- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
- ಎಂಆರ್ಪಿಎಲ್ ಘಟಕದಲ್ಲಿ ಭಾರೀ ಸ್ಫೋಟದ ಸದ್ದು: ಬೆಂಕಿ, ದಟ್ಟ ಹೊಗೆಯಿಂದ ಸ್ಥಳೀಯರಲ್ಲಿ ಆತಂಕ
Author: Tulunada Surya
ಮೂಡುಬಿದಿರೆ, ಜುಲೈ 10: ಡಿಜಿಟಲ್ ಜಗತ್ತಿನಲ್ಲಿ ತಮ್ಮದೇ ಆದ ವಿಶಿಷ್ಟ ಗುರುತನ್ನು ಮೂಡಿಸಿ, ಉದ್ಯಮಶೀಲತೆ ಹಾಗೂ ಸೃಜನಶೀಲತೆಯ ಮೂಲಕ ಅಸಂಖ್ಯಾತ ಯುವಕರಿಗೆ ಸ್ಫೂರ್ತಿಯಾಗಿದ್ದ ಮೂಲತಃ ಮಿಜಾರು–ತೋಡಾರು ಕೇರ್ದಿಲದವರಾದ ಶ್ರೀ ಅತುಲ್ ಹೆಗ್ಡೆ ಅವರು ಜುಲೈ 7, 2026ರಂದು ಮುಂಬೈನ ತಮ್ಮ ಸ್ವಂತ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದ ಸುದ್ದಿ ಅತ್ಯಂತ ದುಃಖಕರವಾಗಿದೆ ಎಂದು ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ, ಶ್ರೀ ದಿಗಂಬರ ಜೈನ ಮಠ, ಮೂಡುಬಿದಿರೆ ಅವರು ಸಂತಾಪ ಸೂಚಿಸಿದ್ದಾರೆ.ಮಾರ್ಚ್ 27, 1973ರಂದು ಜನಿಸಿದ ಶ್ರೀ ಅತುಲ್ ಹೆಗ್ಡೆ ಅವರು ಕರ್ನಾಟಕದ ಮಣ್ಣಿನಲ್ಲಿ ಜನಿಸಿ, ಮುಂಬೈಯನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡು ಜಾಗತಿಕ ಡಿಜಿಟಲ್ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು. ಅವರು ಕೇವಲ ಯಶಸ್ವಿ ಉದ್ಯಮಿಯಾಗಿರದೆ, ಹೊಸ ತಲೆಮಾರಿನ ಕನಸುಗಳಿಗೆ ದಿಕ್ಕು ತೋರಿದ ಸೃಜನಶೀಲ ಚಿಂತಕರಾಗಿ ಗುರುತಿಸಿಕೊಂಡಿದ್ದರು. ಅಲ್ಪಾಯುಷ್ಯದಲ್ಲೇ ಸಾಧನೆಯ ಶಿಖರ ತಲುಪಿ ಸಮಾಜಕ್ಕೆ ಮಾದರಿಯಾಗಿರುವುದು ಅವರ ಜೀವನದ ವಿಶೇಷತೆಯಾಗಿದೆ.ಅವರ ತಂದೆ ಶ್ರೀ ಜೀವಂಧರ ಹೆಗ್ಡೆ ಅವರು ಇಂಡಿಯನ್ ಏರ್‌ಲೈನ್ಸ್‌ನಲ್ಲಿ…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ 2025–26ನೇ ಸಾಲಿನ 15ನೇ ವಾರ್ಷಿಕ ಸಾಮಾನ್ಯ ಸಭೆಯು ದಿನಾಂಕ 26-07-2026, ಭಾನುವಾರ ಪೂರ್ವಾಹ್ನ 10.30 ಗಂಟೆಗೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಸಂಘದ ಆಡಳಿತ ಕಚೇರಿ “ಆತ್ಮಶಕ್ತಿ ಸೌಧ” ಸಭಾಂಗಣ, ಬೈರಾಡಿಕರೆ ಹತ್ತಿರ, ಪಡೀಲ್, ಮಂಗಳೂರು ಇಲ್ಲಿ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ರಹ್ಮಾವರ, ಜುಲೈ 10: ಆರೂರು ಗ್ರಾಮದ ಅಡ್ಜಿಲು ಭಾಗದಲ್ಲಿ ತೀವ್ರ ವಿದ್ಯುತ್ ಓವರ್‌ಲೋಡ್, ಪದೇ ಪದೇ ಉಂಟಾಗುತ್ತಿರುವ ವಿದ್ಯುತ್ ಕಡಿತ ಹಾಗೂ ಕಡಿಮೆ ವೋಲ್ಟೇಜ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಹೆಚ್ಚುವರಿ ಟ್ರಾನ್ಸ್‌ಫಾರ್ಮರ್ ಅಳವಡಿಕೆ ಮತ್ತು ಹಳೆಯ ವಿದ್ಯುತ್ ತಂತಿಗಳ ಬದಲಿಗೆ ಹೊಸ ಗುಣಮಟ್ಟದ ತಂತಿಗಳನ್ನು ಅಳವಡಿಸುವಂತೆ ಒತ್ತಾಯಿಸಿ ತುಳುನಾಡ ರಕ್ಷಣಾ ವೇದಿಕೆ (ರಿ.), ಬ್ರಹ್ಮಾವರ ತಾಲೂಕು ಘಟಕ ವತಿಯಿಂದ ಶುಕ್ರವಾರ (ಜುಲೈ 10) ಬೆಳಿಗ್ಗೆ 11 ಗಂಟೆಗೆ ಮೆಸ್ಕಾಂ ಬ್ರಹ್ಮಾವರ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಕಾರ್ಯ ಮತ್ತು ಪಾಲನಾ ಉಪವಿಭಾಗ, ಮೆಸ್ಕಾಂ ಬ್ರಹ್ಮಾವರರಾದ ಶ್ರೀ ಸತೀಶ್ ಎಚ್. ಅವರಿಗೆ ಮನವಿ ಪತ್ರ ಸಲ್ಲಿಸಿ, ಗ್ರಾಮಸ್ಥರ ಬಹುಕಾಲದ ಸಮಸ್ಯೆಗೆ ತುರ್ತು ಪರಿಹಾರ ಕಲ್ಪಿಸುವಂತೆ ಮನವಿ ಮಾಡಲಾಯಿತು. ಮನವಿಯಲ್ಲಿ ತಿಳಿಸಿರುವಂತೆ, ಆರೂರು ಗ್ರಾಮದ ಅಡ್ಜಿಲು ಭಾಗದಲ್ಲಿ ಸುಮಾರು 763 ಕುಟುಂಬಗಳು ವಾಸಿಸುತ್ತಿದ್ದು, ಒಟ್ಟು 3,609 ಜನಸಂಖ್ಯೆ ಇದೆ. ದಿನದಿಂದ ದಿನಕ್ಕೆ ಜನಸಂಖ್ಯೆ ಹಾಗೂ…
ಮಂಗಳೂರು, ಜುಲೈ 9: ಸುರತ್ಕಲ್ ಸಮೀಪದ ಕಾಟಿಪಳ್ಳದ ಅಲ್ ಬದ್ರಿಯಾ ಮದರಸಕ್ಕೆ ನುಗ್ಗಿ ಉಸ್ತಾದ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ದಂಪತಿ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಲಭ್ಯ ಮಾಹಿತಿಯಂತೆ, ಮದರಸೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 12 ವರ್ಷದ ಬಾಲಕನಿಗೆ ಶಿಸ್ತು ಕ್ರಮದ ಭಾಗವಾಗಿ ಉಸ್ತಾದ್ ಉಮರ್ ಫಾರೂಕ್ ಬೆತ್ತದಿಂದ ಹೊಡೆದಿದ್ದಾರೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಬಾಲಕನ ತಂದೆ ಸಂಬುದ್ದೀನ್ ಹಾಗೂ ಅವರ ಪತ್ನಿ ಮದರಸೆಗೆ ಆಗಮಿಸಿ ಉಸ್ತಾದ್ ಉಮರ್ ಫಾರೂಕ್ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಘಟನೆ ವೇಳೆ ಮದರಸೆಯೊಳಗೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.ಈ ಸಂಬಂಧ ಅಲ್ ಬದ್ರಿಯಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಎಂ.ಎ. ಹನೀಫ್ ನೀಡಿದ ದೂರಿನ ಮೇರೆಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಸಂಬುದ್ದೀನ್ ಹಾಗೂ ಅವರ ಪತ್ನಿಯ ವಿರುದ್ಧ ಪ್ರಕರಣ ದಾಖಲಾಗಿದೆ.ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಕಲಂ…
