What's Hot
- ಹೆಬ್ರಿ ತಾಲೂಕಿನಲ್ಲಿ ಸಿಬ್ಬಂದಿ ಕೊರತೆ ತೀವ್ರ: ಖಾಲಿ ಹುದ್ದೆಗಳ ಭರ್ತಿಗೆ ಜಿಲ್ಲಾಧಿಕಾರಿಗಳಿಗೆ ಜೆಡಿಎಸ್ ಮನವಿ
- ವೆನ್ಲಾಕ್ ಕ್ಯಾಥ್ ಲ್ಯಾಬ್ನ ಯಶೋಗಾಥೆ ಒಂದು ದೃಷ್ಟಿಯಿಂದ ಜೀವ ರಕ್ಷಕ ಮೈಲಿಗಲ್ಲಿನವರೆಗೆ…ಕೆಎಂಸಿ ಸಹಭಾಗಿತ್ವದ PPP ಮಾದರಿಯಲ್ಲಿ 1,000ಕ್ಕೂ ಅಧಿಕ ಯಶಸ್ವಿ ಹೃದಯ ಚಿಕಿತ್ಸೆಗಳು; ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವಮಟ್ಟದ ಸೇವೆಗೆ ಹೊಸ ಅಧ್ಯಾಯ
- ಮಹಾಮ್ಮಾಯ ದೇವಸ್ಥಾನದ ಹಿಂಭಾಗದ ಚರಂಡಿಯ ಉಳಿದ ಕಾಮಗಾರಿ ಹಾಗೂ ಗೌರಿಮಠ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ
- ನಂಬಿಕೆಯ ಮುಖವಾಡದ ಹಿಂದೆ ₹23 ಲಕ್ಷ ವಂಚನೆ! ಪದ್ಮ ಕಮಲ ಸಂಜೀವಿನಿ ಒಕ್ಕೂಟದಲ್ಲಿ ಹಣ ದುರ್ಬಳಕೆ ಪ್ರಕರಣ: ಮುಖ್ಯ ಪುಸ್ತಕ ಬರಹಗಾರ್ತಿ ಹಾಗೂ ಪತಿ ಬಂಧನ
- ಭಗಿನಿ ಸಮಾಜ ಸಭಾಂಗಣದಲ್ಲಿ ರತ್ನ ಶೆಟ್ಟಿ ಪುಣ್ಯಸ್ಮರಣೆ; ಆತ್ಮಶಾಂತಿಗಾಗಿ ವಿಶೇಷ ಪ್ರಾರ್ಥನೆ
- ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ ಅವರ ನಿಧನಕ್ಕೆ ಜೆಡಿಎಸ್ ಜಿಲ್ಲಾದ್ಯಕ್ಷ ಜಾಕೆ ಮಾಧವ ಗೌಡ ತೀವ್ರ ಸಂತಾಪ
- ಬ್ರಿಡ್ಜ್ಮ್ಯಾನ್ ಆಫ್ ಇಂಡಿಯಾ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ ಅವರ ನಿಧನಕ್ಕೆ ಜೆಡಿಎಸ್ ಜಿಲ್ಲಾದ್ಯಕ್ಷ ಜಾಕೆ ಮಾಧವ ಗೌಡ ತೀವ್ರ ಸಂತಾಪ
- ತೂಗುಸೇತುವೆಗಳ ಸರದಾರ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ ನಿಧನ
Author: Tulunada Surya
ಬೆಂಗಳೂರು, ಮೇ 10: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಡಿ. ಸುಧಾಕರ್ ಅವರು ಇಂದು ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಸುಮಾರು 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿತ್ತು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದರೂ, ಆರೋಗ್ಯದಲ್ಲಿ ನಿರೀಕ್ಷಿತ ಮಟ್ಟದ ಚೇತರಿಕೆ ಕಂಡುಬರಲಿಲ್ಲ. ಅಂತಿಮವಾಗಿ ಇಂದು ನಸುಕಿನ ಜಾವ ಅವರು ವಿಧಿವಶರಾದರು. ಡಿ. ಸುಧಾಕರ್…
ಮಂಗಳೂರು : ಸೋಶಿಯಲ್ ಡೆಮಾಕ್ರಾಟ್ ಪಾರ್ಟಿ ಆಫ್ ಇಂಡಿಯಾ (SDPI) ಕೊಳಂಬೆ ಬ್ರಾಂಚ್ ವತಿಯಿಂದ 2025ನೇ ಸಾಲಿನ SSLC ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಸಾಹಾದ್ ನಗರ ಕೊಳಂಬೆ ಆಟದ ಮೈದಾನದಲ್ಲಿ ಗೌರವಪೂರ್ವಕವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಗುರುಪುರ ಬ್ಲಾಕ್ ಅಧ್ಯಕ್ಷರಾದ ಶರೀಫ್ ತೋಡಾರ್ ವಹಿಸಿದ್ದರು. ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಸ್ಡಿಪಿಐ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ರಿಯಾಝ್ ಅಡ್ಡೂರು ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಶ್ರಮ, ಶಿಸ್ತು ಮತ್ತು ಗುರಿ ಸಾಧನೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಮುಖ ಸಾಧನವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಉತ್ತಮ ಕಾರ್ಯಗಳಿಗೆ ಬಳಸಿಕೊಳ್ಳಬೇಕು ಎಂದು ಹೇಳಿದರು.…
ಹರಿರಾಮ್ ಶಂಕರ್ ನೇತೃತ್ವದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರ ಮನೆಗಳ ಸುರಕ್ಷತೆಗಾಗಿ “ಲಾಕ್ಡ್ ಹೌಸ್ ಬೀಟ್ ಸಿಸ್ಟಮ್” (LHBS) ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಕೆಲಸ, ಪ್ರವಾಸ ಅಥವಾ ಇತರೆ ಕಾರಣಗಳಿಂದ ಎರಡು-ಮೂರು ದಿನಗಳಿಗಿಂತ ಹೆಚ್ಚು ಕಾಲ ಮನೆಗೆ ಬೀಗ ಹಾಕಿ ಹೊರಗಡೆ ತೆರಳುವ ನಾಗರಿಕರು ಈ ಸೌಲಭ್ಯದ ಪ್ರಯೋಜನ ಪಡೆಯಬಹುದು. ಮನೆಗೆ ಬೀಗ ಹಾಕಿ ಹೋಗುವ ಮುನ್ನ ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದರೆ, ಸಂಬಂಧಪಟ್ಟ ಪೊಲೀಸ್ ಠಾಣೆಯ ಬೀಟ್ ಸಿಬ್ಬಂದಿ ಮನೆ ಮೇಲೆ ಹಗಲು-ರಾತ್ರಿ ವಿಶೇಷ ನಿಗಾ ವಹಿಸಲಿದ್ದಾರೆ. ಈ ಯೋಜನೆಯಡಿ ಮನೆ ಮಾಲೀಕರು ತಮ್ಮ ಪ್ರಯಾಣದ ದಿನಾಂಕ, ವಾಪಸ್ಸು ಬರುವ ದಿನ, ಸಂಪೂರ್ಣ ವಿಳಾಸ ಹಾಗೂ ಮನೆಯ ಮುಂದೆ ತೆಗೆದ ಸೆಲ್ಫಿ ಫೋಟೋವನ್ನು ಪೊಲೀಸರಿಗೆ ಕಳುಹಿಸಬೇಕಾಗುತ್ತದೆ. ಬಳಿಕ ಕಂಟ್ರೋಲ್ ರೂಂ ಮೂಲಕ ಮಾಹಿತಿ ಸಂಬಂಧಿತ ಠಾಣೆಗೆ ರವಾನೆಯಾಗಿದ್ದು, ಭದ್ರತಾ ಮೇಲ್ವಿಚಾರಣೆಗೆ ಬೀಟ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಸಾರ್ವಜನಿಕರು ಈ ಸೇವೆಯನ್ನು ಪಡೆಯಲು ಉಡುಪಿ…
ಮಂಗಳೂರು: ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸುಲ್ತಾನ್ ಬತ್ತೇರಿ–ತಣ್ಣೀರುಬಾವಿ ಸಂಪರ್ಕ ಸೇತುವೆ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಈ ವರ್ಷದ ಸೆಪ್ಟೆಂಬರ್ ಮೊದಲ ವಾರದಲ್ಲೇ ವಾಹನ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ Dinesh Gundu Rao ತಿಳಿಸಿದ್ದಾರೆ. ಶುಕ್ರವಾರ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಸೇತುವೆಯ ಗರ್ಡರ್ ಲಾಂಚಿಂಗ್ ಕಾರ್ಯ ಜೂನ್ ಅಂತ್ಯದೊಳಗೆ ಪೂರ್ಣಗೊಳ್ಳಲಿದ್ದು, ನಂತರ ಗುರುಪುರ ನದಿಯಲ್ಲಿ ಬೋಟ್ ಸಂಚಾರಕ್ಕೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು. ಸುಮಾರು 64 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಬಹು ನಿರೀಕ್ಷಿತ ಸೇತುವೆ ಸುಲ್ತಾನ್ ಬತ್ತೇರಿ ಮತ್ತು ತಣ್ಣೀರುಬಾವಿ ನಡುವಿನ ಸಂಪರ್ಕವನ್ನು ಮತ್ತಷ್ಟು ಸುಗಮಗೊಳಿಸಲಿದೆ. ಇದರಿಂದ ಪ್ರಯಾಣದ ಅವಧಿ ಸುಮಾರು ಅರ್ಧ ಗಂಟೆಯಷ್ಟು ಕಡಿಮೆಯಾಗಲಿದ್ದು, ವಿಶೇಷವಾಗಿ ಬೆಂಗ್ರೆ ಭಾಗದ ಸಾವಿರಾರು ಕುಟುಂಬಗಳಿಗೆ ನೇರ ಪ್ರಯೋಜನವಾಗಲಿದೆ ಎಂದು ಸಚಿವರು ತಿಳಿಸಿದರು. ರಾಷ್ಟ್ರೀಯ ಮಟ್ಟದ ಮಾರ್ಗಸೂಚಿಗಳನ್ನು…
ಕೊಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ ಎಂಬ ರಾಜಕೀಯ ಚರ್ಚೆಗಳು ಜೋರಾಗಿವೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಮೇ 9 ರಂದು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೇಂದ್ರ ಗೃಹ ಸಚಿವ Amit Shah ಅವರ ಸಮ್ಮುಖದಲ್ಲಿ ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಾಮಿಕ್ ಭಟ್ಟಾಚಾರ್ಯ ಸೇರಿದಂತೆ ಹಲವು ಹಿರಿಯ ನಾಯಕರು ಹಾಗೂ ಹೊಸದಾಗಿ ಆಯ್ಕೆಯಾದ ಶಾಸಕರು ಭಾಗವಹಿಸಿದ್ದರು. ರಾಜ್ಯದ 294 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 207 ಸ್ಥಾನಗಳಲ್ಲಿ ಜಯ ಸಾಧಿಸಿ ಸ್ಪಷ್ಟ ಬಹುಮತ ಪಡೆದಿದೆ ಎಂದು ಪಕ್ಷದ ಮೂಲಗಳು…
ಮಂಗಳೂರು, ಮೇ 08 : ಜೀವಜಲದ ಹರಿವಿನಿಂದ ಕಂಗೊಳಿಸುತ್ತಿದ್ದ ಫಲ್ಗುಣಿ ನದಿ ಇಂದು ಮೌನ ಕಿರುಚಾಟದ ಸಾಕ್ಷಿಯಾಗಿದ್ದು, ಮಂಗಳೂರು ಹೊರವಲಯದ ಮಳವೂರು–ಕೆಂಜಾರ್ ಭಾಗದಲ್ಲಿ ನೂರಾರು ಮೀನುಗಳು ಸತ್ತು ತೇಲಿಬಂದ ದೃಶ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿರುವುದು ಪರಿಸರ ಪ್ರೇಮಿಗಳ ಆತಂಕವನ್ನು ಮತ್ತಷ್ಟು ಗಂಭೀರಗೊಳಿಸಿದೆ. ಸ್ಥಳೀಯರ ಆರೋಪದ ಪ್ರಕಾರ, ಸಮೀಪದ ಕೈಗಾರಿಕೆಗಳಿಂದ ಶುದ್ಧೀಕರಿಸದ ರಾಸಾಯನಿಕ ತ್ಯಾಜ್ಯವನ್ನು ನದಿಗೆ ಹರಿಸಲಾಗುತ್ತಿದ್ದು, ಇದೇ ಮೀನುಗಳ ಸಾಮೂಹಿಕ ಸಾವಿಗೆ ಕಾರಣವಾಗಿರಬಹುದು ಎನ್ನಲಾಗಿದೆ. ನದಿಯ ದಡದಲ್ಲಿ ದುರ್ವಾಸನೆ ವ್ಯಾಪಿಸಿರುವುದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನದಿಯಷ್ಟೇ ಅಲ್ಲ, ನಮ್ಮ ಬಾವಿಗಳ ನೀರೂ ಈಗ ಬಳಕೆಗೆ ಅಸಾಧ್ಯವಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಭಯವಾಗುತ್ತಿದೆ,” ಎಂದು ನಿವಾಸಿಗಳು ಬೇಸರ ವ್ಯಕ್ತಪಡಿಸಿದರು. ಈ ಮಾಲಿನ್ಯದ ಪರಿಣಾಮ ಬಜ್ಪೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವೆಡೆ ಕಂಡುಬಂದಿದ್ದು, ಕುಡಿಯುವ ನೀರಿನ ಮೂಲಗಳಿಗೂ ಧಕ್ಕೆಯಾಗಿರುವ ಬಗ್ಗೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ತಕ್ಷಣ ಶಾಶ್ವತ ಪರಿಹಾರ ಕೈಗೊಳ್ಳದಿದ್ದರೆ ಸಾರ್ವಜನಿಕ ಹೋರಾಟ ಅನಿವಾರ್ಯ ಎಂದು ಪಂಚಾಯತ್…
