- ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಉಡುಪಿ ಪತ್ರಕರ್ತರ ಸಂಘ ಆಗ್ರಹ
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಆಗಸ್ಟ್ 23ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ “ಮರಿಯಾಳದ ಮಿನದನ” ಪೂರ್ವಭಾವಿ ಸಭೆ
- ₹5 ಕೋಟಿ ನಕಲಿ ಔಷಧಿ ಜಾಲ ಬಯಲು: ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಅಧಿಕಾರಿಗಳ ದಾಳಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಲೇಬಲ್ ಅಂಟಿಸಿ ಔಷಧಿಗಳ ಮರುಪ್ಯಾಕಿಂಗ್ – ಅವಧಿ ಮೀರಿದ ಔಷಧಿಗಳೂ ಪತ್ತೆ
- ಉಡುಪಿ: ತುಳುನಾಡಿನ ಸಂಸ್ಕೃತಿ, ಪರಂಪರೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಸೂರಜ್ ನಾಯಕ್ ಸೋನಿ
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
Author: Tulunada Surya
ಬೆಂಗಳೂರು, ಜೂನ್ 10: ರಾಜ್ಯಸಭಾ ಟಿಕೆಟ್ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೆಗೌಡರವರು ಸ್ಪಷ್ಟನೆ ನೀಡಿದ್ದು, ರಾಜ್ಯಸಭಾ ಸದಸ್ಯನಾಗಬೇಕೆಂಬ ಯಾವುದೇ ವ್ಯಾಮೋಹ ಅಥವಾ ಹಂಬಲ ತಮ್ಮಲ್ಲಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ತಮ್ಮ ಏಳು ದಶಕಗಳ ಸುದೀರ್ಘ ರಾಜಕೀಯ ಪಯಣವನ್ನು ಸ್ಮರಿಸಿ, “1954-55ರಿಂದಲೇ ನಾನು ಸಕ್ರಿಯ ರಾಜಕಾರಣದಲ್ಲಿ ತೊಡಗಿದ್ದೇನೆ. ಗುತ್ತಿಗೆ ಕೆಲಸದ ಜೊತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ರಾಜಕೀಯ ಜೀವನ ಆರಂಭಿಸಿದ್ದೆ. ಅಂದಿನಿಂದ ಇಂದಿನವರೆಗೆ ಜನರ ನಡುವೆ ಕೆಲಸ ಮಾಡುತ್ತಾ ಬಂದಿದ್ದೇನೆ. ಹೀಗಿರುವಾಗ ಇಂದು ಯಾವುದೇ ಹುದ್ದೆ ಅಥವಾ ಸ್ಥಾನಕ್ಕಾಗಿ ಹಾತೊರೆಯುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು. ರಾಜ್ಯಸಭಾ ಟಿಕೆಟ್ ಕೈತಪ್ಪಿರುವುದು ತಮ್ಮಗೆ ಅಪಮಾನವಾಗಿದೆ ಎಂಬ ಬೆಂಬಲಿಗರ ಅಭಿಪ್ರಾಯಗಳ ಕುರಿತು ಪ್ರತಿಕ್ರಿಯಿಸಿದ ದೇವೇಗೌಡರು, “ನನ್ನ ಸ್ನೇಹಿತರು ಮತ್ತು ಹಿತೈಷಿಗಳು ಕಾಳಜಿಯಿಂದ ಮಾತನಾಡುತ್ತಿದ್ದಾರೆ. ಆದರೆ ನನ್ನ ಹೆಸರು ಪರಿಗಣನೆಯಲ್ಲಿದೆ ಎಂಬುದು ಮಾಧ್ಯಮಗಳ ವರದಿಗಳಲ್ಲಷ್ಟೇ ಕೇಳಿಬಂದಿದ್ದು,…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಘದ ಸದಸ್ಯರಾದ ಶ್ರೀ ವಿಜಯ್ ಕುಮಾರ್, ಶ್ರೀ ಪುರುಷೋತ್ತಮ ಕೆ., ಶ್ರೀ ಗೋಪಾಲ್ ಯು.