What's Hot
- ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒತ್ತು
- ಮಂಗಳೂರು : ಕ್ರಿಸ್ ಮಸ್ ಹಬ್ಬ ಸಮಾಜದಲ್ಲಿ ಸತ್ಯ,ನ್ಯಾಯ ಹಾಗೂ ಸಹ ಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶ ಒದಗಿಸುತ್ತದೆ ; ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ.
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
Author: Tulunada Surya
ಮಂಗಳೂರು ; ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ವಿದ್ಯಾರ್ಥಿ ಪರಿಷತ್ತು ಮತ್ತು NSS ಘಟಕವು, ಮಂಗಳೂರು ನಗರ ಪೊಲೀಸ್ ಇಲಾಖೆ, CEN ಪೊಲೀಸ್ ಸ್ಟೇಷನ್ ಮತ್ತು ಕೆ.ಎಸ್. ಹೆಗ್ಡೆ, ಮೆಡಿಕಲ್ ಅಕಾಡೆಮಿ ನಿಟ್ಟೆ, ಸಹಯೋಗದೊಂದಿಗೆ “ಡ್ರಗ್ ಫ್ರೀ ಕ್ಯಾಂಪಸ್’ ಎಂಬ ಮಹತ್ವಪೂರ್ಣ ಕಾರ್ಯಕ್ರಮವು ಯಶಸ್ವಿಯಾಗಿ ಎರಡನೇ ವರ್ಷ ನಡೆಯಲಿದ್ದು, ಆಗಸ್ಟ್ 04- 2025ರಂದು ಬೆಳಿಗ್ಗೆ 11:30ಕ್ಕೆ ಕಾರ್ಯಕ್ರಮವನ್ನು ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್, ಉರ್ವಾ ಸ್ಕೋರ್ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಡಾ. ರಾಘವೇಂದ್ರ ಹೊಳ್ಳರವರು ತಿಳಿಸಿದ್ದಾರೆ. ಮೊದಲ ವರ್ಷದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಮತ್ತು ಹೆತ್ತವರಿಂದ ಉತ್ತಮ ಸ್ಪಂದನೆ ಲಭಿಸಿರುತ್ತದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಡ್ರಗ್ ಪರೀಕ್ಷೆಗೆ ಒಳಗಾಗುತ್ತಾರೆ ಈ ಮೂಲಕ ಕಾಲೇಜು ಆವರಣವನ್ನು ನಶಾಮುಕ್ತನಾಗಿಸುವ ಗುರಿ ಯೊಂದಿಗೆ ಒಂದು ನಿಸ್ವಾರ್ಥ ಸೇವೆಯನ್ನು ಮಾಡಲಾಗುತ್ತಿದೆ ಎಂದರು. ಈ ಕಾರ್ಯಕ್ರಮವನ್ನು ಪತ್ರಕರ್ತರಾದ ಶ್ರೀ ಹರೀಶ್ ರೈ ಉದ್ಘಾಟಿಸಲಿದ್ದು. ಮುಖ್ಯ ಅತಿಥಿಯಾಗಿ ಶ್ರೀ ರವೀಶ್ ಎಸ್ ನಾಯಕ್, ಸಹಾಯಕ ಪೊಲೀಸ್ ಆಯುಕ್ತರು (ಸೈಬರ್ ಎಕನಾಮಿಕ್…
