- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
- ಎಂಆರ್ಪಿಎಲ್ ಘಟಕದಲ್ಲಿ ಭಾರೀ ಸ್ಫೋಟದ ಸದ್ದು: ಬೆಂಕಿ, ದಟ್ಟ ಹೊಗೆಯಿಂದ ಸ್ಥಳೀಯರಲ್ಲಿ ಆತಂಕ
Author: Tulunada Surya
ಮಂಗಳೂರು, ಸೆ.28: ತುಳು ಭಾಷೆಗೆ ಕರ್ನಾಟಕದಲ್ಲಿ ಮಾನ್ಯತೆ ದೊರೆತ ಹಿನ್ನೆಲೆಯಲ್ಲಿ, ತುಳು ಭಾಷೆ, ಸಂಸ್ಕೃತಿ ಹಾಗೂ ತುಳುನಾಡಿನ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಹಾಗೂ ‘ತುಳುನಾಡ ಸಾರಥಿ’ ಖ್ಯಾತಿಯ ಯೋಗಿಶ್ ಶೆಟ್ಟಿ ಜಪ್ಪು ಅವರನ್ನು ಕಂಕನಾಡಿಯ ಎಂಪೋರಿಯಂ ಕಾಂಪ್ಲೆಕ್ಸ್‌ನಲ್ಲಿರುವ ದಾಸ್ ಪ್ರಮೋಶನ್ ಹೋಮ್ ನರ್ಸಿಂಗ್ ಕೇರ್ ಸಂಸ್ಥೆಯ ನೂತನ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಂಸ್ಥೆಯ ಮುಖ್ಯಸ್ಥ ಲಯನ್ ಅನಿಲ್ ದಾಸ್ ಅವರು ಯೋಗಿಶ್ ಶೆಟ್ಟಿ ಜಪ್ಪು ಅವರಿಗೆ ಮಾಲೆ ಹಾಕಿ, ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ತುಳು ಭಾಷೆಯ ಮಾನ್ಯತೆ, ತುಳುನಾಡಿನ ಭಾಷೆ–ಸಂಸ್ಕೃತಿ ಸಂರಕ್ಷಣೆ, ಸಂಘಟನೆಯ ಚಟುವಟಿಕೆಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಸುದೀರ್ಘವಾಗಿ ಸಮಾಲೋಚನೆ ನಡೆಯಿತು. ತುಳು ಭಾಷೆ ಹಾಗೂ ತುಳುನಾಡಿನ ಹಿತಾಸಕ್ತಿಗಾಗಿ 2009ರಲ್ಲಿ ತುಳುನಾಡ ರಕ್ಷಣಾ ವೇದಿಕೆ ಎಂಬ ಸಾಮಾಜಿಕ ಹೋರಾಟ ಸಂಘಟನೆ ಸ್ಥಾಪಿಸಿ, ಕಳೆದ ಹಲವು ವರ್ಷಗಳಿಂದ ದೇಶ–ವಿದೇಶಗಳಲ್ಲಿ ಸಂಘಟನೆಯ ಮೂಲಕ ತುಳು ನಾಡು,ನುಡಿ,ಅಭಿವ್ರದ್ದಿ…
ಮಂತ್ರಾಲಯ / ಹಂಪಿ, ಸೆ.27: ಕರ್ನಾಟಕ ಸರ್ಕಾರವು ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವ ಹಿನ್ನೆಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕ, ಕಾಪು ತಾಲೂಕು ಹಾಗೂ ಬೈರಂಪಳ್ಳಿ ಘಟಕದ ವತಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸರ್ಕಾರದ ಘೋಷಣೆಗೆ ಹರ್ಷ ವ್ಯಕ್ತಪಡಿಸಲಾಯಿತು. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರವು ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿರ್ಧಾರ ಕೈಗೊಂಡಿರುವುದು ತುಳುವರ ಹಲವು ದಶಕಗಳ ಹೋರಾಟಕ್ಕೆ ದೊರೆತ ಮಹತ್ವದ ಮಾನ್ಯತೆಯಾಗಿದೆ ಎಂದು ವೇದಿಕೆಯ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳು ಸೂರ್ಯ-ಚಂದ್ರ ಚಿಹ್ನೆಯುಳ್ಳ ತುಳು ಬಾವುಟ ಹಾಗೂ ಕೆಂಪು ತುಳು ಶಾಲು ಧರಿಸಿ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದರು. ತುಳು ಭಾಷೆಯನ್ನು ಸಂವಿಧಾನದ 8ನೇ…