ಕೆ. ಹಾಗೂ ಶ್ರೀಮತಿ ದೇವಕಿ ಆರ್. ಉಳ್ಳಾಲ್ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸಂಘದ ಸದಸ್ಯರಾದ ಶ್ರೀ ವಿಜಯ್ ಕುಮಾರ್ ಅವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರವಾಗಿ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಸಿಬ್ಬಂದಿಗಳ ನಗುಮುಖದ ಸೇವೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘವು ಇತರ ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಿರುವುದು ಶ್ಲಾಘನೀಯ” ಎಂದರು.ಸಂಘದ ಸದಸ್ಯರಾದ ಶ್ರೀ ಪುರುಷೋತ್ತಮ ಕೆ. ಅವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ” ಎಂದರು.ಸಂಘದ ಸದಸ್ಯರಾದ…
ಮಂಗಳೂರು, ಜೂನ್ 10: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಬರುವ ರೋಗಿಗಳೊಂದಿಗೆ ಪರಿಣಾಮಕಾರಿ ಸಂವಹನ ನಡೆಸುವ ಉದ್ದೇಶದಿಂದ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಕನ್ನಡ ಭಾಷೆಯ ಬಳಕೆಗೆ ಆದ್ಯತೆ ನೀಡುವ ಕ್ರಮಕ್ಕೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ವಿದ್ಯಾರ್ಥಿಗಳು ಉತ್ತಮ ಸ್ಪಂದನೆ ವ್ಯಕ್ತಪಡಿಸಿದ್ದಾರೆ ಎಂದು ಕೆಎಂಸಿ ಡೀನ್ ಡಾ. ಬಿ. ಉಣ್ಣಿಕೃಷ್ಣನ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪ್ರತಿದಿನ ಸಾವಿರಾರು ರೋಗಿಗಳು ವೆನ್‌ಲಾಕ್ ಆಸ್ಪತ್ರೆಗೆ ಆಗಮಿಸುತ್ತಾರೆ. ಅವರಲ್ಲಿ ಹೆಚ್ಚಿನವರು ಕನ್ನಡ ಭಾಷೆಯನ್ನೇ ಮಾತನಾಡುವವರಾಗಿದ್ದು, ಕೆಲ ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಇಂಟರ್ನ್‌ಗಳು ಕನ್ನಡದಲ್ಲಿ ಸಂವಹನ ನಡೆಸದ ಕಾರಣ ರೋಗಿಗಳಿಗೆ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಇತ್ತೀಚೆಗೆ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸರಕಾರಿ ವೆನ್ಲಾಕ್ ಆಸ್ಪತ್ರೆ ಜಿಲ್ಲಾ ವೈದ್ಯಾಧಿಕಾರಿ (DMO) ಡಾ.ಶಿವಪ್ರಕಾಶ್ ರವರು ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸುವಂತೆ ಸೂಚನೆ ನೀಡಿದ್ದು, ಹೊರರಾಜ್ಯಗಳಿಂದ ಆಗಮಿಸುವ ವೈದ್ಯಕೀಯ ವಿದ್ಯಾರ್ಥಿಗಳು ಮೂರು ತಿಂಗಳೊಳಗೆ ಕನ್ನಡ ಕಲಿಯಬೇಕು ಎಂದು ನಿರ್ದೇಶನ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಡಾ. ಬಿ.…