ಬೆಂಗಳೂರು: ನಗರದಲ್ಲಿ ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕ ನಿಶ್ಚಿತ್ನನ್ನು ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಹುಳಿಮಾವು ಠಾಣೆ ಪೊಲೀಸರು ಗುಂಡು ಹಾರಿಸಿ, ಹೆಡೆಮುರಿ ಕಟ್ಟಿದ್ದಾರೆ. ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.ಗುರುವಾರ ತಡರಾತ್ರಿ ಕಗ್ಗಲೀಪುರ ರಸ್ತೆಯ ಬಳಿಯಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲು ಹುಳಿಮಾವು ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಮಾರಕಾಸ್ತ್ರಗಳನ್ನು ಬಳಸಿ ಆರೋಪಿಗಳು ಪೊಲೀಸರ ಮೇಲೆ ದಾಳಿಗೆ ಮುಂದಾದಾಗ, ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ಹಾಗೂ ಪಿಎಸ್ಐ ಅರವಿಂದ್ ಕುಮಾರ್ ಆರೋಪಿಗಳ ಕಾಲಿಗೆ ಗುಂಡು ಹಾರಿಸುವ ಮೂಲಕ ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗುರುಮೂರ್ತಿಯ ಎರಡು ಕಾಲುಗಳು ಹಾಗೂ ಗೋಪಾಲಕೃಷ್ಣನ ಒಂದು ಕಾಲಿಗೆ ಗುಂಡು ತಗುಲಿದ್ದು, ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ವಿವರ : ಬೆಂಗಳೂರಿನ ಅರಕೆರೆಯ ಶಾಂತಿನಿಕೇತನ ಲೇಔಟ್‌ನಲ್ಲಿ ನಿಶ್ಚಿತ್ ಮತ್ತು ಆತನ ಪೋಷಕರು ವಾಸವಾಗಿದ್ದರು. ನಗರದ ಪ್ರತಿಷ್ಠಿತ ಕಾಲೇಜ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ನಿಶ್ಚಿತ್…
ಮಂಗಳೂರು : ದ.ಕ. ಜಿಲ್ಲಾ ಪುಟ್ಬಾಲ್ ಸಂಸ್ಥೆ ಕಳೆದ 26 ವರ್ಷಗಳಿಂದ ನಡೆಸುತ್ತಾ ಬಂದಿರುವ ಅಂತರ್ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು, ಪದವಿ ಕಾಲೇಜಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಗಳಿಗಾಗಿ ನಡೆಸುತ್ತಾ ಬರುತ್ತಿದ್ದು, 27ನೇ ವರ್ಷದ ಪಂದ್ಯಾವಳಿ ಆಗೋಸ್ಟ್ 4ನೇ ತಾರೀಖು ಸೋಮವಾರ ಪ್ರಾರಂಭವಾಗಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಡಿ.ಎಂ ಅಸ್ಲಾಂ ರವರು ತಿಳಿಸಿದ್ದಾರೆ. ಮಂಗಳೂರು ನೆಹರೂ ಮೈದಾನಕ್ಕೆ ಹೊಸ ಟರ್ಪ್ ಅಳವಡಿಸಿದ ನಂತರ ಈ ಪಂದ್ಯಾವಳಿಯನ್ನು ಆ ಮೈದಾನದಲ್ಲಿ ನಡೆಸಬೇಕೆಂದು ಬಯಕೆ ನಮ್ಮದಾಗಿತ್ತು. ಆದರೆ ಭಾರೀ ಮಳೆಯ ಕಾರಣ ಈ ಮೈದಾನದ ಕೆಲಸ ವಿಳಂಬವಾದ ಕಾರಣ ಈಗ ಈ ಪಂದ್ಯಾವಳಿ ಎರಡು ತಾಣಗಳಲ್ಲಿ ನಡೆಯಲಿದೆ. ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಡಶಾಲೆಯ ಬಾಲಕರ ಹಾಗೂ ಬಾಲಕಿಯರ ಪಂದ್ಯವಾಳಿಗಳು ನಗರದ ಮಂಗಳಾ ಸ್ಟೇಡಿಯಂ ಪಕ್ಕದಲ್ಲಿರುವ ಕರಾವಳಿ ಉತ್ಸವ ಮೈದಾನದಲ್ಲಿ ನಡೆದರೆ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪಂದ್ಯಾಟ ನಗರದ ಹೊರಭಾಗದ ಮಂಜನಾಡಿ ಗ್ರಾಮದ ಕಿನ್ಯಾ…
ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಕೇವಲ ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯು ಪ್ರಸ್ತುತ ಆಡಳಿತ ಮಂಡಳಿ ವಹಿಸಿಕೊಂಡ ನಂತರ ಇಡೀ ಕರ್ನಾಟಕ ರಾಜ್ಯದ್ಯಂತ ವಿಸ್ತರಿಸಿದೆ. ಎಮ್.ಸಿ.ಸಿ. ಬ್ಯಾಂಕ್ ಸಂಪೂರ್ಣವಾಗಿ ಕೋರ್ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇತರ ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಲಭ್ಯವಿರುವ ಎಲ್ಲಾ ಸೇವೆ ಮತ್ತು ಸೌಲಭ್ಯಗಳು ಎಮ್.ಸಿ.ಸಿ. ಬ್ಯಾಂಕಿನಲ್ಲಿ ದೊರೆಯುತ್ತಿವೆ. ಬ್ಯಾಂಕ್ ಕರ್ನಾಟಕ ರಾಜ್ಯದಾದ್ಯಂತ ತನ್ನ ಶಾಖೆಗಳನ್ನು ವಿಸ್ತರಿಸುವ ಕಾರ್ಯಯೋಜನೆಯನ್ನು ಹಮ್ಮಿಕೊಂಡಿದೆ. ಕರ್ನಾಟಕ ರಾಜ್ಯದ್ಯಾಂತ ಕಾರ್ಯವ್ಯಾಪ್ತಿ ಹೊಂದಿರುವ ಎಮ್.ಸಿ.ಸಿ. ಬ್ಯಾಂಕ್, ಮಂಗಳೂರಿನಲ್ಲಿ ನವೀಕೃತಗೊಂಡ ಸುಸಜ್ಜಿತ ಆಡಳಿತ ಕಛೇರಿಯೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 19 ಶಾಖೆಗಳನ್ನು ಹೊಂದಿದೆ. ಸಹಕಾರ ರತ್ನ ಶ್ರೀ ಅನಿಲ್…
ಉಡುಪಿ ಜಿಲ್ಲೆಯ ನಗರ ಸಭೆಯಿಂದ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಬರುವ ಸ್ಥಳ ಅಕ್ರಮ ಸಕ್ರಮ ಮಂಜೂರಾತಿ ಗೆ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ , 94 ಸಿ.ಮತ್ತು 94 ಸಿಸಿ, ನಿಯಮದಾಡಿ ಅರ್ಜಿ ಮರು ಸಲ್ಲಿಕೆಗೆ ಅವಕಾಶ ನೀಡಬೇಕು , ಗ್ರಾಮ ಪಂಚಾಯಿತಿ ವ್ಯಾಪ್ತಿಯ 9&11 ಎ ಏಕ ನಿವೇಶನ 25 ಸೆಂಟ್ಸಿನ ಒಳಗಡೆ ಇರುವಂತಹ ಜಾಗಗಳಿಗೆ ಹಿಂದೆ ಇದ್ದ ನಿಯಮಾವಳಿ ಪ್ರಕಾರ ಅನುಮೋದನೆ ನೀಡಬೇಕು , 11.