳ ರಕ್ಷಣೆಗಾಗಿ ಪಣತೊಟ್ಟು ಹೋರಾಡಿದ ಅನೇಕ ವ್ಯಕ್ತಿಗಳು ಮತ್ತು ಸಂಘಟನೆಗಳು ನಮ್ಮಲ್ಲಿವೆ. ತುಳು ಚಳುವಳಿಯ ವಿವಿಧ ಹಂತಗಳಲ್ಲಿ ಕೆಲಸ ಮಾಡಿದ ಹಿರಿಯರೆಲ್ಲ ಗತಿಸಿ ಹೋಗಿದ್ದಾರೆ. ಯಾವುದಕ್ಕೂ ಒಂದು ತಾರ್ಕಿಕ ಅಂತ್ಯ ಈ ವರೆಗೆ ಲಭಿಸಿಲ್ಲವಾದರೂ ತುಳು ಭಾಷೆ ಮತ್ತು ಸಂಸ್ಕೃತಿಯ ಪ್ರಸರಣಕ್ಕೆ ಪ್ರಾಮಾಣಿಕವಾಗಿ ದುಡಿದವರು ಸದಾ ಸ್ಮರಣೀಯರು. ಅಂಥವರಲ್ಲಿ ಮೂರು ದಶಕಗಳಷ್ಟು ಕಾಲ ಕುಡ್ಲ ತುಳುಕೂಟದ ಚುಕ್ಕಾಣಿ ಹಿಡಿದು ಹಲವಂಗಗಳಲ್ಲಿ ಕೆಲಸ ಮಾಡಿದ ದಾಮೋದರ ನಿಸರ್ಗರು ತುಳು ಭಾಷೆ ಮತ್ತು ಸಂಸ್ಕೃತಿಯ ನೈಜ ಹೋರಾಟಗಾರರು’ ಎಂದು ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಬಿ.ದಾಮೋದರ ನಿಸರ್ಗ ಸಂಸ್ಮರಣ ಸಮಿತಿ ವತಿಯಿಂದ ಅಗೊಸ್ತು 31ರಂದು ಭಾನುವಾರ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಜರಗಿದದ್ವಿತೀಯ ಸಂಸ್ಮರಣ ಸಮಾರಂಭದಲ್ಲಿ ಅವರು ಸಂಸ್ಮರಣಾ ಭಾಷಣ…

Read More

ಮಂಗಳೂರು, ಸೆಪ್ಟೆಂಬರ್ 2: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆಯ ಮಧ್ಯೆ ಬೃಹತ್ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಏರ್ ಇಂಡಿಯಾ SATS ಕಂಪೆನಿಯ ಐದು ಮಂದಿ ಸಿಬ್ಬಂದಿಯನ್ನು, ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗೇಜ್ ನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಆರೋಪದಲ್ಲಿ ಬಂಧಿಸಲಾಗಿದೆ. ಘಟನೆ ವಿವರ: ಆಗಸ್ಟ್ 30ರಂದು ಬೆಂಗಳೂರು ಮೂಲದ ಮಹಿಳಾ ಪ್ರಯಾಣಿಕರು, AIR INDIA EXPRESS ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ್ದರು. ಬಜಪೆ ವಿಮಾನ ನಿಲ್ದಾಣದ ಬ್ಯಾಗೇಜ್ ಬೇಲ್ಟ್‌ನಿಂದ ಲಗೇಜ್ ಪಡೆದು ಪರಿಶೀಲಿಸಿದ ವೇಳೆ, ಅದರಲ್ಲಿ ಇಡಲಾಗಿದ್ದ 56 ಗ್ರಾಂ ಚಿನ್ನಾಭರಣ (ಅಂದಾಜು ಮೌಲ್ಯ ₹4.5 ಲಕ್ಷ) ಕಾಣೆಯಾಗಿದ್ದಿತು. ಪ್ರಯಾಣಿಕರು ಕೂಡಲೇ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು. ಪ್ರಕರಣವನ್ನು ಅ.ಕ್ರ. 157/2025 ಕಲಂ 303(2) ಬಿ.ಎನ್.ಎಸ್ ಅಡಿಯಲ್ಲಿ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದರು. ಬಂಧಿತ ಆರೋಪಿಗಳು: ಪೊಲೀಸರ ತನಿಖೆಯಲ್ಲಿ, ಏರ್ ಇಂಡಿಯಾ SATS ಕಂಪೆನಿಯಲ್ಲಿ ಲೋಡರ್ ಹಾಗೂ ಅನ್ಲೋಡರ್ ಗಳಾಗಿ ಕೆಲಸ…