ಉಡುಪಿ, ಜು. 9: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆದರ್ಶ ಆಸ್ಪತ್ರೆಯ ರಕ್ತಸಂಗ್ರಹ ಘಟಕ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಕುರಿತು ಹರಿದಾಡುತ್ತಿರುವ ಆರೋಪಗಳು ಮತ್ತು ವದಂತಿಗಳು ಸಂಪೂರ್ಣ ಆಧಾರರಹಿತವಾಗಿದ್ದು, ಆಸ್ಪತ್ರೆಗಳ ಕಾರ್ಯವೈಖರಿ ಕಾನೂನುಬದ್ಧ ಹಾಗೂ ಸರ್ಕಾರದ ನಿಯಮಾವಳಿಗಳ ಅನುಸಾರವೇ ನಡೆಯುತ್ತಿದೆ ಎಂದು ಆದರ್ಶ ಆಸ್ಪತ್ರೆಯ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಆದರ್ಶ ಆಸ್ಪತ್ರೆಯಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆ, ಕ್ಯಾನ್ಸರ್ ಚಿಕಿತ್ಸೆಗಳು, ನರರೋಗ ಶಸ್ತ್ರಚಿಕಿತ್ಸೆಗಳು, ತುರ್ತು ಅಪಘಾತ ಚಿಕಿತ್ಸೆಗಳು ಸೇರಿದಂತೆ ಅನೇಕ ವಿಶೇಷ ಚಿಕಿತ್ಸಾ ವಿಭಾಗಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಸಂಕೀರ್ಣ ಚಿಕಿತ್ಸೆಗಳಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ಸುರಕ್ಷಿತ ರಕ್ತದ ಅಗತ್ಯವಿರುವುದರಿಂದ ಆಸ್ಪತ್ರೆಯಲ್ಲಿ ಅಧಿಕೃತ ಅನುಮತಿ ಪಡೆದ ರಕ್ತಸಂಗ್ರಹ ಘಟಕ (Blood Storage Centre) ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದೆ. ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ರಕ್ತನಿಧಿ (Blood Bank) ಅಲ್ಲ, ಬದಲಾಗಿ ಸಂಬಂಧಿತ ಅಧಿಕಾರಿಗಳ ಅನುಮತಿ ಹಾಗೂ ಪರವಾನಗಿಯೊಂದಿಗೆ ಕಾರ್ಯನಿರ್ವಹಿಸುವ ರಕ್ತಸಂಗ್ರಹ ಘಟಕವಾಗಿದೆ. ಈ ಘಟಕವು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿಯಮಗಳು, ಆರೋಗ್ಯ ಇಲಾಖೆಯ ಮಾರ್ಗಸೂಚಿಗಳು…
ಮಂಗಳೂರು, ಜುಲೈ 9: ಸುರತ್ಕಲ್‌ನ ಕೃಷ್ಣಾಪುರದಲ್ಲಿ ಉಸ್ತಾದರೊಬ್ಬರ ಮೇಲೆ ನಡೆದಿರುವ ಹಲ್ಲೆ ಘಟನೆ ಅತ್ಯಂತ ಖಂಡನೀಯವಾಗಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೂ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಅಧ್ಯಕ್ಷರು, ಸುರತ್ಕಲ್ ಮದರಸಾ ಮ್ಯಾನೇಜ್‌ಮೆಂಟ್ ಹಾಗೂ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷ ಇಕ್ಬಲ್ ಮೂಲ್ಕಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಧಾರ್ಮಿಕ ಶಿಕ್ಷಣದ ಮೂಲಕ ಸಮಾಜದಲ್ಲಿ ನೈತಿಕ ಮೌಲ್ಯಗಳು, ಶಿಸ್ತು ಹಾಗೂ ಸೌಹಾರ್ದತೆಯನ್ನು ಬೆಳೆಸುವ ಜವಾಬ್ದಾರಿಯನ್ನು ಹೊತ್ತಿರುವ ಉಸ್ತಾದರ ಮೇಲೆ ಹಲ್ಲೆ ನಡೆಸಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಹ ದುರ್ಘಟನೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಯಾವುದೇ ವ್ಯಕ್ತಿಯ ವಿರುದ್ಧ ಅಸಮಾಧಾನ, ಭಿನ್ನಾಭಿಪ್ರಾಯ ಅಥವಾ ಆರೋಪಗಳಿದ್ದರೂ ಅವುಗಳನ್ನು ಕಾನೂನಿನ ಚೌಕಟ್ಟಿನೊಳಗೆ ಪರಿಹರಿಸಬೇಕು. ಮಸೀದಿ ಆಡಳಿತ ಮಂಡಳಿ, ಮದರಸಾ ಸಮಿತಿ ಅಥವಾ ಪೊಲೀಸ್ ಇಲಾಖೆಯ ಮೂಲಕ ಸೂಕ್ತ ದೂರು ನೀಡಿ ನ್ಯಾಯ ಪಡೆಯುವ ಅವಕಾಶ ಇರುವಾಗ, ಕಾನೂನನ್ನು ಕೈಗೆತ್ತಿಕೊಂಡು ಹಲ್ಲೆ ನಡೆಸುವುದು…
ಸುಳ್ಯ, ಜುಲೈ 8: ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಮುಖ ಪದಾಧಿಕಾರಿಗಳ ಸಭೆಯು ಜುಲೈ 12ರಂದು ಸುಳ್ಯ ತಾಲೂಕು ಕಚೇರಿ ಬಳಿಯ ಬ್ರಹ್ಮ ಶ್ರೀ ಸಭಾಂಗಣದಲ್ಲಿ ರವಿವಾರ ಬೆಳಿಗ್ಗೆ 10 ಗಂಟೆಗೆ ಸುಳ್ಯ ತಾಲೂಕು ಅದ್ಯಕ್ಷ ಸುಕುಮಾರ್ ಕೋಡ್ತುಗುಳಿ ಯವರ ಅದ್ಯಕ್ಷತೆಯಲ್ಲಿ ಜರಗಲಿರುವುದು, ಪಕ್ಷದ ಸಂಘಟನೆ ಬಲವರ್ಧನೆ ಹಾಗೂ ತಳಮಟ್ಟದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ಜಿಲ್ಲಾ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಕುರಿತು ಸಮಗ್ರ ಚರ್ಚೆ ನಡೆಯಲಿದ್ದು, ಮುಂಬರುವ ರಾಜಕೀಯ ಬೆಳವಣಿಗೆಗಳು, ಸದಸ್ಯತ್ವ ಅಭಿಯಾನ, ಪಕ್ಷದ ಕಾರ್ಯಕ್ರಮಗಳ ವಿಸ್ತರಣೆ ಹಾಗೂ ಗ್ರಾಮ ಮಟ್ಟದಲ್ಲಿ ಸಂಘಟನೆಯನ್ನು ಪರಿಣಾಮಕಾರಿಯಾಗಿ ಮಾಡುವ ಬಗ್ಗೆ ವಿಶೇಷ ಕಾರ್ಯಯೋಜನೆ ರೂಪಿಸಲಾಗುತ್ತದೆ. ಸಭೆಯಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ ಹಾಗೂ ರಾಜ್ಯ ಉಪಾಧ್ಯಕ್ಷರಾದ ಎಂ.ಬಿ ಸದಾಶಿವರವರು, ಮಾಜಿ ಜಿಲ್ಲಾದ್ಯಕ್ಷರಾದ ಮಹಮ್ಮದ್ ಕುಂಇ್, ಜಿಲ್ಲಾ ಕಾರ್ಯದ್ಯಕ್ಷರುಗಳಾದ ಇಕ್ಬಲ್ ಅಹಮದ್ ಮುಲ್ಕಿ , ವಸಂತ ಪೂಜಾರಿ , ಶಶಿರಾಜ್…
ಪುತ್ತೂರು, ಜುಲೈ 8: ಕಂಬಳ ಕ್ಷೇತ್ರದ ಖ್ಯಾತ ವೀಕ್ಷಕ ವಿವರಣೆಗಾರ, ಕಾಂಗ್ರೆಸ್ ಮುಖಂಡ ಹಾಗೂ ಪುತ್ತೂರು ಭೂನ್ಯಾಯ ಮಂಡಳಿ ಸದಸ್ಯ ನಿರಂಜನ್ ರೈ ಮಠಂತಬೆಟ್ಟು (60) ಅವರು ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದರು. ಪುತ್ತೂರಿನ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆಯುತ್ತಿದ್ದ ಭೂನ್ಯಾಯ ಮಂಡಳಿ ನ್ಯಾಯಾಲಯದ ಕಲಾಪದಲ್ಲಿ ಭಾಗವಹಿಸಿದ್ದ ವೇಳೆ ಅವರಿಗೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿ ಕುಸಿದುಬಿದ್ದರು. ತಕ್ಷಣವೇ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರ ಎಲ್ಲಾ ಪ್ರಯತ್ನಗಳ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ನಿರಂಜನ್ ರೈ ಮಠಂತಬೆಟ್ಟು ಅವರು ಕಂಬಳ ಲೋಕದಲ್ಲಿ ತಮ್ಮ ವಿಶಿಷ್ಟ ತುಳು ವೀಕ್ಷಕ ವಿವರಣೆ ಹಾಗೂ ಮನಮೋಹಕ ನಿರೂಪಣೆಯ ಮೂಲಕ ಅಪಾರ ಜನಮನ್ನಣೆ ಗಳಿಸಿದ್ದರು. ಅವರ ಧ್ವನಿ ಮತ್ತು ಶೈಲಿ ಕಂಬಳ ಪ್ರೇಮಿಗಳ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದಿತ್ತು. ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿಯೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕೋಡಿಂಬಾಡಿ ಮಹಿಷಮರ್ದಿನಿ ದೇವಳದ ಆಡಳಿತ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ, ಪುತ್ತೂರು ಕೋಟಿ-ಚೆನ್ನಯ ಕಂಬಳ…
ಉಡುಪಿ, ಜುಲೈ 8: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪದ ಖಾಸಗಿ ರೆಸಾರ್ಟ್‌ನಲ್ಲಿ ಅಂದರ್-ಬಾಹರ್ ಇಸ್ಪೀಟು ಜುಗಾರಿ ಆಟ ನಡೆಯುತ್ತಿದ್ದ ವೇಳೆ ಪೊಲೀಸರು ದಿಢೀರ್ ದಾಳಿ ನಡೆಸಿ 26 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಮಾಹಿತಿಯ ಪ್ರಕಾರ, ರೆಸಾರ್ಟ್‌ನಲ್ಲಿ ಮೆಹಂದಿ ಕಾರ್ಯಕ್ರಮ ಮುಕ್ತಾಯಗೊಂಡ ಬಳಿಕ ಕೆಲವರು ಸೇರಿ ಹಣ ಪಣಕ್ಕಿಟ್ಟು ಅಂದರ್-ಬಾಹರ್ ಜುಗಾರಿ ಆಟದಲ್ಲಿ ತೊಡಗಿದ್ದರು. ಈ ಜುಗಾರಿ ಅಡ್ಡೆಯಲ್ಲಿ ಕೆಲವು ಉದ್ಯಮಿಗಳು ಸಹ ಭಾಗಿಯಾಗಿದ್ದರು ಎನ್ನಲಾಗಿದೆ.ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ 26 ಮಂದಿಯನ್ನು ವಶಕ್ಕೆ ಪಡೆದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಿಂದ ಜುಗಾರಿ ಆಟಕ್ಕೆ ಬಳಸಲಾಗುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ಬಂಧಿತರ ಸಂಪೂರ್ಣ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ವಶಕ್ಕೆ ಪಡೆದವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ನಿರೀಕ್ಷೆಯಿದೆ.