ಬಿ ನಿಯಮಾವಳಿ ಯಿಂದ ಕೂಡ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ ಹಿಂದಿನ ರೀತಿಯಲ್ಲಿ ಕ್ರಮ ಜರುಗಿಸಬೇಕು ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿ ಏಕ ನಿವೇಶನದ ಸಾವಿರಾರು ಅರ್ಜಿ ಬಾಕಿ ಇರುವುದರಿಂದ ಉಡುಪಿ ಯ ಜನರಿಗೆ ತುಂಬಾ ಸಮಸ್ಯೆ ಉಂಟಾಗಿರುತ್ತದೆ. ಕೂಡಲೇ ಸಮಸ್ಯೆ ಪರಿಹಾರಕ್ಕೆ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ರವರಿಗೆ ತುಳುನಾಡ ರಕ್ಷಣಾ ವೇದಿಕೆ ಮನವಿ ನೀಡಿ ಒತ್ತಾಯಿಸಿದೆ. ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ, ಮಹಿಳಾ ಜಿಲ್ಲಾಧ್ಯಕ್ಷೆ…
ಜೈ ತುಲುನಾಡ್ (ರಿ) ಕಾಸರಗೋಡು ವಲಯ ಸಮಿತಿಯ ವತಿಯಿಂದ ತಾ.27-07-2025 ರಂದು ಕಾಸರಗೋಡು ಕರಂದಕ್ಕಾಡ್‌ನಲ್ಲಿರುವ ಬಿಲ್ಲವ ಸಮಾಜ ಸೇವಾ ಸಂಘ( ರಿ )ಇಲ್ಲಿ ಮರಪಂದಿ ಆಟಿ ಕಾರ್ಯಕ್ರಮವು ನಡೆಯಿತು. ಶ್ರೀ ನಾರಾಯಣ ಗುರು ಮಂದಿರದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ಬಳಿಕ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ರಘು ಮೀಪುಗುರಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ನಂತರ ನಡೆದ ಮಕ್ಕಳ ತುಲು ಭಾಷಣ ಸ್ಪರ್ಧೆಯಲ್ಲಿ ಕಿರಿಯರ ವಿಭಾಗದಲ್ಲಿ.ಧ್ಯೇಯ ವರ್ಕಾಡಿ ಪ್ರಥಮ, ಸಂಸ್ಕೃತಿ ಕುಂಬಳೆ ದ್ವಿತೀಯ ಹಾಗೂ ದರ್ಶಿತ್ ಕೆ ಆರ್ ತೃತೀಯ, ಹಿರಿಯರ ವಿಭಾಗದಲ್ಲಿ ನಿಮಿಷಾ ಎಸ್.ಬಟ್ಟಂಪಾರೆ ಪ್ರಥಮ, ದೃಶ್ಯ ಡಿ.ಬಟ್ಟಂಪಾರೆ ದ್ವಿತೀಯ,ವರ್ಷಾ ಎಸ್ ಬಟ್ಟಂಪಾರೆ ತೃತೀಯ ಬಹುಮಾನವನ್ನು ಪಡೆದರು, ನಂತರ ನಡೆದ ಸಮಾರೋಪ ಸಮಾರಂಭವು ಜೈ ತುಲುನಾಡ್ ರಿ ಕಾಸರಗೋಡು ವಲಯ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಕುಶಲಾಕ್ಷಿ.ವಿ.ಕುಲಾಲ್ ಕಣ್ವತೀರ್ಥ ರವರ ಅಧ್ಯಕ್ಷತೆಯಲ್ಲಿ ಜರಗಿತು. ಶ್ರೀಯುತ ರಘು ಕೆ ಮೀಪುಗುರಿಯವರು ಮಾತನಾಡುತ್ತಾ ಜೈ ತುಲುನಾಡ್ ಸಂಘಟನೆಯು ಈ ಕಾರ್ಯಕ್ರಮವನ್ನು ತಮ್ಮ…
ಮಂಗಳೂರು: ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರುವವರನ್ನು ಜುಮಾದಿಯೆ ನೋಡಲಿ ಎಂದು ದೈವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಸುರತ್ಕಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. “ಪಡ್ರೆ ಶ್ರೀ ಧೂಮಾವತಿ ದೈವಸ್ಥಾನಕ್ಕೆ ಸುಮಾರು 800 ವರ್ಷಗಳಿಗೂ ಮೇಲ್ಪಟ್ಟ ಇತಿಹಾಸವಿದ್ದು