Read More

ಮಂಗಳೂರು: ಲಯನ್ಸ್ ಕ್ಲಬ್ ಆಫ್ ಮಂಗಳೂರು ಬಲ್ಮಠ ದ ವತಿಯಿಂದ ಜಿಲ್ಲಾ ಗವರ್ನರ್ ಲಯನ್ ಅರವಿಂದ್ ಶೆಣೈ (PMJF D1) ಅವರ ಭೇಟಿಯನ್ನು ಆಗಸ್ಟ್ 28 ರಂದು ಸಂಜೆ 7.30ಕ್ಕೆ ಕದ್ರಿಯ ಅಶೋಕ ಸೇವಾ ಭವನದಲ್ಲಿ ಸಂಭ್ರಮದಿಂದ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಎರಡು ಹೊಸ ಸದಸ್ಯರನ್ನು ಕ್ಲಬ್‌ಗೆ ಸೇರ್ಪಡೆಗೊಳಿಸಲಾಯಿತು. ಹಲವು ಜನಪರ ಸೇವಾ ಚಟುವಟಿಕೆಗಳನ್ನು ಈ ದಿನ ಹಮ್ಮಿಕೊಳ್ಳಲಾಗಿತ್ತು. ಅಕ್ಷಯಪಾತ್ರ ಫೌಂಡೇಶನ್, ಪಶ್ಚಿಮ ರಿಹ್ಯಾಬ್ ಟ್ರಸ್ಟ್ ಮತ್ತು ಬೆತೆರೆಮ್ ಸಂಸ್ಥೆಗಳಿಗೆ ದೇಣಿಗೆಯನ್ನು ನೀಡಲಾಯಿತು. ಲಿಟಲ್ ಸಿಸ್ಟರ್ಸ್ ಆಫ್ ದಿ ಪೂರ್, ಚೆಷೈರ್ ಹೋಮ್ ಮತ್ತು ಸಂವೇದನಾ ಸಂಸ್ಥೆಗಳಿಗೆ ಒಟ್ಟು 300 ಕೆ.ಜಿ ಅಕ್ಕಿಯನ್ನು ದಾನವಾಗಿ ನೀಡಲಾಯಿತು. ಒಟ್ಟು ₹1,60,000 ಮೌಲ್ಯದ ಸೇವಾ ಚಟುವಟಿಕೆಗಳು ಈ ಸಂದರ್ಭದಲ್ಲಿ ಅನುಷ್ಠಾನಗೊಂಡವು. ಜಿಲ್ಲಾ ಗವರ್ನರ್ ಅರವಿಂದ್ ಶೆಣೈ ಅವರ ಜನ್ಮದಿನದ ಜೊತೆಗೆ, ಇತರ ಸದಸ್ಯರ ಹುಟ್ಟುಹಬ್ಬಗಳು ಮತ್ತು ವಾರ್ಷಿಕೋತ್ಸವಗಳನ್ನು ಸಹ ಈ ಸಂದರ್ಭದಲ್ಲಿ ಆಚರಿಸಲಾಯಿತು. ನಮ್ಮ ಜಿಲ್ಲೆಯ ಪ್ರಥಮ ಮಹಿಳಾ ಲಯನ್ ಆಗಿರುವ 90 ವರ್ಷ…

Read More

ಮುಂಬೈ, ಸೆಪ್ಟೆಂಬರ್ 2: ಜಯ ಸುವರ್ಣ ಸಂಸ್ಮರಣೆಯ ಅಂಗವಾಗಿ ಪ್ರದಾನವಾಗುವ ‘ಜಯ ಸಿ ಸುವರ್ಣ ಜನಸೇವಾ ಪುರಸ್ಕಾರ ಶಿವಗಿರಿ ಸನ್ಮಾನ ಪ್ರಶಸ್ತಿ ಗೆ’ಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ, ಸೆಪ್ಟೆಂಬರ್ 7 ರಂದು (ಭಾನುವಾರ) ಮುಂಬೈಯ ಗೋರೆಗಾಂವ್ ಪೂರ್ವದ ಜಯಲೀಲಾ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ, ಗಣ್ಯರ ಸಮ್ಮುಖದಲ್ಲಿ ಪ್ರದಾನವಾಗಲಿದೆ. ಈ ಸಮಾರಂಭವನ್ನು ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ಸಂಯುಕ್ತವಾಗಿ ಆಯೋಜಿಸಿದ್ದಾರೆ. ಐಕಳ ಹರೀಶ್ ಶೆಟ್ಟಿ ಅವರು ವಿಶ್ವಮಟ್ಟದಲ್ಲಿ ಸಮಾಜಸೇವೆಯ ಮೂಲಕ ಖ್ಯಾತಿ ಪಡೆದವರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯೊಂದಿಗೆ ನೂರಕ್ಕೂ ಅಧಿಕ ಗೌರವಗಳು, ಸನ್ಮಾನಗಳು ಹಾಗೂ ಪುರಸ್ಕಾರಗಳನ್ನು ಪಡೆದಿರುವ ಶೆಟ್ಟಿ ಅವರು, ತಮ್ಮ ಸಂಘಟನಾ ಕೌಶಲ್ಯ ಹಾಗೂ ಜನಪರ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಮಹತ್ವಪೂರ್ಣ ಸ್ಥಾನ ಪಡೆಯುತ್ತಿದ್ದಾರೆ. ಅವರ ಈ ಸೇವಾಭಾವನೆಗೆ ಗೌರವವಾಗಿ ಈ ಬಾರಿ ಪುರಸ್ಕಾರಕ್ಕೆ ಆಯ್ಕೆ…