ಬೈರಂಪಳ್ಳಿ: ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳರ್ಪಾಡಿಗ್ರಾಮದ ಮಾಣೈ ಹರಿಖಂಡಿಗೆ ರಸ್ತೆ ಸಮೀಪ ಇರುವ ಸರ್ಕಾರಿ ಆಟದ ಮೈದಾನವನ್ನು ಅತಿಕ್ರಮಿಸುವ ಪ್ರಯತ್ನವನ್ನು ತಡೆಯುವಲ್ಲಿ ತುಳುನಾಡ ರಕ್ಷಣಾ ವೇದಿಕೆ ಮಹತ್ವದ ಪಾತ್ರ ವಹಿಸಿದ್ದು, ಸುಮಾರು 38 ವರ್ಷಗಳಿಂದ ಗ್ರಾಮಸ್ಥರು, ಮಕ್ಕಳು ಹಾಗೂ ಯುವಕರು ಬಳಸಿಕೊಂಡು ಬರುತ್ತಿದ್ದ ಮೈದಾನವನ್ನು ಪುನಃ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿದೆ. ಸ್ಥಳೀಯ ಖಾಸಗಿ ವ್ಯಕ್ತಿಗಳು ಸರ್ಕಾರಿ ಜಾಗವನ್ನು ತಮ್ಮದಾಗಿಸಿಕೊಳ್ಳುವ ಉದ್ದೇಶದಿಂದ ವಾಲಿಬಾಲ್ ಮೈದಾನದ ಮಧ್ಯಭಾಗದಲ್ಲಿ ಜೆಸಿಬಿ ಮೂಲಕ ಹೊಂಡ ತೋಡಿ, ಕ್ರೀಡಾ ಚಟುವಟಿಕೆಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿತ್ತು. ಈ ಬಗ್ಗೆ ಗ್ರಾಮಸ್ಥರು ಹಾಗೂ ಯುವಕರು ತುಳುನಾಡ ರಕ್ಷಣಾ ವೇದಿಕೆಯನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ಪ್ರಾಂಕಿ ಡಿಸೋಜ ಅವರ ನೇತೃತ್ವದಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ, ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಬೈರಂಪಳ್ಳಿ ಘಟಕದ ಅಧ್ಯಕ್ಷ ಕೃಷ್ಣಾನಂದ ನಾಯಕ್ ಹಾಗೂ ಉಪಾಧ್ಯಕ್ಷ ಗುಣಾಕಾರ್ ಸೇರಿದಂತೆ ಪ್ರಮುಖರು ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು. ದೂರಿನ ಮೇರೆಗೆ…
ಮಂಗಳೂರು, ಜೂನ್ 9: ಜೆಇಇ ಅಡ್ವಾನ್ಸ್-2026 ಪರೀಕ್ಷೆಯಲ್ಲಿ ಆಲ್ ಇಂಡಿಯಾ ರ‍್ಯಾಂಕ್ (ಎಐಆರ್) 79 ಹಾಗೂ ಜೆಇಇ ಮೈನ್ಸ್-2026 ಪರೀಕ್ಷೆಯಲ್ಲಿ ಆಲ್ ಇಂಡಿಯಾ ರ‍್ಯಾಂಕ್ 335 ಗಳಿಸುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೆಂದೂರ್ ವೆಲ್ ನಿವಾಸಿ ಪ್ರತಿಭಾವಂತ ವಿದ್ಯಾರ್ಥಿ ಬಿ. ವಿಶ್ರುತ್ ಕೃಷ್ಣ ಆರ್. ಭಟ್ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ದೇಶದ ಅತ್ಯಂತ ಕಠಿಣ ಮತ್ತು ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾದ ಜೆಇಇ ಅಡ್ವಾನ್ಸ್‌ನಲ್ಲಿ ವಿಶ್ರುತ್ ಸಾಧಿಸಿರುವ ಯಶಸ್ಸು ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಮುದಾಯಕ್ಕೆ ಪ್ರೇರಣಾದಾಯಕವಾಗಿದೆ ಎಂದು ಹೇಳಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಟಾಪರ್ ಆಗಿ ಹೊರಹೊಮ್ಮಿರುವುದರ ಜೊತೆಗೆ ಕರ್ನಾಟಕದ ಅಗ್ರ ಹತ್ತು ವಿದ್ಯಾರ್ಥಿಗಳ ಪೈಕಿ ಸ್ಥಾನ ಪಡೆದಿರುವುದು ಜಿಲ್ಲೆಯ ಶೈಕ್ಷಣಿಕ ಸಾಮರ್ಥ್ಯವನ್ನು ರಾಷ್ಟ್ರ ಮಟ್ಟದಲ್ಲಿ ಅನಾವರಣಗೊಳಿಸಿದೆ ಎಂದು…
ಮಂಗಳೂರು, ಜೂನ್ 9: ಸಮಾಜಸೇವೆಯ ಮೂಲಕ ದಿವಂಗತ ತಾಯಿಯ ಆದರ್ಶವನ್ನು ಜೀವಂತವಾಗಿರಿಸುವ ಉದ್ದೇಶದಿಂದ ಮೂಡುಶೆಡ್ಡೆ ಹೊಸಲಕ್ಕೆ ಕುಟುಂಬವು ಮಾನವೀಯ ಕಾರ್ಯವೊಂದನ್ನು ನೆರವೇರಿಸಿದೆ. ದಿವಂಗತ ದೇವಕಿ ಸಂಜೀವ ಶೆಟ್ಟಿ ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಬಡ ಕುಟುಂಬಕ್ಕೆ ನೂತನವಾಗಿ ನಿರ್ಮಿಸಲಾದ ಸುಸಜ್ಜಿತ ಮನೆಯ ಹಸ್ತಾಂತರ ಕಾರ್ಯಕ್ರಮ ಮಂಗಳವಾರ ನೆರವೇರಿತು. ಮೂಡುಶೆಡ್ಡೆ ನೇಜಿಗುರಿಯ ನಿವಾಸಿ ಗಿರಿಜ ಅವರ ಕುಟುಂಬವು ಹಲವು ವರ್ಷಗಳಿಂದ ವಾಸದ ಸಂಕಷ್ಟ ಅನುಭವಿಸುತ್ತಿದ್ದು, ಅವರ ಮನೆ ಸಂಪೂರ್ಣವಾಗಿ ಕುಸಿದುಬಿದ್ದ ಹಿನ್ನೆಲೆಯಲ್ಲಿ ವಕೀಲ ಉಮೇಶ್ ಶೆಟ್ಟಿ ಹೊಸಲಕ್ಕೆ ಹಾಗೂ ಅವರ ಸಹೋದರರು ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನೂತನ ಮನೆ ನಿರ್ಮಿಸಿ ಕೊಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ, ಮನೆಯ ಕೀಲಿಯನ್ನು ಕುಟುಂಬಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಕೀಲ ಉಮೇಶ್ ಶೆಟ್ಟಿ ಹೊಸಲಕ್ಕೆ, “ನಮ್ಮ ತಾಯಿ ದೇವಕಿ ಶೆಟ್ಟಿಯವರು ಸಂಕಷ್ಟದಲ್ಲಿರುವವರಿಗೆ ನೆರವಾಗುವುದನ್ನೇ ಜೀವನದ ಧ್ಯೇಯವನ್ನಾಗಿಸಿಕೊಂಡಿದ್ದರು. ಅವರ ಆದರ್ಶಗಳಿಂದ ಪ್ರೇರಿತರಾಗಿ ಸಮಾಜಕ್ಕೆ ಉಪಯುಕ್ತವಾದ ಸೇವೆ ಸಲ್ಲಿಸಬೇಕೆಂಬ…
ಮಹಾಕಾವ್ಯಗಳ ವಾಚನ – ಪ್ರವಚನದಿಂದ ಪುರಾಣದ ಅರಿವು: ಡಾ| ಸತೀಶ್ ಭಂಡಾರಿ ಮಂಗಳೂರು: ‘ಹಿಂದೆ ಮಳೆಗಾಲ ಆರಂಭವಾಗಿ ಯಕ್ಷಗಾನ ಮೇಳಗಳು ಒಳ ಸೇರಿದಾಗ ಮನೆ ಮನೆಗಳಲ್ಲಿ ಪುರಾಣ ವಾಚನ ನಡೆಯುತ್ತಿತ್ತು. ನಮ್ಮ ಹಿರಿಯರು ಅವಿದ್ಯಾವಂತರಾಗಿದ್ದರೂ ಪುರಾಣ ಪುಣ್ಯ ಕಥೆಗಳನ್ನು ತಿಳಿದುಕೊಂಡದ್ದು ಭಾರತೀಯ ಮಹಾಕಾವ್ಯಗಳ ವಾಚನ – ಪ್ರವಚನಗಳಿಂದ’ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ನಿಕಟ ಪೂರ್ವ ಉಪಕುಲಪತಿ ಡಾ| ಸತೀಶ್ ಕುಮಾರ್ ಭಂಡಾರಿ ಹೇಳಿದ್ದಾರೆ. ಕರ್ನಾಟಕ ಗಮಕ ಕಲಾ ಪರಿಷತ್ತು ಮಂಗಳೂರು ತಾಲೂಕು ಘಟಕ ಮತ್ತು ತುಳು ಅಧ್ಯಯನ ಕೇಂದ್ರ ನಿಟ್ಟೆ ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆಯೋಜಿಸಿದ್ದ ಕವಿ ಮಂದಾರ ಕೇಶವ ಭಟ್ಟ ವಿರಚಿತ ತುಳು ಮಹಾಕಾವ್ಯ ‘ಮಂದಾರ ರಾಮಾಯಣ’ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ವೇದಮೂರ್ತಿ ಕೃಷ್ಣರಾಜ ತಂತ್ರಿ ಕುಡುಪು ಮತ್ತು ವೇದಮೂರ್ತಿ ಹರಿ ಉಪಾಧ್ಯಾಯ ವಾಮಂಜೂರು, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಧರ್ಮದರ್ಶಿ ಡಾ| ಹರಿಕೃಷ್ಣ ಪುನರೂರು ಸಭೆಯ ಅಧ್ಯಕ್ಷತೆ…
ದಾವಣಗೆರೆ, ಜೂನ್ 9: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ, ಜೂನ್ 3ರಂದು ಈ ದುರ್ಘಟನೆ ನಡೆದಿದ್ದು, ಕೃತ್ಯ ಎಸಗಿದ ಆರೋಪಿಗಳು ಘಟನೆಯ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದಾಗಿ ತಿಳಿದುಬಂದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸ್ ಇಲಾಖೆ ತೀವ್ರ ಕ್ರಮ ಕೈಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಘಟನೆಯ ಗಂಭೀರತೆಯನ್ನು ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಟಿ. ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆಯನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಂತ್ರಸ್ತ ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಗತ್ಯ ವೈದ್ಯಕೀಯ ಹಾಗೂ ಮಾನಸಿಕ ಆರೈಕೆಯನ್ನು ಒದಗಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣ ದಾಖಲಿಸಿಕೊಂಡಿರುವ ಬಸವಪಟ್ಟಣ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು, ಆರೋಪಿಗಳ…
ಮಂಗಳೂರು, ಜೂನ್ 9: ನಗರದ ಖ್ಯಾತ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್‌ಗೆ ಒಳಪಡಿಸಿ ಖಾಸಗಿ ಫೋಟೋ ಹಾಗೂ ವಿಡಿಯೊಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ನಡೆಸಿ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿದ ಆರೋಪದ ಮೇರೆಗೆ ಯುವ ಕಾಂಗ್ರೇಸ್ ಮುಖಂಡ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಉದ್ಯಮಿ ನೀಡಿದ ದೂರಿನ ಪ್ರಕಾರ, 2024ರಲ್ಲಿ ಜಿತೇಶ್ ಎಂಬಾತ ಉದ್ಯಮಿಯ ಖಾಸಗಿ ಫೋಟೋ ಮತ್ತು ವಿಡಿಯೊಗಳನ್ನು ತನ್ನ ವಶದಲ್ಲಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾನೆ ಎನ್ನಲಾಗಿದೆ. ಈ ದೃಶ್ಯಗಳನ್ನು ಉದ್ಯಮಿಯ ಪತ್ನಿಗೆ ತೋರಿಸುವುದಾಗಿ ಬೆದರಿಕೆ ಹಾಕಿ ಆರಂಭದಲ್ಲಿ ₹35 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ವಿಚಾರವನ್ನು ಉದ್ಯಮಿ ತನ್ನ ಪರಿಚಯಸ್ಥನಾದ ನಿಝಾಮ್‌ಗೆ ತಿಳಿಸಿದ ಬಳಿಕವೂ ಸಮಸ್ಯೆ ಬಗೆಹರಿಯದೇ, ನಿಝಾಮ್ ಕೂಡ ಜಿತೇಶ್ ಜೊತೆ ಸೇರಿ ಮತ್ತಷ್ಟು ಹಣಕ್ಕಾಗಿ ಒತ್ತಡ ಹೇರಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಜಿತೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಕಥೆಯನ್ನು ಸೃಷ್ಟಿಸಿ, ಆತ ಬರೆದಿದ್ದಾನೆ ಎನ್ನಲಾದ ಡೆತ್ ನೋಟ್‌ನಲ್ಲಿ…
ಬೆಂಗಳೂರು, ಜೂನ್ 9: ರಾಜ್ಯದ ಯುವಜನರ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಅಪ್ರಾಪ್ತ ವಯಸ್ಕರಿಗೆ ಮದ್ಯ ಲಭ್ಯವಾಗುವುದನ್ನು ತಡೆಯಲು ಕರ್ನಾಟಕ ಸರ್ಕಾರ ಮಹತ್ವದ ಹಾಗೂ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರಿನಲ್ಲಿ ಅಪ್ರಾಪ್ತ ವಯಸ್ಕರು ಸುಲಭವಾಗಿ ಮದ್ಯ ಪಡೆಯುತ್ತಿರುವ ಬಗ್ಗೆ ವ್ಯಕ್ತವಾಗುತ್ತಿರುವ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ನಗರದಲ್ಲಿನ ಎಲ್ಲಾ ಪಬ್‌ಗಳು, ಬ್ರೂವರೀಸ್, ಬಾರ್‌ಗಳು, ಕ್ಲಬ್‌ಗಳು, ಲಾಂಜ್‌ಗಳು ಹಾಗೂ ಮದ್ಯ ಪೂರೈಸುವ ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯ ವಯೋಮಿತಿ ಪರಿಶೀಲನೆ ಜಾರಿಗೊಳಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇತ್ತೀಚೆಗೆ ನಡೆಸಲಾದ ಮಹತ್ವದ ಅಧ್ಯಯನವೊಂದರಲ್ಲಿ ಬೆಂಗಳೂರಿನ 4,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದ್ದು, ಸುಮಾರು ಮೂರರಲ್ಲಿ ಒಬ್ಬ ಯುವಕ ಅಥವಾ ಯುವತಿ ಮದ್ಯ ಅಥವಾ ತಂಬಾಕು ಬಳಕೆಯಿಂದ ಆರೋಗ್ಯ ಸಮಸ್ಯೆಗಳ ಅಪಾಯದಲ್ಲಿರುವುದು ಬೆಳಕಿಗೆ ಬಂದಿದೆ. ಇನ್ನೂ ಆತಂಕಕಾರಿ ಸಂಗತಿಯೆಂದರೆ, ಕೆಲವರು 17 ವರ್ಷ ತುಂಬುವ ಮುನ್ನವೇ ಮದ್ಯ ಸೇವನೆ ಆರಂಭಿಸಿರುವುದು ಅಧ್ಯಯನದಲ್ಲಿ ಬಹಿರಂಗಗೊಂಡಿದೆ. ಈ ಅಂಶಗಳು ಸರ್ಕಾರದ ಗಮನ ಸೆಳೆದಿದ್ದು,…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
