- ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಉಡುಪಿ ಪತ್ರಕರ್ತರ ಸಂಘ ಆಗ್ರಹ
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಆಗಸ್ಟ್ 23ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ “ಮರಿಯಾಳದ ಮಿನದನ” ಪೂರ್ವಭಾವಿ ಸಭೆ
- ₹5 ಕೋಟಿ ನಕಲಿ ಔಷಧಿ ಜಾಲ ಬಯಲು: ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಅಧಿಕಾರಿಗಳ ದಾಳಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಲೇಬಲ್ ಅಂಟಿಸಿ ಔಷಧಿಗಳ ಮರುಪ್ಯಾಕಿಂಗ್ – ಅವಧಿ ಮೀರಿದ ಔಷಧಿಗಳೂ ಪತ್ತೆ
- ಉಡುಪಿ: ತುಳುನಾಡಿನ ಸಂಸ್ಕೃತಿ, ಪರಂಪರೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಸೂರಜ್ ನಾಯಕ್ ಸೋನಿ
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
Author: Tulunada Surya
ಮಂಗಳೂರು, ಜೂನ್ 18: ಜನತಾದಳ (ಜಾತ್ಯತೀತ) ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ–203ರ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸದಸ್ಯರ ಮಹತ್ವದ ಸಭೆಯು ಜೂನ್ 19, 2026ರಂದು ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ.ಕ್ಷೇತ್ರದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವುದು, ಸದಸ್ಯತ್ವ ಅಭಿಯಾನವನ್ನು ವಿಸ್ತರಿಸುವುದು, ಮುಂಬರುವ ಕಾರ್ಯಕ್ರಮಗಳ ರೂಪುರೇಷೆ ಸಿದ್ಧಪಡಿಸುವುದು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ.ಸಭೆಯಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಹಾಗೂ ಜಿಲ್ಲೆಯ ಪ್ರಮುಖ ನಾಯಕರು ಭಾಗವಹಿಸಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಕ್ಷೇತ್ರದ ಸಂಘಟನಾ ಚಟುವಟಿಕೆಗಳು, ಮುಂದಿನ ಕಾರ್ಯಯೋಜನೆಗಳು ಹಾಗೂ ಪಕ್ಷದ ಬೆಳವಣಿಗೆಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಸಮಾಲೋಚನೆ ನಡೆಯಲಿದೆ.ಆದ್ದರಿಂದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲಾ ಪದಾಧಿಕಾರಿಗಳು, ಬೂತ್ ಮಟ್ಟದ ಮುಖಂಡರು, ಕಾರ್ಯಕರ್ತರು ಹಾಗೂ ಸದಸ್ಯರು ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಭೆಯ ಮಂಗಳೂರು ದಕ್ಷಿಣ ವಿಧಾನಸಭಾ…