Read More

ಮಂಗಳೂರು: ಕೊಣಾಜೆ ಪೊಲೀಸರು ಭಾನುವಾರ ಅಕ್ರಮ ಮದ್ಯ ಉತ್ಪಾದನೆಯಲ್ಲಿ ತೊಡಗಿದ್ದ ಮನೆಯ ಮೇಲೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನುಷ್ ಆರ್ (24) ಎಂದು ಗುರುತಿಸಲಾಗಿದೆ. ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವಿನಲ್ಲಿರುವ ಶ್ರೀ ದುರ್ಗಾ ಕಾಳಿ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ಮನೆಯಲ್ಲಿ ಥಾಮಸ್ ಮತ್ತು ಮಣಿಕುಟ್ಟನ್ ಜೊತೆಗೆ ಈ ಇಬ್ಬರು ಅಕ್ರಮ ಮದ್ಯ ವ್ಯವಹಾರದಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ

Read More

ಪೂರ್ವ ಅಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೂಕಂಪದ ಪರಿಣಾಮ; ಕುನಾರ್ ಪ್ರಾಂತ್ಯದಲ್ಲಿ ಭಾರಿ ಹಾನಿ ಕಾಬೂಲ್ :ಭಾನುವಾರ ರಾತ್ರಿ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 600 ಕ್ಕಿಂತಲೂ ಹೆಚ್ಚು ಜನರು ಸಾವನ್ನಪ್ಪಿದ್ದು, 1,400 ಕ್ಕಿಂತ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಬಲ ಕಂಪನಗಳು ಪಾಕಿಸ್ತಾನ ಮತ್ತು ಉತ್ತರ ಭಾರತದವರೆಗೆ ಅನುಭವಿಸಲ್ಪಟ್ಟಿದ್ದು, ದೆಹಲಿ-ಎನ್‌ಸಿಆರ್ ಸೇರಿ ಹಲವಾರು ನಗರಗಳಲ್ಲಿ ಬಲವಾದ ತೀವ್ರತೆ ದಾಖಲಾಗಿದೆ. ಭೂಕಂಪದ ಪ್ರಮುಖ ವಿವರಗಳು: ತೀವ್ರತೆ: ರಿಕ್ಟರ್ ಮಾಪಕದಲ್ಲಿ 6.0 ಸಮಯ: ಸ್ಥಳೀಯ ಸಮಯ ರಾತ್ರಿ 11:47 (ಭಾರತೀಯ ಸಮಯ 12:47 AM) ಆಳ: 160 ಕಿಲೋಮೀಟರ್ ಕೇಂದ್ರಬಿಂದು: ನಂಗರ್ಹಾರ್ ಪ್ರಾಂತ್ಯದ ಜಲಾಲಾಬಾದ್‌ನಿಂದ ಈಶಾನ್ಯಕ್ಕೆ 27 ಕಿ.ಮೀ ದೂರ ಭೂಕಂಪದ ನಂತರ 13 ಮರುಕಂಪಗಳು ಸಂಭವಿಸಿದ್ದು, ಅವುಗಳಲ್ಲಿ ಕೆಲದನ್ನು 5.0 ರ ತೀವ್ರತೆಗೂ ದಾಖಲಿಸಲಾಗಿದೆ. ಕುನಾರ್‌ನಲ್ಲಿ ಭೀಕರ ಹಾನಿ, ರಕ್ಷಣಾ ಕಾರ್ಯಕ್ಕೆ ಅಡೆತಡೆ ಕುನಾರ್ ಪ್ರಾಂತ್ಯದಲ್ಲಿ ಭೂಕಂಪದಿಂದ ಅತ್ಯಂತ ಹೆಚ್ಚು ಹಾನಿ ಸಂಭವಿಸಿದೆ. ನೂರ್ ಗುಲ್, ಸೋಕಿ, ವಾಟ್ಪುರ್, ಮನೋಗಿ ಮತ್ತು…

Read More

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಮತ್ತು ಭಾರತ್ ಭವನ ತಿರುವನಂತಪುರ ಕೇರಳ ಸರಕಾರ ಇವುಗಳ ಸಂಯುಕ್ತಾಶ್ರಯದಲ್ಲಿ ತಿರುವನಂತಪುರದ ಸಿ.ವಿ.ರಾಮನ್ ಪಿಳ್ಳೆ ರಸ್ತೆಯಲ್ಲಿರುವ ಭಾರತ್ ಭವನದಲ್ಲಿ ಒಂದು ದಿನದ ‘ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ’ ಆಗಸ್ಟ್ 23ರಂದು ಜರಗಿತು. ಕೇರಳ ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಿ. ಆರ್. ಅನಿಲ್ ಉತ್ಸವವನ್ನು ಉದ್ಘಾಟಿಸಿದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸಿದ್ದರು. ಕೇರಳ ಸರಕಾರದ ಶಿಕ್ಷಣ ಸಚಿವ ಶಿವನ್ ಕುಟ್ಟಿ, ಕಾಸರಗೋಡಿನ ಶಾಸಕ ಎನ್.ಎ.ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್, ಕಾಸರಗೋಡು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಸ್ಥಾಪಕ ಪ್ರದೀಪ ಕುಮಾರ್ ಕಲ್ಕೂರ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಸಂಸ್ಕೃತಿ ಉತ್ಸವದ ಅಂಗವಾಗಿ ಅಖಿಲ ಭಾರತ ವ್ಯಾಪ್ತಿಯ ಬಹುಭಾಷಾ ಕವಿಸಂಗಮವನ್ನು ಏರ್ಪಡಿಸಲಾಗಿತ್ತು. ಕಾಸರಗೋಡಿನ ಹಿರಿಯ ಕವಿ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಕವಿಗಳಾಗಿ ಭಾಗವಹಿಸಿದ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ…

Read More

ವೀಣಾ ಡೆಕೋರ್ & ಇವೆಂಟ್ಸ್ ಮಾಲಕರಾದ ನವೀನ್ ಚಂದ್ರ ಸಾಲ್ಯಾನ್ ಮಾಲಕತ್ವದ V.d trophy 2025 ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಕರಂಬಾರು ಕೊಪ್ಪಲ ಕ್ರಿಡಾಂಗಣದಲ್ಲಿ ನಡೆಯಿತು. ಕ್ರಿಕೆಟ್ ಪಂದ್ಯಾಟ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಫ್ಲವರ್ ಡೆಕೋರೇಷನ್ ಮಾಲಕರ ಸಂಘದ ಅಧ್ಯಕ್ಷರಾದ ತುಷಾರ್ ಸುರೇಶ್ ಉದ್ಘಾಟಿಸಿ ಕ್ರೀಡಾ ಕೂಟಕ್ಕೆ ಶುಭ ಹ್ಯಾರೆಸಿದರು. ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಕ್ರೀಡಾ ಸ್ಫೂರ್ತಿ ಮುಖ್ಯ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಸುರೇಶ್ ಪೂಜಾರಿ ಉಪಾಧ್ಯಕ್ಷರು ದ.ಕ ಜಿಲ್ಲಾ ಪ್ಲವರ್ ಡೇಕೋರೇಶನ್ ಯುನಿಯನ್, ಸುರೇಶ್ ಪೂಜಾರಿ ಕೊಪ್ಪಲ, ಗಣೇಶ್ ಅರ್ಬಿ ಮಾಜಿ ಅಧ್ಯಕ್ಷರು ಮಳವೂರು ಗ್ರಾಮ ಪಂಚಾಯತ್, ಶ್ರೀನಿವಾಸ ಕಾವೂರು ಮಾಲಕರು ಕಚ್ಚೂರ್ ಮಾಲ್ಡಿ ಕ್ಯಾಂಟಿನ್, ಸುರೇಂದ್ರ ಕಾಮತ್ ಕೆಂಜಾರು, ಸ್ವಾನಿ ಅಂಚನ್ ಪ್ಲವರ್ ಡೇಕೋರೇಶನ್ ಮಾಲಕರು ಉಪಸ್ಥಿತಿರಿದ್ದರು ಕಾರ್ಯಕ್ರಮ ವನ್ನು ರಾಕೇಶ್ ಕುಂದರ್ ನಿರೂಪಿಸಿದರು ವಿನಯ್ ಸಾಲ್ಯಾನ್ ವಂದಿಸಿದರು.

Read More