ಮಂಗಳೂರು, ಸೆ.27: ತುಳು ಭಾಷೆ, ಸಂಸ್ಕೃತಿ, ಸಂಪ್ರದಾಯ ಹಾಗೂ ತೌಳವ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ತುಳುನಾಡಿನ ಹೊರರಾಜ್ಯಗಳಲ್ಲಿ ಹಾಗೂ ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತುಳು ಸೇವಾ ಸಂಘ-ಸಂಸ್ಥೆಗಳ ಕೊಡುಗೆ ಅತ್ಯಂತ ಮಹತ್ವದ್ದಾಗಿದೆ. ತುಳು ಭಾಷೆಗೆ ದೊರೆತಿರುವ ಐತಿಹಾಸಿಕ ಮಾನ್ಯತೆಯ ಸಂದರ್ಭದಲ್ಲಿ ಹಲವು ವರ್ಷಗಳಿಂದ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಈ ಸಂಘ-ಸಂಸ್ಥೆಗಳು ಹಾಗೂ ತುಳುಪರ ಹೋರಾಟಗಾರರ ಕೊಡುಗೆಯನ್ನು ಗೌರವದಿಂದ ಸ್ಮರಿಸಬೇಕಾಗಿದೆ ಎಂದು ನಮ್ಮೂರ ಆಟ ಕೂಟ ಟ್ರಸ್ಟ್ (ರಿ.), ಮಂಗಳೂರು ಸ್ಥಾಪಕಾಧ್ಯಕ್ಷ ಮುಲ್ಕಿ ಕರುಣಾಕರ ಶೆಟ್ಟಿ ತಿಳಿಸಿದ್ದಾರೆ.ತುಳುನಾಡಿನ ಜನರು ಉದ್ಯೋಗ, ವ್ಯಾಪಾರ, ವೃತ್ತಿ ಹಾಗೂ ವಿವಿಧ ಕಾರಣಗಳಿಂದ ದೇಶದ ಹಲವು ರಾಜ್ಯಗಳಿಗೆ ಮತ್ತು ವಿದೇಶಗಳಿಗೆ ತೆರಳಿ ನೆಲೆಸಿದ್ದರೂ, ತಮ್ಮ ಜನ್ಮಭೂಮಿಯ ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಕರ್ಮಭೂಮಿಯಲ್ಲಿಯೂ ಉಳಿಸಿ ಬೆಳೆಸುವ ಮಹತ್ವದ ಕಾರ್ಯವನ್ನು ಮುಂದುವರಿಸಿದ್ದಾರೆ. ಇದರ ಫಲವಾಗಿ ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಹಾಗೂ ದುಬೈ, ಅಬುಧಾಬಿ ಸೇರಿದಂತೆ ವಿದೇಶಗಳಲ್ಲಿ ಹಲವು ತುಳು ಸೇವಾ ಸಂಘ-ಸಂಸ್ಥೆಗಳು ಸ್ಥಾಪನೆಯಾಗಿ, ದಶಕಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ…
ಜೇಸಿಐ ಕಾಪು ಘಟಕದ ನೇತೃತ್ವದಲ್ಲಿ ಸೆಪ್ಟೆಂಬರ್ 26ರ ಶನಿವಾರ ಜೇಸಿಐ ಉಡುಪಿ ಶಿವಳ್ಳಿ ಹಾಗೂ ಡಾ NSAM ಪ್ರಥಮ ದರ್ಜೆ ಕಾಲೇಜು ನಿಟ್ಟೆ ಇದರ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೆಂಜರ್ಸ್ ಘಟಕ, IQACಸಹಯೋಗದಲ್ಲಿ ಕಾಪು ಕಡಲ ಕಿನಾರೆ ಸ್ವಚ್ಛತೆಯನ್ನು ಮಾಡಿ, ತ್ಯಾಜ್ಯ ವಿಲೇವಾರಿ ಮಾಡಲಾಯಿತು. ಕಾಪು