ಮಂಗಳೂರು, ಜೂನ್ 17: ಜಪ್ಪಿನಮೊಗರು ಕಡೆಕಾರು ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ಪುನರ್‌ನಿರ್ಮಾಣ ಕಾರ್ಯಕ್ಕೆ ಬುಧವಾರ ಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ವೈಭವದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು. ಬ್ರಹ್ಮಶ್ರೀ ವೇದಮೂರ್ತಿ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ವೈದಿಕ ನೇತೃತ್ವದಲ್ಲಿ ನಡೆದ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶಿಲಾನ್ಯಾಸ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಿ, ಕ್ಷೇತ್ರದ ಅಭಿವೃದ್ಧಿ ಹಾಗೂ ಭಕ್ತರ ಸಮೃದ್ಧಿಗಾಗಿ ಶುಭ ಹಾರೈಸಿದರು. ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಹರಿಪ್ರಸಾದ್ ಜೆ. ಮಾತನಾಡಿ, ಸುಮಾರು 680 ವರ್ಷಗಳ ಐತಿಹಾಸಿಕ ಹಿನ್ನೆಲೆ ಹೊಂದಿರುವ ಶ್ರೀ ಮಲ್ಲಿಕಾರ್ಜುನ ಕ್ಷೇತ್ರವನ್ನು ಐದು ಅಡಿ ಎತ್ತರಿಸಿ ಪುನರ್‌ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಭಕ್ತರ ಸಹಕಾರ ಮತ್ತು ದಾನಿಗಳ ನೆರವಿನಿಂದ ಕ್ಷೇತ್ರದ ಪುನರ್‌ನಿರ್ಮಾಣ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಸಂಕಲ್ಪ ಹೊಂದಿರುವುದಾಗಿ ಅವರು ಹೇಳಿದರು. ಕಾರ್ಯಕ್ರಮದಲ್ಲಿ ಕ್ರಷ್ಣ ಪಾಲೆಮಾರ್, ವೀಣಾಮಂಗಳ, ಶಿವಾನಂದ ರಾವ್, ಜೆ. ಜಗದೀಶ್ ರಾವ್, ಜೆ. ಕೊರಗಪ್ಪ, ರಾಧಾಕೃಷ್ಣ, ನವೀನ್‌ಚಂದ್ರ,…
ಬೆಂಗಳೂರು : ಇತ್ತೀಚೆಗೆ ಹೋಟೆಲ್ ಸ್ಯಾಂಕ್ ಹೋಟೆಲ್ ಗಾಂಧಿನಗರ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾಧ್ಯಕ್ಷರ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಎಂ ಬಸವರಾಜ್ ಪಡಕೋಟೆ ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡದ ಉಸ್ತುವಾರಿಗಳಾದ ಸುಜಯ್ ಪೂಜಾರಿಯವರ ಸಮ್ಮುಖದಲ್ಲಿ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ಲಕ್ಷ್ಮಿ ಇವರು ನಮ್ಮ ಕರ್ನಾಟಕ ಸೇನೆ ನೂತನ ಉಡುಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಶ್ರೀಮತಿ ಅನಿತಾ ಬಿವಿ ಅವರನ್ನು ಆಯ್ಕೆಮಾಡಲಾಯಿತು. ನಂತರ ಅವರಿಗೆ ಶಾಲು ಧರಿಸಿ ಸನ್ಮಾನಿಸಲಾಯಿತು. ನಮ್ಮಕರ್ನಾಟಕ ಸೇನೆಯ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡದ ಉಸ್ತುವಾರಿಯಾಗಿ ಸುಜಯ್ ಪೂಜಾರಿರವರನ್ನು ರಾಜ್ಯಾಧ್ಯಕ್ಷರಾದ ಶ್ರೀ ಎಂ ಬಸವರಾಜ ಪಡುಕೋಟೆ ಯವರು ರಾಜ್ಯಸಭೆಯಲ್ಲಿ ಹೂ ಕುಚ್ಚ ನೀಡಿ ಅಭಿನಂದನೆಸಿದ್ರು ಉಡುಪಿ ಸಂಘಟನೆಯನ್ನು ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಹಾಗೂ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಅನಿತಾ ಬಿವಿ ನೇತೃತ್ವದಲ್ಲಿ ಮುನ್ನಡೆಸಿಕೊಂಡು ಹೋಗುವಂತೆ ಸೂಚನೆ ನೀಡಿರು ತ್ತಾರೆ. ಈ ಸಂದರ್ಭದಲ್ಲಿ ಕರವೇ ರಾಜ್ಯ ಗೌರವಾಧ್ಯಕ್ಷರು ಹಾಗೂ ಕನ್ನಡ ಚಲನಚಿತ್ರ ಖ್ಯಾತ ನಟರು.…
ಮಂಗಳೂರು, ಜೂನ್ 16: ಜನತಾದಳ ಜಾತ್ಯಾತೀತ (ಜೆಡಿಎಸ್) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಹಿಂದುಳಿದ ವರ್ಗಗಳ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಖ್ಯಾತ ನ್ಯಾಯವಾದಿ, ಸಮಾಜಸೇವಕ ಹಾಗೂ ಈ ಹಿಂದೆ ವಿದ್ಯಾರ್ಥಿ ಜನತಾದಳ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿನೋಧರ ಪೂಜಾರಿ ಅವರನ್ನು ಭಾರತ ಸರಕಾರದ ಉಕ್ಕು ಮತ್ತು ಕೈಗಾರಿಕ ಸಚಿವ ಮತ್ತು ಜೆಡಿಎಸ್ ರಾಜ್ಯಾದ್ಯಕ್ಷ ಎಚ್.ಡಿ. ಕುಮಾರಸ್ವಾಮಿಯವರ ಮಾರ್ಗದರ್ಶನದ ಮೇರೆಗೆ ನೇಮಕಗೊಳಿಸಲಾಗಿದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಾಕೆ ಮಾಧವ ಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿನೋಧರ ಪೂಜಾರಿ ಅವರು ಹಲವು ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿದ್ದು, ಸಮಾಜದ ವಿವಿಧ ವರ್ಗಗಳ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸಹಾಯ-ಸಹಕಾರ ನೀಡುತ್ತಿರುವ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ನ್ಯಾಯವಾದಿಯಾಗಿ ಜನಸಾಮಾನ್ಯರ ಹಕ್ಕುಗಳ ರಕ್ಷಣೆಗಾಗಿ ಹಾಗೂ ಕಾನೂನು ಸಲಹೆ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರು, ಸಂಘಟನಾ ಕ್ಷೇತ್ರದಲ್ಲಿಯೂ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಪ್ರಸ್ತುತ ಅವರು…