Madikeri : ನಾಪೋಕ್ಲುವಿನಲ್ಲಿ ಪತ್ರಕರ್ತ ಝಕರಿಯ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪೋಕ್ಲು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸಿದ್ದೀಕ್ (20), ರುಮಾನ್ (21) ಹಾಗೂ ನಾಫಿ (22) ಎಂದು ಗುರುತಿಸಲಾಗಿದೆ. ಬಂಧಿತ ಸಿದ್ದೀಕ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಅವರ ಪುತ್ರನಾಗಿದ್ದು, ಪ್ರಕರಣದಲ್ಲಿ ಬಳಸಲಾಗಿದೆ ಎನ್ನಲಾದ ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನೊಬ್ಬ ಪ್ರಮುಖ ಆರೋಪಿ ಮಹಮ್ಮದ್ ಅಲಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕೃತ್ಯಕ್ಕೆ ಬಳಸಲಾಗಿದೆ ಎಂದು ಶಂಕಿಸಲಾಗಿರುವ ಮತ್ತೊಂದು ಗೂಡ್ಸ್ ವಾಹನದ ಪತ್ತೆಗೂ ಪೊಲೀಸರು ಬಲೆ ಬೀಸಿದ್ದಾರೆ. ಘಟನೆ ಸೋಮವಾರ ಸಂಜೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಬಾವಲಿ ಗ್ರಾಮದಲ್ಲಿ ನಡೆದಿತ್ತು. ತನಿಖೆ ಪ್ರಕಾರ, ಆರೋಪಿಗಳಲ್ಲಿ ಒಬ್ಬನಾದ ರುಮಾನ್ ಆಟೋ ಬಾಡಿಗೆ ಮಾಡುವ ನೆಪದಲ್ಲಿ ಪತ್ರಕರ್ತ ಝಕರಿಯ ಅವರನ್ನು ನಾಪೋಕ್ಲು ಪಟ್ಟಣದಿಂದ ಬಲಮುರಿ ಕಡೆಗೆ ಕರೆಸಿಕೊಂಡಿದ್ದ ಎನ್ನಲಾಗಿದೆ. ಮಾರ್ಗಮಧ್ಯೆ ವೇನ್ಯೂ ಕಾರಿನಲ್ಲಿ ಬಂದಿದ್ದ ಆರೋಪಿಗಳು…
ಕಾಪು: ಸುಮಾರು 18 ವರ್ಷಗಳ ಕಾಲ ಶಿರೂರು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡ ವೈದ್ಯಾಧಿಕಾರಿ ಡಾ. ಪ್ರಭಾ ಎನ್. ಅವರಿಗೆ ತುಳುನಾಡ ರಕ್ಷಣಾ ವೇದಿಕೆ ಕಾಪು ತಾಲೂಕು ಹಾಗೂ ಬೈರಂಪಳ್ಳಿ ಘಟಕದ ವತಿಯಿಂದ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮವು ಸಂಘಟನೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ, “ಡಾ. ಪ್ರಭಾ ಎನ್. ಅವರು ಕಳೆದ 18 ವರ್ಷಗಳಿಂದ ಬೆಳ್ಳರಪಾಡಿ, 41ನೇ ಶಿರೂರು ಹಾಗೂ ಬೈರಂಪಳ್ಳಿ ಭಾಗದ ಜನರಿಗೆ ಆಯುರ್ವೇದ ಚಿಕಿತ್ಸೆಯ ಮೂಲಕ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಕೊರೋನಾ ಮಹಾಮಾರಿ ಸಂದರ್ಭದಲ್ಲೂ ಜನರಿಗೆ ಸೂಕ್ತ ಮಾರ್ಗದರ್ಶನ ನೀಡಿ, ಆರೋಗ್ಯ ಜಾಗೃತಿ ಮೂಡಿಸಿ ಅಪಾರ ವಿಶ್ವಾಸ ಗಳಿಸಿದ್ದಾರೆ” ಎಂದು ಶ್ಲಾಘಿಸಿದರು. ಅವರು ಮುಂದುವರಿದು, “ಇತ್ತೀಚಿನ ದಿನಗಳಲ್ಲಿ ಅಲೋಪತಿ ಚಿಕಿತ್ಸೆಯತ್ತ ಜನರು ಹೆಚ್ಚು ಆಕರ್ಷಿತರಾಗುತ್ತಿರುವ ಸಂದರ್ಭದಲ್ಲೂ ಆಯುರ್ವೇದದ ಮಹತ್ವ, ಔಷಧಿಗಳ…