ಪುರಸಭೆಯ ಮುಖ್ಯ ಅಧಿಕಾರಿ ನೀಲಕಂಠ ಮೇಸ್ತ ಅವರು ಮಾತನಾಡಿ ಭೂಮಿ ತಾಯಿಯ ಮಡಿಲಲ್ಲಿ ಕಸಗಳ ರಾಶಿ ಇದೆ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ನಮ್ಮ ಭಾರತ ದೇಶವನ್ನು ಸ್ವಚ್ಛ ಸುಂದರ ದೇಶವನ್ನಾಗಿಸೋಣ, ಎಲ್ಲರೂ ಮನೆಯಲ್ಲಿ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ನೀಡಿದರೆ ಸ್ವಚ್ಛತಾ ಕಾರ್ಮಿಕರಿಗೆ ಸಹಕಾರಿಯಾಗುತ್ತದೆ, ಸ್ವಚ್ಛ ಸುಂದರ ಕಾಪು ಮಾಡಲು ಎಲ್ಲರ ಸಹಕಾರ ಅತ್ಯಗತ್ಯ ಎಂದರು. ಜೇಸಿಐ ಉಡುಪಿ ಶಿವಳ್ಳಿ ಘಟಕದ ಅಧ್ಯಕ್ಷ ವಿನೋದ್ ಶೆಟ್ಟಿ ಉಡುಪಿ, ವಲಯ 15ರ ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು, ಜೇಸಿಐ ಕಾಪು ಘಟಕದ ನಿಕಟಪೂರ್ವ ಅಧ್ಯಕ್ಷೆ ಅನಿತಾ…
ಮಂಗಳೂರು, ಸೆ.26: ನಗರದ ಪಾಂಡೇಶ್ವರ–ಬಲ್ಮಠ, ಎಮ್ಮೆಕೆರೆ ಸಮೀಪದ ಲಕ್ಷ್ಮೀ ರಮಾ ಹಾಲ್‌ನಲ್ಲಿ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಕಟ್ಟಡದ ಮೇಲ್ಭಾಗದ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಟ್ಟಡದ ಮೇಲ್ಭಾಗದಲ್ಲಿ ನಿಂತಿದ್ದ ಸಂದರ್ಭದಲ್ಲಿ ಏಕಾಏಕಿ ಕಾಂಕ್ರೀಟ್ ಸ್ಲ್ಯಾಬ್ ಕುಸಿದಿದೆ. ಪರಿಣಾಮ ವಿದ್ಯಾರ್ಥಿಗಳು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಮಂಗಳೂರು ನಗರದ ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳ ವಿವರ 1. ಮಹಮ್ಮದ್ ಶಮಾಜ್ (16)ಅವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಲಾಗಿದೆ.2. ಮಹಮ್ಮದ್ ಶನಾನ್ ಅಹಮ್ಮದ್ (18) 3. ಹನೀಫ್ (23)4. ದವೂದ್ ಫರ್ಸಿನ್ ಅಹಮ್ಮದ್ (18)ಮೇಲಿನ ನಾಲ್ವರು ಗಾಯಾಳುಗಳನ್ನು ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮತ್ತೊಬ್ಬ ಯುವಕ ರಸ್ತೆ ಅಪಘಾತದಿಂದ ಆಸ್ಪತ್ರೆಗೆ ದಾಖಲು ಇದೇ ವೇಳೆ ಮಹಮ್ಮದ್ ಶಾಕೀಲ್ ಹುಸೈನ್ (18), ತಂದೆ…
ಗುರುಪುರ: ತುಳುನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯಲ್ಲಿ ಮಡಿವಾಳ ಸಮುದಾಯವು ತನ್ನದೇ ಆದ ವಿಶಿಷ್ಟ ಸೇವೆ ಮತ್ತು ಕೊಡುಗೆಯನ್ನು ನೀಡುತ್ತಾ ಬಂದಿದೆ. ದೈವಾರಾಧನೆ, ನಾಗಾರಾಧನೆ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳಲ್ಲಿ ಶುದ್ಧತೆ, ಸಂಪ್ರದಾಯ ಮತ್ತು ಪವಿತ್ರತೆಯನ್ನು ಕಾಪಾಡುವಲ್ಲಿ ಮಡಿವಾಳ ಸಮುದಾಯದ ಪಾತ್ರ ಮಹತ್ವದ್ದಾಗಿದೆ ಎಂದು ದೊಣಿಂಜೆ ಗುತ್ತು ಗಡಿಕಾರ ಪ್ರಮೋದ್ ರೈ ಹೇಳಿದರು. ಇತ್ತೀಚೆಗೆ ಗುರುಪುರದ ಮೂಳೂರು ಮಂಡಿತ್ತಾಯ ದೈವಸ್ಥಾನದ ಬಂಡಿಯ ಗದ್ದೆಯಲ್ಲಿ ತಾಲೂಕು ಮಟ್ಟದ ಮಡಿವಾಳ ಸಮಾಜದ ‘ಕೆಸರದ ಕಂಡದ್ ಒಂಜಿ ದಿನ’ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಮೋದ್ ರೈ ಅವರು, ತುಳುನಾಡಿನ ಧಾರ್ಮಿಕ ಆಚರಣೆಗಳೊಂದಿಗೆ ಮಡಿವಾಳ ಸಮುದಾಯದ ಅವಿನಾಭಾವ ಸಂಬಂಧವನ್ನು ಸರಳವಾಗಿ ವಿವರಿಸಿದರು. ತುಳುನಾಡಿನ ಧರ್ಮ, ಸಂಸ್ಕೃತಿ ಮತ್ತು ಆಚರಣೆಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಹಲವು ಸಮುದಾಯಗಳ ನಂಬಿಕೆ, ಶ್ರಮ, ಸೇವೆ ಮತ್ತು ಸಹಕಾರದಿಂದ ಈ ಶ್ರೀಮಂತ ಪರಂಪರೆ ರೂಪುಗೊಂಡಿದೆ. ಅದರಲ್ಲಿ ಮಡಿವಾಳ ಸಮುದಾಯದ ಕೊಡುಗೆಯೂ ವಿಶೇಷವಾದದ್ದು. ಹಿಂದಿನ ಕಾಲದಿಂದಲೂ ಗುತ್ತುಮನೆಗಳು, ದೈವಸ್ಥಾನಗಳು…
ಉಡುಪಿ, ಸೆ.25: ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿಯಾಗಿ ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಕಟ್ಟ್ ಬೆಲ್ತೂರು ನಿವಾಸಿ ರಾಘವೇಂದ್ರ ಜೋಗಿ (48) ಅವರು ಮನೆ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಈ ಸಾವಿನ ಕುರಿತು ಸಮಗ್ರ ಹಾಗೂ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ಒತ್ತಾಯಿಸಿದೆ. ಸೆ.24ರಂದು ಮಧ್ಯಾಹ್ನ ಸುಮಾರು 12.30ರ ವೇಳೆಗೆ ರಾಘವೇಂದ್ರ ಜೋಗಿ ಅವರು ಮನೆಯ ಸಮೀಪ ಮರಕ್ಕೆ ನೇಣು ಬಿಗಿದುಕೊಂಡಿರುವುದನ್ನು ಕುಟುಂಬಸ್ಥರು ಗಮನಿಸಿದ್ದು, ತಕ್ಷಣ ಸ್ಥಳೀಯರ ನೆರವಿನಿಂದ ಅವರನ್ನು ಕುಂದಾಪುರದ ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಮೃತರ ಸಹೋದರ ರಾಜೇಶ್ ಜೋಗಿ ಅವರು ನೀಡಿದ ದೂರಿನ ಆಧಾರದ ಮೇಲೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ಸಂಖ್ಯೆ 31/2026 ದಾಖಲಾಗಿದ್ದು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ…
ಮಂಗಳೂರು: ಮುಂಬೈಯಲ್ಲಿ ಪ್ರಸಿದ್ಧ ಉದ್ಯಮಿಯಾಗಿ ಹಾಗೂ ಮಹಾರಾಷ್ಟ್ರದಲ್ಲಿ ಅತಿಥಿ ಸತ್ಕಾರ ಕ್ಷೇತ್ರದಲ್ಲಿ ಖ್ಯಾತಿ ಪಡೆದ ಪಾದೆ ಅಜಿತ್ ರೈ ಅವರ ಸಾಧನೆ ಪ್ರಶಂಸನೀಯವಾಗಿದೆ ಎಂದು ಡಾ. ಅತ್ತೂರು ಸದಾನಂದ ಶೆಟ್ಟಿ ಅಭಿಪ್ರಾಯಪಟ್ಟರು. ಕುಡ್ಲ ಫೆವಿಲಿಯನ್ ಸಭಾಂಗಣದಲ್ಲಿ ನಡೆದ ಹೋಟೆಲ್ ಕುಡ್ಲ ಸಮೂಹ ಸಂಸ್ಥೆಯ 52ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪಾದೆ ಅಜಿತ್ ರೈ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಅತಿಥಿ ಸತ್ಕಾರಕ್ಕೆ ಮರುಳಾಗದ ಜನರಿಲ್ಲ. ಅದಕ್ಕೆ ತನ್ನದೇ ಆದ ವಿಶೇಷತೆ ಇದೆ. ಅತಿಥಿ ಸತ್ಕಾರವು ಶ್ರೀಮಂತರಿಂದ ಹಿಡಿದು ಎಲ್ಲಾ ವರ್ಗದ ಜನರನ್ನು ಆಕರ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ನಿಟ್ಟಿನಲ್ಲಿ ಪಾದೆ ಅಜಿತ್ ರೈ ಅವರ ಕಾರ್ಯ ಶ್ಲಾಘನೀಯ ಎಂದು ಅವರು ಹೇಳಿದರು. ಸನ್ಮಾನಕ್ಕೆ ಪ್ರತಿಕ್ರಿಯಿಸಿದ ಪಾದೆ ಅಜಿತ್ ರೈ ಅವರು, “ಬಾಲ್ಯದಿಂದಲೇ ನನಗೆ ಉಡುಗೆ-ತೊಡುಗೆ, ಬಂಧು-ಬಳಗ ಹಾಗೂ ಗೆಳೆಯರೊಂದಿಗೆ ಅತಿಥಿ ಸತ್ಕಾರ ಮಾಡುವ ಹವ್ಯಾಸ ಬೆಳೆದಿತ್ತು. ಇದನ್ನು ಸಂಘ-ಸಂಸ್ಥೆಗಳು ಗಮನಿಸಿ ನನ್ನನ್ನು ಗುರುತಿಸಿರುವುದು ಸಂತಸ ತಂದಿದೆ.…
ಉಡುಪಿ: ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ಕ್ರಿಕೆಟ್ ವೀಕ್ಷಕ ವಿವರಣೆಕಾರ ರವಿಶಾಸ್ತ್ರಿ ಅವರು ಗುರುವಾರ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಮಠಕ್ಕೆ ಆಗಮಿಸಿದ ರವಿಶಾಸ್ತ್ರಿ ಅವರನ್ನು ಪರ್ಯಾಯ ಶ್ರೀ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶ್ರೀಪಾದರು ಫಲ ಹಾಗೂ ಮಂತ್ರಾಕ್ಷತೆ ನೀಡಿ ರವಿಶಾಸ್ತ್ರಿ ಅವರಿಗೆ ಆಶೀರ್ವದಿಸಿದರು. ಬಳಿಕ ರವಿಶಾಸ್ತ್ರಿ ಅವರು ಶ್ರೀಕೃಷ್ಣ ದೇವರ ದರ್ಶನ ಪಡೆದು, ಉಡುಪಿ ಶ್ರೀಕೃಷ್ಣ ಮಠದ ಧಾರ್ಮಿಕ ಪರಂಪರೆ, ಪೂಜಾ ವಿಧಿವಿಧಾನಗಳು ಹಾಗೂ ಮಠದ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದುಕೊಂಡರು. ಮಠದ ಆಧ್ಯಾತ್ಮಿಕ ವಾತಾವರಣವನ್ನು ವೀಕ್ಷಿಸಿದ ಅವರು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಸೇರಿದಂತೆ ಮಠದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು.
ತುಳು ಕೇವಲ ಒಂದು ಭಾಷೆಯಲ್ಲ; ಅದು ತೌಳವ ನಾಡಿನ ಅಸ್ಮಿತೆ, ಸಂಸ್ಕೃತಿ ಮತ್ತು ಸಾವಿರಾರು ವರ್ಷಗಳ ಬದುಕಿನ ಪ್ರತಿಬಿಂಬ. ಸ್ವತಂತ್ರ ಲಿಪಿ, ಶ್ರೀಮಂತ ಸಾಹಿತ್ಯ ಪರಂಪರೆ, ದೈವಾರಾಧನೆ, ನಾಗಾರಾಧನೆ, ಯಕ್ಷಗಾನ, ತಾಳಮದ್ದಳೆ ಸೇರಿದಂತೆ ಅನೇಕ ವಿಶಿಷ್ಟ ಸಾಂಸ್ಕೃತಿಕ ಆಚರಣೆಗಳನ್ನು ತನ್ನೊಳಗೆ ಜೀವಂತವಾಗಿಟ್ಟುಕೊಂಡಿರುವ ತುಳು, ತುಳುನಾಡಿನ ಜನಜೀವನದ ಅವಿಭಾಜ್ಯ ಅಂಗವಾಗಿದೆ. ವೀರರಾಣಿ ಅಬ್ಬಕ್ಕ, ಕೋಟಿ-ಚೆನ್ನಯರು ಸೇರಿದಂತೆ ತುಳುನಾಡಿನ ವೀರ ಪರಂಪರೆ ಹಾಗೂ ಪಂಜುರ್ಲಿ ಸೇರಿದಂತೆ ದೈವಾರಾಧನಾ ಪರಂಪರೆಯ ಮಹತ್ವವನ್ನು ಅರಿತುಕೊಂಡು ಮಾತನಾಡಬೇಕಾಗಿದೆ. ತುಳುವರು ಕನ್ನಡದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಕನ್ನಡ ಭಾಷೆ ಮತ್ತು ಕರ್ನಾಟಕದ ಸಾಂಸ್ಕೃತಿಕ ಬೆಳವಣಿಗೆಗೆ ತಮ್ಮದೇ ಆದ ಮಹತ್ವದ ಕೊಡುಗೆ ನೀಡಿದ್ದಾರೆ. ಕನ್ನಡ ನಾಡಿನ ಏಕತೆ ಮತ್ತು ಅಖಂಡತೆಯ ವಿಚಾರದಲ್ಲಿಯೂ ತುಳುವರ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ. ಕಾಸರಗೋಡು ಸೇರಿದಂತೆ ಗಡಿಭಾಗಗಳ ಕನ್ನಡಪರ ಹೋರಾಟಗಳಲ್ಲಿ ತುಳುವರು ನೀಡಿದ ಬೆಂಬಲ ಮತ್ತು ತ್ಯಾಗದ ಇತಿಹಾಸವನ್ನು ತಿಳಿದುಕೊಳ್ಳುವುದು ಅಗತ್ಯವಾಗಿದೆ. ಭಾರತದ ಅನೇಕ ಭಾಷೆಗಳು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸ್ಥಾನ ಪಡೆದಿವೆ. ಅದೇ ರೀತಿ ತುಳು…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