ಬೆಂಗಳೂರು, ಜುಲೈ 8: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ನಡೆಸುವ ಪ್ರಕ್ರಿಯೆಗೆ ರಾಜ್ಯ ಚುನಾವಣಾ ಆಯೋಗ ಅಧಿಕೃತವಾಗಿ ವೇಗ ನೀಡಿದೆ. ರಾಜ್ಯ ಸರ್ಕಾರದಿಂದ ಚುನಾವಣೆ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಮಹತ್ವದ ಸೂಚನೆಗಳನ್ನು ಈಗಾಗಲೇ ಹೊರಡಿಸಲಾಗಿದ್ದು, ಗ್ರಾಮೀಣ ಭಾಗದಲ್ಲಿ ಚುನಾವಣೆಯ ಕಾವೇರತೊಡಗಿದೆ.2027ರ ಮಾರ್ಚ್ ಅಂತ್ಯದೊಳಗೆ ಅವಧಿ ಮುಕ್ತಾಯಗೊಳ್ಳಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಹೊಸದಾಗಿ ಪುನರ್‌ರಚನೆಯಾಗಿರುವ 42 ಗ್ರಾಮ ಪಂಚಾಯಿತಿಗಳಿಗೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಯೋಗ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.ಚುನಾವಣೆ ಪ್ರಕ್ರಿಯೆಯನ್ನು ಅತ್ಯಂತ ಸುಗಮ ಮತ್ತು ಪಾರದರ್ಶಕವಾಗಿ ನಡೆಸಲು ಆಯೋಗ ಅಧಿಕಾರಿಗಳಿಗೆ ಹೊಸದೊಂದು ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ. ಇದರ ಪ್ರಕಾರ, ಪ್ರತಿ ಗ್ರಾಮ ಪಂಚಾಯಿತಿಗೊಂದು ‘ಗ್ರೂಪ್-ಬಿ’ ವರ್ಗದ ಅಧಿಕಾರಿಯನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗುತ್ತದೆ. ಈ ಚುನಾವಣಾಧಿಕಾರಿಗಳ ಕೆಲಸದಲ್ಲಿ ನಿರ್ವಾಹಕರು, ಶಿರಸ್ತೇದಾರ್, ಸೂಪರಿಂಟೆಂಡೆಂಟ್ ಅಥವಾ ವ್ಯವಸ್ಥಾಪಕ ಹುದ್ದೆಯ ಅಧಿಕಾರಿಗಳನ್ನು ಸಹಾಯಕ ಚುನಾವಣಾಧಿಕಾರಿಗಳಾಗಿ ನಿಯೋಜಿಸಲು ಸೂಚಿಸಲಾಗಿದೆ. ಯಾರದ್ದೇ ಕಾರಣಕ್ಕೂ ಅಧಿಕಾರಿಗಳ ಸ್ವಂತ ಊರು ಅಥವಾ ಅವರ ಕ್ಷೇತ್ರಕ್ಕೆ ಅವರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