ಇತ್ತೀಚೆಗೆ ಗ್ರಾಮದ ಪದ್ಮನಾಭ ಶೆಟ್ಟಿ ಎಂಬವರು ನ್ಯಾಯಾಲಯದಲ್ಲಿ ಸುಮಾರು 13 ಜನರ ಮೇಲೆ ಖಾಸಗಿ ದೂರು ನೀಡಿದ್ದು ಅದರ ಆಧಾರದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ಆಗಿರುತ್ತದೆ. ಆ ದೂರಿನಲ್ಲಿ ಜಾತ್ರೆಯ ಸಮಯ ಭಕ್ತಾದಿಗಳಿಂದ ಸಂಗ್ರಹವಾದ ಸುಮಾರು 6 ಲಕ್ಷ ರೂಪಾಯಿ ಹಣ ಮತ್ತು ಸುಮಾರು 14-15 ಪವನ್ ಚಿನ್ನ, ಬೆಳ್ಳಿ, ಹಿತ್ತಾಳೆ ಸಹಿತ ಇದನ್ನು ಆಡಳಿತ ಸಮಿತಿಗೆ ಹಸ್ತಾಂತರಿಸದೆ ಕೊಂಡು ಹೋಗಿರುತ್ತಾರೆ ಎಂಬುದಾಗಿ ಕಳ್ಳತನ, ವಂಚನೆ ಪ್ರಕರಣ ದಾಖಲಿಸಿರುತ್ತಾರೆ. ಇದು ಸತ್ಯಕ್ಕೆ ದೂರವಾಗಿದ್ದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಮಿತಿಯ ಸದಸ್ಯರ ವಿರುದ್ಧ ನಡೆಸಿರುವ ಅಪಪ್ರಚಾರವಾಗಿದೆ. ಸುಳ್ಳು ಆರೋಪ ಮಾಡಿರುವ ಪದ್ಮನಾಭ ಶೆಟ್ಟಿಯನ್ನು ಗ್ರಾಮದ ದೈವ ಜುಮಾದಿಯೇ ನೋಡಿಕೊಳ್ಳಲಿ“…
ಮಂಗಳೂರು ; ದಕ್ಷಿಣ ಕನ್ನಡ ಫ್ಲವರ್ ಡೆಕೋರೇಟರ್ಸ್ ಮಾಲಕರ ಸಂಘ, ಮಂಗಳೂರು ಇದರ ವತಿಯಿಂದ ನಡೆದ ಮೂರನೇ ವರ್ಷದ ಪುರ್ಪದ ಗೆಲ್ಮೆನ ಆಟಿನ ಕಮ್ಮೆನ ಕಾರ್ಯಕ್ರಮ ಸ್ಕೇಟ್ ಸಿಟಿ ಹೊಯ್ಗೆಬೈಲು ಅಶೋಕನಗರದಲ್ಲಿ ವಿಜೃಂಭಣೆಯಿಂದ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಮಾತನಾಡಿದ ಕೆ.ಕೆ ಪೆಜಾವರ ತುಳುನಾಡಿನಲ್ಲಿ ಆಟಿ ತಿಂಗಳಿನಲ್ಲಿ ಆಚರಿಸಲಾಗುವ ಒಂದು ದಿನವೆಂದರೆ ಆಟಿಡೊಂಜಿ ದಿನ. ಈ ದಿನವನ್ನು ಆಟಿ ಅಮವಾಸ್ಯೆಯಂದು ಆಚರಿಸುತ್ತಾರೆ. ಈ ದಿನ ತುಳುನಾಡಿನ ಜನರು “ಪಾಲೆದ ಕಷಾಯ” (ಹಾಲೆ ಮರದ ತೊಗಟೆಯಿಂದ ತಯಾರಿಸಿದ ಕಷಾಯ) ಕುಡಿಯುವ ಸಂಪ್ರದಾಯವಿದೆ. ಈ ಕಷಾಯವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ನಂಬಲಾಗಿದೆ. ಆಟಿ ತಿಂಗಳು ತುಳುನಾಡಿನಲ್ಲಿ ಕಷ್ಟದ ತಿಂಗಳೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಮಳೆ ಹೆಚ್ಚಾಗಿರುತ್ತದೆ ಮತ್ತು ಕೃಷಿ ಚಟುವಟಿಕೆಗಳು ಸ್ಥಗಿತಗೊಳ್ಳುತ್ತವೆ. ಹಾಗಾಗಿ, ಈ ಸಮಯದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಆಟಿಡೊಂಜಿ ದಿನದಂದು ಆಚರಿಸಲಾಗುವ ಈ ಕಷಾಯ ಸೇವನೆಯು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ. ಆಟಿ ಅಮಾವಾಸ್ಯೆಯಂದು…