ಉಡುಪಿ, ಜೂನ್ 16: ಜಿಲ್ಲೆಯ ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯೊಂದಿಗೆ ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ, ಕೈಗಾರಿಕೆಗಳಿಗೆ ಅಗತ್ಯವಿರುವ ವೃತ್ತಿಪರ ಕೌಶಲ್ಯ ತರಬೇತಿಗಳನ್ನು ಯುವಜನರಿಗೆ ನೀಡುವಂತೆ ಕೈಗಾರಿಕಾ ತರಬೇತಿ ಸಂಸ್ಥೆಗಳು ಕಾರ್ಯೋನ್ಮುಖವಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ, ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಯಾಗಲಿದ್ದು, ಉದ್ಯೋಗ ಅರಸಿ ಹೊರ ಜಿಲ್ಲೆಗಳಿಗೆ ತೆರಳುವ ಪರಿಸ್ಥಿತಿ ಕಡಿಮೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಕೈಗಾರಿಕಾ ಬೆಳವಣಿಗೆಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದಕ್ಕೆ ಆದ್ಯತೆ ನೀಡುವಂತೆ ಸಂಬಂಧಿತ ಇಲಾಖೆಗೆ ಸೂಚಿಸಿದರು. ಈ ಶೈಕ್ಷಣಿಕ ವರ್ಷದಿಂದಲೇ ಜಿಲ್ಲೆಯ ಐಟಿಐ, ಡಿಪ್ಲೊಮಾ ಹಾಗೂ ಜಿಟಿಟಿಸಿ ಸಂಸ್ಥೆಗಳಲ್ಲಿ ಕೈಗಾರಿಕೆಗಳ ಬೇಡಿಕೆಗೆ ಅನುಗುಣವಾದ ಹೊಸ ತರಬೇತಿ…
ಮಂಗಳೂರು, ಜೂನ್ 16: ಜನತಾದಳ (ಜಾತ್ಯಾತೀತ) ಪಕ್ಷದ ಪುತ್ತೂರು ತಾಲೂಕು ಘಟಕವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಪಕ್ಷದ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ರವರಿಗೆ ಮಹತ್ವದ ಸಂಘಟನಾ ಜವಾಬ್ದಾರಿಯನ್ನು ವಹಿಸಿ ತಾಲೂಕು ಅದ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ತಿಳಿಸಿದ್ದಾರೆ. ಪಕ್ಷದ ರಾಜ್ಯ ನಾಯಕತ್ವ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನದ ಮೇರೆಗೆ ಈ ನೇಮಕಾತಿ ಮಾಡಲಾಗಿದ್ದು, ಪುತ್ತೂರು ತಾಲೂಕಿನಾದ್ಯಂತ ಪಕ್ಷದ ಸಂಘಟನೆ ವಿಸ್ತರಣೆ ಹಾಗೂ ಬಲವರ್ಧನೆ ಕಾರ್ಯಗಳನ್ನು ಪ್ರಭಾಕರ ಸಾಲ್ಯಾನ್ ಅವರು ಮುನ್ನಡೆಸಲಿದ್ದಾರೆ. ಪುತ್ತೂರು ತಾಲೂಕಿನಲ್ಲಿ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ತಾಲೂಕು ಘಟಕದ ಪುನರ್‌ರಚನೆ, ಗ್ರಾಮ ಸಮಿತಿಗಳ ರಚನೆ, ಬೂತ್ ಮಟ್ಟದ ಸಮಿತಿಗಳ ಸಂಘಟನೆ ಹಾಗೂ ಕಾರ್ಯಕರ್ತರ ಸಕ್ರಿಯ ಭಾಗವಹಿಸುವಿಕೆಗೆ ವಿಶೇಷ ಒತ್ತು ನೀಡಲಾಗುವುದು. ಅಲ್ಲದೆ, ಯುವಜನತೆ, ಮಹಿಳೆಯರು ಹಾಗೂ ವಿವಿಧ ವರ್ಗಗಳ ಜನರನ್ನು ಪಕ್ಷದೊಂದಿಗೆ ಇನ್ನಷ್ಟು ಸಂಪರ್ಕಿಸುವ ಉದ್ದೇಶದಿಂದ ಹಲವು ಜನಪರ ಹಾಗೂ ಸಂಘಟನಾ ಕಾರ್ಯಕ್ರಮಗಳನ್ನು…