ಸುಳ್ಯ: ಜನತಾದಳ ಜಾತ್ಯತೀತ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಅವರು ಜೆಡಿಎಸ್ ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ ಅವರ ನಿವಾಸಕ್ಕೆ ಆಹ್ವಾನದ ಮೇರೆಗೆ ಗೌರವಯುತ ಸೌಹಾರ್ದ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪಕ್ಷ ಸಂಘಟನೆ ಬಲವರ್ಧನೆ, ಯುವಕರನ್ನು ಪಕ್ಷದತ್ತ ಸೆಳೆಯುವುದು ಹಾಗೂ ಗ್ರಾಮ ಮಟ್ಟದಲ್ಲಿ ಕಾರ್ಯಕರ್ತರನ್ನು ಇನ್ನಷ್ಟು ಸಕ್ರಿಯಗೊಳಿಸುವ ಕುರಿತು ಆತ್ಮೀಯ ಚರ್ಚೆ ನಡೆಯಿತು. ಪಕ್ಷದ ತತ್ವಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ನಾಯಕರು ಅಭಿಪ್ರಾಯಪಟ್ಟರು. ಸುಕುಮಾರ್ ಕೋಡ್ತುಗುಳಿ ಅವರು ಕಾರ್ಯಕರ್ತರ ಏಕತೆ, ನಿಷ್ಠೆ ಹಾಗೂ ಸಮರ್ಪಣಾಭಾವವೇ ಪಕ್ಷದ ನಿಜವಾದ ಶಕ್ತಿಯಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿ ಜನತಾದಳ ಜಿಲ್ಲಾಧ್ಯಕ್ಷ ನಿಹಾಲ್ ಕೋಡ್ತುಗುಳಿ ಅವರು ಯುವಕರನ್ನು ಸಮಾಜಮುಖಿ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. ಸೌಹಾರ್ದಯುತ ವಾತಾವರಣದಲ್ಲಿ ನಡೆದ ಈ ಭೇಟಿ ಹೊಸ ಉತ್ಸಾಹ ಮತ್ತು ಚೈತನ್ಯ ಮೂಡಿಸಿತು.
ಕೊಲ್ಕತ್ತಾ, ಮೇ 07: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ Suvendu Adhikari ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಘಟನೆ “ಪೂರ್ವಯೋಜಿತ ಹಾಗೂ ತಣ್ಣನೆಯ ರಕ್ತದ ಕೊಲೆ” ಎಂದು ಸುವೇಂದು ಅಧಿಕಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಉತ್ತರ 24 ಪರಗಣ ಜಿಲ್ಲೆಯ Madhyamgram ಪ್ರದೇಶದಲ್ಲಿ ಬುಧವಾರ ರಾತ್ರಿ ಈ ದಾಳಿ ನಡೆದಿದ್ದು, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಸಮೀಪದಿಂದಲೇ ಚಂದ್ರನಾಥ್ ರಥ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಆಸ್ಪತ್ರೆ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, “ಇದು ಸಾಮಾನ್ಯ ದಾಳಿ ಅಲ್ಲ. ದಾಳಿಕೋರರು ಎರಡು ರಿಂದ ಮೂರು ದಿನಗಳ ಕಾಲ ಹಿಂಬಾಲಿಸಿ, ಯೋಜಿತವಾಗಿ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ದೊರೆತಿದೆ,” ಎಂದು ಹೇಳಿದರು.ಪ್ರಾಥಮಿಕ ತನಿಖೆಯ ಪ್ರಕಾರ, ಚಂದ್ರನಾಥ್ ರಥ್ ಪ್ರಯಾಣಿಸುತ್ತಿದ್ದ ಮಹೀಂದ್ರ ಸ್ಕಾರ್ಪಿಯೋ ವಾಹನವನ್ನು ದುಷ್ಕರ್ಮಿಗಳು ಕಾರು ಮತ್ತು…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