ದಿನಾಂಕ 27/07/2025 ರಂದು ಭಾನುವಾರದಂದು ಮುಂಡಾಲ ಸಮಾಜ(ರಿ) ಗುರುಪುರ ಕೈಕಂಬ ಇದರ ವತಿಯಿಂದ ಡಾ . ಬಿ.ಆರ್ ಅಂಬೇಡ್ಕರ್ ಭವನ ಕಂದಾವರ ಪದವು ಇಲ್ಲಿ ಮುಂಡಾಲ ಟ್ರೋಪಿ 2025 , ಪುರುಷರ ವಾಲಿಬಾಲ್ ,ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಟಾದ ಕ್ರೀಡಾಕೂಟ ನಡೆಯಿತು. ಪಂದ್ಯಾಟದ ಉದ್ಗಾಟನೆಯನ್ನು ದಯಾನಂದ ಮಾಸ್ಟರ್ ಪಡು ಖ್ಯಾತ ಕ್ರಿಕೆಟ್ ಆಟಗಾರರು ನೇರವೆರಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಮುಂಡಾಲ ಯುವ ವೇದಿಕೆ ಅಧ್ಯಕ್ಷರಾದ ಶ್ರೀ ಪ್ರದೀಪ್ ಕಾಫಿಕಾಡ್,ಹೆಲ್ಪ್ ಲೈನ್ ಸೇವಾ ತಂಡದ ಸ್ಥಾಪಕ ಅಧ್ಯಕ್ಷರಾದ ಶ್ರೀ ಮಹೇಶ್ ಅಮೀನ್ ,ನಿವೃತ್ತ ಬ್ಯಾಂಕ್ ಉದ್ಯೋಗಿ ಶ್ರೀ ಕೃಷ್ಣ ಕುಳಾಯಿ, ಮುಂಡಾಲ ಸಮಾಜ (ರಿ) ಗುರುಪುರ ಕೈಕಂಬ ಇದರ ಅಧ್ಯಕ್ಷರಾದ ಶ್ರೀ ಜಯಂತ ಕೊಳಂಬೆ, ವಿವಿದ ತಂಡಗಳ ಸದಸ್ಯರು ,ಹಾಗೂ ಮುಂಡಾಲ ಸಮಾಜ ಭಾಂದವರು ಉಪಸ್ಥಿತರಿದ್ದರು. ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಒಟ್ಟು 11 ತಂಡಗಳು ಭಾಗವಹಿಸಿತು,ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ4 ತಂಡಗಳು ಭಾಗವಹಿಸಿತು. ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು…
ಮಂಗಳೂರು:ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್ ಭಾತ್ರ, ಜಸ್ವಿಂದರ್ ಸಿಂಗ್, ಮನೋಜ್ ಕುಮಾರ್ ಪಾಂಡೆಯರಂತಹ 527 ವೀರಕಲಿಗಳನ್ನು ಕಳೆದುಕೊಂಡಿದ್ದೇವೆ. ಈ ದಿನ ಅಂತಹ ಎಲ್ಲಾ ವೀರ ಯೋಧರ ಧೈರ್ಯವನ್ನು, ಅವರ ಕುಟುಂಬಗಳ ತ್ಯಾಗವನ್ನು ಪ್ರತಿಯೊಬ್ಬರೂ ನೆನೆಯಲೇಬೇಕು. ದಯವಿಟ್ಟು ನಾವೆಲ್ಲರೂ ಆಗಾಗ ಮಕ್ಕಳೊಂದಿಗೆ ಯುದ್ಧ ಸ್ಮಾರಕಗಳಿಗೆ ಭೇಟಿ ನೀಡಿ, ಅವರಿಗೆ ಸೈನಿಕರ ಮಹತ್ವವನ್ನು ತಿಳಿಸಬೇಕು. ಇಂದು ನಮ್ಮ ಸೈನ್ಯ ಮತ್ತು ದೇಶದ ಭದ್ರತೆಯ ವಿಷಯ ಬಂದಾಗ ಸೈನ್ಯಕ್ಕೆ ಸಂಪೂರ್ಣ ಅಧಿಕಾರ ಕೊಡುವ ಪ್ರಧಾನಿ ನರೇಂದ್ರ ಮೋದಿಯಿಂದಾಗಿ ಭಾರತವು ಅತ್ಯಂತ ಬಲಿಷ್ಠವಾಗಿದೆ. ಹಾಗಾಗಿಯೇ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