ಮಂಗಳೂರು, ಜೂನ್ 16: ಜನತಾದಳ ಜಾತ್ಯಾತೀತ (ಜೆಡಿಎಸ್) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಮಹತ್ವದ ಸಭೆಯು ಮಂಗಳವಾರ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ರಮೀಝಾ ನಾಸೀರ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ಮಹಿಳಾ ಘಟಕದ ವಿಸ್ತರಣೆ, ಸದಸ್ಯತ್ವ ಅಭಿಯಾನ, ಬೂತ್ ಮಟ್ಟದ ಸಂಘಟನೆ, ಮುಂಬರುವ ರಾಜಕೀಯ ಕಾರ್ಯಕ್ರಮಗಳ ರೂಪುರೇಷೆ ಹಾಗೂ ಪಕ್ಷದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಮಹಿಳಾ ಉಪಾಧ್ಯಕ್ಷೆ ಶಾರದ ಶೆಟ್ಟಿ ಅತ್ತಾವರ ಅವರು ಪ್ರಾರ್ಥನೆ ನೆರವೇರಿಸಿದರು. ಜಿಲ್ಲಾ ಉಪಾಧ್ಯಕ್ಷೆ ಚೂಡಮಣಿ ಅವರು ಸ್ವಾಗತ ಭಾಷಣ ಮಾಡಿದರು. ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪಕ್ಷದ ಸಂಘಟನಾ ಚಟುವಟಿಕೆಗಳು, ಮಹಿಳಾ ಘಟಕದ ಜವಾಬ್ದಾರಿಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ವಿವರಿಸಿದರು. ಮಹಿಳಾ ಕಾರ್ಯಕರ್ತೆಯರು…
ದ್ರಾವಿಡ ಭಾಷಾ ಟ್ರಾನ್ಸ್‌ಲೇಟರ್ಸ್ ಅಸೋಸಿಯೇಷನ್ (ರಿ) ಬೆಂಗಳೂರು ಬೊಕ ‘ತೊದಲ್ನುಡಿ’ಜೋಕುಲೆ ಪತ್ತಾಯದ ಒತ್ತು ಸೇರಿಗೆಡ್ ರಾಜಬೂಡುದ ಶ್ರೀ ಸರಸ್ವತಿ ಎಜ್ಯುಕೇಶನ್ ಟ್ರಸ್ಟ್ ದ ಲೇಸ್‌ದ ಮಂಟಮೆಡ್ ಬಾರೀ ಸಂಬುರ್ಮೊಡು ನಡತ್ಂಡ್.ಅಸೋಸಿಯೇಷನ್ ದ ಗುರ್ಕಾರ್ಲು ಆದಿತ್ತಿನ ಡಾ.ಸೂಷ್ಮಾ ಶಂಕರ್ ಮೆರೆನ ಗುರ್ಕರ್ಮೆಡ್ ನಡತಿನ ಈ ಲೇಸ್‌ನ್ ಪುಗಾರ್ತೆದ ಚುಟುಕು ಕವಿ ಶ್ರೀ ಎಚ್ ದುಂಡಿರಾಜ್ ಉದಿಪನ ಮಂತೆರ್,ಡಾ ನಾ.ದಾ.ಶೆಟ್ಟಿ ತೊದಲ್ನುಡ ಜೋಕುಲೆ ಪತ್ಯಾಯ ಬುಡುಗಡೆ ಮಂತೆರ್,ಮಲ್ಲ ಬಿನ್ನೆರಾದ್,ಪುಗಾರ್ತೆದ ತಮಿಳ್ ಕವಿ ಶ್ರೀಮತಿ ವಾಧಿವಾಸಗಿ ದೇವಸಗಯಂ ಬತ್ತಿತ್ತೆರ್. ಲೇಸ್‌ಡ್ ಪಂಚ ದ್ರಾವಿಡ ಭಾಷೆಲಾಯಿನ ತಮಿಳ್,ತೆಲುಗು,ಮಲಿಯಾಳ,ತುಳು,ಕನ್ನಡ ಭಾಷೆಲೆಡ್ ಕಬಿತೆ ಪನಿಯೆರೆ ತೆನ್ಕಾಯಿ ಭಾರತೊದ ಬೇತೆ ಬೇತೆ ಮೂಲೆರ್ದ್ ಸುಮಾರ್ ಜನ ಕವಿನಕ್ಲು ಬತ್ತಿತ್ತೆರ್. ತುಲುನಾಡ್‌ದ ಪರವಾದ್ ತುಳು ಕವಿಕುಲಾಯಿನ ಶ್ರೀಮತಿ ಕುಶಲಾಕ್ಷಿ ವಿ ಕುಲಾಲ್ ಕಣ್ವತೀರ್ಥ, ಶ್ರೀಮತಿ ವಿಜಯಲಕ್ಷ್ಮೀ ಕಟೀಲ್, ಶ್ರೀಮತಿ ಅನುರಾಧ,ರಾಜೀವ್ ಸುರತ್ಕಲ್,ಶ್ರೀ ವಿಶ್ವಾಸ್ ಮಂಗಲ್ಪಾಡಿ, ಶ್ರೀಮತಿ ನಳಿನಿ ಕುಲಾಲ್, ಶ್ರೀಮತಿ ಲತಾ .ಬಿ ಮುಕುಲು ಪಾಲ್ ಪಡೆದಿತ್ತೆರ್.ಪಂಚ ಭಾಷೆ ಕವಿ ಸಂಗಮ ಪೋಸ…
ಉಡುಪಿ, ಜೂನ್ 15: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಮಹತ್ವದ ಸಂಘಟನಾ ಸಭೆಯು ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜಾ ಕೊಳಲಗಿರಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಸಂಘಟನೆಯ ಬಲವರ್ಧನೆ, ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ವಿವಿಧ ಘಟಕಗಳ ಸಂಘಟನಾ ವಿಸ್ತರಣೆಯ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಸಭೆಯ ಪ್ರಮುಖ ಘಟ್ಟವಾಗಿ ತುಳುನಾಡ ರಕ್ಷಣಾ ವೇದಿಕೆಯ ಬ್ರಹ್ಮಾವರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಶರತ್ ಅರೂರು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಅವರು ನೂತನ ಅಧ್ಯಕ್ಷರಿಗೆ ಆದೇಶ ಪತ್ರ ವಿತರಿಸಿ, ಶಾಲು ಹೊದಿಸಿ ಗೌರವ ಸನ್ಮಾನ ಮಾಡಿದರು. ನಂತರ ಮಾತನಾಡಿದ ಯೋಗೀಶ್ ಶೆಟ್ಟಿ ಜಪ್ಪು ಅವರು, ತುಳುನಾಡಿನ ಭಾಷೆ, ಸಂಸ್ಕೃತಿ, ಪರಂಪರೆ ಹಾಗೂ ಹಕ್ಕುಗಳ ಸಂರಕ್ಷಣೆಗಾಗಿ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ತಳಮಟ್ಟಕ್ಕೆ ವಿಸ್ತರಿಸುವ ಅಗತ್ಯವಿದೆ ಎಂದು ತಿಳಿಸಿದರು. ನೂತನ ಅಧ್ಯಕ್ಷ ಶರತ್ ಅರೂರು ಅವರು ಬ್ರಹ್ಮಾವರ ತಾಲೂಕಿನಲ್ಲಿ ಸಂಘಟನೆಯನ್ನು…
ಉಡುಪಿ, ಜೂನ್ 15: ಹಲವು ವರ್ಷಗಳಿಂದ ನಿರಂತರವಾಗಿ ರಕ್ತದಾನ ಮಾಡುತ್ತಾ, ರಕ್ತದಾನದ ಮಹತ್ವವನ್ನು ಸಮಾಜಕ್ಕೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ಸಾಮಾಜಿಕ ಕಾರ್ಯಕರ್ತ, ದೇಹದಾನಿ ಹಾಗೂ ರಕ್ತದಾನಿ ರಮೇಶ ಕರ್ಕೇರ ಉಗ್ಗೆಲ್ಬೆಟ್ಟು ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಶಾಖೆಯ ವತಿಯಿಂದ ನೀಡಲಾಗುವ ವಿಶೇಷ ಗೌರವ ಸನ್ಮಾನಕ್ಕೆ ಭಾಜನರಾಗಿದ್ದಾರೆ. ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯು ಸಮಾಜದಲ್ಲಿ ರಕ್ತದಾನದ ಕುರಿತು ಜಾಗೃತಿ ಮೂಡಿಸಿ, ನಿರಂತರವಾಗಿ ರಕ್ತದಾನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಇತರರಿಗೂ ಪ್ರೇರಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ರಮೇಶ ಕರ್ಕೇರ ಉಗ್ಗೆಲ್ಬೆಟ್ಟು ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ರಮೇಶ ಕರ್ಕೇರ ಅವರು ಹಲವು ವರ್ಷಗಳಿಂದ ಸ್ವಯಂಪ್ರೇರಿತ ರಕ್ತದಾನ ಮಾಡುತ್ತಾ ಬಂದಿರುವುದಲ್ಲದೆ, ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರಗಳನ್ನು ಆಯೋಜಿಸುವಲ್ಲಿ ಸಕ್ರಿಯ ಪಾತ್ರ ವಹಿಸಿದ್ದಾರೆ. ವಿಶೇಷವಾಗಿ ಕಳೆದ ಕೆಲವು ವರ್ಷಗಳಿಂದ ತಮ್ಮ ಜನ್ಮದಿನವನ್ನು ವಿಭಿನ್ನ ರೀತಿಯಲ್ಲಿ ಆಚರಿಸುತ್ತಾ, ರಕ್ತದಾನ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
